Homeಮುಖಪುಟರಾಜಕೀಯದಲ್ಲಿ ಕುತೂಹಲ ಮೂಡಿಸಿದ ಪ್ರಶಾಂತ್ ಕಿಶೋರ್- ನಿತೀಶ್ ಕುಮಾರ್ ಭೇಟಿ

ರಾಜಕೀಯದಲ್ಲಿ ಕುತೂಹಲ ಮೂಡಿಸಿದ ಪ್ರಶಾಂತ್ ಕಿಶೋರ್- ನಿತೀಶ್ ಕುಮಾರ್ ಭೇಟಿ

- Advertisement -
- Advertisement -

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್‌ ಮತ್ತು ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ನಡುವೆ ಎಲ್ಲವೂ ಸರಿಯಿಲ್ಲ ಎಂಬ ವದಂತಿಗಳ ನಡುವೆಯೇ ಪ್ರಶಾಂತ್ ಕಿಶೋರ್ ತಮ್ಮ ಮಾಜಿ ನಾಯಕ, ಬಿಹಾರ ಸಿಎಂ ನಿತೀಶ್ ಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಇದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ನಿತೀಶ್ ಕುಮಾರ್ 2020 ರಲ್ಲಿ ಪ್ರಶಾಂತ್ ಕಿಶೋರ್ ಅವರನ್ನು ತಮ್ಮ ಪಕ್ಷದ ಉಪಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಿದ ನಂತರ ಮೊದಲ ಬಾರಿಗೆ ಇಬ್ಬರೂ ಭೇಟಿಯಾಗಿದ್ದಾರೆ. ದೆಹಲಿಯಲ್ಲಿರುವ ಮುಖ್ಯಮಂತ್ರಿಯ ಅಧಿಕೃತ ಮನೆಯಲ್ಲಿ ಆಯೋಜಿಸಲಾಗಿದ್ದ ಔತಣಕೂಟದಲ್ಲಿ ಭಾಗವಹಿಸಿದ್ದ ಅವರು, ಎರಡು ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ.

ಇಬ್ಬರ ಭೇಟಿ ಬಗ್ಗೆ ನಿತೀಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರಿಗೆ ಆಯೋಜಿಸಿದ ಔತಣಕೂಟದಲ್ಲಿ ಭೇಟಿಯಾಗಿದ್ದು, ಇದು ಪ್ರಶಾಂತ್ ಕಿಶೋರ್ ಅವರೊಂದಿಗೆ ಹಳೆಯ ಬಾಂಧವ್ಯ, ಇದಕ್ಕೆ ಬೇರೆಯ ಅರ್ಥ ಕಲ್ಪಿಸಬೇಕಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಕ್‌ ಹಗರಣ: ಸಿಇಒ ಚಿತ್ರಾ ರಾಮಕೃಷ್ಣರನ್ನು ಕೈಗೊಂಬೆ ಮಾಡಿಕೊಂಡಿದ್ದ ‘ಯೋಗಿ’!

“ಇದು ಒಂದು “ಸೌಜನ್ಯದ ಭೇಟಿ”. ನಿತೀಶ್ ಕುಮಾರ್ ಅವರಿಗೆ ಓಮಿಕ್ರಾನ್ ಸೋಂಕು ತಗುಲಿದಾಗ, ಅವರ ಆರೋಗ್ಯದ ಬಗ್ಗೆ ಕೇಳಲು ಅವರಿಗೆ ಫೋನ್ ಮಾಡಿದ್ದೆ. ಆಗ ನಿತೀಶ್ ಕುಮಾರ್ ಭೇಟಿಯಾಗುವ ಇಚ್ಛೆಯನ್ನು ವ್ಯಕ್ತಪಡಿಸಿದ್ದು, ನಿನ್ನೆ ಇದು ಸಾಕಾರಗೊಂಡಿದೆ” ಎಂದು ಪ್ರಶಾಂತ್ ಕಿಶೋರ್‌ ಹೇಳಿದ್ದಾರೆ. ಜೊತೆಗೆ ತಾವು ರಾಜಕೀಯವಾಗಿ ಅವರು ಪರಸ್ಪರ ಭಿನ್ನ ದಾರಿಯಲ್ಲಿರುವುದಾಗಿ ತಿಳಿಸಿದ್ದಾರೆ.

ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್ ಪಶ್ಚಿಮ ಬಂಗಾಳದಲ್ಲಿ ಭರ್ಜರಿ ಗೆಲುವು ಸಾಧಿಸಲು ಕಾರಣರಾದ ರಾಜಕೀಯ  ತಂತ್ರಜ್ಞ ಪ್ರಶಾಂತ್ ಕಿಶೋರ್‌, ಸದ್ಯ 2024 ರ ರಾಷ್ಟ್ರೀಯ ಚುನಾವಣೆಗೆ ಬಿಜೆಪಿ ವಿರುದ್ಧ ವಿರೋಧ ಪಕ್ಷಗಳನ್ನು ಒಟ್ಟುಗೂಡಿಸುವ ಪ್ರಯತ್ನಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ನಿತೀಶ್ ಕುಮಾರ್ ಅವರ ಜನತಾ ದಳ ಯುನೈಟೆಡ್ ಜೊತೆಗಿನ ಕಿಶೋರ್ ಅವರ ನಂಟು ತಿಂಗಳೊಳಗೆ ಹದಗೆಟ್ಟಿತ್ತು. ಅವರನ್ನು ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿತ್ತು. ಆದರೆ ಇತ್ತೀಚಿನ ಸಂದರ್ಶನಗಳಲ್ಲಿ, ಪ್ರಶಾಂತ್ ಕಿಶೋರ್ ಅವರು ನಿತೀಶ್ ಕುಮಾರ್‌ ‍ಅವರ ಸೌಹಾರ್ದ ಸಂಬಂಧದ ಬಗ್ಗೆ ಮಾತನಾಡಿದ್ದು, ಅವರು ಮತ್ತೆ ಸಂಪರ್ಕಿಸಲು ಬಯಸುವ ಕೆಲವರಲ್ಲಿ ನಿತೀಶ್ ಕುಮಾರ್‌ ಕೂಡ ಒಬ್ಬರು ಎಂದು ಹೆಸರಿಸಿದ್ದಾರೆ.


ಇದನ್ನೂ ಓದಿ: ಮಮತಾ ಬ್ಯಾನರ್ಜಿ-ಅಭಿಷೇಕ್ ಬ್ಯಾನರ್ಜಿ ನಡುವೆ ಬಿರುಕು : ಮಧ್ಯದಲ್ಲಿ ಸಿಕ್ಕಿಕೊಂಡ ಪ್ರಶಾಂತ್ ಕಿಶೋರ್!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೋಲ್ಕತ್ತಾದಲ್ಲಿ ಬಾಂಗ್ಲಾದೇಶದ ಸಂಸದ ಅನ್ವರುಲ್ ಅಝೀಂ ಕೊಲೆ ಪ್ರಕರಣ: ಮೂವರ ಬಂಧನ

0
ಭಾರತಕ್ಕೆ ಚಿಕಿತ್ಸೆಗೆಂದು ಬಂದು ಕಳೆದ ವಾರ ನಾಪತ್ತೆಯಾಗಿದ್ದ ಬಾಂಗ್ಲಾದೇಶದ ಸಂಸದ ಅನ್ವರುಲ್ ಅಝೀಂ ಅವರನ್ನು ಬುಧವಾರ ಕೋಲ್ಕತ್ತಾದಲ್ಲಿ ಹತ್ಯೆ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಮೂವರು ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ. ಘಟನೆ ಬಗ್ಗೆ ಢಾಕಾದಲ್ಲಿ ಸುದ್ದಿಗೋಷ್ಠಿಯಲ್ಲಿ...