Homeಮುಖಪುಟಲಾರೆನ್ಸ್ ಬಿಷ್ಣೋಯ್ ಟಿವಿ ಸಂದರ್ಶನಕ್ಕೆ ಪೊಲೀಸ್ ಠಾಣೆಯನ್ನು ಸ್ಟುಡಿಯೋ ರೀತಿ ಬಳಸಲಾಗಿತ್ತು : ಹೈಕೋರ್ಟ್

ಲಾರೆನ್ಸ್ ಬಿಷ್ಣೋಯ್ ಟಿವಿ ಸಂದರ್ಶನಕ್ಕೆ ಪೊಲೀಸ್ ಠಾಣೆಯನ್ನು ಸ್ಟುಡಿಯೋ ರೀತಿ ಬಳಸಲಾಗಿತ್ತು : ಹೈಕೋರ್ಟ್

- Advertisement -
- Advertisement -

ಸುದ್ದಿ ವಾಹಿನಿಯೊಂದರ ಸಂದರ್ಶನದಲ್ಲಿ ಭಾಗವಹಿಸಲು ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯಿಗೆ ಪಂಜಾಬ್ ಪೊಲೀಸರು ಸ್ಟುಡಿಯೋ ರೀತಿಯ ವ್ಯವಸ್ಥೆ ಮಾಡಿಕೊಟ್ಟಿದ್ದರು ಎಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಹೇಳಿದೆ.

ಬಿಷ್ಣೋಯ್ ಟಿವಿ ವಾಹಿನಿಗೆ ಸಂದರ್ಶನ ನೀಡಿದ್ದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ರದ್ದತಿ ವರದಿಯನ್ನು ಸಲ್ಲಿಸುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನಿರ್ಧಾರವನ್ನು ಪ್ರಶ್ನಿಸುವಾಗ ನ್ಯಾಯಮೂರ್ತಿಗಳಾದ ಅನುಪಿಂದರ್ ಸಿಂಗ್ ಗ್ರೆವಾಲ್ ಮತ್ತು ಲಪಿತಾ ಬ್ಯಾನರ್ಜಿ ಅವರ ಪೀಠವು ಈ ಹೇಳಿಕೆ ನೀಡಿದೆ.

ಪಂಜಾಬಿ ಗಾಯಕ ಶುಭದೀಪ್ ಸಿಂಗ್ ಸಿಧು ಅಲಿಯಾಸ್ ಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಬಿಷ್ಣೋಯ್ ಶಂಕಿತ ಆರೋಪಿಯಾಗಿದ್ದಾನೆ. ಆತನ ಸಂದರ್ಶನವನ್ನು ಮಾರ್ಚ್ 2023ರಲ್ಲಿ ಎಬಿಪಿ ನ್ಯೂಸ್‌ ಪ್ರಸಾರ ಮಾಡಿತ್ತು. ಅದರಲ್ಲಿ ಆತ ಮೂಸೆವಾಲಾ ಕೊಲೆಯ ಸಂಚಿನ ಬಗ್ಗೆ ಗೊತ್ತು ಎಂದಿದ್ದ.

ಪಂಜಾಬ್ ಪೊಲೀಸ್‌ನ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಖರಾರ್‌ನ ಸಿಐಎ ಸಿಬ್ಬಂದಿ ಆವರಣದಲ್ಲಿ ಸಂದರ್ಶನ ನಡೆದಿದೆ ಎಂದು ಕೋರ್ಟ್ ಹೇಳಿದೆ.

ಪಂಜಾಬ್ ರಾಜ್ಯ ಮಾನವ ಹಕ್ಕುಗಳ ಆಯೋಗದ ವಿಶೇಷ ಡಿಜಿಪಿ ಪ್ರಬೋಧ್ ಕುಮಾರ್ ಅವರು ಭ್ರಷ್ಟಾಚಾರ ತಡೆ ಕಾಯ್ದೆಯಡಿ ದಾಖಲಾದ ಪ್ರಕರಣ ಸೇರಿದಂತೆ ಇತರ ಅಪರಾಧಗಳನ್ನು ಪರಿಶೀಲಿಸುವ ಅಧಿಕಾರವನ್ನು ಎಸ್‌ಐಟಿ ಹೊಂದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು. ಆದರೆ, ಇದನ್ನು ಒಪ್ಪದ ಕೋರ್ಟ್, ಪ್ರಕರಣದ ಕುರಿತು ಹೆಚ್ಚಿನ ತನಿಖೆಗೆ ಆದೇಶಿಸಿದೆ.

