Homeಮುಖಪುಟತಮಿಳುನಾಡು: ಕರ್ತವ್ಯದಲ್ಲಿದ್ದಾಗಲೇ ಬಿಜೆಪಿ ಸದಸ್ಯರಾಗಿ ನೋಂದಾಯಿಸಿಕೊಂಡ ಇಬ್ಬರು ಪೊಲೀಸ್‌ ಅಧಿಕಾರಿಗಳು!

ತಮಿಳುನಾಡು: ಕರ್ತವ್ಯದಲ್ಲಿದ್ದಾಗಲೇ ಬಿಜೆಪಿ ಸದಸ್ಯರಾಗಿ ನೋಂದಾಯಿಸಿಕೊಂಡ ಇಬ್ಬರು ಪೊಲೀಸ್‌ ಅಧಿಕಾರಿಗಳು!

- Advertisement -
- Advertisement -

ತಮಿಳುನಾಡಿನಲ್ಲಿ ಇಬ್ಬರು ಪೊಲೀಸ್‌ ಅಧಿಕಾರಿಗಳು ಕರ್ತವ್ಯದಲ್ಲಿದ್ದಾಗಲೇ ಬಿಜೆಪಿಗೆ ಸೇರಿಕೊಂಡಿದ್ದು, ಪೊಲೀಸ್ ಅಧಿಕಾರಿಗಳ ನಡವಳಿಕೆ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರ ‘ಎನ್‌ ಮನ್ನ್‌ ಎನ್ನ ಮಕ್ಕಳ್‌’ ರ್ಯಾಲಿಗೆ ಬಂದೋಬಸ್ತ್ ಕರ್ತವ್ಯದಲ್ಲಿದ್ದ ಇಬ್ಬರು ಪೊಲೀಸ್‌ ಅಧಿಕಾರಿಗಳು ಬಿಜೆಪಿಯ ಸದಸ್ಯತ್ವವನ್ನು ಪಡೆದುಕೊಂಡಿದ್ದು, ಈ ಬಗ್ಗೆ ಮಾಹಿತಿ ಬಹಿರಂಗವಾಗುತ್ತಿದ್ದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಡಿಸೆಂಬರ್ 27 ರಂದು ನಾಗಪಟ್ಟಣಂ ಜಿಲ್ಲೆಯಲ್ಲಿ ಅಣ್ಣಾಮಲೈ ಅವರ ಯಾತ್ರೆಯ ಸಂದರ್ಭದಲ್ಲಿ ಸ್ಥಾಪಿಸಲಾದ ಸ್ಟಾಲ್‌ಗಳಲ್ಲಿ ಸಬ್ ಇನ್ಸ್‌ಪೆಕ್ಟರ್ ಕೆ ರಾಜೇಂದ್ರನ್ ಮತ್ತು ವಿಶೇಷ ಸೆಲ್‌ನ ಸಬ್ ಇನ್ಸ್‌ಪೆಕ್ಟರ್ ಎ ಕಾರ್ತಿಕೇಯನ್ ಬಿಜೆಪಿಯ ಸದಸ್ಯತ್ವನ್ನು ಪಡೆದುಕೊಂಡಿದ್ದಾರೆ. ವೇಲಿಪಾಳ್ಯಂ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಈ ಇಬ್ಬರು ಅಧಿಕಾರಿಗಳು ದೂರವಾಣಿ ಸಂಖ್ಯೆಗೆ ಮಿಸ್ಡ್ ಕಾಲ್ ನೀಡುವ ಮೂಲಕ ಸದಸ್ಯತ್ವ ಪಡೆದಿದ್ದಾರೆ ಎಂದು ಉನ್ನತ ಪೊಲೀಸರು ತಿಳಿಸಿದ್ದಾರೆ.

ಪೊಲೀಸ್‌ ಅಧಿಕಾರಿಗಳು ಬಿಜೆಪಿಯ ಸದಸ್ಯತ್ವ ನೋಂದಾವಣೆಯ ವಿಡಿಯೋವನ್ನು ಮಾಡಿ  ಹಂಚಿಕೊಳ್ಳಲಾಗಿದೆ. ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಜಾಲತಾಣಗಳ ಬಳಕೆದಾರರು ವ್ಯಾಪಕವಾಗಿ ಆಗ್ರಹಿಸಿದ್ದರು.

