Homeಮುಖಪುಟಎಫ್‌ಐಆರ್ ದಾಖಲಿಸಿದ ಪೊಲೀಸರು : ಚು. ಆಯೋಗ 'ಪಕ್ಷಪಾತಿ' ಎಂದ ದೆಹಲಿ ಸಿಎಂ ಅತಿಶಿ

ಎಫ್‌ಐಆರ್ ದಾಖಲಿಸಿದ ಪೊಲೀಸರು : ಚು. ಆಯೋಗ ‘ಪಕ್ಷಪಾತಿ’ ಎಂದ ದೆಹಲಿ ಸಿಎಂ ಅತಿಶಿ

- Advertisement -
- Advertisement -

ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘಿಸಿದ ಮತ್ತು ಕರ್ತವ್ಯದಲ್ಲಿರುವ ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ದೆಹಲಿಯ ಮುಖ್ಯಮಂತ್ರಿ ಹಾಗೂ ಕಲ್ಕಾಜಿ ವಿಧಾನಸಭಾ ಕ್ಷೇತ್ರದ ಎಎಪಿ ಅಭ್ಯರ್ಥಿ ಅತಿಶಿ ಮರ್ಲೇನಾ ವಿರುದ್ಧ ಪೊಲೀಸರು ಮಂಗಳವಾರ (ಫೆಬ್ರವರಿ 4,2025) ಎಫ್‌ಐಆರ್ ದಾಖಲಿಸಿದ್ದಾರೆ.

“ನಾವು ಕಲ್ಕಾಜಿ ವಿಧಾನಸಭಾ ಕ್ಷೇತ್ರದ ಎಎಪಿ ಅಭ್ಯರ್ಥಿಯ ವಿರುದ್ಧ ಗೋವಿಂದಪುರಿ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್‌ಗಳಡಿ ಎಫ್‌ಐಆರ್ ದಾಖಲಿಸಿದ್ದೇವೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಫತೇ ಸಿಂಗ್ ಮಾರ್ಗದಲ್ಲಿ 50-70 ಬೆಂಬಲಿಗರು ಮತ್ತು 10 ವಾಹನಗಳೊಂದಿಗೆ ಅತಿಶಿ ಅವರು ಕಾಣಿಸಿಕೊಂಡಿದ್ದರು. ಚುನಾವಣೆಯ ಮಾದರಿ ನೀತಿ ಸಂಹಿತೆಯ ಮಾರ್ಗಸೂಚಿಗಳ ಪ್ರಕಾರ, ಆ ಪ್ರದೇಶವನ್ನು ಖಾಲಿ ಮಾಡುವಂತೆ ಪೊಲೀಸರು ಸೂಚಿಸಿದ್ದರು. ಆದರೆ, ಅತಿಶಿ ಅವರು ಅಧಿಕಾರಿಯೊಬ್ಬರು ತಮ್ಮ ಕರ್ತವ್ಯ ನಿರ್ವಹಿಸದಂತೆ ತಡೆದಿದ್ದಾರೆ. ಹಾಗಾಗಿ, ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಎಫ್‌ಐಆರ್ ದಾಖಲಾಗಿರುವ ಕುರಿತು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅತಿಶಿ ಅವರು ಚುನಾವಣಾ ಆಯೋಗದ ವಿರುದ್ದ ಕಿಡಿಕಾರಿದ್ದಾರೆ. ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ ಮತ್ತು ಅವರ ಕುಟುಂಬದ ಸದಸ್ಯರು ಬಹಿರಂಗವಾಗಿ ‘ಗೂಂಡಾಗಿರಿ’ ನಡೆಸುತ್ತಿದ್ದಾರೆ. ಅವರ ವಿರುದ್ದ ಯಾವುದೇ ಕ್ರಮ ಕೈಗೊಂಡಿಲ್ಲ. ಆದರೆ, ನನ್ನ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಅತಿಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಎಎಪಿ ರಾಷ್ಟ್ರೀಯ ಸಂಚಾಲಕ ಹಾಗೂ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್, ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದು, “ದೆಹಲಿ ಸಿಎಂ ಬಹಿರಂಗ ಗೂಂಡಾಗಿರಿಯ ಬಗ್ಗೆ ದೂರು ನೀಡಿದ ನಂತರ ಚುನಾವಣಾ ಆಯೋಗ ಅವರ ವಿರುದ್ಧವೇ ಪೊಲೀಸ್ ಪ್ರಕರಣ ದಾಖಲಿಸಿದೆ” ಎಂದು ಆರೋಪಿಸಿದ್ದಾರೆ.

