Homeಮುಖಪುಟಮತಗಟ್ಟೆಗಳ ಭದ್ರತಾ ಕ್ಯಾಮರಾ ದೃಶ್ಯ ಕೇಳಿ ಚುನಾವಣಾ ಆಯೋಗಕ್ಕೆ ಸಮಾಜವಾದಿ ಪಕ್ಷ ಪತ್ರ

ಮತಗಟ್ಟೆಗಳ ಭದ್ರತಾ ಕ್ಯಾಮರಾ ದೃಶ್ಯ ಕೇಳಿ ಚುನಾವಣಾ ಆಯೋಗಕ್ಕೆ ಸಮಾಜವಾದಿ ಪಕ್ಷ ಪತ್ರ

- Advertisement -
- Advertisement -

ಕಳೆದ ತಿಂಗಳು ಉತ್ತರ ಪ್ರದೇಶದಲ್ಲಿ ನಡೆದ ಏಳು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತಗಟ್ಟೆಗಳ ಭದ್ರತಾ ಕ್ಯಾಮೆರಾ ದೃಶ್ಯಗಳು ಮತ್ತು ವಿಡಿಯೋ ರೆಕಾರ್ಡಿಂಗ್‌ಗಳನ್ನು ಬಿಡುಗಡೆ ಮಾಡುವಂತೆ ಕೋರಿ ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಿರುವುದಾಗಿ ಸಮಾಜವಾದಿ ಪಕ್ಷ ಗುರುವಾರ ತಿಳಿಸಿದೆ. ಮತಗಟ್ಟೆಗಳ ಭದ್ರತಾ ಕ್ಯಾಮರಾ

ಕತೇಹಾರಿ, ಕುಂದರ್ಕಿ, ಫುಲ್‌ಪುರ್, ಮಜವಾನ್, ಮೀರಾಪುರ, ಖೈರ್ ಮತ್ತು ಗಾಜಿಯಾಬಾದ್ ಕ್ಷೇತ್ರಗಳಿಂದ ವೀಡಿಯೊ ದೃಶ್ಯಾವಳಿಗಳನ್ನು ನೀಡುವಂತೆ ಕೋರಲಾಗಿದೆ ಎಂದು ಪಕ್ಷವು ಹೇಳಿಕೆಯಲ್ಲಿ ತಿಳಿಸಿದೆ. ನವೆಂಬರ್ 13 ರಂದು ನಡೆದ ಉಪಚುನಾವಣೆಯಲ್ಲಿ ಸಮಾಜವಾದಿ ಪಕ್ಷವು ಈ ಎಲ್ಲಾ ಏಳು ಸ್ಥಾನಗಳನ್ನು ಕಳೆದುಕೊಂಡಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನವೆಂಬರ್ 23 ರಂದು ಪ್ರಕಟವಾದ ಫಲಿತಾಂಶಗಳ ಪ್ರಕಾರ ಪಕ್ಷವು ಸಿಶಾಮ್ ಮತ್ತು ಕರ್ಹಾಲ್ ಕ್ಷೇತ್ರಗಳನ್ನು ಗೆದ್ದಿದೆ. ಈ ಉಪಚುನಾವಣೆಯಲ್ಲಿ ಬಿಜೆಪಿ ಆರು ಸ್ಥಾನಗಳನ್ನು ಗೆದ್ದರೆ, ಅದರ ಮಿತ್ರಪಕ್ಷವಾದ ರಾಷ್ಟ್ರೀಯ ಲೋಕದಳ ಒಂದು ಸ್ಥಾನವನ್ನು ಗಳಿಸಿತ್ತು. ಮತಗಟ್ಟೆಗಳ ಭದ್ರತಾ ಕ್ಯಾಮರಾ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು 1961 ರ ಚುನಾವಣಾ ನಿಯಮಗಳನ್ನು ತಿದ್ದುಪಡಿ ಮಾಡಿತ್ತು. ಡಿಸೆಂಬರ್ 20 ರಂದು ಮಾಡಿದ್ದ ತಿದ್ದುಪಡಿಯಲ್ಲಿ, ಮತದಾನಕ್ಕೆ ಸಂಬಂಧಿಸಿದ ದಾಖಲೆಗಳು ಸಾರ್ವಜನಿಕ ಲಭ್ಯವಾಗುವುದನ್ನು ಕೇಂದ್ರ ಸರ್ಕಾರವು ನಿರ್ಬಂಧಿಸಿತ್ತು. ಇದಾಗಿ ಕೆಲವು ದಿನಗಳ ನಂತರ ಸಮಾಜವಾದಿ ಪಕ್ಷವು ಈ ಜ್ಞಾಪಕ ಪತ್ರವನ್ನು ಸಲ್ಲಿಸಿದೆ.