ಮೂಲಗಳ ಪ್ರಕಾರ, ಘಟನೆಯು ನಾಗಪಟ್ಟಣಂ ಪೊಲೀಸ್ ವರಿಷ್ಠಾಧಿಕಾರಿ ಹರ್ಷ್ ಸಿಂಗ್ ಅವರ ಗಮನಕ್ಕೆ ಬಂದ ತಕ್ಷಣ ತಮಿಳುನಾಡು ಅಧೀನ ಪೊಲೀಸ್ ಅಧಿಕಾರಿಗಳ ನಡವಳಿಕೆ ನಿಯಮಗಳನ್ನು ಉಲ್ಲಂಘಿಸಿದ ಅಧಿಕಾರಿಗಳನ್ನು 36 ಗಂಟೆಗಳ ಒಳಗೆ ಸಶಸ್ತ್ರ ಮೀಸಲು ಪಡೆಗೆ ವರ್ಗಾಯಿಸಲಾಗಿತ್ತು. ಇದಲ್ಲದೆ ಉಪ ಪೊಲೀಸ್ ವರಿಷ್ಠಾಧಿಕಾರಿಯಿಂದ ಇಲಾಖಾ ತನಿಖೆಗೆ ಎಸ್ಪಿ ಸಿಂಗ್ ಆದೇಶಿಸಿದ್ದರು. ವಿಚಾರಣೆಯ ನಂತರ ಅವರು ಬಿಜೆಪಿಯ ಸದಸ್ಯತ್ವ ಪಡೆದಿರುವುದು ಬಯಲಾಗಿದೆ. ಬಳಿಕ ಎಸ್ಪಿ ಸಿಂಗ್ ಅವರ ಶಿಫಾರಸ್ಸಿನ ಮೇರೆಗೆ ತಂಜಾವೂರು ರೇಂಜ್ ಡೆಪ್ಯುಟಿ ಇನ್ಸ್ಪೆಕ್ಟರ್ ಜನರಲ್ ಟಿ ಜಯಚಂದ್ರನ್ ಅವರು ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಈ ಬಗ್ಗೆ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹೇಳಿಕೆ ನೀಡಿದ್ದು, ಅಧಿಕಾರಿಗಳು ಬಿಜೆಪಿಗೆ ಸೇರ್ಪಡೆಗೊಂಡಿಲ್ಲ. ಈ ಬಗ್ಗೆ ಸ್ಟಾಲ್‌ನ ಪ್ರತಿನಿಧಿಗಳೊಂದಿಗೆ ಮಾತನಾಡುವುದಾಗಿ ಹೇಳಿದ್ದಾರೆ. ಯಾವುದೇ ವಿಚಾರಣೆ ನಡೆಸದೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿರುವುದು ಬೇಸರ ತಂದಿದೆ. ಇದು ಅಧಿಕಾರಿಗಳ ಮೇಲೆ ಮಾತ್ರವಲ್ಲ, ಅವರ ಕುಟುಂಬದ ಮೇಲೂ ಪರಿಣಾಮ ಬೀರುತ್ತದೆ. ಇಂತಹ ಕ್ರಮವು ಪೊಲೀಸ್ ಪಡೆಗೆ ಸೇರಲು ಆಗ್ರಹಿಸುವ ಯುವಕರನ್ನು ನಿರುತ್ಸಾಹಗೊಳಿಸುತ್ತದೆ ಎಂದು ಅಣ್ಣಾಮಲೈ ಹೇಳಿದ್ದಾರೆ.

ಇದನ್ನು ಓದಿ:ಮೋದಿ ಕುರಿತ ಟೀಕೆ: ಪವನ್ ಖೇರಾ ವಿರುದ್ಧದ ಕ್ರಿಮಿನಲ್ ಮೊಕದ್ದಮೆ ರದ್ಧತಿಗೆ ಸುಪ್ರೀಂ ನಕಾರ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೋವಿಶೀಲ್ಡ್ ಅಡ್ಡ ಪರಿಣಾಮ: ‘ಬಿಜೆಪಿ’ ದೇಣಿಗೆಗಾಗಿ ‘ಜನರ ಜೀವ’ವನ್ನು ಪಣಕ್ಕಿಟ್ಟಿದೆ; ಅಖಿಲೇಶ್ ಯಾದವ್

0
ಕೋವಿಶೀಲ್ಡ್ ಲಸಿಕೆಯ "ಅಡ್ಡಪರಿಣಾಮಗಳ" ವಿವಾದದ ಮಧ್ಯೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಲಸಿಕೆ ತಯಾರಕರಿಂದ "ರಾಜಕೀಯ ದೇಣಿಗೆಗಳನ್ನು" ಪಡೆಯಲು 'ಬಿಜೆಪಿ' ಜನರ ಜೀವನವನ್ನು ಪಣಕ್ಕಿಟ್ಟಿದೆ ಎಂದು ಆರೋಪಿಸಿದ್ದಾರೆ. ಈ ಕುರಿತು ಉನ್ನತ ಮಟ್ಟದ...