“ದೆಹಲಿ ಪೊಲೀಸರು ಮತ್ತು ಚುನಾವಣಾ ಆಯೋಗದ ಅಧಿಕೃತ ನಿಲುವು ಇದು. ದೆಹಲಿ ಪೊಲೀಸರು ಮತ್ತು ಚುನಾವಣಾ ಆಯೋಗದ ಕೆಲಸವೆಂದರೆ ಆಮ್ ಆದ್ಮಿ ಪಕ್ಷದ ವಿರುದ್ಧ ಗೂಂಡಾಗಿರಿ ಮಾಡುವುದು. ಬಿಜೆಪಿಯ ಗೂಂಡಾಗಿರಿಗೆ ರಕ್ಷಣೆ ನೀಡುವುದು. ಮದ್ಯ, ಹಣ ಮತ್ತು ವಸ್ತುಗಳನ್ನು ವಿತರಿಸುವುದು” ಎಂದು ಕೇಜ್ರಿವಾಲ್ ಹೇಳಿದ್ದಾರೆ.

“ಬಿಜೆಪಿ ಗೂಂಡಾಗಿರಿಯಲ್ಲಿ ತೊಡಗಿದೆ, ಚು. ಆಯೋಗ ಪಕ್ಷಪಾತಿ”: ಅತಿಶಿ

ಎಫ್‌ಐಆರ್ ದಾಖಲಾದ ನಂತರ, ಅತಿಶಿ ಅವರು ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಬಿಜೆಪಿ ‘ಗೂಂಡಾಗಿರಿ’ಯಲ್ಲಿ ತೊಡಗಿದೆ ಎಂದು ಆರೋಪಿಸಿದ್ದಾರೆ. ಚುನಾವಣಾ ಆಯೋಗ ಮತ್ತು ದೆಹಲಿ ಪೊಲೀಸರು ಎಎಪಿ ನಾಯಕರು ಮತ್ತು ಸದಸ್ಯರನ್ನು ಗುರಿಯಾಗಿಸಿಕೊಂಡಿದ್ದಾರೆ. ಅವರು ಕೇಸರಿ ಪಕ್ಷದ ಕಾರ್ಯಕರ್ತರನ್ನು ರಕ್ಷಿಸುತ್ತಿದ್ದಾರೆ” ಎಂದು ಅತಿಶಿ ಆರೋಪಿಸಿದ್ದಾರೆ.

ಭಾರತದ ಪ್ರಜಾಪ್ರಭುತ್ವ ಈಗ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರ ಕೈಯಲ್ಲಿದೆ. ಅದು ರಾಷ್ಟ್ರ ರಾಜಧಾನಿಯಲ್ಲಿ ಉಳಿಯುತ್ತದೆಯೇ ಎಂದು ದೇಶ ನೋಡುತ್ತಿದೆ ಎಂದು ಅತಿಶಿ ಹೇಳಿದ್ದಾರೆ.

“ಬಿಜೆಪಿ ಬಹಿರಂಗವಾಗಿ ಗೂಂಡಾಗಿರಿಯಲ್ಲಿ ತೊಡಗಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳುವ ಬದಲು ದೆಹಲಿ ಪೊಲೀಸರು ರಕ್ಷಿಸುತ್ತಿದ್ದಾರೆ. ಚುನಾವಣಾ ಆಯೋಗ ದೂರು ನೀಡುತ್ತಿರುವವರ ವಿರುದ್ಧವೇ ಪ್ರಕರಣಗಳನ್ನು ದಾಖಲಿಸುತ್ತಿದೆ” ಎಂದು ಅತಿಶಿ ಆರೋಪಿಸಿದ್ದಾರೆ.

