Homeಮುಖಪುಟಎಂಎಸ್‌ಪಿ ಖಾತರಿ ಕೊಡಿಸಲಾಗದಿದ್ದರೆ ರಾಜಕೀಯ ನಿವೃತ್ತಿ: ಹರಿಯಾಣ ಸಿಎಂ ಖಟ್ಟರ್

ಎಂಎಸ್‌ಪಿ ಖಾತರಿ ಕೊಡಿಸಲಾಗದಿದ್ದರೆ ರಾಜಕೀಯ ನಿವೃತ್ತಿ: ಹರಿಯಾಣ ಸಿಎಂ ಖಟ್ಟರ್

ಡಿಸೆಂಬರ್ ಅಂತ್ಯದಲ್ಲಿ ನಡೆದ ಸ್ಥಳೀಯ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಮತ್ತು ಜೆಜೆಪಿ ಮೈತ್ರಿಕೂಟ ತೀವ್ರ ಮುಖಭಂಗ ಅನುಭವಿಸಿದ್ದವು.

- Advertisement -
- Advertisement -

ರೈತರಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖಾತರಿ ಕೊಡಿಸಲಾಗದಿದ್ದರೆ ರಾಜಕೀಯ ತೊರೆಯುತ್ತೇನೆ ಎಂಬ ತಮ್ಮ ಆಶ್ವಾಸನೆಯನ್ನು ಹರಿಯಾಣ ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಖಟ್ಟರ್ ಗುರುವಾರವು ಪುನರುಚ್ಛರಿಸಿದ್ದಾರೆ. ಕೇಂದ್ರದ ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ಆಗ್ರಹಿಸುತ್ತಿರುವ ರಾಜ್ಯದ ರೈತರಿಂದ ಪ್ರತಿಭಟನೆಗಳನ್ನು ಎದುರಿಸುತ್ತಿರುವ ಖಟ್ಟರ್, ಐದು ಸ್ಥಳೀಯ ಚುನಾವಣೆಯಲ್ಲಿ ಮೂರನ್ನು ಸೋತ ನಂತರ ಈ ಹೇಳಿಕೆ ನೀಡಿದ್ದಾರೆ.

ಹರಿಯಾಣದಲ್ಲಿ ಎಂಎಸ್‌ಪಿ ಮುಂದುವರಿಕೆಗೆ ನಾವು ಬದ್ಧರಾಗಿದ್ದೇವೆ. ಯಾರಾದರೂ ಎಂಎಸ್‌ಪಿ ವ್ಯವಸ್ಥೆಯನ್ನು ಕೊನೆಗಾಣಿಸಲು ಪ್ರಯತ್ನಿಸಿದರೆ ತಾನು ರಾಜಕೀಯ ತೊರೆಯುತ್ತೇನೆ ಎಂದು ಅವರು ಹೇಳಿದ್ದಾಗಿ ಎಎನ್‌ಐ ಉಲ್ಲೇಖಿಸಿದೆ.

ಇದನ್ನೂ ಓದಿ: ಹರಿಯಾಣ ಸ್ಥಳೀಯ ಸಂಸ್ಥೆ ಚುನಾವಣೆ: ಬಿಜೆಪಿ ಮೈತ್ರಿಕೂಟಕ್ಕೆ ಭಾರಿ ಮುಖಭಂಗ

ಈ ಹೇಳಿಕೆಯನ್ನು ಸ್ಥಳೀಯ ಸಂಸ್ಥೆ ಚುನಾವಣೆಗೂ ಮೊದಲು ಕೂಡಾ ಖಟ್ಟರ್ ನೀಡಿದ್ದರು. ಉಪಮುಖ್ಯಮಂತ್ರಿ ದುಷ್ಯಂತ್ ಚೌಟಾಲ ಕೂಡ, ಎಂಎಸ್‌ಪಿ ವ್ಯವಸ್ಥೆಯನ್ನು ರದ್ದು ಮಾಡುವುದಿಲ್ಲ ಎಂದು ಪ್ರತಿಭಟನಾನಿರತ ರೈತರಿಗೆ ಆಶ್ವಾಸನೆ ನೀಡುತ್ತಾ ಬಂದಿದ್ದಾರೆ. ನಾನು ಅಧಿಕಾರದಲ್ಲಿರುವವರೆಗೆ ಎಂಎಸ್‌ಪಿ ಉಳಿಸಿಕೊಳ್ಳಲು ಯತ್ನಿಸುತ್ತೇನೆ. ಅದು ಸಾಧ್ಯವಾಗದೇ ಹೋದರೆ ಅಂದೇ ಹುದ್ದೆಯಿಂದ ಕೆಳಗಿಳಿಯುತ್ತೇನೆ ಎಂದು ಅವರು ಹೇಳುತ್ತ ಬಂದಿದ್ದರು.

