Homeಕರ್ನಾಟಕಸೌಜನ್ಯ ಪರ ಹೋರಾಟದ ದಿಕ್ಸೂಚಿ ಸಭೆಗೆ ಪೊಲೀಸರಿಂದ ನೋಟಿಸ್: ಸಭೆ ನಡೆದೇ ನಡೆಯುತ್ತದೆ ಎಂದ ಆಯೋಜಕರು

ಸೌಜನ್ಯ ಪರ ಹೋರಾಟದ ದಿಕ್ಸೂಚಿ ಸಭೆಗೆ ಪೊಲೀಸರಿಂದ ನೋಟಿಸ್: ಸಭೆ ನಡೆದೇ ನಡೆಯುತ್ತದೆ ಎಂದ ಆಯೋಜಕರು

- Advertisement -
- Advertisement -

ಅತ್ಯಾಚಾರಕ್ಕೆ ಒಳಗಾಗಿ, ನಂತರ ಕೊಲೆಯಾದ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಾಳ ನ್ಯಾಯಕ್ಕೆ ಆಗ್ರಹಿಸಿ ಮತ್ತು ಊಳಿಗಮಾನ್ಯ ದರ್ಪದ ವಿರುದ್ಧ ಆಯೋಜಿಸಿದ್ದ ಸಮಾನ ಮನಸ್ಕ ಸಾಹಿತಿ, ಚಿಂತಕರ ಹೋರಾಟದ ದಿಕ್ಸೂಚಿ ಸಭೆಗೆ ಮತ್ತೆ ಅವಕಾಶ ನಿರಾಕರಿಸಲಾಗಿದೆ.

ನ್ಯಾಯಾಲಯದ ನಿರ್ದೇಶನದ ಕಾರಣ ನೀಡಿ, ಬೆಂಗಳೂರಿನ ಶೇಷಾದ್ರಿಪುರದ ಎಐಟಿಯುಸಿ ಸಭಾಂಗಣದಲ್ಲಿ ಇಂದು (18 ಮಾರ್ಚ್ ಮಂಗಳವಾರ) ಸಂಜೆ 5ಗಂಟೆಗೆ ‘ಸಮಾನ ಮನಸ್ಕರ ವೇದಿಕೆ’ ಆಯೋಜಿಸಿರುವ ಸಭೆಯನ್ನು ನಡೆಸಲು ಅವಕಾಶ ಇಲ್ಲ ಎಂದು ಪೊಲೀಸರು ಆಯೋಜಕರಿಗೆ ನೋಟಿಸ್ ನೀಡಿದ್ದಾರೆ.

ಹೈಕೋರ್ಟ್ ಆದೇಶವನ್ನು ನೋಟಿಸ್‌ನಲ್ಲಿ ಉಲ್ಲೇಖಿಸಿರುವ ಶೇಷಾದ್ರಿಪುರಂ ಠಾಣೆ ಪೊಲೀಸರು, “ಈ ರೀತಿಯ ಪ್ರತಿಭಟನೆಗೆ ಅವಕಾಶವಿಲ್ಲ. ಒಂದು ವೇಳೆ ತಾವು ಕಾನೂನು ಉಲ್ಲಂಘನೆ ಮಾಡಿ ಪ್ರತಿಭಟನೆ ಮಾಡಿದ್ದಲ್ಲಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು”ಎಂದು ತಿಳಿಸಿದ್ದಾರೆ. ಆದರೆ, ನಮಗೆ ಲಭ್ಯವಾದ ಡಿಜಿಟಲ್ ಪೋಸ್ಟರ್‌ನಲ್ಲಿ ದಿಕ್ಸೂಚಿ ಸಭೆ ಎಂದು ಉಲ್ಲೇಖಿಸಲಾಗಿದೆ, ಪ್ರತಿಭಟನೆ ಎಂದಿಲ್ಲ

ಪೊಲೀಸರ ನೋಟಿಸ್‌ನಲ್ಲಿ ಏನಿದೆ?