ತನ್ನ ವಿರುದ್ಧ ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ ಮತ್ತು ಅವರ ಕುಟುಂಬ ಸದಸ್ಯರು ಕಲ್ಕಾಜಿಯಲ್ಲಿ ‘ಗೂಂಡಾಗಿರಿ’ಯಲ್ಲಿ ತೊಡಗಿದ್ದಾರೆ ಎಂದು ಅತಿಶಿ ನಿರ್ದಿಷ್ಟವಾಗಿ ಆರೋಪಿಸಿದ್ದಾರೆ ಮತ್ತು ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.

“ದೆಹಲಿಯ ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ಒಂದೆಡೆ, ಉಚಿತ ಕಲ್ಯಾಣ ಯೋಜನೆಗಳನ್ನು ನಿಲ್ಲಿಸಲು ಬಯಸುವ ಮತ್ತು ಹಿಂಸಾಚಾರದಲ್ಲಿ ತೊಡಗಿರುವ ಪಕ್ಷವಿದೆ. ಮತ್ತೊಂದೆಡೆ, ಪ್ರತಿ ಮನೆಯೂ ತಿಂಗಳಿಗೆ ₹25,000 ಉಳಿಸುವಂತೆ ಎಎಪಿ ಕೆಲಸ ಮಾಡುತ್ತಿದೆ” ಎಂದು ಅತಿಶಿ ಪ್ರತಿಪಾದಿಸಿದ್ದಾರೆ.

ದೆಹಲಿ ವಿಧಾನಸಭಾ ಚುನಾವಣೆಯ ಮತದಾನ ಫೆಬ್ರವರಿ 5ರಂದು ನಡೆಯಲಿದ್ದು, ಫೆಬ್ರವರಿ 8 ರಂದು ಫಲಿತಾಂಶ ಪ್ರಕಟವಾಗಲಿದೆ.

ಮಹಾರಾಷ್ಟ್ರ | ಎಲ್ಲಾ ಸರ್ಕಾರಿ ಸಂವಹನಗಳಿಗೆ ಮರಾಠಿ ಭಾಷೆ ಬಳಕೆ ಕಡ್ಡಾಯ ಮಾಡಿದ ರಾಜ್ಯ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ| ಸಾಮೂಹಿಕ ಮತಾಂತರ ಆರೋಪ; ಕ್ರಿಶ್ಚಿಯನ್ನರ ವಾರಾಂತ್ಯದ ಪ್ರಾರ್ಥನೆಗೆ ಅಡ್ಡಿಪಡಿಸಿದ ಹಿಂದುತ್ವ ಗುಂಪು

ದೆಹಲಿಯ ಜನಕಪುರಿಯಲ್ಲಿರುವ ಹಯಾತ್ ಸೆಂಟ್ರಿಕ್ ಹೋಟೆಲ್‌ನಲ್ಲಿ ನಡೆಯುತ್ತಿದ್ದ (ಸೆಪ್ಟೆಂಬರ್ 20 ರಂದು) ಕ್ರಿಶ್ಚಿಯನ್ನರ ಭಾನುವಾರದ ವಾಡಿಕೆಯ ಪ್ರಾರ್ಥನಾ ಸಭೆಗೆ ನುಗ್ಗಿದ ಹಿಂದುತ್ವ ಗುಂಪು ಪ್ರಾರ್ಥನೆಗೆ ಅಡ್ಡಪಿಡಿಸಿದೆ. ಹಿಂದೂಗಳ ಸಾಮೂಹಿಕ ಮತಾಂತರ ನಡೆಯುತ್ತಿದೆ...

