Homeಮುಖಪುಟಪ್ರಧಾನಿ ಕುರಿತು ಟೀಕೆ: ಪ್ರಿಯಾಂಕಾ ಗಾಂಧಿ, ಕೇಜ್ರಿವಾಲ್‌ಗೆ ಚುನಾವಣಾ ಸಮಿತಿ ನೋಟಿಸ್

ಪ್ರಧಾನಿ ಕುರಿತು ಟೀಕೆ: ಪ್ರಿಯಾಂಕಾ ಗಾಂಧಿ, ಕೇಜ್ರಿವಾಲ್‌ಗೆ ಚುನಾವಣಾ ಸಮಿತಿ ನೋಟಿಸ್

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ- ಉದ್ಯಮಿ ಗೌತಮ್ ಅವರಿಗೆ ಇರುವ ಸಂಬಂಧದ ಬಗ್ಗೆ ಹಾಗೂ ಇನ್ನಿತರ ಟೀಕೆ ಮಾಡಿರುವ ಮುಖ್ಯಮಂತ್ರಿ ಅರವಿಂದ ಕೇಜಿವಾಲ್, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಗೆ ಅನಧೀಕೃತ ಹಾಗೂ ಸುಳ್ಳು ಅಪಾದನೆ ಮಾಡಿದ ಆರೋಪದ ಮೇಲೆ ಚುನಾವಣಾ ಆಯೋಗವು ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ಪ್ರಧಾನಿ ಅವರನ್ನು ಅವಹೇಳನ ಮಾಡಲಾಗಿದೆ ಎನ್ನುವ ಆರೋಪದಲ್ಲಿ ಆಮ್ ಆದ್ಮ ಪಕ್ಷಕ್ಕೂ ಶೋಕಾಸ್ ನೋಟಿಸ್‌ ನೀಡಲಾಗಿದೆ.

ಮಧ್ಯಪ್ರದೇಶದ ಚುನಾವಣಾ ಪ್ರಚಾರ ಸಭೆಯಲ್ಲಿ ಪ್ರಿಯಾಂಕಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅನಧೀಕೃತ ಹಾಗೂ ಸುಳ್ಳು ಆಪಾದನೆ ಮಾಡಿದ್ದಾರೆ ಎಂದು ನವೆಂಬರ್ 10ರಂದು ಬಿಜೆಪಿ ದೂರು ನೀಡಿತ್ತು. ಈ ಬಗ್ಗೆ ನವೆಂಬರ್ 16ರ ರಾತ್ರಿ 8ರ ಒಳಗೆ ಉತ್ತರ ನೀಡಬೇಕು ಎಂದು ಚುನಾವಣಾ ಆಯೋಗವು ನೋಟಿಸ್ ಜಾರಿ ಮಾಡಿದೆ. ಆಮ್ ಆದ್ಮ ಪಕ್ಷಕ್ಕೂ ಅದೇ ದಿನದ ಒಳಗಾಗಿ ಉತ್ತರಿಸುವಂತೆ ಸೂಚಿಸಲಾಗಿದೆ.

ನವೆಂಬರ್ 10ರಂದು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, ಬಿಜೆಪಿ ರಾಜ್ಯಸಭಾ ಸದಸ್ಯ ಅನಿಲ್ ಬಲೂನಿ, ಬಿಜೆಪಿ ನಾಯಕ ಓಂ ಪಟ್ನಾಯಕ್ ಅವರ ನಿಯೋಗ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿತ್ತು.

ಚುನಾವಣಾ ಆಯೋಗಕ್ಕೆ ನೀಡಿದ ತನ್ನ ದೂರಿನಲ್ಲಿ, ”ನರೇಂದ್ರ ಮೋದಿ ಸರ್ಕಾರವು ಸಾರ್ವಜನಿಕ ವಲಯದ ಉದ್ಯಮಗಳನ್ನು ಖಾಸಗೀಕರಣಗೊಳಿಸಿದೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ಆದರೆ ಇದು ‘ಆಧಾರರಹಿತ ಮತ್ತು ಸುಳ್ಳು’ ಹೇಳಿಕೆ ಎಂದು ಬಿಜೆಪಿ ಆರೋಪಿಸಿದೆ.

