Homeಮುಖಪುಟಪಶ್ಚಿಮ ಬಂಗಾಳ: ಹಿಂದೂಗಳ ಕಷ್ಟ ನೋಡಲಾಗದೆ ಕಾಳಿ ಮಂದಿರಕ್ಕೆ ತನ್ನ ಜಮೀನು ಕೊಟ್ಟ ಬಡ ಮುಸ್ಲಿಂ...

ಪಶ್ಚಿಮ ಬಂಗಾಳ: ಹಿಂದೂಗಳ ಕಷ್ಟ ನೋಡಲಾಗದೆ ಕಾಳಿ ಮಂದಿರಕ್ಕೆ ತನ್ನ ಜಮೀನು ಕೊಟ್ಟ ಬಡ ಮುಸ್ಲಿಂ ರೈತ

"ಇದು ಭಾರತದ ನಿಜ ಬಣ್ಣವಾಗಿದೆ. ಬಂಗಾಳ ಯಾವಾಗಲೂ ಕೋಮು ಸೌಹಾರ್ದತೆಗೆ ಹೆಸರುವಾಸಿಯಾಗಿದೆ. ಕೋಮು ವೈಷಮ್ಯಕ್ಕೆ ಇಲ್ಲಿ ಸ್ಥಾನವಿಲ್ಲ"-ಗ್ರಾಮಸ್ಥರು

- Advertisement -
- Advertisement -

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮತಗಳಿಗಾಗಿ ಹಿಂದೂ- ಮುಸ್ಲಿಂ ಸಮುದಾಯಗಳ ಮಧ್ಯೆ ದ್ವೇಷ ಹರಡಲು ಪ್ರಯತ್ನಿಸಲಾಗಿದ್ದ ಭೀಮಪುರ ಗ್ರಾಮ, ಇಂದು ರಾಜಕೀಯ ಪಕ್ಷಗಳಿಗೆ ತಕ್ಕ ಪಾಠ ಕಲಿಸಿದೆ. ಗ್ರಾಮದ ಬಡ ಮುಸ್ಲಿಂ ರೈತರೊಬ್ಬರು ಹಿಂದೂಗಳಿಗಾಗಿ ಕಾಳಿ ಮಂದಿರ ನಿರ್ಮಾಣ ಮಾಡಲು ತನ್ನ ಜಮೀನಿನ ಭಾಗವನ್ನು ಬಿಟ್ಟಕೊಟ್ಟಿದ್ದಾರೆ.

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಭೀಮಪುರ ಗ್ರಾಮವು 450 ಕುಟುಂಬಗಳನ್ನು ಹೊಂದಿದೆ. ಅದರಲ್ಲಿ 150 ಮುಸ್ಲಿಮ್ ಸಮುದಾಯದವರು. ಈ ಗ್ರಾಮವು ಭಾರತ-ಬಾಂಗ್ಲಾ ಗಡಿ ಪಕ್ಕದಲ್ಲಿದೆ. ಹಿಂದೂ ಗ್ರಾಮಸ್ಥರು ಹಿಂದಿನಿಂದಲೂ ಗಡಿ ರಸ್ತೆಯ ಪಕ್ಕದಲ್ಲಿನ ಖಾಲಿ ಜಾಗವನ್ನು ಕಾಳಿ ಪೂಜೆಗೆ ಬಳಸುತ್ತಾರೆ. ಇದಕ್ಕೆ ಪ್ರತಿ ವರ್ಷವೂ ಬಿಎಸ್ಎಫ್‌ನಿಂದ ಅನುಮತಿ ಪಡೆಯಬೇಕಾಗುತ್ತದೆ.

ಈ ವರ್ಷ BSF ಅನುಮತಿ ನೀಡುವುದಿಲ್ಲ ಎಂದಿದೆ. ಇದು ಮುಸ್ಲಿಂ ಸಮುದಾಯದ ಬಡ ರೈತ ಹನ್ನಾನ್ ಮೊಂಡಲ್ ಅವರಿಗೆ ತಿಳಿದಿದೆ. ಈ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು ನಿರ್ಧರಿಸಿದ ಅವರು, ತಮ್ಮ ಜಮೀನಿನ ಒಂದು ಭಾಗವನ್ನು ಶಾಶ್ವತವಾದ ಕಾಳಿ ದೇವಸ್ಥಾನವನ್ನು ನಿರ್ಮಿಸಲು ಗ್ರಾಮಸ್ಥರಿಗೆ ದಾನ ಮಾಡಿದ್ದಾರೆ.

ದೇವಾಲಯ ನಿರ್ಮಾಣಕ್ಕೆ ಜಾಗ ನೀಡಲು ನಿರ್ಧರಿಸಿರುವ ಹನ್ನಾನ್ ಮೊಂಡಲ್ ಅವರ ನಿರ್ಧಾರವನ್ನು ಸ್ವಾಗತಿಸಿದ ಭೀಮಪುರದ ಹಿಂದೂ ಗ್ರಾಮಸ್ಥರು, ಈ ವರ್ಷದ ಆರಂಭದಲ್ಲಿ ಮತಗಳನ್ನು ಸೆಳೆಯಲು ಧಾರ್ಮಿಕ ಕಾರ್ಡ್‌ಗಳನ್ನು ಪ್ಲೇ ಮಾಡಿದ ರಾಜಕೀಯ ಪಕ್ಷಗಳು ಬಡವರ ಈ ನಿರ್ಧಾರಗಳಿಂದ ಪಾಠ ಕಲಿಯಬೇಕು ಎಂದಿದ್ದಾರೆ.

