Homeಮುಖಪುಟಕೊರೊನಾ ನಿರ್ವಹಣೆ ಬಗ್ಗೆ ಭಾರಿ ಟೀಕೆ: ವರ್ಚಸ್ಸು ಹೆಚ್ಚಿಸಿಕೊಳ್ಳಲು ಮೋದಿ ಸರ್ಕಾರದ ಪ್ರಯತ್ನ

ಕೊರೊನಾ ನಿರ್ವಹಣೆ ಬಗ್ಗೆ ಭಾರಿ ಟೀಕೆ: ವರ್ಚಸ್ಸು ಹೆಚ್ಚಿಸಿಕೊಳ್ಳಲು ಮೋದಿ ಸರ್ಕಾರದ ಪ್ರಯತ್ನ

- Advertisement -
- Advertisement -

ದೇಶದಲ್ಲಿ ಕೊರೊನಾ ಎರಡನೇ ಅಲೆಯನ್ನು ಸರಿಯಾಗಿ ನಿರ್ವಹಿಸದೇ ಟೀಕೆಗಳಿಗೆ ಗುರಿಯಾಗಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಈಗ ತನ್ನ ವರ್ಚಸ್ಸು ಹೆಚ್ಚಿಸಿಕೊಳ್ಳಲು ಭಾರಿ ಪ್ರಯತ್ನ ನಡೆಸುತ್ತಿದೆ. ತನ್ನ ಮಾತೃ ಸಂಘಟನೆಯಾದ ಆರ್‌ಎಸ್‌ಎಸ್‌ನಿಂದ ಕೆಲವು ಸಹಾಯಗಳನ್ನು ಪಡೆದು ಬಿಜೆಪಿ ತನಗಾಗಿರುವ ಹಿನ್ನಡೆಯನ್ನು ಮರೆಮಾಚಿಕೊಳ್ಳಲು ಕಾರ್ಯತಂತ್ರವನ್ನು ರೂಪಿಸುತ್ತಿದೆ.

ಸರ್ಕಾರದ ಎಲ್ಲಾ ಸಚಿವಾಲಯಗಳು, ಇಲಾಖೆಗಳು ಮತ್ತು ಏಜೆನ್ಸಿಗಳಿಗೆ ತಾವು ಮಾಡುತ್ತಿರುವ ಸಕಾರಾತ್ಮಕ ಕಾರ್ಯಗಳ ಕುರಿತು ಭಾರಿ ಪ್ರಮಾಣದಲ್ಲಿ ಪ್ರಚಾರ ಮಾಡಲು ಸಂದೇಶವನ್ನು ಕಳಿಸಿದೆ. ವರ್ಚಸ್ಸು ಹೆಚ್ಚಿಸಿಕೊಳ್ಳಲು ಬಿಜೆಪಿ ಮತ್ತು ಒಕ್ಕೂಟ ಸರ್ಕಾರ ಗುರಿಯಾಗಿಸಿರುವ 5 ಪ್ರಮುಖ ವಿಷಯಗಳು ಇಲ್ಲಿವೆ.

  1. ವಂಚನೆ ಮಾಡಿ ಪರಾರಿಯಾದವರನ್ನು ಭಾರತಕ್ಕೆ ಮರಳಿ ತರುವುದು:

ವಂಚಿಸಿ ದೇಶದಿಂದ ಪರಾರಿಯಾದ ಉದ್ಯಮಿ ಮೆಹುಲ್ ಚೋಕ್ಸಿಯನ್ನು ಡೊಮಿನಿಕಾದಿಂದ ಭಾರತಕ್ಕೆ ಹಸ್ತಾಂತರಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ವಂಚನೆ ಪ್ರಕರಣದ ಆರೋಪಿ ಡಯಾಮಂಟೈರ್ ಚೋಕ್ಸಿಯನ್ನು ಡೊಮಿನಿಕಾದಲ್ಲಿ ಬಂಧಿಸಲಾಗಿದ್ದು, ಅಲ್ಲಿಂದ ನೇರವಾಗಿ ಇಂಟರ್‌ಪೋಲ್‌ನ ರೆಡ್ ಕಾರ್ನರ್ ನೋಟಿಸ್‌ನ ಆಧಾರದ ಮೇಲೆ ಅವರನ್ನು ಭಾರತಕ್ಕೆ ಕರೆತರಲು ಪ್ರಯತ್ನಿಸಲಾಗುತ್ತಿದೆ.

