ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮತಗಟ್ಟೆಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸುವ ಭಾರತೀಯ ಚುನಾವಣಾ ಆಯೋಗದ ನಿರ್ಧಾರದಲ್ಲಿ ಯಾವುದೇ ಅಕ್ರಮ ಇಲ್ಲ ಎಂದು ಬಾಂಬೆ ಹೈಕೋರ್ಟ್ ಸೋಮವಾರ ಹೇಳಿದೆ.
ನವೆಂಬರ್ 20 ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮತಗಟ್ಟೆಗಳಲ್ಲಿ ಮೊಬೈಲ್ ಫೋನ್ ನಿಷೇಧದ ವಿರುದ್ಧ ನಗರದ ವಕೀಲ ಉಜಾಲಾ ಯಾದವ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ಅಮಿತ್ ಬೋರ್ಕರ್ ಅವರ ವಿಭಾಗೀಯ ಪೀಠವು ವಜಾಗೊಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಪರಿಚಯಿಸಿದ ಡಿಜಿಲಾಕರ್ ಆ್ಯಪ್ ಮೂಲಕ ಮತದಾರರು ಫೋನ್ ಕೊಂಡೊಯ್ಯಲು ಮತ್ತು ಗುರುತಿನ ಪುರಾವೆಗಳನ್ನು ತೋರಿಸಲು ಇಸಿಐ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಪಿಐಎಲ್ ಹೈಕೋರ್ಟ್‌ಗೆ ಒತ್ತಾಯಿಸಿತ್ತು.
ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಪೀಠ, ಚುನಾವಣಾ ಪ್ರಕ್ರಿಯೆಯ ಸುಗಮ ಕಾರ್ಯನಿರ್ವಹಣೆಗಾಗಿ ಯಾವುದೇ ಕ್ರಮಗಳನ್ನು ಪರಿಚಯಿಸಲು ಇಸಿಐಗೆ ಅಧಿಕಾರವಿದೆ ಎಂದು ಹೇಳಿದೆ. “ಚುನಾವಣೆ ನಡೆಸುವ ಪ್ರಕ್ರಿಯೆಯೆ ಒಂದು ತೊಡಕಿನ ಪ್ರಕ್ರಿಯೆಯಾಗಿದೆ. ಅಂತದ್ದರಲ್ಲಿ ನೀವು (ಅರ್ಜಿದಾರರು) ಡಿಜಿಲಾಕರ್‌ನಲ್ಲಿ ದಾಖಲೆಗಳನ್ನು ತೋರಿಸುತ್ತೇವೆ ಎನ್ನುತ್ತೀರಿ” ಎಂದು ನ್ಯಾಯಾಲಯ ಹೇಳಿದೆ.
ಡಿಜಿಟಲ್ ಲಾಕರ್‌ಗಳ ಮೂಲಕ ತಮ್ಮ ಫೋನ್‌ಗಳಲ್ಲಿ ಇರುವ ದಾಖಲೆಗಳನ್ನು ಪರಿಶೀಲನೆಗಾಗಿ ತೋರಿಸುವ ಹಕ್ಕು ಯಾವುದೇ ವ್ಯಕ್ತಿಗೆ ಇಲ್ಲ ಎಂದು ಪೀಠ ಹೇಳಿದೆ. “ಚುನಾವಣಾ ಆಯೋಗದ ನಿರ್ಧಾರದಲ್ಲಿ ನಮಗೆ ಯಾವುದೇ ಅಕ್ರಮ ಕಂಡುಬಂದಿಲ್ಲ” ಎಂದು ನ್ಯಾಯಾಲಯವು ಅರ್ಜಿಯನ್ನು ವಜಾಗೊಳಿಸಿದೆ.
ಇದನ್ನೂ ಓದಿ: ಸುಳ್ಳು ದಾಖಲೆಗಳನ್ನು ನೀಡಿ ಬಿಪಿಎಲ್ ಕಾರ್ಡ್ ಪಡೆದ ಸರ್ಕಾರಿ ಸಿಬ್ಬಂದಿ ವಿರುದ್ಧ ಕ್ರಮ: ಜಿ.ಪರಮೇಶ್ವರ
ಸುಳ್ಳು ದಾಖಲೆಗಳನ್ನು ನೀಡಿ ಬಿಪಿಎಲ್ ಕಾರ್ಡ್ ಪಡೆದ ಸರ್ಕಾರಿ ಸಿಬ್ಬಂದಿ ವಿರುದ್ಧ ಕ್ರಮ: ಜಿ.ಪರಮೇಶ್ವರ