”ಎಕ್ಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹಾಗೂ ಅವಮಾನಕಾರಿ ಪೋಸ್ಟ್‌ಗಳನ್ನು ಮಾಡಲಾಗಿತ್ತು. ಆರೋಪಗಳು ‘ಅಸ್ಪಷ್ಟ ಮತ್ತು ದುರುದ್ದೇಶಪೂರಿತವಾಗಿತ್ತು” ಎಂದು ಬಿಜೆಪಿ ದೂರು ನೀಡಿದ್ದಾಗಿ ಆಮ್ ಆದ್ಮ ಪಕ್ಷದ ವಿರುದ್ಧದ ದೂರಿನ ಬಗ್ಗೆ ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಉದ್ಯಮಿ ಗೌತಮ್ ಅವರಿಗೆ ಇರುವ ಸಂಬಂಧದ ಕುರಿತು ಎಎಪಿ ಪೋಸ್ಟ್ ಮಾಡಿತ್ತು ಎಂದು ಆಯೋಗ ಮಾಹಿತಿ ನೀಡಿದೆ.

ಪ್ರಸ್ತುತ ಆಪಾದಿತ ವಿಷಯವನ್ನು ಆಮ್ ಆದ್ಮ ಪಕ್ಷದ ಹ್ಯಾಂಡಲ್‌ನಿಂದ ಪೋಸ್ಟ್ ಮಾಡಲಾಗಿದೆ ಎಂದು ಕಂಡುಬಂದಿದೆ. ಎಎಪಿ ರಾಷ್ಟ್ರೀಯ ಪಕ್ಷವಾಗಿರುವುದರಿಂದ ಸಾರ್ವಜನಿಕವಾಗಿ ಅಂತಹ ವಿಷಯಗಳನ್ನು ಪ್ರಸ್ತಾಪಿಸುವ ಮೊದಲು ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕು ಎಂದಿರುವ ಚುನಾವಣಾ ಆಯೋಗವು, ಇದು ನೀತಿ ಸಂಹಿತೆಯ ಉಲ್ಲಂಘನೆ ಎಂದಿದೆ.

ಈ ಬಗ್ಗೆ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಮಾಧ್ಯಮದವರ ಜೊತೆ ಮಾತನಾಡಿದ್ದು, ”ಎಎಪಿ ತನ್ನ ಅಧಿಕೃತ ಹ್ಯಾಂಡಲ್‌ನ ಎಕ್ಸ್‌ನಲ್ಲಿವೀಡಿಯೊ ಮತ್ತು ಎರಡು ಪೋಸ್ಟ್‌ಗಳನ್ನು ಪೋಸ್ಟ್ ಮಾಡಿದೆ, ಇದರಲ್ಲಿ ಅದು ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರ್ಕಾರದ ಮುಖ್ಯಸ್ಥರ ಬಗ್ಗೆ ಸ್ವೀಕಾರಾರ್ಹವಲ್ಲ, ಖಂಡನೀಯ, ಚೇಷ್ಟೆಯ ಮತ್ತು ಅನೈತಿಕ ವಿಷಯಗಳನ್ನು ಹೇಳಿದೆ” ಎಂದು ಹೇಳಿದ್ದಾರೆ.

”ನಿಗದಿತ ಸಮಯದೊಳಗೆ ನಿಮ್ಮ ಕಡೆಯಿಂದ ಯಾವುದೇ ಪ್ರತಿಕ್ರಿಯೆ ನೀಡದಿದ್ದರೆ ಕ್ರಮ ಕೈಗೊಳ್ಳಬೇಕಾಗುತ್ತದೆ” ಎಂದು ಚುನಾವಣಾ ಆಯೋಗ ಹೇಳಿದೆ.

ಇದನ್ನೂ ಓದಿ: ಅದಾನಿ ಸಮೂಹದ ಉದ್ಯೋಗಿಯನ್ನು ಕೇಂದ್ರದ EAC ಸಮಿತಿಗೆ ನೇಮಕ: ಪ್ರತಿಪಕ್ಷಗಳಿಂದ ಟೀಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಪ್ರಧಾನಿ ಮೋದಿ ಪ್ರಚಾರಕ್ಕೆ ಸಿಂಗಾಪುರದ ರೈಲ್ವೆ ನಿಲ್ದಾಣದ ಫೋಟೋ ಬಳಸಿದ ಬಿಜೆಪಿ

0
ಬಿಜೆಪಿಯ ವಿವಿಧ ರಾಜ್ಯ ಮತ್ತು ಜಿಲ್ಲಾ ಘಟಕಗಳ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಇತ್ತೀಚೆಗೆ ಪೋಸ್ಟರ್ ಒಂದನ್ನು ಹಂಚಿಕೊಳ್ಳಲಾಗಿತ್ತು. ಪ್ರಧಾನಿ ನರೇಂದ್ರ ಮೋದಿಯವರ ಫೋಟೋ ಮತ್ತು ಹಿಂಭಾಗದಲ್ಲಿ ಮೆಟ್ರೋ ರೈಲು ಸಾಗುತ್ತಿರು ಚಿತ್ರವಿರುವ ಈ ಪೋಸ್ಟರ್‌...