Homeಮುಖಪುಟರಾಜಸ್ಥಾನ ಚುನಾವಣೆ: ಮತಗಟ್ಟೆಗೆ ನುಗ್ಗಿ ಏಜೆಂಟರ ಮೇಲೆ ಹಲ್ಲೆ

ರಾಜಸ್ಥಾನ ಚುನಾವಣೆ: ಮತಗಟ್ಟೆಗೆ ನುಗ್ಗಿ ಏಜೆಂಟರ ಮೇಲೆ ಹಲ್ಲೆ

- Advertisement -
- Advertisement -

ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣೆ ಹಿನ್ನೆಲೆ ಮತದಾನ ನಡೆಯುತ್ತಿದ್ದು, ಮತಗಟ್ಟೆಗೆ ನುಗ್ಗಿ ಪೋಲಿಂಗ್‌ ಏಜೆಂಟ್‌ ಮೇಲೆ ಅಪರಿಚಿತರು ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ರಾಜಸ್ಥಾನದ 200 ವಿಧಾನಸಭಾ ಕ್ಷೇತ್ರಗಳ ಪೈಕಿ 199 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಚುರುವಿನ ಮತಗಟ್ಟೆಗೆ ನುಗ್ಗಿದ ಅಪರಿಚಿತರ ತಂಡವೊಂದು ಏಜೆಂಟರ ಜೊತೆ ಮಾತಿನ ಚಕಮಕಿ ನಡೆಸಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

ರಾಜಸ್ಥಾನದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ ಸೇರಿದಂತೆ ಪ್ರಮುಖ ರಾಜಕೀಯ ಪಕ್ಷಗಳ ಹಲವು ದಿನಗಳ ಬಿರುಸಿನ ಪ್ರಚಾರದ ನಂತರ ಇಂದು ಬೆಳಗ್ಗೆ 7 ಗಂಟೆಗೆ ಮತದಾನ ಪ್ರಾರಂಭವಾಗಿದೆ. 11 ಗಂಟೆಯವರೆಗೆ 24.74%ದಷ್ಟು ಮತದಾನವಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ ತಿಳಿಸಿದೆ.

ರಾಜ್ಯದಾದ್ಯಂತ ಒಟ್ಟು 51,507 ಮತಗಟ್ಟೆಗಳನ್ನು ತೆರೆಯಲಾಗಿದೆ ಎಂದು ರಾಜಸ್ಥಾನ ಮುಖ್ಯ ಚುನಾವಣಾ ಅಧಿಕಾರಿ ಪ್ರವೀಣ್ ಗುಪ್ತಾ ತಿಳಿಸಿದ್ದಾರೆ. ರಾಜಸ್ಥಾನವು ಒಟ್ಟು 200 ವಿಧಾನಸಭಾ ಸ್ಥಾನಗಳನ್ನು ಹೊಂದಿದೆ. ಶ್ರೀಗಂಗಾನಗರ ಜಿಲ್ಲೆಯ ಕರಣಾಪುರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ, ಶಾಸಕ ಗುರ್ಮೀತ್‌ ಸಿಂಗ್‌ ಅವರ ನಿಧನದ ಕಾರಣ ಈ ಕ್ಷೇತ್ರದ ಮತದಾನವನ್ನು ಮುಂದೂಡಲಾಗಿರುವುದರಿಂದ ಇಂದು 199 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ.

ಚುನಾವಣೆಯಲ್ಲಿ ಒಟ್ಟು 1,862 ಅಭ್ಯರ್ಥಿಗಳು ಕಣದಲ್ಲಿದ್ದು, 5,25,38,105 ಮತದಾರರು ಇದ್ದಾರೆ. ಮುಖ್ಯಮಂತ್ರಿ ಅಶೋಕ್‌ ಗೆಹ್ಲೂಟ್‌, ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ, ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ಗೋವಿಂದ್‌ ಸಿಂಗ್‌ ಧೊಟಾಸರಾ, ಸಚಿನ್‌ ಪೈಲಟ್‌ ಸೇರಿದಂತೆ ಹಲವರು ಕಣದಲ್ಲಿದ್ದಾರೆ.

ರಾಜ್ಯದಾದ್ಯಂತ ಸುಮಾರು 1.70 ಲಕ್ಷಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. 70,000 ರಾಜಸ್ಥಾನ ಪೊಲೀಸ್‌ ಸಿಬ್ಬಂದಿ, 18,000 ಗೃಹ ರಕ್ಷಕರು, 2,000 ರಾಜ್ಯ ಗಡಿ ಗೃಹ ರಕ್ಷಕರು ಹಾಗೂ 15,000 ಇತರ ರಾಜ್ಯಗಳ (ಉತ್ತರ ಪ್ರದೇಶ, ಗುಜರಾತ್‌, ಹರಿಯಾಣ, ಮಧ್ಯಪ್ರದೇಶ) ಭದ್ರತಾ ಸಿಬ್ಬಂದಿಗಳನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಇದನ್ನು ಓದಿ;ಯುದ್ಧ ಒಪ್ಪಂದದಂತೆ ಒತ್ತೆಯಾಳುಗಳ ಬಿಡುಗಡೆ ಮಾಡಿದ ಹಮಾಸ್, ಇಸ್ರೇಲ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ: ರೇವಣ್ಣ ನಿವಾಸದಲ್ಲಿ ಎಸ್‌ಐಟಿ ತಂಡದಿಂದ ಸ್ಥಳ ಮಹಜರು

0
ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಮಹಿಳೆಯೊಬ್ಬರು ದಾಖಲಿಸಿರುವ ಲೈಂಗಿಕ ದೌರ್ಜನ್ಯ ದೂರಿಗೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿರುವ ಎಸ್‌ಐಟಿ ತಂಡ, ಇಂದು (ಮೇ 4) ಹಾಸನದ ಹೆಚ್‌.ಡಿ ರೇವಣ್ಣ ಅವರ ನಿವಾಸದಲ್ಲಿ ಮಹಜರು ನಡೆಸಿದೆ. ಡಿವೈಎಸ್‌ಪಿ...