“ಸಾರಿಗೆ ನೌಕರರ ಹಿತ ರಕ್ಷಣಾ ವೇದಿಕೆಯ ನವೀನ್ ಶೀನಿವಾಸ್, ಕರ್ನಾಟಕ ರಣಧೀರ ಪಡೆಯ ಭೈರಪ್ಪ ಹರೀಶ್ ಕುಮಾರ್, ವಕೀಲರಾದ ಮೈತ್ರಿಯವರ ನೇತೃತ್ವದಲ್ಲಿ ‘ಸೌಜನ್ಯ ನ್ಯಾಯಕ್ಕೆ ಆಗ್ರಹಿಸಿ, ಊಳಿಗೆಮಾನ್ಯ ದರ್ಪದ ವಿರುದ್ಧ – ಸಾಹಿತಿ, ಚಿಂತಕ ಹೋರಾಟ ದಿಕ್ಕೂಚಿ ಸಭೆ ಹಮ್ಮಿಕೊಂಡಿದ್ದಾರೆ. ಪ್ರಸ್ತುತ ಸಭೆಯಲ್ಲಿ ಸಮಾಜದಲ್ಲಿ ಸಂವಿಧಾನ ವಿರೋಧಿ ಚಟುವಟಿಕೆ ಹೆಚ್ಚಾಗುತ್ತಿರುವ ಕುರಿತು ಮತ್ತು ಸೌಜನ್ಯ ಪ್ರಕರಣದ ಕಾನೂನು ಹೋರಾಟದ ರೂಪುರೇಷೆ ಚರ್ಚೆಯಾಗಲಿದೆ. ಈ ಸಭೆಯಲ್ಲಿ 40-50 ಜನರು ಭಾಗವಹಿಸಲಿದ್ದಾರೆ ಎಂಬ ಮಾಹಿತಿಯಿದೆ. ಕರ್ನಾಟಕ ಹೈಕೋರ್ಟ್ ಆದೇಶದಂತೆ ಈ ರೀತಿಯ ಪ್ರತಿಭಟನೆಗೆ ಅವಕಾಶವಿರುವುದಿಲ್ಲ. ಒಂದು ವೇಳೆ ಕಾನೂನು ಉಲ್ಲಂಘನೆ ಮಾಡಿ ಪ್ರತಿಭಟನೆ ಮಾಡಿದ್ದಲ್ಲಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಪೊಲೀಸ್ ನೋಟಿಸ್ ನಲ್ಲಿ ತಿಳಿಸಲಾಗಿದೆ.

“ಸಭೆ ನಡೆದೇ ನಡೆಯುತ್ತದೆ”

ಪೊಲೀಸರ ನೋಟಿಸ್‌ ಕುರಿತು ಪ್ರತಿಕ್ರಿಯಿಸಿರುವ ಆಯೋಜಕರು “ಕರ್ನಾಟಕದಲ್ಲಿ ಫ್ಯೂಡಲ್ ಅಧೀನದ ಪೊಲೀಸ್ ವ್ಯವಸ್ಥೆ ಜಾರಿಯಲ್ಲಿದೆಯೇ? ಹೈಕೋರ್ಟ್ ಆದೇಶವನ್ನು ತಿರುಚಿ ಸೌಜನ್ಯ ಪರ ಹೋರಾಟವನ್ನು ನಿಲ್ಲಿಸಲು ಪೊಲೀಸರು ರಾತ್ರಿ ಹಗಲು ಶ್ರಮಿಸುತ್ತಿರುವುದೇಕೆ? ಕಚೇರಿಯೊಳಗೆ ಸಮಾಲೋಚನಾ ಸಭೆ/ದಿಕ್ಸೂಚಿ ಸಭೆ ನಡೆಸುವಂತಿಲ್ಲವೇ? ನಾಳೆ ಮನೆಯೊಳಗೂ ಮನೆ ಮಂದಿಯ ಜೊತೆಗೂ ಸೌಜನ್ಯ ಬಗ್ಗೆ ಮಾತನಾಡಬಾರದು ಎಂದು ಪೊಲೀಸರು ನೋಟಿಸ್ ನೀಡಬಹುದೇ? ಯಾರದ್ದೇ ವಿರುದ್ದ ಅವಹೇಳನಕಾರಿಯಾಗಿ ಮಾತನಾಡಿದರೆ ಪೊಲೀಸರು ಕ್ರಮ ತೆಗೆದುಕೊಳ್ಳಬಹುದೇ ವಿನಃ ಸಮಾಲೋಚನಾ ಸಭೆಗಳ ಮೇಲಲ್ಲ. ಹಾಗಾಗಿ ಕಾನೂನು ತಜ್ಞರು ನಮಗೆ ನೀಡಿದ ವ್ಯಾಖ್ಯಾನದಂತೆ, ದಿನಾಂಕ 18.03.2025 ಮಂಗಳವಾರ ಸಂಜೆ 5 ಗಂಟೆಗೆ ನಡೆಸಲು ಉದ್ದೇಶಿಸಿದ ಸಾಹಿತಿ-ಚಿಂತಕ- ಹೋರಾಟಗಾರರ ದಿಕ್ಸೂಚಿ ಸಭೆ ಸಾಂಗವಾಗಿ ನಡೆಯಲಿದೆ” ಎಂದಿದ್ದಾರೆ.

“ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿದ್ದೇವಾ?.. ಸರ್ವಾಧಿಕಾರದಲ್ಲಿದ್ದೇವಾ?”

ಎರಡನೇ ಬಾರಿಗೆ ಸಭೆ ನಡೆಸದಂತೆ ನೋಟಿಸ್ ಬಂದಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. “ಈ ಹಿಂದೆ ಇದೇ ವಿಷಯಕ್ಕೆ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಆಯೋಜಿಸಿದ್ದ ಸಮಾಲೋಚನಾ ಸಭೆಯನ್ನೇ ಧರ್ಮಸ್ಥಳದ‌ ವಕೀಲ ಮತ್ತು ಪೊಲೀಸರ ಒತ್ತಡದಿಂದಾಗಿ ರದ್ದುಪಡಿಸಲಾಗಿತ್ತು. ಈಗ ಆಂತರಿಕ ಸಮಾಲೋಚನಾ ಸಭೆಯನ್ನೂ ತಡೆಯಲು ನೋಡುತ್ತಿದ್ದಾರೆ. ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿದ್ದೇವೆಯೇ ಅಥವಾ ಸರ್ವಾಧಿಕಾರದಲ್ಲಿದ್ದೇವೆಯೇ?” ಎಂದು ಜನರು ಪ್ರಶ್ನಿಸಿದ್ದಾರೆ.

ಕಸಾಪದಲ್ಲಿ ಏರ್ಪಡಿಸಿದ್ದ ಸಭೆಗೆ ಕೊನೆ ಕ್ಷಣದಲ್ಲಿ ಅನುಮತಿ ರದ್ದು 

ಮಾರ್ಚ್ 9ರಂದು ಭಾನುವಾರ ಬೆಂಗಳೂರಿನ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್‌ನ ಅಕ್ಕಮಹಾದೇವಿ ಸಭಾಂಗಣದಲ್ಲಿ ಸೌಜನ್ಯ ಪರ ಸಮಾಲೋಚನಾ ಸಭೆ ಏರ್ಪಡಿಸಲಾಗಿತ್ತು. ಅದಕ್ಕೆ ಅಂತಿಮ ಕ್ಷಣದಲ್ಲಿ ಅನುಮತಿ ನಿರಾಕರಿಸಿದ ಕಾರಣ, ಸಭೆ ಮುಂದೂಡಿಕೆಯಾಗಿತ್ತು.

ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣವನ್ನು ಬಾಡಿಗೆ ಪಾವತಿಸಿ ಕಾರ್ಯಕ್ರಮಕ್ಕೆ ನಿಗದಿಗೊಳಿಸಲಾಗಿತ್ತು. ಕಾರ್ಯಕ್ರಮದ ಬಗ್ಗೆ ಪರಿಷತ್ ಜೊತೆಗೆ ಚರ್ಚೆ ನಡೆಸಲಾಗಿತ್ತು. ಆದರೆ, ಸಾಹಿತ್ಯ ಪರಿಷತ್‌ಗೆ ಬಂದ ಲೀಗಲ್ ನೋಟಿಸ್ ಮತ್ತು ಪೊಲೀಸ್ ನೋಟಿಸ್ ಆಧಾರದಲ್ಲಿ ಸಭಾಂಗಣವನ್ನು ನೀಡಲಾಗುವುದಿಲ್ಲ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಮಾರ್ಚ್ 8ರ ರಾತ್ರಿ 10.30ಕ್ಕೆ ಸಂಘಟಕರಲ್ಲೋರ್ವರಾದ ಬೈರಪ್ಪ ಹರೀಶ್ ಕುಮಾರ್ ಅವರಿಗೆ ಲಿಖಿತ ನೋಟಿಸ್ ಕಳಿಸಿದ್ದಾರೆ‌ ಈ ಕಾರಣಕ್ಕೆ ಸಭೆ ಮುಂದೂಡಲಾಗಿದೆ ಎನ್ನಲಾಗಿತ್ತು.

