Homeಮುಖಪುಟಖಮೇನಿ ಹತ್ಯೆ ಕುರಿತು ಪೋಸ್ಟ್‌ : ನ್ಯಾಷನಲ್ ಕಾನ್ಫರೆನ್ಸ್ ಸಂಸದ, ಶ್ರೀನಗರದ ಮಾಜಿ ಮೇಯರ್ ವಿರುದ್ಧ...

ಖಮೇನಿ ಹತ್ಯೆ ಕುರಿತು ಪೋಸ್ಟ್‌ : ನ್ಯಾಷನಲ್ ಕಾನ್ಫರೆನ್ಸ್ ಸಂಸದ, ಶ್ರೀನಗರದ ಮಾಜಿ ಮೇಯರ್ ವಿರುದ್ಧ ಎಫ್‌ಐಆರ್

- Advertisement -
- Advertisement -

ದಾರಿತಪ್ಪಿಸುವ ಆನ್‌ಲೈನ್ ವಿಷಯವನ್ನು ಹಂಚಿಕೊಂಡ ಆರೋಪದ ಮೇಲೆ ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಸಂಸದ ಅಗಾ ಸೈಯದ್ ರೂಹುಲ್ಲಾ ಮೆಹದಿ ಮತ್ತು ಶ್ರೀನಗರದ ಮಾಜಿ ಮೇಯರ್ ಜುನೈದ್ ಅಝೀಂ ಮಟ್ಟು ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಭಯ ಹುಟ್ಟಿಸುವ, ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವ ಮತ್ತು ಕಾನೂನುಬಾಹಿರ ಚಟುವಟಿಕೆಗಳನ್ನು ಪ್ರಚೋದಿಸುವ ಉದ್ದೇಶದಿಂದ ಡಿಜಿಟಲ್ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸುಳ್ಳು, ಕಪೋಲಕಲ್ಪಿತ ಮತ್ತು ದಾರಿತಪ್ಪಿಸುವ ವಿಷಯಗಳ ಪ್ರಸರಣದ ಬಗ್ಗೆ ವಿಶ್ವಾಸಾರ್ಹ ಮಾಹಿತಿಯ ಮೇರೆಗೆ ಶ್ರೀನಗರ ಪೊಲೀಸರು ಇಬ್ಬರು ನಾಯಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಪ್ರಸ್ತುತ ಚರ್ಚೆಯಲ್ಲಿರುವ ವಿಷಯವು ಮೇಲ್ನೋಟಕ್ಕೆ ಸಾರ್ವಜನಿಕ ಶಾಂತಿ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುವಂತಹ ಸುಳ್ಳು ನಿರೂಪಣೆಗಳು ಹಾಗೂ ದೃಢೀಕರಿಸದ ಮಾಹಿತಿಯನ್ನು ಹೊಂದಿವೆ. ತಪ್ಪು ಮಾಹಿತಿಯನ್ನು ಹರಡುವ ಇಂತಹ ಉದ್ದೇಶಪೂರ್ವಕ ಪ್ರಯತ್ನಗಳು ಶಾಂತಿ, ಭದ್ರತೆ ಮತ್ತು ಒಟ್ಟಾರೆ ಸ್ಥಿರತೆಗೆ ಗಂಭೀರ ಬೆದರಿಕೆಯನ್ನು ಒಡ್ಡುತ್ತವೆ ಎಂದು ಪೊಲೀಸ್ ವಕ್ತಾರರು ಹೇಳಿದ್ದಾರೆ.