ಕಸ್ತೂರಿ ರಂಗನ್ ವರದಿ ತಿರಸ್ಕಾರ, ಮಲೆನಾಡಿನ ಜನರ ಬದುಕಿಗೆ ಶಾಶ್ವತ ಪರಿಹಾರ : ಡಾ. ಜಿ. ಪರಮೇಶ್ವರ್

ಪಶ್ಚಿಮ ಘಟ್ಟದ ಜೀವ ವೈವಿಧ್ಯ ಮತ್ತು ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಕೇಂದ್ರ ಸರ್ಕಾರವು ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆಗಳನ್ನು ಪದೇ ಪದೇ ಹೊರಡಿಸುತ್ತಿರುವುದು ಮಲೆನಾಡಿನ ಜನರ ನೆಮ್ಮದಿ ಕೆಡಿಸಿದೆ. ರಾಜ್ಯ ಸರ್ಕಾರವು...

‘ಇದು ಸಂಸ್ಕೃತಿಯಲ್ಲ, ಪಿತೃಪ್ರಭುತ್ವ’: ಜಮುಯಿ ಅಪ್ರಾಪ್ತ ಬಾಲಕಿ ಮೇಲಿನ ಕಿರುಕುಳದ ವಿಡಿಯೋಗೆ ರಾಹುಲ್ ಗಾಂಧಿ ಆಕ್ರೋಶ 

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ 10ನೇ ತರಗತಿಯ ಅಪ್ರಾಪ್ತ ಬಾಲಕ ಮತ್ತು ಬಾಲಕಿಯನ್ನು ರಸ್ತೆಯಲ್ಲಿ ತಡೆದು ಪುರುಷರ ಗುಂಪೊಂದು ಕಿರುಕುಳ ನೀಡಿದೆ ಎಂದು ಆರೋಪಿಸಲಾದ ವೈರಲ್ ವಿಡಿಯೋ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ...

ನಕಲಿ ಔಷಧಗಳ ವಿತರಣೆ ಜಾಲದೊಂದಿಗೆ ನಂಟು; 16 ಫಾರ್ಮಸಿಗಳ ಪರವಾನಗಿ ರದ್ದು

ಬಿಡದಿಯ ಫಾರ್ಮ್‌ಹೌಸ್ (ತೋಟದ ಮನೆ) ಒಂದರಲ್ಲಿ ಪತ್ತೆಯಾದ ನಕಲಿ ಔಷಧಗಳ ವಿತರಣೆಯ ಜಾಲದೊಂದಿಗೆ ನಂಟು ಹೊಂದಿರುವ ಆರೋಪದ ಮೇಲೆ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (ಎಫ್‌ಡಿಎ) ಸಂಸ್ಥೆಯು 16 ಫಾರ್ಮಸಿಗಳ...

ಚಾಮರಾಜನಗರ: ಬಂಡಿ ಪೂಜೆ ಹಬ್ಬದಲ್ಲಿ ದಲಿತ ಮಕ್ಕಳಿಗೆ ಅಸ್ಪೃಶ್ಯತೆ ಆಚರಣೆ – ಊಟ ನೀಡದೆ ಅಪಮಾನಿಸಿದ ಆರೋಪ

ಸಮಾಜದಲ್ಲಿ ಜಾತಿಪದ್ದತಿ ಇಂದಿಗೂ ಜೀವಂತವಾಗಿದೆಯೇ ಎಂದು ಪ್ರಶ್ನಿಸುವವರಿಗೇನು ಕಡಿಮೆ ಇಲ್ಲ.ಆದರೆ ಜಾತಿ ಕಾರಣಕ್ಕೆ ಪುಟಾಣಿ ಮಕ್ಕಳಿಗೆ ಊಟವನ್ನು ನಿರಾಕರಿಸಿ ಅಸ್ಪೃಶ್ಯತೆ ಆಚರಣೆ ಮಾಡಿರುವುದು ನಾಗರಿಕ ಸಮಾಜ ನಿಜಕ್ಕೂ ತಲೆತಗ್ಗಿಸುವಂತೆ ಮಾಡಿದೆ. ಹೌದು ಚಾಮರಾಜನಗರ ಜಿಲ್ಲೆಯ...