ಹಳೆಯ ನಿಯಮವು, ಚುನಾವಣಾ ನಿಯಮಗಳ ನಿಯಮ 93(2)(ಎ) “ಚುನಾವಣೆಗೆ ಸಂಬಂಧಿಸಿದ ಎಲ್ಲಾ ಇತರ ದಾಖಲೆಗಳು ಸಾರ್ವಜನಿಕ ತಪಾಸಣೆಗೆ ಲಭ್ಯವಿರುತ್ತವೆ” ಎಂದು ಹೇಳುತ್ತದೆ. ಆದರೆ, ತಿದ್ದುಪಡಿ ಮಾಡಿದ ನಿಯಮವು, “ಚುನಾವಣೆಗೆ ಸಂಬಂಧಿಸಿದ ನಿಯಮಗಳಲ್ಲಿ ‘ನಿರ್ದಿಷ್ಟ’ಪಡಿಸಿದ ಎಲ್ಲಾ ಇತರ ದಾಖಲೆಗಳು ಸಾರ್ವಜನಿಕ ತಪಾಸಣೆಗೆ ಲಭ್ಯವಿರುತ್ತವೆ.” ಎಂದು ಹೇಳುತ್ತದೆ.

ಈ ಬದಲಾವಣೆಯೊಂದಿಗೆ, ಭದ್ರತಾ ಕ್ಯಾಮರಾ ಮತ್ತು ವೆಬ್‌ಕಾಸ್ಟಿಂಗ್ ದೃಶ್ಯಗಳು ಮತ್ತು ಅಭ್ಯರ್ಥಿಗಳ ವೀಡಿಯೊ ರೆಕಾರ್ಡಿಂಗ್‌ಗಳು ಸೇರಿದಂತೆ ಎಲ್ಲಾ ಚುನಾವಣೆಗೆ ಸಂಬಂಧಿತ ದಾಖಲೆಗಳನ್ನು ಸಾರ್ವಜನಿಕರಿಗೆ ಲಭ್ಯವಿರುವುದಿಲ್ಲ. ಚುನಾವಣಾ ನಿಯಮಗಳ ನಡವಳಿಕೆಯಲ್ಲಿ ನಿರ್ದಿಷ್ಟಪಡಿಸಿದ ದಾಖಲೆಗಳನ್ನು ಮಾತ್ರ ಸಾರ್ವಜನಿಕರು ಪರಿಶೀಲಿಸಬಹುದಾಗಿದೆ. ಈ ತಿದ್ದುಪಡಿಯನ್ನು ಸುಪ್ರಿಂಕೋರ್ಟ್‌ನಲ್ಲಿ ಪ್ರಶ್ನಿಸುವುದಾಗಿ ಮಂಗಳವಾರ ಕಾಂಗ್ರೆಸ್ ಹೇಳಿದೆ.

ಇದನ್ನೂ ಓದಿ: ಉಗುಳಲು ಆಗದ ಇತ್ತ ನುಂಗಲು ಆಗದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕುರಿತು ಒಂದೆರಡು ಮಾತು

ಉಗುಳಲು ಆಗದ ಇತ್ತ ನುಂಗಲು ಆಗದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕುರಿತು ಒಂದೆರಡು ಮಾತು….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...