Homeಮುಖಪುಟಅತೀಕ್ ಅಹ್ಮದ್ ಹತ್ಯೆ: 'ಪೊಲೀಸರ ಲೋಪವಿಲ್ಲ' ಎಂದ ಉತ್ತರಪ್ರದೇಶ ಸರ್ಕಾರ

ಅತೀಕ್ ಅಹ್ಮದ್ ಹತ್ಯೆ: ‘ಪೊಲೀಸರ ಲೋಪವಿಲ್ಲ’ ಎಂದ ಉತ್ತರಪ್ರದೇಶ ಸರ್ಕಾರ

- Advertisement -
- Advertisement -

ಮಾಜಿ ಸಂಸದ ಅತೀಕ್ ಅಹ್ಮದ್ ಮತ್ತು ಸಹೋದರ ಅಶ್ರಫ್‌ನ ಹತ್ಯೆ ಪ್ರಕರಣದಲ್ಲಿ ಪೊಲೀಸರ ಲೋಪವಿಲ್ಲ ಎಂದು ಉತ್ತರಪ್ರದೇಶದ ಸರ್ಕಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ.

ಪ್ರಯಾಗ್‌ರಾಜ್‌ನಲ್ಲಿ ಏ.15ರಂದು ಪೊಲೀಸರು ಅತೀಕ್ ಅಹ್ಮದ್ ಮತ್ತು ಅಶ್ರಫ್‌ ಅವರನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯುವಾಗ ಮಾದ್ಯಮದ ಸಿಬ್ಬಂದಿಗಳ ಸೋಗಿನಲ್ಲಿ ಬಂದ ಹಂತಕರು ಕ್ಯಾಮೆರಾದ ಎದುರೇ  ಇಬ್ಬರನ್ನು ಹತ್ಯೆ ಮಾಡಿದ್ದರು.

ಅತೀಕ್ ಅಹ್ಮದ್ ಸಹೋದರಿ ಆಯಿಷಾ ನೂರಿ ಈ ಕುರಿತು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ತನ್ನ ಸಹೋದರನ ಹತ್ಯೆ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಬೇಕು ಎಂದು ಮನವಿ ಮಾಡಿದ್ದರು.

ಉತ್ತರ ಪ್ರದೇಶ ಪೊಲೀಸರು ಗುಂಡಿಟ್ಟು ಹತ್ಯೆಗೈದಿರುವ ಏಳು ಪ್ರಕರಣಗಳಲ್ಲಿ ತನಿಖೆ ಅಥವಾ ವಿಚಾರಣಾ ವಸ್ತು ಸ್ಥಿತಿಯ ಕುರಿತು ಪ್ರಮಾಣ ಪತ್ರಗಳನ್ನು ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ಉತ್ತರಪ್ರದೇಶ ಸರ್ಕಾರಕ್ಕೆ ಸೂಚನೆ ನೀಡಿತ್ತು.

ಈ ಕುರಿತು ಸುಪ್ರೀಂಕೋರ್ಟ್‌ಗೆ ವರದಿ ಸಲ್ಲಿಸಿರುವ ಸರ್ಕಾರ, ಅರ್ಜಿದಾರರ ಆಕ್ಷೇಪಗಳ ಹಿನ್ನೆಲೆಯಲ್ಲಿ ಘಟನೆ ಕುರಿತು ನಿಷ್ಪಕ್ಷಪಾತವಾದ ತನಿಖೆ ನಡೆಸಲಾಗಿದೆ ಎಂದು ತಿಳಿಸಿದೆ.

ರಾಜ್ಯದಲ್ಲಿ ನಡೆದ ಎನ್‌ಕೌಂಟರ್‌ಗಳ ತನಿಖೆಯಲ್ಲಿ ಪೊಲೀಸರ ಕಡೆಯಿಂದ ಯಾವುದೇ ಲೋಪವಾಗುತ್ತಿಲ್ಲ ಮತ್ತು ಹತ್ಯೆಯ ಬಗ್ಗೆ ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆಯನ್ನು ಖಚಿತಪಡಿಸಿಕೊಳ್ಳಲಾಗಿದೆ ಎಂದು ಉತ್ತರಪ್ರದೇಶ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ವಿಚಾರಣೆಯ ಸಂದರ್ಭದಲ್ಲಿ ರಾಜ್ಯ ಪೊಲೀಸರ ವಿರುದ್ಧ ಕೇಳಿ ಬಂದಿರುವ ಆರೋಪಗಳನ್ನು ಉತ್ತರಪ್ರದೇಶ ಸರ್ಕಾರ ತಳ್ಳಿ ಹಾಕಿದೆ.

ಇದನ್ನು ಓದಿ: ಗಣಪತಿ ಮೂರ್ತಿ ಬಳಿ ಇಟ್ಟಿದ್ದ ಬಾಳೆಹಣ್ಣು ಕೊಂಡೊಯ್ದ ಶಂಕೆ: ಮುಸ್ಲಿಂ ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿ ಹತ್ಯೆ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಜಸ್ಥಾನ: ಬಿಜೆಪಿ ಸರ್ಕಾರದ ಯೋಜನೆಯಲ್ಲಿ 1,140 ಕೋಟಿ ರೂ.ನಷ್ಟ: ತಮ್ಮದೇ ಸರಕಾರದ ವಿರುದ್ಧ ಆರೋಪಿಸಿದ...

0
ರಾಜಸ್ಥಾನದ ಬಿಜೆಪಿ ಸರಕಾರ ಅಧಿಕಾರಕ್ಕೇರಿದ ಆರು ತಿಂಗಳಲ್ಲೇ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಮುಖ್ಯಮಂತ್ರಿಯ ಅಧೀನದ ಇಲಾಖೆಯಲ್ಲಿನ ವಸತಿ ಯೋಜನೆಯಲ್ಲಿನ ಲೋಪದೋಷವನ್ನು ಕ್ಯಾಬಿನೆಟ್ ಸಚಿವರೋರ್ವರು ಬಹಿರಂಗಪಡಿಸಿದ್ದು, ಇದರಿಂದ ಸರಕಾರದ ಬೊಕ್ಕಸಕ್ಕೆ 1,146 ಕೋಟಿ ರೂ. ನಷ್ಟವಾಗಿದೆ...