ಥಾಣೆ ಗಣೇಶೋತ್ಸವ 2026: ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ವೇಳೆ 2 ಗುಂಪುಗಳ ಘರ್ಷಣೆ, ಬಿಜೆಪಿ ಮಾಜಿ ಉಪಮೇಯರ್ ಸೇರಿ 70-80 ಜನರ ವಿರುದ್ಧ ಪ್ರಕರಣ

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಉಪಮೇಯರ್ ಹಾಗೂ ಹಾಲಿ ಕಾರ್ಪೊರೇಟರ್ ಉಪೇಕ್ಷಾ ಭೋಯಿರ್...

ಬಿಜೆಪಿ ಆಡಳಿತದಲ್ಲಿ 151 ಅಂಬೇಡ್ಕರ್ ಪ್ರತಿಮೆಗಳ ಧ್ವಂಸ: ಅಖಿಲೇಶ್ ಯಾದವ್ ಆರೋಪ

ಉತ್ತರ ಪ್ರದೇಶದಲ್ಲಿ ಬಿಜೆಪಿ ಆಡಳಿತದ ಅವಧಿಯಲ್ಲಿ 72 ಜಿಲ್ಲೆಗಳಲ್ಲಿ ಬಾಬಾಸಾಹೇಬ್ ಬಿ.ಆರ್. ಅಂಬೇಡ್ಕರ್ ಅವರ 151 ಪ್ರತಿಮೆಗಳನ್ನು ಧ್ವಂಸಗೊಳಿಸಲಾಗಿದೆ. ಆದರೆ ಈವರೆಗೆ ಕೇವಲ 14 ಮಂದಿಯನ್ನು ಮಾತ್ರ ಬಂಧಿಸಲಾಗಿದೆ ಎಂದು ಸಮಾಜವಾದಿ ಪಕ್ಷದ...

ಜಾತಿ ತಾರತಮ್ಯ ಹಿಂದೂ ಸಮಾಜಕ್ಕಂಟಿದ ‘ಕಳಂಕ’: ಆರ್‌ಎಸ್‌ಎಸ್ ಮುಖಂಡ ದತ್ತಾತ್ರೇಯ ಹೊಸಬಾಳೆ

"ಜಾತಿ ಆಧಾರಿತ ತಾರತಮ್ಯವು ಹಿಂದೂ ಸಮಾಜಕ್ಕಂಟಿದ ಕಳಂಕ, ಕೇವಲ ಕಾನೂನುಗಳಿಂದ ಜಾತೀಯತೆ ಮತ್ತು ಅಸ್ಪೃಶ್ಯತೆಯನ್ನು ಕೊನೆಗೊಳಿಸಲು ಸಾಧ್ಯವಿಲ್ಲ, ಇದಕ್ಕೆ ಪ್ರತಿಯೊಬ್ಬ ವ್ಯಕ್ತಿಯ ನಡವಳಿಕೆಯಲ್ಲಿ ಬದಲಾವಣೆಯಾಗುವ ಅಗತ್ಯವಿದೆ" ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌)...

ಎಸ್‌ಐಆರ್‌ನ ಮೂರು ಹಂತಗಳಲ್ಲಿ 13.98 ಕೋಟಿ ಮತದಾರರು ಹೊರಕ್ಕೆ; 5.43 ಕೋಟಿ ಮತದಾರರಿಗೆ ಅಳಿಸುವಿಕೆಯ ಭೀತಿ: ಕಾಂಗ್ರೆಸ್ 

ನವದೆಹಲಿ: ಭಾರತೀಯ ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ದೇಶದ ಕೋಟ್ಯಂತರ ಮತದಾರರ ಹಕ್ಕಿನ ಮೇಲೆ ಪರಿಣಾಮ ಬೀರುತ್ತಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. SIRನ...

ಧರ್ಮಸ್ಥಳ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ : ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಸೋಮವಾರ (ಸೆ.21) ಆದೇಶಿಸಿದೆ. ಈ ಪ್ರಕರಣದಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಮೂರು ತಿಂಗಳೊಳಗೆ ಅನುಪಾಲನಾ ವರದಿಯನ್ನು (compliance report)...