Homeಮುಖಪುಟವಶಪಡಿಸಿಕೊಂಡ 200 ಕೆ.ಜಿ ಗಾಂಜಾ ಇಲಿಗಳು ತಿಂದಿವೆ ಎಂದ ಪೊಲೀಸರು : ಆರೋಪಿಯನ್ನು ಖುಲಾಸೆಗೊಳಿಸಿದ ಕೋರ್ಟ್

ವಶಪಡಿಸಿಕೊಂಡ 200 ಕೆ.ಜಿ ಗಾಂಜಾ ಇಲಿಗಳು ತಿಂದಿವೆ ಎಂದ ಪೊಲೀಸರು : ಆರೋಪಿಯನ್ನು ಖುಲಾಸೆಗೊಳಿಸಿದ ಕೋರ್ಟ್

- Advertisement -
- Advertisement -

ಮೂರು ವರ್ಷಗಳ ಹಿಂದೆ ಜಾರ್ಖಂಡ್ ಪೊಲೀಸರು ವಾಹನವೊಂದನ್ನು ತಡೆದು, ಅದರಿಂದ ಭಾರೀ ಪ್ರಮಾಣದ ಮಾದಕ ವಸ್ತು ಗಾಂಜಾ ವಶಪಡಿಸಿಕೊಂಡಿದ್ದರು. 2024ರಲ್ಲಿ ಈ ಪ್ರಕರಣದ ವಿಚಾರಣೆ ನಡೆಯುವಾಗ, ವಶಪಡಿಸಿಕೊಂಡ ಗಾಂಜಾವನ್ನು ಹಾಜರುಪಡಿಸುವಂತೆ ನ್ಯಾಯಾಲಯ ಸೂಚಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಪೊಲೀಸರು, ಅದನ್ನು ಮಲ್ಖಾನಾದಲ್ಲಿ ಸಂಗ್ರಹಿಸಿಟ್ಟಿದ್ದಾಗ ಇಲಿಗಳು ತಿಂದಿವೆ ಎಂದು ಸಬೂಬು ಹೇಳಿದ್ದರು.

ಹಾಗಾಗಿ, ಪ್ರಕರಣದ ಏಕೈಕ ಆರೋಪಿಯನ್ನು ರಾಂಚಿಯ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು ಖುಲಾಸೆಗೊಳಿಸಿದೆ. ಬರೋಬ್ಬರಿ 200 ಕೆ.ಜಿ ಗಾಂಜಾವನ್ನು ಇಲಿಗಳು ತಿಂದಿವೆ ಎಂಬ ತನಿಖಾಧಿಕಾರಿಯ ಬೇಜವ್ದಾರಿ ಹೇಳಿಕೆ ಸೇರಿದಂತೆ, ತನಿಖೆಯಲ್ಲಿ ದೊಡ್ಡಮಟ್ಟದ ಲೋಪವಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಪ್ರಾಸಿಕ್ಯೂಷನ್ ಪ್ರಕಾರ, ರಾಂಚಿಯಿಂದ ರಾಮಗಢಕ್ಕೆ ಗಾಂಜಾ ಸಾಗಿಸಲಾಗುತ್ತಿದೆ ಎಂಬ ಮಾಹಿತಿಯ ಮೇರೆಗೆ, ರಾಂಚಿ ಜಿಲ್ಲೆಯ ಓರ್ಮಾಂಜಿ ಪೊಲೀಸರು ಜನವರಿ 17, 2022ರಂದು ರಾಷ್ಟ್ರೀಯ ಹೆದ್ದಾರಿ-20ರಲ್ಲಿ ಬಿಳಿ ಬಣ್ಣದ ಬೊಲೆರೊ ವಾಹನವನ್ನು ತಡೆದಿದ್ದರು.

ಪೊಲೀಸರು ವಾಹನವನ್ನು ತಡೆದ ನಂತರ, ಮೂವರು ವ್ಯಕ್ತಿಗಳು ಅದರಿಂದ ಹಾರಿ ಪರಾರಿಯಾಗಲು ಪ್ರಯತ್ನಿಸಿದ್ದರು. ಅವರಲ್ಲಿ ಇಂದ್ರಜೀತ್ ರೈ ಅಲಿಯಾಸ್ ಅನರ್ಜಿತ್ ರೈ ಎಂಬಾತ ಸಿಕ್ಕಿಬಿದ್ದರೆ, ವಿಕಾಸ್ ಚೌರಾಸಿಯಾ ಮತ್ತು ಕುಂದನ್ ರೈ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು.