ಚೋಕ್ಸಿಯ ಸೋದರಳಿಯ ನೀರವ್ ಮೋದಿ ಮತ್ತು ವಿಜಯ್ ಮಲ್ಯ ಅವರ ಹಸ್ತಾಂತರ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಭಾರತವು ರಾಜತಾಂತ್ರಿಕ ಮಾರ್ಗಗಳ ಮೂಲಕ ಯುಕೆಗೆ ವಿನಂತಿಸಿದೆ ಎಂದು ಹೇಳಲಾಗಿದೆ. ನೀರವ್ ಮೋದಿಯವರ ಮೇಲ್ಮನವಿಯನ್ನು ನವೆಂಬರ್‌ನಲ್ಲಿ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಸಲಾಗುವುದು ಮತ್ತು ಮಲ್ಯ ಅವರ ಆಶ್ರಯ ಪ್ರಕರಣದ ವಿಚಾರಣೆಯು ಉನ್ನತ ನ್ಯಾಯಾಲಯದಲ್ಲಿದೆ.

ದೇಶಕ್ಕೆ ವಂಚಿಸಿ ಪರಾರಿಯಾದವರಲ್ಲಿ ಯಾರನ್ನಾದರೂ ಶೀಘ್ರದಲ್ಲೇ ಮರಳಿ ಕರೆತರಲು ಸಾಧ್ಯವಾದರೆ. ಇದರಿಂದ ತಮ್ಮ ಪಕ್ಷದ  ವರ್ಚಸ್ಸು ಮತ್ತು ಚಿತ್ರಣವನ್ನು ದೇಶಾದ್ಯಂತ ಬಲಪಡಿಸಿಕೊಳ್ಳಬಹುದು ಎಂದು ಬಿಜೆಪಿ ಭಾವಿಸಿದೆ.

ಇದನ್ನೂ ಓದಿ: ದೇವರ ವಿಗ್ರಹಕ್ಕೆ ಹಾನಿ: ರೈತರಿಗೆ 21 ಸಾವಿರ ದಂಡ, ಸಾಮಾಜಿಕ ಬಹಿಷ್ಕಾರದ ಬೆದರಿಕೆ

2) ಸಚಿವಾಲಯಗಳ ವಿಮರ್ಶೆ ಮತ್ತು ಕ್ಯಾಬಿನೆಟ್ ಪುನರ್‌ರಚನೆ:

ಪ್ರಧಾನಿ ನರೇಂದ್ರ ಮೋದಿ ಅವರು ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸಮ್ಮುಖದಲ್ಲಿ ತಮ್ಮ ಕಾರ್ಯಗಳನ್ನು ಪರಿಶೀಲಿಸಲು ವಿವಿಧ ಸಚಿವರನ್ನು ಭೇಟಿ ಮಾಡುತ್ತಿದ್ದಾರೆ. ಕ್ಯಾಬಿನೆಟ್‌ನ ಪುನರ್‌ರಚನೆ ಮತ್ತು ವಿಸ್ತರಣೆಯ ಬಗ್ಗೆ ಊಹಾಪೋಹಗಳು ವರದಿಯಾಗುತ್ತಿವೆ. ಕಾರ್ಯನಿರ್ವಹಿಸದ ಮಂತ್ರಿಗಳಿಗೆ ಗೇಟ್‌ಪಾಸ್‌ ಕೊಡುವುದು. ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಮತ್ತು ಶಿವಸೇನೆ ಎನ್‌ಡಿಎಯಿಂದ ನಿರ್ಗಮನ, ಎಲ್‌ಜೆಪಿ ಮುಖ್ಯಸ್ಥ ರಾಮ್ ವಿಲಾಸ್ ಪಾಸ್ವಾನ್ ಅವರ ನಿಧನದ ಕಾರಣದಿಂದಾಗಿ ಸಂಪುಟದಲ್ಲಿ ಖಾಲಿ ಹುದ್ದೆಗಳಿವೆ. ಅನೇಕ ಮಂತ್ರಿಗಳು ಒಂದಕ್ಕಿಂತ ಹೆಚ್ಚು ಖಾತೆಗಳನ್ನು ನಿರ್ವಹಿಸುತ್ತಿದ್ದಾರೆ. ಜ್ಯೋತಿರಾದಿತ್ಯ ಸಿಂಧಿಯಾ, ಸುಶೀಲ್ ಮೋದಿ ಮತ್ತು ಸರ್ಬಾನಂದ ಸೋನೊವಾಲ್ ಅವರಂತಹ ನಾಯಕರು ಸಂಪುಟದೊಳಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗಿದೆ. ಮುಂದಿನ ಸುತ್ತಿನ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಉತ್ತರ ಪ್ರದೇಶ ಮತ್ತು ಪಂಜಾಬ್‌ನ ಕೆಲವು ನಾಯಕರು ಕ್ಯಾಬಿನೆಟ್‌ಗೆ ಕಾಲಿಡಬಹುದು ಎಂದು ಮೂಲಗಳು ಹೇಳುತ್ತಿವೆ.

3) ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ನಾಯಕತ್ವದ ವಿಮರ್ಶೆ:

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಳು ಮತ್ತು ರಾಜ್ಯ ನಾಯಕತ್ವದಿಂದ ಕೊರೊನಾ ವೈರಸ್  ನಿರ್ವಹಣೆ ಬಗ್ಗೆ ವಿಮರ್ಶಾತ್ಮಕ ವರದಿಗಳು ಬಂದಿರುವುದರಿಂದ ಯುಪಿ ಕ್ಯಾಬಿನೆಟ್‌ನ ಪುನರ್ರಚನೆ ನಡೆಯುವ ಸಾಧ್ಯತೆಯಿದೆ. ಚುನಾವಣೆಗೆ ಮುಂಚಿತವಾಗಿ ವಿವಿಧ ಜಾತಿ ಮತ್ತು ಸಮುದಾಯಗಳಿಗೆ ಉತ್ತಮ ಪ್ರಾತಿನಿಧ್ಯವನ್ನು ನೀಡಲಾಗುತ್ತದೆ ಎಂದು ನಿರೀಕ್ಷಿಸಲಾಗಿದೆ.

ಬಿಜೆಪಿ ಅಧಿಕಾರದಲ್ಲಿರುವ ಇತರ ರಾಜ್ಯಗಳ ಬಗ್ಗೆ ಕೇಂದ್ರ ನಾಯಕತ್ವವು ಕಾಳಜಿಯನ್ನು ಹೊಂದಿದೆ ಎಂದು ಕಾಣಿಸುತ್ತಿದೆ. ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಧ್ಯಪ್ರದೇಶ ಮತ್ತು ಹಿಮಾಚಲ ಪ್ರದೇಶದಲ್ಲಿ ನಾಯಕತ್ವದ ಬದಲಾವಣೆಯ ಬಗ್ಗೆಯೂ ಊಹಾಪೋಹಗಳಿದ್ದವು. ಕೇಂದ್ರ ನಾಯಕತ್ವವು ಸದ್ಯಕ್ಕೆ ಮಧ್ಯಪ್ರದೇಶ ಮತ್ತು ಹಿಮಾಚಲದಲ್ಲಿ ಶಾಂತಿಯನ್ನು ಖಾತ್ರಿಪಡಿಸಿಕೊಂಡಿದೆ. ಆದರೆ, ಕರ್ನಾಟಕದಲ್ಲಿ ಲಿಂಗಾಯತ ಪ್ರಬಲ ವ್ಯಕ್ತಿಯ ವಿರುದ್ಧ ಭಿನ್ನಾಭಿಪ್ರಾಯದ ಆಂತರಿಕ ಅಸಮಾಧಾನ ಪ್ರಬಲವಾಗುತ್ತಿದೆ.

