Homeಕರ್ನಾಟಕತುಮಕೂರು | ಜೀತ ಪದ್ದತಿ ಇನ್ನೂ ಜೀವಂತ : 36 ಕೂಲಿ ಕಾರ್ಮಿಕರ ರಕ್ಷಣೆ

ತುಮಕೂರು | ಜೀತ ಪದ್ದತಿ ಇನ್ನೂ ಜೀವಂತ : 36 ಕೂಲಿ ಕಾರ್ಮಿಕರ ರಕ್ಷಣೆ

- Advertisement -
- Advertisement -

ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಹಾಲ್ಕುರಿಕೆ, ಮಂಜುನಾಥಪುರ ಸುತ್ತಮುತ್ತಲಿನ ಪ್ರದೇಶದಲ್ಲಿನ ಶುಂಠಿ ಹೊಲಗಳಲ್ಲಿ ಜೀತದಾಳುಗಳಂತೆ, ಬಲವಂತವಾಗಿ ದುಡಿಯುತ್ತಿದ್ದ 36 ಕಾರ್ಮಿಕರನ್ನು ಪೊಲೀಸರು ಬುಧವಾರ ರಾತ್ರಿ ರಕ್ಷಿಸಿದ್ದಾರೆ.

ಈ ಭಾಗದ ಕೆಲ ಪ್ರಭಾವಿಗಳು ರೈತರಿಂದ ನೂರಾರು ಏಕರೆ ಭೂಮಿಯನ್ನು ಗುತ್ತಿಗೆ ಪಡೆದು ಶುಂಠಿ ಬೆಳೆದಿದ್ದರು. ಆ ಶುಂಠಿ ಹೊಲದಲ್ಲಿ ಕೆಲಸ ಮಾಡಲು ಮೈಸೂರು, ಚಾಮರಾಜನಗರ, ಕೊಳ್ಳೇಗಾಲ, ಬಳ್ಳಾರಿ, ವಿಜಯಪುರ ಸೇರಿದಂತೆ ವಿವಿಧ ಭಾಗಗಳಿಂದ ಬಡ ಕೂಲಿ‌ ಕಾರ್ಮಿಕರಿಗೆ ಹೆಚ್ಚಿನ ಕೂಲಿ ಆಸೆ ತೋರಿಸಿ ಕರೆತಂದು ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿದ್ದರು ಎಂದು ಆರೋಪಿಸಲಾಗಿದೆ.

ಕಾರ್ಮಿಕರ ಬಳಿ ಇದ್ದ ಆಧಾರ್ ಕಾರ್ಡ್, ವೋಟರ್ ಐಡಿ, ಮೊಬೈಲ್‌ ಇನ್ನಿತರೆ ವಸ್ತುಗಳನ್ನು ಕಿತ್ತುಕೊಂಡು ಹೆದರಿಸಿ ಬೆದರಿಸಿ ಶುಂಠಿ ಕ್ಯಾಂಪ್ (ಶೆಡ್)ನಲ್ಲಿರಿಸಿದ್ದರು. ಕಾರ್ಮಿಕರ ಕಾವಲಿಗೆ ಗೂಂಡಾಗಳನ್ನು ನೇಮಿಸಿದ್ದರು  ಎಂದು ತಿಳಿದು ಬಂದಿದೆ.

“ದಿನವಿಡೀ ನಿರಂತರವಾಗಿ ಹೊಲದಲ್ಲಿ ಕೆಲಸ ಮಾಡಬೇಕಿತ್ತು. ಒಂದು ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದರೆ, ಕೆಲಸ ಮಾಡದಿದ್ದರೆ ಕಾವಲುಗಾರರು ದೊಣ್ಣೆಗಳಿಂದ ದೇಹದಲ್ಲಿ ಬರೆ ಬರುವ ಹಾಗೆ ಹೊಡೆದು ದೌರ್ಜನ್ಯ ಮಾಡುತ್ತಿದ್ದರು” ಎಂದು ಕಾರ್ಮಿಕರು ಅಳಲು ‌ತೋಡಿಕೊಂಡಿರುವುದಾಗಿ ಈದಿನ.ಕಾಂ ವರದಿ ಮಾಡಿದೆ.

ಮೊದಲು ಹಾಸನ ಜಿಲ್ಲೆ ಅರಸಿಕೆರೆ ತಾಲೂಕಿನ ಶುಂಠಿ ಹೊಲಗಳಲ್ಲಿ ಈ ಕಾರ್ಮಿಕರನ್ನು ದುಡಿಸಿಕೊಳ್ಳುತ್ತಿದ್ದರು. ಇತ್ತೀಚೆಗೆ ಹಾಲ್ಕುರಿಕೆ, ಮಂಜುನಾಥಪುರ ಗ್ರಾಮಗಳಿಗೆ ಕರೆದುಕೊಂಡು ಬಂದಿದ್ದರು. ಈ ಬಗ್ಗೆ ಮಾಹಿತಿ ಪಡೆದ ಹೊನ್ನವಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಬಳಿಕ ಸ್ಥಳೀಯರ ನೆರವಿನಿಂದ ಕಾರ್ಮಿಕರನ್ನು ರಕ್ಷಿಸಿ, ಅವರಿಗೆ ಹೊನ್ನವಳ್ಳಿ ಸಮುದಾಯ ಭವನದಲ್ಲಿ ಆಶ್ರಯ ಕಲ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : FACT CHECK : ತಂದೆ ಇಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ 24 ಸಾವಿರ ರೂ. ಸ್ಕಾಲರ್‌ಶಿಪ್…ವೈರಲ್ ಸಂದೇಶದ ಸತ್ಯಾಸತ್ಯತೆ ಏನು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮುಡಾ ಪ್ರಕರಣ : ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

0
ಆಪಾದಿತ ಮುಡಾ ಹಗರಣ ಪ್ರಕರಣದಲ್ಲಿ ತನ್ನ ವಿರುದ್ದ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಸೆಪ್ಟೆಂಬರ್ 12ಕ್ಕೆ ಮುಂದೂಡಿದೆ. ಇಂದು ಅರ್ಜಿ ವಿಚಾರಣೆ ನಡೆಯಿತು. ವಾದ...