ಪೊಲೀಸರು ವಾಹನವನ್ನು ಶೋಧಿಸಿದಾಗ, ವಿಶೇಷವಾಗಿ ರಚಿಸಲಾದ ಕಂಪಾರ್ಟ್‌ಮೆಂಟ್‌ಗಳಲ್ಲಿ ಸುಮಾರು 170 ಪ್ಯಾಕೆಟ್‌ಗಳಲ್ಲಿ ಪ್ಯಾಕ್ ಮಾಡಲಾದ 200 ಕೆಜಿ ಗಾಂಜಾ ಸಿಕ್ಕಿತ್ತು. ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದರು.

ಈ ಸಂಬಂಧ ಮಾದಕ ದ್ರವ್ಯಗಳು ಮತ್ತು ಮನೋವಿಕೃತ ವಸ್ತುಗಳ (ಎನ್‌ಡಿಪಿಎಸ್‌) ಕಾಯ್ದೆಯ ಸೆಕ್ಷನ್ 20(b)(ii)(c) ಮತ್ತು 22(c) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಬಂಧಿತ ಆರೋಪಿ ರೈ ವಿಚಾರಣೆ ಸಮಯದಲ್ಲಿ ಕಸ್ಟಡಿಯಲ್ಲಿದ್ದರು.

ಡಿಸೆಂಬರ್ 19, 2025ರಂದು ರಾಂಚಿಯ ಹೆಚ್ಚುವರಿ ನ್ಯಾಯಾಂಗ ಆಯುಕ್ತ-III-ಹಾಗೂ-ವಿಶೇಷ ನ್ಯಾಯಾಧೀಶ ಆನಂದ್ ಪ್ರಕಾಶ್ ಅವರು ಇಂದ್ರಜೀತ್ ರೈಯನ್ನು ಖುಲಾಸೆಗೊಳಿಸಿದ್ದಾರೆ. ಪ್ರಾಸಿಕ್ಯೂಷನ್ ಆರೋಪಗಳನ್ನು ಅನುಮಾನ ಮೀರಿ ಸಾಬೀತುಪಡಿಸಲು ವಿಫಲವಾಗಿದೆ ಎಂದು ನ್ಯಾಯಾಲಯ ಹೇಳಿದೆ. ಮಾದಕ ದ್ರವ್ಯದ ವಶಪಡಿಸಿಕೊಳ್ಳುವಿಕೆ ಮತ್ತು ನಿರ್ವಹಣೆಯ ಬಗ್ಗೆಯೂ ನ್ಯಾಯಾಲಯ ಅನುಮಾನಗಳನ್ನು ಎತ್ತಿದೆ.

ವಶಪಡಿಸಿಕೊಂಡ ಗಾಂಜಾವನ್ನು ಇಲಿಗಳು ನಾಶಪಡಿಸಿವೆ ಎಂದು ಹೇಳುವ ಠಾಣೆಯ ಡೈರಿ ನಮೂದನ್ನು ಉಲ್ಲೇಖಿಸಿ, ನ್ಯಾಯಾಲಯವು ತನ್ನ ತೀರ್ಪಿನಲ್ಲಿ, “ಇದು ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳುವ ಮತ್ತು ಪೊಲೀಸರು ಅದನ್ನು ನಿರ್ವಹಿಸುತ್ತಿರುವ ರೀತಿಯ ಮೇಲೆ ಅನುಮಾನವನ್ನು ಮೂಡಿಸುತ್ತದೆ” ಎಂದು ಹೇಳಿದೆ.

ನ್ಯಾಯಾಲಯದ ಆದೇಶದ ಪ್ರಕಾರ, ಗಾಂಜಾ ಪ್ಯಾಕೆಟ್‌ಗಳು ವಿಕಾಶ್ ಚೌರಾಸಿಯಾ ಮತ್ತು ಕುಂದನ್ ರೈ ಅವರಿಗೆ ಸೇರಿದ್ದು ಎಂದು ರೈ ಪೊಲೀಸರಿಗೆ ತಿಳಿಸಿದ್ದು, ಅವರು ಓಡಿ ಹೋಗಿದ್ದಾರೆ. ಅವರ ನಿರ್ದೇಶನದ ಮೇರೆಗೆ ರೈ ಗಾಂಜಾವನ್ನು ಬಿಹಾರದ ಭಕ್ತಿಯಾರ್‌ಪುರಕ್ಕೆ ಸಾಗಿಸುತ್ತಿದ್ದರು.