ಕೇಂದ್ರ ನಾಯಕತ್ವವು ಈ ಹಿಂದೆ ತ್ರಿಪುರ ಮುಖ್ಯಮಂತ್ರಿ ಬಿಪ್ಲಾಬ್ ಕುಮಾರ್ ದೇಬ್ ವಿರುದ್ಧದ ಪ್ರತಿಭಟನೆಯನ್ನು ತಗ್ಗಿಸಿತು. ಆದರೆ ಉತ್ತರಾಖಂಡದಲ್ಲಿ ಶಾಸಕರು ಸಿಎಂ ವಿರುದ್ಧ ದಂಗೆ ಎದ್ದ ನಂತರ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರನ್ನು ಬದಲಿಸಬೇಕಾಯಿತು.

ಪಕ್ಷದೊಳಗಿನ ಗಲಾಟೆಗಳ ಬಗ್ಗೆ ಆರ್‌ಎಸ್‌ಎಸ್ ಚಿಂತಿಸುತ್ತಿದೆ ಮತ್ತು “ತನ್ನ ರಾಜ್ಯ ನಾಯಕರನ್ನು ನಿಯಂತ್ರಿಸಲು” ಬಿಜೆಪಿಯನ್ನು ಕೇಳಿದೆ ಎಂದು ಮೂಲಗಳು ಹೇಳುತ್ತವೆ.

ಇದನ್ನೂ ಓದಿ: ಕೊರೊನಾದಿಂದ ಅನಾಥರಾದ ಮಕ್ಕಳ ಜವಾಬ್ದಾರಿ ಪಡೆದ ರಾಜ್ಯಗಳ ಸಾಲಿಗೆ ಉತ್ತರ ಪ್ರದೇಶ

4) ವಲಸೆ ಬಂದ ನಾಯಕರು:

ತೃಣಮೂಲ ಕಾಂಗ್ರೆಸ್‌ನಿಂದ ಬಿಜೆಪಿಗೆ ಬಂದ ಕೆಲವು ನಾಯಕರ ಬಗ್ಗೆ ಬಿಜೆಪಿ ತನ್ನ ಭರವಸೆಯನ್ನು ಪೂರೈಸದೇ ಇರಬಹುದು. ಆದರೆ, ಪಕ್ಷವು ಜಿತಿನ್ ಪ್ರಸಾದ ಅವರಂತಹ ಕಾಂಗ್ರೆಸ್ಸಿಗರನ್ನು ಆಕರ್ಷಿಸುತ್ತಲೇ ಇದೆ. ಈ ಹಿಂದೆ ಸಿಂಧಿಯಾ ಅವರು ತಮ್ಮ ಬೆಂಬಲಿಗ ಶಾಸಕರೊಂದಿಗೆ ಕಳೆದ ವರ್ಷ ಬಿಜೆಪಿಗೆ ಸೇರಲು ಕಾಂಗ್ರೆಸ್ ತೊರೆದಿದ್ದರು. ಇದರಿಂದ ಕಮಲ್ ನಾಥ್ ಸರ್ಕಾರವು ಮಧ್ಯಪ್ರದೇಶದಲ್ಲಿ ಬಹುಮತವನ್ನು ಕಳೆದುಕೊಳ್ಳಲು ಕಾರಣವಾಯಿತು. ಅಲ್ಲದೆ, ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ಕರೆತಂದಿತು.

ಸಚಿನ್ ಪೈಲಟ್ ಮತ್ತು ಆರ್.ಪಿ.ಎನ್ ಸಿಂಗ್‌ ಸೇರಿದಂತೆ ಕಾಂಗ್ರೆಸ್‌ನ ಇತರ ಯುವ ನಾಯಕರನ್ನು ಬಿಜೆಪಿ ಸಕ್ರಿಯವಾಗಿ ಸಂಧಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಅದು ಯಶಸ್ವಿಯಾದರೆ,  ಕಾಂಗ್ರೆಸ್‌ಗೆ ದೊಡ್ಡ ಹೊಡೆತವಾಗಲಿದೆ. ಇತ್ತೀಚೆಗೆ ಟಿಆರ್‌ಎಸ್ ಮುಖಂಡ ಈಟೆಲಾ ರಾಜೇಂದರ್ ಕೂಡ ಬಿಜೆಪಿಗೆ ಸೇರಿದ್ದಾರೆ.

