Homeರಾಷ್ಟ್ರೀಯರಾಜಕೀಯ ವಿರೋಧ ಹಗೆತನವಾಗಿ ಪರಿವರ್ತನೆ; ಆರೋಗ್ಯಕರ ಪ್ರಜಾಪ್ರಭುತ್ವದ ಲಕ್ಷಣವಲ್ಲ: ಮುಖ್ಯ ನ್ಯಾಯಮೂರ್ತಿ

ರಾಜಕೀಯ ವಿರೋಧ ಹಗೆತನವಾಗಿ ಪರಿವರ್ತನೆ; ಆರೋಗ್ಯಕರ ಪ್ರಜಾಪ್ರಭುತ್ವದ ಲಕ್ಷಣವಲ್ಲ: ಮುಖ್ಯ ನ್ಯಾಯಮೂರ್ತಿ

ಪ್ರತಿಪಕ್ಷಗಳಿಗೆ ಅವಕಾಶ ಕಡಿಮೆಯಾಗುತ್ತಿದ್ದು, ವಿವರವಾದ ಚರ್ಚೆಗಳು ಮತ್ತು ಪರಿಶೀಲನೆಗಳಿಲ್ಲದೆ ಕಾನೂನುಗಳನ್ನು ಅಂಗೀಕರಿಸಲಾಗುತ್ತಿದೆ ಎಂದು ಎನ್‌ವಿ ರಮಣ ಹೇಳಿದ್ದಾರೆ

- Advertisement -
- Advertisement -

ರಾಜಕೀಯ ವಿರೋಧವು ಹಗೆತನವಾಗಿ ಪರಿವರ್ತನೆಯಾಗುತ್ತಿದ್ದು, ಇದು ಆರೋಗ್ಯಕರ ಪ್ರಜಾಪ್ರಭುತ್ವದ ಲಕ್ಷಣವಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಶನಿವಾರ ಹೇಳಿದ್ದಾರೆ. ಸರಕಾರ ಮತ್ತು ಪ್ರತಿಪಕ್ಷಗಳ ನಡುವೆ ಪರಸ್ಪರ ಗೌರವ ಕಡಿಮೆಯಾಗುತ್ತಿದೆ ಎಂದು ಅವರು ಹೇಳಿದ್ದಾರೆ.

“ರಾಜಕೀಯ ವಿರೋಧವು ಹಗೆತನಕ್ಕೆ ಹೋಗಬಾರದು. ಆದರೆ ನಾವು ಈ ದಿನಗಳಲ್ಲಿ ಅದನ್ನು ನೋಡುತ್ತಿದ್ದು, ದುಃಖವಾಗುತ್ತಿದೆ. ಇದು ಆರೋಗ್ಯಕರ ಪ್ರಜಾಪ್ರಭುತ್ವದ ಲಕ್ಷಣಗಳಲ್ಲ” ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅವರು ಕಾಮನ್‌ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ (ಸಿಪಿಎ) ರಾಜಸ್ಥಾನ ವಿಧಾನಸಭೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

“ಹಿಂದೆ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಪರಸ್ಪರ ಗೌರವವಿತ್ತು. ದುರದೃಷ್ಟವಶಾತ್, ವಿರೋಧ ಪಕ್ಷಗಳಿಗೆ ಅವಕಾಶವೂ ಕಡಿಮೆಯಾಗುತ್ತಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ವಿಚಾರಣಾ ಸ್ಥಳವಾಗಿ ಮಾರ್ಪಟ್ಟಿದೆ: ಸಿಜೆಐ

ಮುಖ್ಯ ನ್ಯಾಯಮೂರ್ತಿ ಶಾಸಕಾಂಗ ಕಾರ್ಯಕ್ಷಮತೆಯ ಗುಣಮಟ್ಟದ ಬಗ್ಗೆ ಕೂಡಾ ಕಳವಳ ವ್ಯಕ್ತಪಡಿಸಿದ್ದಾರೆ. “ದುಃಖಕರ ವಿಷಯವೇನೆಂದರೆ, ದೇಶವು ಶಾಸಕಾಂಗ ಕಾರ್ಯಕ್ಷಮತೆಯ ಗುಣಮಟ್ಟದಲ್ಲಿ ಕುಸಿತವನ್ನು ಕಾಣುತ್ತಿದೆ” ಎಂದು ಅವರು ಹೇಳಿದ್ದಾರೆ.

ವಿವರವಾದ ಚರ್ಚೆಗಳು ಮತ್ತು ಪರಿಶೀಲನೆಗಳಿಲ್ಲದೆ ಕಾನೂನುಗಳನ್ನು ಅಂಗೀಕರಿಸಲಾಗುತ್ತಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದ್ವೇಷ ರಾಜಕಾರಣವನ್ನು ಹಿಮ್ಮೆಟ್ಟಿಸುವ ಕೆಲಸ ಕರ್ನಾಟಕದಿಂದ ಆರಂಭವಾಗಬೇಕಿದೆ: ಯೋಗೇಂದ್ರ ಯಾದವ್‌ | Naanu Gauri

ದ್ವೇಷ ರಾಜಕಾರಣವನ್ನು ಹಿಮ್ಮೆಟ್ಟಿಸುವ ಕೆಲಸ ಕರ್ನಾಟಕದಿಂದ ಆರಂಭವಾಗಬೇಕಿದೆ: ಯೋಗೇಂದ್ರ ಯಾದವ್‌

0
ದೇಶದ ತುಂಬ ಹರಡಿರುವ ದ್ವೇಷ ರಾಜಕಾರಣವನ್ನು ಹಿಮ್ಮೆಟ್ಟಿಸುವ ಕೆಲಸ ಕರ್ನಾಟಕದಿಂದ ಆರಂಭವಾಗಬೇಕಿದೆ ಎಂದು ಸ್ವರಾಜ್ ಪಕ್ಷದ ಮುಖ್ಯಸ್ಥ, ರೈತ ಹೋರಾಟಗಾರ ಯೋಗೇಂದ್ರ ಯಾದವ್‌ ಬುಧವಾರ ಬೆಂಗಳೂರಿನಲ್ಲಿ ಹೇಳಿದ್ದಾರೆ. ಅವರು ‘ಕರ್ನಾಟಕದ ಜನ ಯಾಕೆ...