ಮೂರರಲ್ಲಿ ಎರಡು ಸೋಲು ಹಿಸಾರ್‌ನ ಉಕಲಾನಾ ಮತ್ತು ರೆವರಿಯ ಧರುಹೆರಾಗಳಲ್ಲಿ ಘಟಿಸಿದ್ದು, ಇವೆರಡೂ ದುಷ್ಯಂತ್ ಅವರ ಪ್ರಾಬಲ್ಯದ ಪ್ರದೇಶಗಳಾಗಿವೆ. ಬಿಜೆಪಿ ಮತ್ತು ಮಿತ್ರಪಕ್ಷ ಜೆಜೆಪಿ ಸೊನಾಪತ್ ಮತ್ತು ಅಂಬಾಲಾದಲ್ಲೂ ಚುನಾವಣೆಯಲ್ಲಿ ಸೋಲು ಅನುಭವಿಸಿವೆ.

ಇದನ್ನೂ ಓದಿ: ರೈತ ಹೋರಾಟ: ರಾಜಸ್ಥಾನ-ಹರಿಯಾಣ ಗಡಿಯಲ್ಲಿನ ಬ್ಯಾರಿಕೇಡ್‌ಗಳನ್ನು ಮುರಿದು ಮುನ್ನುಗ್ಗಿದ ರೈತರು

ಅಂಬಾಲಾದ ಬಿಜೆಪಿ ಶಾಸಕ ಅಸೀಮ್ ಗೊಯಲ್, ಈ ಚುನಾವಣೆಯಲ್ಲಿ ಎಲ್ಲರೂ ಬಿಜೆಪಿ ವಿರುದ್ಧ ಒಂದಾಗಿದ್ದರು ಎಂದು ಬುಧವಾರ ಹೇಳಿದ್ದಲ್ಲದೇ, ರೈತರ ಪ್ರತಿಭಟನೆ ಪಕ್ಷಕ್ಕೆ ಹಿನ್ನಡೆ ಮಾಡಿದೆ ಎಂದು ಒಪ್ಪಿಕೊಂಡಿದ್ದರು. ಸರ್ಕಾರ ಒಳ್ಳೆಯ ಕೆಲಸ ಮಾಡಿದಾಗ ಅದನ್ನು ತಡೆಯಲು ವಿಪಕ್ಷದವರು ಕೈ ಜೋಡಿಸುತ್ತಾರೆ. ಹರಿಯಾಣದಲ್ಲಿ ಇದೇ ಸಂಭವಿಸುತ್ತಿದೆ. ವಿಪಕ್ಷಗಳ ಅಜೆಂಡಾ ಅರ್ಥರಹಿತವಾದದ್ದು ಮತ್ತು ಅವರಿಗೆ ಯಾವುದೇ ಗುರಿಯೂ ಇಲ್ಲ. ಬಿಜೆಪಿ ತಡೆಯುವುದೇ ಅವರ ಉದ್ದೇಶ. ಮೊದಲು ಬಿಜೆಪಿ ತಡೆಯೋಣ, ನಂತರ ನಮ್ಮ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳೋಣ ಎಂಬ ನಿಲುವನ್ನು ಅವರು ಹೊಂದಿದ್ದಾರೆ ಎಂದು ಅಸೀಮ್ ಹೇಳಿದ್ದರು.

ಹೊಸ ಕಾನೂನುಗಳಿಂದ ದೊಡ್ಡ ಕಾರ್ಪೋರೇಟ್ ಕಂಪನಿಗಳು ಸಾಂಪ್ರದಾಯಿಕ ಬೆಳೆ ಮಾರುಕಟ್ಟೆಗಳನ್ನು ನಾಶ ಮಾಡಿ ತಮ್ಮನ್ನು ಶೋಷಿಸಲಿವೆ ಎಂದು ರೈತರು ಆತಂಕಗೊಂಡಿದ್ದಾರೆ. ಹೊಸ ಕಾಯ್ದೆಗಳು ಈಗಿರುವ ವ್ಯವಸ್ಥೆಯನ್ನು ಕೊನೆಗಾಣಿಸುವ ಉದ್ದೇಶ ಹೊಂದಿಲ್ಲ, ಬದಲಿಗೆ ರೈತರಿಗೆ ತಮ್ಮ ಬೆಳೆ ಮಾರಲು ಹೆಚ್ಚಿನ ಅವಕಾಶ ನೀಡುತ್ತವೆ ಎಂದು ಕೇಂದ್ರ ಸರ್ಕಾರ ಪ್ರತಿಪಾದಿಸುತ್ತ ಬಂದಿದೆ. ಬುಧವಾರ ಕೇಂದ್ರ ಮತ್ತು ರೈತರ ನಡುವೆ ಆರನೇ ಸುತ್ತಿನ ಮಾತುಕತೆ ಯಶಸ್ವಿಯಾಗಿಲ್ಲ.

ಇದನ್ನೂ ಓದಿ: ಹರಿಯಾಣ ಸಿಎಂಗೆ ಕಪ್ಪು ಬಾವುಟ ಪ್ರದರ್ಶಿಸಿದ ರೈತರ ಮೇಲೆ ದಾಖಲಾಯ್ತು ಗಲಭೆ, ಕೊಲೆಯತ್ನದ ಕೇಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...