Homeಕರ್ನಾಟಕಬಡವರಿಗೆ ವಸತಿ, ಶಿಕ್ಷಣ, ವೈದ್ಯಕೀಯ ಸೌಲಭ್ಯ ಸಿಗುವಂತಾಗುವುದೇ ನಿಜವಾದ ಅಭಿವೃದ್ಧಿ: ನ್ಯಾ. ಓಕಾ

ಬಡವರಿಗೆ ವಸತಿ, ಶಿಕ್ಷಣ, ವೈದ್ಯಕೀಯ ಸೌಲಭ್ಯ ಸಿಗುವಂತಾಗುವುದೇ ನಿಜವಾದ ಅಭಿವೃದ್ಧಿ: ನ್ಯಾ. ಓಕಾ

"ಸೇತುವೆ, ರಸ್ತೆಗಳ ನಿರ್ಮಾಣ ಅಥವಾ ಮೆಟ್ರೊ ರೈಲುಗಳ ಸಂಪರ್ಕ ಕಲ್ಪಿಸುವುದು ಮಾತ್ರ ಅಭಿವೃದ್ಧಿಯಲ್ಲ"

- Advertisement -
- Advertisement -

“ಸೇತುವೆ, ರಸ್ತೆಗಳ ನಿರ್ಮಾಣ ಅಥವಾ ಮೆಟ್ರೊ ರೈಲುಗಳ ಸಂಪರ್ಕ ಕಲ್ಪಿಸುವುದು ಮಾತ್ರ ಅಭಿವೃದ್ಧಿ ಎಂಬಂತಹ ತಪ್ಪು ಅಭಿಪ್ರಾಯ ನಮ್ಮಲ್ಲಿದೆ” ಎಂದು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ್‌ ಓಕಾ‌ ಅಭಿಪ್ರಾಯಪಟ್ಟಿದ್ಧಾರೆ.

ಬೆಂಗಳೂರಿನಲ್ಲಿ ಶನಿವಾರ ಹೈಕೋರ್ಟ್‌ನ ಹಿರಿಯ ವಕೀಲ ಡಿ ಎಲ್‌ ಎನ್‌ ರಾವ್ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾಗಿದ್ದ ‘ಪರಿಸರ ನ್ಯಾಯವನ್ನು ನಿಶ್ಚಿತಗೊಳಿಸುವ ಹಾದಿಗಳು’ ಎಂಬ ವಿಷಯದ ಕುರಿತು ಅವರು ಉಪನ್ಯಾಸ ನೀಡಿದರು.

“ಬಡವರಿಗೆ ಒಂದು ಮನೆ, ಅವರ ಮಕ್ಕಳಿಗೆ ಕೈಗೆಟುಕವ ದರದಲ್ಲಿ ಉತ್ತಮ ಶಿಕ್ಷಣ ಹಾಗೂ ವೈದ್ಯಕೀಯ ಸೌಲಭ್ಯ ಸಿಗುವಂತಾವುದೇ ನಿಜವಾದ ಅಭಿವೃದ್ಧಿ” ಎಂದು ನ್ಯಾಯಮೂರ್ತಿ ಹೇಳಿದ್ದಾರೆ.

“ಧಾರ್ಮಿಕ ಉತ್ಸವಗಳ ನೆಪದಲ್ಲಿ ರಾತ್ರಿ 10 ಗಂಟೆಯ ನಂತರವೂ ಉಲ್ಲಾಸದಿಂದ ಸಡಗರ ವ್ಯಕ್ತಪಡಿಸುವ ಜನರು ಶಬ್ದಮಾಲಿನ್ಯ ಉಂಟುಮಾಡುವುದರ ಜೊತೆಗೆ ಬೆದರಿಕೆ ಹುಟ್ಟಿಸುತ್ತಿದ್ದಾರೆ. ಇಂದು ಎಲ್ಲೆಡೆ ವಾಹನಗಳ ಸಮಸ್ಯೆ ಭಾರೀ ಪ್ರಮಾಣದಲ್ಲಿ ಕಂಡು ಬರುತ್ತಿದೆ. ಒಂದೆಡೆ ಹೆಚ್ಚುತ್ತಿರುವ ಜನಸಂಖ್ಯೆ ಹಾಗೂ ವೇಗದ ನಗರೀಕರಣದಿಂದ ಪರಿಸರ ಕಲುಷಿತಗೊಳ್ಳುತ್ತಿದೆ” ಎಂದಿದ್ದಾರೆ.

“ಪರಿಸರ ಸಂರಕ್ಷಣೆಗಾಗಿ ಕೋರ್ಟ್‌ಗಳ ಮೆಟ್ಟಿಲೇರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸುವ ಹೋರಾಡುವ ಉತ್ಸಾಹಿಗಳನ್ನು ಅಭಿವೃದ್ಧಿ ವಿರೋಧಿಗಳೆಂದು ಬ್ರ್ಯಾಂಡ್ ಮಾಡಲಾಗುತ್ತಿರುವುದು ಸರಿಯಲ್ಲ” ಎಂದೂ ನ್ಯಾ. ಓಕಾ ಹೇಳಿದ್ದಾರೆ.

ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಎಸ್ ಸುನಿಲ್‌ ದತ್‌ ಯಾದವ್‌ ಮತ್ತು ಡಿ ಎಲ್‌ ಎನ್‌ ರಾವ್ ಕಾರ್ಯಕ್ರಮದಲ್ಲಿ ಮಾತನಾಡಿದರು. ಹೈಕೋರ್ಟ್‌ ನ್ಯಾಯಮೂರ್ತಿಗಳಾದ ಅನಂತ ರಾಮನಾಥ ಹೆಗಡೆ, ಸಿ ಎಂ ಪೂಣಚ್ಚ, ವಿಜಯಕುಮಾರ ಎ.ಪಾಟೀಲ್, ಶಿವಶಂಕರ ಅಮರಣ್ಣವರ, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್‌ ಸುಬ್ಬಾರೆಡ್ಡಿ, ಹಿರಿಯ ವಕೀಲರು, ಪರಿಸರ ಹೋರಾಟಗಾರರು ಉಪಸ್ಥಿತರಿದ್ದರು.

ಮಾಹಿತಿ ಕೃಪೆ : ಬಾರ್ &ಬೆಂಚ್

ಇದನ್ನೂ ಓದಿ : ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ಹೆಣ್ಮಕ್ಕಳು ದಾರಿ ತಪ್ಪಿದ್ದಾರೆ: ಕುಮಾರಸ್ವಾಮಿ ವಿವಾದಾತ್ಮಕ ಹೇಳಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...