Homeಮುಖಪುಟಮತಗಟ್ಟೆಗಳಲ್ಲಿ ಮೊಬೈಲ್ ನಿಷೇಧ | ಚುನಾವಣೆ ಆಯೋಗದ ಆದೇಶ ಎತ್ತಿಹಿಡಿದ ಬಾಂಬೆ ಹೈಕೋರ್ಟ್

ಮತಗಟ್ಟೆಗಳಲ್ಲಿ ಮೊಬೈಲ್ ನಿಷೇಧ | ಚುನಾವಣೆ ಆಯೋಗದ ಆದೇಶ ಎತ್ತಿಹಿಡಿದ ಬಾಂಬೆ ಹೈಕೋರ್ಟ್

- Advertisement -
- Advertisement -

ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮತಗಟ್ಟೆಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸುವ ಭಾರತೀಯ ಚುನಾವಣಾ ಆಯೋಗದ ನಿರ್ಧಾರದಲ್ಲಿ ಯಾವುದೇ ಅಕ್ರಮ ಇಲ್ಲ ಎಂದು ಬಾಂಬೆ ಹೈಕೋರ್ಟ್ ಸೋಮವಾರ ಹೇಳಿದೆ.

ನವೆಂಬರ್ 20 ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮತಗಟ್ಟೆಗಳಲ್ಲಿ ಮೊಬೈಲ್ ಫೋನ್ ನಿಷೇಧದ ವಿರುದ್ಧ ನಗರದ ವಕೀಲ ಉಜಾಲಾ ಯಾದವ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ಅಮಿತ್ ಬೋರ್ಕರ್ ಅವರ ವಿಭಾಗೀಯ ಪೀಠವು ವಜಾಗೊಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಪರಿಚಯಿಸಿದ ಡಿಜಿಲಾಕರ್ ಆ್ಯಪ್ ಮೂಲಕ ಮತದಾರರು ಫೋನ್ ಕೊಂಡೊಯ್ಯಲು ಮತ್ತು ಗುರುತಿನ ಪುರಾವೆಗಳನ್ನು ತೋರಿಸಲು ಇಸಿಐ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಪಿಐಎಲ್ ಹೈಕೋರ್ಟ್‌ಗೆ ಒತ್ತಾಯಿಸಿತ್ತು.

ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಪೀಠ, ಚುನಾವಣಾ ಪ್ರಕ್ರಿಯೆಯ ಸುಗಮ ಕಾರ್ಯನಿರ್ವಹಣೆಗಾಗಿ ಯಾವುದೇ ಕ್ರಮಗಳನ್ನು ಪರಿಚಯಿಸಲು ಇಸಿಐಗೆ ಅಧಿಕಾರವಿದೆ ಎಂದು ಹೇಳಿದೆ. “ಚುನಾವಣೆ ನಡೆಸುವ ಪ್ರಕ್ರಿಯೆಯೆ ಒಂದು ತೊಡಕಿನ ಪ್ರಕ್ರಿಯೆಯಾಗಿದೆ. ಅಂತದ್ದರಲ್ಲಿ ನೀವು (ಅರ್ಜಿದಾರರು) ಡಿಜಿಲಾಕರ್‌ನಲ್ಲಿ ದಾಖಲೆಗಳನ್ನು ತೋರಿಸುತ್ತೇವೆ ಎನ್ನುತ್ತೀರಿ” ಎಂದು ನ್ಯಾಯಾಲಯ ಹೇಳಿದೆ.

ಡಿಜಿಟಲ್ ಲಾಕರ್‌ಗಳ ಮೂಲಕ ತಮ್ಮ ಫೋನ್‌ಗಳಲ್ಲಿ ಇರುವ ದಾಖಲೆಗಳನ್ನು ಪರಿಶೀಲನೆಗಾಗಿ ತೋರಿಸುವ ಹಕ್ಕು ಯಾವುದೇ ವ್ಯಕ್ತಿಗೆ ಇಲ್ಲ ಎಂದು ಪೀಠ ಹೇಳಿದೆ. “ಚುನಾವಣಾ ಆಯೋಗದ ನಿರ್ಧಾರದಲ್ಲಿ ನಮಗೆ ಯಾವುದೇ ಅಕ್ರಮ ಕಂಡುಬಂದಿಲ್ಲ” ಎಂದು ನ್ಯಾಯಾಲಯವು ಅರ್ಜಿಯನ್ನು ವಜಾಗೊಳಿಸಿದೆ.

ಇದನ್ನೂ ಓದಿ: ಸುಳ್ಳು ದಾಖಲೆಗಳನ್ನು ನೀಡಿ ಬಿಪಿಎಲ್ ಕಾರ್ಡ್ ಪಡೆದ ಸರ್ಕಾರಿ ಸಿಬ್ಬಂದಿ ವಿರುದ್ಧ ಕ್ರಮ: ಜಿ.ಪರಮೇಶ್ವರ

ಸುಳ್ಳು ದಾಖಲೆಗಳನ್ನು ನೀಡಿ ಬಿಪಿಎಲ್ ಕಾರ್ಡ್ ಪಡೆದ ಸರ್ಕಾರಿ ಸಿಬ್ಬಂದಿ ವಿರುದ್ಧ ಕ್ರಮ: ಜಿ.ಪರಮೇಶ್ವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...