ಆದಾಗ್ಯೂ, ಏಳು ಪ್ರಾಸಿಕ್ಯೂಷನ್ ಸಾಕ್ಷಿಗಳನ್ನು (ಎಲ್ಲರೂ ಪೊಲೀಸ್ ಸಿಬ್ಬಂದಿ) ವಿಚಾರಣೆ ನಡೆಸಿದಾಗ ವಾಹನವನ್ನು ತಡೆಹಿಡಿದ ಸಮಯ, ಮಾದಕವಸ್ತು ವಶಪಡಿಸಿಕೊಂಡ ನಿಖರವಾದ ಸ್ಥಳ, ಆರೋಪಿಯನ್ನು ಯಾರು ಬಂಧಿಸಿದರು ಮತ್ತು ಇತರ ಇಬ್ಬರು ಆರೋಪಿಗಳು ಯಾವ ದಿಕ್ಕಿನಲ್ಲಿ ಪರಾರಿಯಾಗಿದ್ದಾರೆ ಎಂಬಂತಹ ಪ್ರಮುಖ ಅಂಶಗಳ ಕುರಿತು ಅವರ ಸಾಕ್ಷ್ಯಗಳಲ್ಲಿ ಹಲವಾರು ವಿರೋಧಾಭಾಸಗಳು ಕಂಡುಬಂದಿವೆ.

“ಅವರ ಹೇಳಿಕೆಗಳಲ್ಲಿ ಹಲವಾರು ವಿರೋಧಾಭಾಸಗಳಿವೆ… ಇದು ಆಪಾದಿತ ಆರೋಪಿಯನ್ನು ಪ್ರಾಸಿಕ್ಯೂಷನ್ ಹೇಳಿದಂತೆ ಸ್ಥಳದಲ್ಲಿಯೇ ಹಿಡಿಯಲಾಗಿದೆಯೇ ಅಥವಾ ಬೇರೆಡೆಯಿಂದ ಹಿಡಿಯಲಾಗಿದೆಯೇ ಎಂಬ ಅನುಮಾನವನ್ನು ಹುಟ್ಟುಹಾಕುತ್ತದೆ” ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.

ಜನನಿಬಿಡ ರಾಷ್ಟ್ರೀಯ ಹೆದ್ದಾರಿಯಲ್ಲಿ ವಸತಿ ಪ್ರದೇಶದಲ್ಲಿ ಮಾದಕ ವಸ್ತು ವಶಪಡಿಸಿಕೊಂಡರೂ ,ಯಾವುದೇ ಸ್ವತಂತ್ರ ಸಾರ್ವಜನಿಕ ಸಾಕ್ಷಿಯನ್ನು ವಿಚಾರಣೆ ನಡೆಸಲಾಗಿಲ್ಲ ಎಂಬ ಅಂಶವನ್ನು ನ್ಯಾಯಾಲಯವು ಗಮನಿಸಿದೆ.

ಆರೋಪಿ ಮತ್ತು ವಶಪಡಿಸಿಕೊಂಡ ವಾಹನದ ನಡುವೆ ಯಾವುದೇ ಸಂಬಂಧವನ್ನು ಸ್ಥಾಪಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. “ವಾಹನವು ಆರೋಪಿಯೊಂದಿಗೆ ಯಾವುದೇ ರೀತಿಯಲ್ಲಿ ಸಂಬಂಧ ಹೊಂದಿದೆ ಎಂದು ತೋರಿಸುವ ಯಾವುದೇ ಇತರ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಸಲ್ಲಿಸಲಾಗಿಲ್ಲ” ಎಂದು ತೀರ್ಪಿನಲ್ಲಿ ಹೇಳಲಾಗಿದೆ.