ಕಸಾಪ ಅಧ್ಯಕ್ಷ ಮಹೇಶ್ ಜೋಶಿಗೆ ಲೀಗಲ್‌ ನೋಟಿಸ್ 

ಧರ್ಮಸ್ಥಳದ ವಕೀಲರು ಲೀಗಲ್ ನೋಟಿಸ್ ನೀಡಿದ್ದಾರೆ ಎಂಬ ಕಾರಣವನ್ನು ಮುಂದಿಟ್ಟುಕೊಂಡು ಕಸಾಪ ಸಭಾಂಗಣದಲ್ಲಿ ಸೌಜನ್ಯ ಪರ ಸಭೆ ನಡೆಸಲು ಅನುಮತಿ ನಿರಾಕರಿಸಿದ ಕಸಾಪ ಅಧ್ಯಕ್ಷ ಮಹೇಶ್ ಜೋಶಿಗೆ ಸೌಜನ್ಯ ಪರ ಹೋರಾಟಗಾರರ ಪರವಾಗಿ ಎಸ್.ಬಾಲನ್ ಲೀಗಲ್ ನೋಟಿಸ್ ನೀಡಿದ್ದಾರೆ.

ಬಾಲನ್ ಅವರು ನೀಡಿರುವ ಲೀಗಲ್ ನೋಟಿಸ್‌ನಲ್ಲಿ ”ಧರ್ಮಸ್ಥಳದ ವಕೀಲರ ಹೆಸರಿನಲ್ಲಿ ನೀಡಲಾದ ಲೀಗಲ್ ನೋಟಿಸ್‌ಗೆ ವಿಳಾಸ, ಲೆಟರ್ ಹೆಡ್, ಸಂಪರ್ಕ ಸೇರಿದಂತೆ ಯಾವುದೇ ತಲೆ-ಬಾಲ ಇಲ್ಲವಾಗಿದ್ದು, ಸೌಜನ್ಯ ಪರ ಹೋರಾಟಗಾರರನ್ನು ದಾರಿ ತಪ್ಪಿಸಲು ಹೈಕೋರ್ಟ್ ಆದೇಶವನ್ನು ತಿರುಚಿ ವಂಚನೆ ಮಾಡಲಾಗಿದೆ” ಎಂದು ವಿವರಿಸಲಾಗಿದೆ.

“ತಲೆ ಮತ್ತು ಬಾಲವಿಲ್ಲದ ಲೀಗಲ್ ನೋಟಿಸ್ ಆಧಾರದ ಮೇಲೆ ನೀವು ಕನ್ನಡ ಸಾಹಿತ್ಯ ಪರಿಷತ್ತಿನ ಆವರಣದಲ್ಲಿ ಮಾಡಲಾಗಿದ್ದ ಸಭಾಂಗಣದ ಬುಕಿಂಗ್ ಅನ್ನು ಹೇಗೆ ರದ್ದುಗೊಳಿಸಿದ್ದೀರಿ” ಎಂದು ಸೌಜನ್ಯ ಪರ ಹೋರಾಟಗಾರರ ಪರ ವಕೀಲ ಬಾಲನ್ ಪ್ರಶ್ನಿಸಿದ್ದಾರೆ.

ಚಿನ್ನ ಕಳ್ಳಸಾಗಣೆ ಆರೋಪಿ ರನ್ಯಾ ರಾವ್ ವಿರುದ್ಧ ಅಸಭ್ಯ ಹೇಳಿಕೆ ನೀಡಿದ ಬಿಜೆಪಿ ಶಾಸಕ ಯತ್ನಾಳ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...