ಯಾವುದೇ ಮಾಹಿತಿಯನ್ನು ಅಂತರ್ಜಾಲದಲ್ಲಿ ಹಂಚಿಕೊಳ್ಳುವ ಮೊದಲು ಅಧಿಕೃತ ಮತ್ತು ವಿಶ್ವಾಸಾರ್ಹ ಮೂಲಗಳ ಮೂಲಕ ಅದನ್ನು ದೃಢೀಕರಿಸಿಕೊಳ್ಳುವಂತೆ ಹಾಗೂ ಕೋಮು ಸೌಹಾರ್ದತೆ ಅಥವಾ ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತರುವಂತಹ ದೃಢೀಕರಿಸದ ವಿಷಯಗಳನ್ನು ಹರಡುವುದರಿಂದ ದೂರವಿರುವಂತೆ ಪೊಲೀಸರು ನಾಗರಿಕರಿಗೆ ಸಲಹೆ ನೀಡಿದ್ದಾರೆ.

ಪೊಲೀಸರು ನ್ಯಾಷನಲ್ ಕಾನ್ಫರೆನ್ಸ್ ಸಂಸದರ ಭದ್ರತೆಯನ್ನು ಕಡಿತಗೊಳಿಸಿದ್ದು, ಅವರ ಫೇಸ್‌ಬುಕ್ ಪುಟವನ್ನೂ ನಿರ್ಬಂಧಿಸಿದ್ದಾರೆ. ಇರಾನ್‌ನ ಪರಮೋಚ್ಚ ನಾಯಕ ಅಯತೊಲ್ಲಾ ಸೈಯದ್ ಅಲಿ ಖಮೇನಿ ಅವರ ಹತ್ಯೆಯ ಬಗ್ಗೆ ತಾವು ನೀಡಿದ ಸಾರ್ವಜನಿಕ ಹೇಳಿಕೆಗಳು ಮತ್ತು ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಮಾತನಾಡಿದ್ದಕ್ಕಾಗಿ ತಮ್ಮ ಭದ್ರತೆಯನ್ನು ಹಿಂಪಡೆಯಲಾಗಿದೆ ಎಂದು ಶ್ರೀನಗರದ ಮಾಜಿ ಮೇಯರ್ ಆರೋಪಿಸಿದ್ದಾರೆ.

ತಮ್ಮ ಮೇಲೆ ಎಫ್‌ಐಆರ್ ದಾಖಲಾದ ಬಗ್ಗೆ ಪ್ರತಿಕ್ರಿಯಿಸಿದ ಸಂಸದ ರೂಹುಲ್ಲಾ ಅವರು,”ಶ್ರೀನಗರದ ಜನರು ತಮ್ಮ ಸಂಸದರನ್ನು ಆರಿಸಿರುವುದು ಕೇವಲ ಸರ್ಕಾರ ಒಪ್ಪುವಂತಹ ಮಾತುಗಳನ್ನು ಆಡಲು ಅಲ್ಲ, ಬದಲಾಗಿ ಸತ್ಯವನ್ನು ಮಾತನಾಡಲು. ಕೇವಲ ಒಂದು ಎಫ್‌ಐಆರ್ ದಾಖಲಾದ ತಕ್ಷಣ ಜನರು ನಮಗೆ ನೀಡಿದ ಆ ಜವಾಬ್ದಾರಿ ಅಥವಾ ಅಧಿಕಾರ ಕೊನೆಗೊಳ್ಳುವುದಿಲ್ಲ” ಎಂದಿ ಹೇಳಿದ್ದಾರೆ.

ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್‌ನ ಪರಮೋಚ್ಚ ನಾಯಕ ಅಯತೊಲ್ಲಾ ಖಮೇನಿ ಹತ್ಯೆಗೀಡಾದ ಘಟನೆಯನ್ನು ಖಂಡಿಸಿದ ಪ್ರತಿಭಟನೆಗಳು ನಡೆದ ನಂತರ ಕಾಶ್ಮೀರ ಕಣಿವೆಯಲ್ಲಿ ಉದ್ವಿಗ್ನತೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಕಣಿವೆಯಾದ್ಯಂತ ನಿರ್ಬಂಧಗಳನ್ನು ಹೇರಿದ್ದಾರೆ ಮತ್ತು ಮುನ್ನೆಚ್ಚರಿಕಾ ಕ್ರಮವಾಗಿ ಮಾರ್ಚ್ 7 ರವರೆಗೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...