ಪ್ರಕರಣದ ತನಿಖಾಧಿಕಾರಿ (ಐಒ) ವಿಚಾರಣೆಯ ಸಮಯದಲ್ಲಿ ವಶಪಡಿಸಿಕೊಂಡಿದ್ದಾರೆ ಎನ್ನಲಾದ ವಾಹನದಲ್ಲಿ ಇಂಜಿನ್‌ ಅಥವಾ ಚಾಸಿಸ್ ಸಂಖ್ಯೆ ಇರಲಿಲ್ಲ ಎಂದು ಒಪ್ಪಿಕೊಂಡಿದ್ದಾರೆ. ಈ ಸಂಗತಿಯನ್ನು ಪ್ರಕರಣದ ಡೈರಿಯಲ್ಲಿ ಸರಿಯಾಗಿ ದಾಖಲಿಸಲಾಗಿಲ್ಲ ಅಥವಾ ಸಾರಿಗೆ ಅಧಿಕಾರಿಗಳಿಗೆ ವರದಿ ಮಾಡಲಾಗಿಲ್ಲ, ಇದು ಪ್ರಾಸಿಕ್ಯೂಷನ್ ಪ್ರಕರಣವನ್ನು ಮತ್ತಷ್ಟು ದುರ್ಬಲಗೊಳಿಸಿದೆ ಎಂದು ನ್ಯಾಯಾಲಯ ಹೇಳಿದೆ.

ಪೊಲೀಸ್ ಮಲ್ಖಾನಾದಲ್ಲಿ ಸಂಗ್ರಹಿಸಲಾಗಿದ್ದ ಮಾದಕ ವಸ್ತುಗಳನ್ನು ಇಲಿಗಳು ತಿಂದು ಹಾಕಿವೆ ಎಂದು ಪ್ರಾಸಿಕ್ಯೂಷನ್ ಸ್ವತಃ ಒಪ್ಪಿಕೊಂಡಿದ್ದು, ಇದು ಪ್ರಕರಣಕ್ಕೆ ಪ್ರಮುಖ ಹೊಡೆತವಾಗಿದೆ. ವಿಚಾರಣೆಯ ಸಮಯದಲ್ಲಿ ಈ ವಸ್ತುಗಳನ್ನು ಹಾಜರುಪಡಿಸುವ ಮೊದಲು, ಫೆಬ್ರವರಿ 2024ರಲ್ಲಿ ನ್ಯಾಯಾಲಯದಲ್ಲಿ ಈ ಕುರಿತು ಠಾಣೆಯ ಡೈರಿ ನಮೂದನ್ನು ಸಲ್ಲಿಸಲಾಗಿದೆ.

ಮಾದರಿಗಳನ್ನು ಯಾವಾಗ ತೆಗೆದುಕೊಳ್ಳಲಾಗಿದೆ ಅಥವಾ ಅವುಗಳನ್ನು ಹೇಗೆ ಗುರುತಿಸಲಾಗಿದೆ ಎಂಬುದನ್ನು ಹಲವಾರು ಸಾಕ್ಷಿಗಳು ಸ್ಪಷ್ಟವಾಗಿ ಹೇಳಲು ಸಾಧ್ಯವಾಗದ ಕಾರಣ, ಮಾದರಿ ಸಂಗ್ರಹಣೆ, ಸೀಲಿಂಗ್ ಮತ್ತು ಸಾಕ್ಷ್ಯಗಳನ್ನು ಸಂರಕ್ಷಿಸುವಲ್ಲಿ ಗಂಭೀರ ಅಂತರವನ್ನು ನ್ಯಾಯಾಲಯವು ಎತ್ತಿ ತೋರಿಸಿದೆ.

ಪ್ರಾಸಿಕ್ಯೂಷನ್ ಅನುಮಾನ ಮೀರಿ ತಪ್ಪಿತಸ್ಥರೆಂದು ಸಾಬೀತುಪಡಿಸಲು ವಿಫಲವಾಗಿದೆ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯವು, ಇಂದ್ರಜೀತ್ ರೈ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದೆ. “ಆರೋಪಿಯನ್ನು ವಶಪಡಿಸಿಕೊಂಡ ವಾಹನದೊಂದಿಗೆ ಪರಸ್ಪರ ಸಂಬಂಧಿಸಲು ಮತ್ತು ಆರೋಪಿಯನ್ನು ಅದೇ ಸ್ಥಳದಲ್ಲಿ ಬಂಧಿಸಲಾಗಿದೆ ಎಂಬ ಅನುಮಾನವನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ. ಬೇರೆ ಯಾವುದೇ ಪ್ರಕರಣದಲ್ಲಿ ಆರೋಪಿ ಬಂಧಿತರಾಗಿರದಿದ್ದರೆ, ಅವರನ್ನು ಬಿಡುಗಡೆ ಮಾಡುವಂತೆ ಸೂಚಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...