5) ಕೆಲವು ನೀತಿಗಳ ತಿದ್ದುಪಡಿ

ಹಿರಿಯ ಬಿಜೆಪಿ ನಾಯಕತ್ವ ಮತ್ತು ಆರ್‌ಎಸ್‌ಎಸ್ ನಡುವಿನ ಸರಣಿ ಸಭೆಗಳಲ್ಲಿ ಸಕಾರಾತ್ಮಕ ವಾತಾವರಣವನ್ನು ಸೃಷ್ಟಿಸಲು ನಿರ್ಧರಿಸಲಾಗಿದೆ. ಮೋದಿ ಸರ್ಕಾರದ ಲಸಿಕೆ ಖರೀದಿ ನೀತಿಯನ್ನು ಹಿಮ್ಮೆಟ್ಟಿಸುವುದು ಸಹ ತಂತ್ರದ ಒಂದು ಭಾಗವೆಂದು ಹೇಳಲಾಗಿದೆ. ಲಸಿಕೆ ವಿತರಣೆಯ ವಿಚಾರದಲ್ಲಿ ಒಕ್ಕೂಟ ಸರ್ಕಾರದ ಧೋರಣೆಯ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನಿಸಿದ ನಂತರ, ಪ್ರಧಾನಿ ಅವರು ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡುವಾಗ ಲಸಿಕೆ ವಿತರಣಾ ನೀತಿಯ ಬದಲಾವಣೆಯನ್ನು ಘೋಷಿಸಿದ್ದರು.

ಇನ್ನೂ ವಿವಾದಿತ ಕೃಷಿ ಕಾಯ್ದೆಗಳ ವಿರುದ್ದ ನಡೆಯುತ್ತಿರುವ ಪ್ರತಿಭಟನೆಗಳಿಂದ ತಮ್ಮನ್ನು ರಕ್ಷಿಸಿಕೊಳ್ಳಲು, ಕೇಂದ್ರವು ಭತ್ತ ಮತ್ತು ಇತರ ಖಾರಿಫ್ ಬೆಳೆಗಳ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಯನ್ನು ಹೆಚ್ಚಿಸಿದೆ. ಈ ನಿರ್ಧಾರವು ಪ್ರತಿಭಟನಾ ನಿರತ ರೈತರನ್ನು ಆಕರ್ಷಿಸಿಲ್ಲವಾದರೂ, ಇದು ವಿಶ್ವಾಸಾರ್ಹತೆಯಾಗಿದೆ ಎಂದು ಸರ್ಕಾರ ಹೇಳುತ್ತದೆ.

ಬಿಜೆಪಿ ಅಧ್ಯಕ್ಷ ನಡ್ಡಾ ಅವರು ದೇಶಾದ್ಯಂತದ ‘ಸೇವಾ ಹಿ ಸಂಘಟನ್’ ಪ್ರೋಗ್ರಾಮ್ ಅಡಿಯಲ್ಲಿ ಪಕ್ಷದ ಕಾರ್ಯಕರ್ತರು ಕೈಗೊಂಡ ಕೋವಿಡ್ ಪರಿಹಾರ ಕಾರ್ಯಗಳನ್ನು ನಿರಂತರವಾಗಿ ಪರಿಶೀಲಿಸುತ್ತಿದ್ದಾರೆ. ಆರ್‌ಎಸ್‌ಎಸ್‌ನ ಕೆಲವು ನಾಯಕರು “ಬಿಜೆಪಿ ಕಾರ್ಯಕರ್ತರ ಗೈರುಹಾಜರಿ” ಬಗ್ಗೆ ಟೀಕೆಗೆ ಗುರಿಯಾಗಿದ್ದರಿಂದ ಇದನ್ನು ಮಾಡಲಾಗಿದೆ.

ಮೂಲ: ಔಟ್‌ಲುಕ್‌

ಕನ್ನಡಕ್ಕೆ: ಸೋಮಶೇಖರ್ ಚಲ್ಯ


ಇದನ್ನೂ ಓದಿ: ಕೊರೊನಾ ನಿರ್ವಹಣೆ ಲೋಪ ಮುಚ್ಚಿಕೊಳ್ಳಲು ಜಾಹೀರಾತುಗಳಿಗೆ ಹಣ ಸುರಿಯುತ್ತಿರುವ ಕರ್ನಾಟಕ ಮತ್ತು ಉತ್ತರ ಪ್ರದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...