ಲಾರೆನ್ಸ್ ಬಿಷ್ಣೋಯ್ ಸಂದರ್ಶನಕ್ಕೆ ಅವಕಾಶ ಮಾಡಿಕೊಟ್ಟ ಕಾರಣಕ್ಕೆ ಇಬ್ಬರು ಗೆಜೆಟೆಡ್ ಅಧಿಕಾರಿಗಳು ಸೇರಿದಂತೆ ಏಳು ಮಂದಿ ಪಂಜಾಬ್ ಪೊಲೀಸರನ್ನು ಅಮಾನತುಗೊಳಿಸಲಾಗಿದೆ. 8 ಅಧಿಕಾರಿಗಳ ವಿರುದ್ಧ ಇಲಾಖಾ ಪ್ರಕ್ರಿಯೆಗಳನ್ನು ಪ್ರಾರಂಭಿಸಲಾಗಿದೆ ಎಂದು ನ್ಯಾಯಾಲಯಕ್ಕೆ ಈ ಹಿಂದೆ ತಿಳಿಸಲಾಗಿತ್ತು.

ಸಿಐಎ ಖರಾರ್ ಪೊಲೀಸ್ ಠಾಣೆಯ ಆಗಿನ ಪ್ರಭಾರಿ ಅಧಿಕಾರಿಯಾಗಿದ್ದ ಇನ್‌ಸ್ಪೆಕ್ಟರ್ ಶಿವಕುಮಾರ್ ಅವರನ್ನು ಸೇವೆಯಲ್ಲಿ ಮುಂದುವರೆಸಲಾಗಿದೆ ಎಂದೂ ಹೇಳಲಾಗಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ನ್ಯಾಯಾಲಯ, ಸಂದರ್ಶನಕ್ಕೆ ಅನುಕೂಲ ಮಾಡಿಕೊಟ್ಟ ಹಿರಿಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಕೆಳಹಂತದ ಅಧಿಕಾರಿಗಳ ಮೇಲೆ ಗದಾಪ್ರಹಾರ ಮಾಡಿ ಹರಕೆ ತೀರಿಸಬಾರದು ಎಂದಿತ್ತು.

ಪೊಲೀಸರ ಅಧಿಕೃತ ಪ್ರತಿಕ್ರಿಯೆಯು ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸದ ಕಾರಣ, ಈ ಬಗ್ಗೆ ಅಫಿಡವಿಟ್ ಸಲ್ಲಿಸಲು ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ನ್ಯಾಯಾಲಯ ಹೇಳಿದೆ. ಸಂದರ್ಶನವು ಪಂಜಾಬ್‌ನ ಯಾವುದೇ ಜೈಲಿನಲ್ಲಿ ನಡೆದಿಲ್ಲ ಎಂದು ಹಿಂದಿನ ಪತ್ರಿಕಾಗೋಷ್ಠಿಯಲ್ಲಿ ನೀಡಿದ ಹೇಳಿಕೆಯನ್ನು ವಿವರಿಸಲು ಡಿಜಿಪಿಯನ್ನು ಕೇಳಿದೆ. ಇದೇ ವೇಳೆ ಇಂಟರ್‌ನೆಟ್‌ನಲ್ಲಿ ಸಂದರ್ಶನ ಹರಿದಾಡುತ್ತಿದ್ದರೆ ಅದನ್ನು ತಕ್ಷಣವೇ ತೆಗೆದುಹಾಕಬೇಕು ಎಂದು ಕೋರ್ಟ್‌ ಆದೇಶಿಸಿದೆ.

ಇದನ್ನೂ ಓದಿ : ಭಾರತದಲ್ಲಿ ಮಕ್ಕಳ ಕುಬ್ಜತೆ ಹೆಚ್ಚಳಕ್ಕೆ ಜಾತಿ ತಾರತಮ್ಯ ಕಾರಣ : ಅಧ್ಯಯನ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...

ರಾಷ್ಟ್ರೀಯ ಮಹಿಳಾ ಆಯೋಗದ ಕಾರ್ಯಾಗಾರದಲ್ಲಿ ಬರೀ ಹಿಂದಿ ಮಾತು : ಆಕ್ಷೇಪ ವ್ಯಕ್ತಪಡಿಸಿ ಹೊರನಡೆದ ಕೇರಳದ ಶಾಸಕರು

ರಾಷ್ಟ್ರೀಯ ಮಹಿಳಾ ಆಯೋಗ (NCW) ಮಂಗಳವಾರ (ಸೆ.8) ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ, ಬಹುಪಾಲು ಸೆಷನ್‌ಗಳನ್ನು ಹಿಂದಿ ಭಾಷೆಯಲ್ಲೇ ನಡೆಸಲಾಗುತ್ತಿದೆ ಮತ್ತು ಹಿಂದಿ ಮಾತನಾಡದ ರಾಜ್ಯಗಳ ಭಾಗವಹಿಸುವಿಕೆಗೆ ಕರಾರುವಕ್ಕಾಗಿ ನಡವಳಿಕೆಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಆರೋಪಿಸಿ,...

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...