ಇದನ್ನೂ ಓದಿ: ಯುಪಿ ವಿಧಾನಸಭಾ ಚುನಾವಣೆ-2022: ‘ಪೂರ್ವಾಂಚಲ’ ಕಡೆಗೆ ಗಮನ ಹರಿಸಿದ BJP!

ವಿಧಾನಸಭಾ ಚುನಾವಣೆಗೆ ಮುನ್ನ ಜಿಲ್ಲೆಯಲ್ಲಿ ಬಿಜೆಪಿ ಭಾರಿ ಪ್ರಚಾರ ನಡೆಸಿತ್ತು. ಬಾಂಗ್ಲಾದೇಶದಿಂದ ವಲಸೆ ಬಂದಿರುವ ಹಿಂದೂ ಧಾರ್ಮಿಕ ಪಂಗಡವಾದ ಮಟುವಾಸ್(Matuas) ಪ್ರಾಬಲ್ಯ ಹೊಂದಿರುವ ಇಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಕೋಮು ಪ್ರಚೋದನಾ ಭಾಷಣಗಳನ್ನು ಬಿಜೆಪಿ ಮಾಡಿತ್ತು. ಚುನಾವಣಾ ಪ್ರಚಾರದ ಸಮಯದಲ್ಲಿ ಬಿಜೆಪಿ ನಾಯಕರು ಬಾಂಗ್ಲಾದೇಶದಲ್ಲಿ ಮುಸ್ಲಿಮರಿಂದ ದೌರ್ಜನ್ಯಗಳು ನಡೆಯುತ್ತಿರುವರ ಬಗ್ಗೆ ಮಾತನಾಡುವ ಮೂಲಕ ಹಿಂದೂ ನಿರಾಶ್ರಿತ ಮತದಾರರನ್ನು ಓಲೈಸಲು ಪ್ರಯತ್ನಿಸಿದರು. ಜೊತೆಗೆ ದೇಶ ವಿಭಜನೆಯ ಸಮಯದಲ್ಲಿ ಮಟುವಾಗಳು ದೇಶದಿಂದ ಏಕೆ ವಲಸೆ ಹೋಗಬೇಕಾಯಿತು ಎಂಬುದನ್ನು ಒತ್ತಿ ಒತ್ತಿ ಹೇಳಿದ್ದರು.

“ವಿಧಾನಸಭಾ ಚುನಾವಣೆಗೆ ಮುನ್ನ ಮತದಾರರನ್ನು ಧರ್ಮದ ಆಧಾರದ ಮೇಲೆ ವಿಭಜನೆ ಮಾಡುವ ಪ್ರಯತ್ನಗಳು ನಡೆದವು. ಇವು ನಾವು ಹಿಂದೆಂದೂ ನೋಡಿರದ ಪ್ರಯತ್ನಗಳಾಗಿದ್ದವು. ಆದರೆ ಹನ್ನಾನ್ ಅವರ ದಾನವು ಬಂಗಾಳದಲ್ಲಿ ಅಂತಹ ವಿಭಜನೆ ರಾಜಕೀಯವು ಕೆಲಸ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸುತ್ತದೆ” ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

“ಇದು ಭಾರತದ ನಿಜ ಬಣ್ಣವಾಗಿದೆ. ಬಂಗಾಳವು ಯಾವಾಗಲೂ ಕೋಮು ಸೌಹಾರ್ದತೆಗೆ ಹೆಸರುವಾಸಿಯಾಗಿದೆ. ಕೋಮು ವೈಷಮ್ಯಕ್ಕೆ ಇಲ್ಲಿ ಸ್ಥಾನವಿಲ್ಲ. ಸಹೋದರತ್ವದ ಉದಾಹರಣೆಗಾಗಿ ಹನ್ನಾನ್‌ಗೆ ನಾವೆಲ್ಲರೂ ಕೃತಜ್ಞರಾಗಿರುತ್ತೇವೆ” ಎಂದು ಕಾಳಿ ಪೂಜಾ ಸಮಿತಿ ಅಧ್ಯಕ್ಷ ಬಿಮಲ್ ಸರ್ಕಾರ್ ಹೇಳಿದ್ದಾರೆ.

“ಪ್ರತಿ ವರ್ಷವೂ ಬಿಎಸ್‌ಎಫ್‌ನಿಂದ ಪೂಜೆಗೆ ಹಸಿರು ನಿಶಾನೆ ಪಡೆಯುವ ಬಗ್ಗೆ ಗ್ರಾಮಸ್ಥರು ಚಿಂತಿಸುತ್ತಿದ್ದರು. ಜಮೀನು ಕಾರಣಕ್ಕಾಗಿ ಕಾಳಿ ಪೂಜೆ ನಿಲ್ಲುವುದು ನನಗೆ ಇಷ್ಟವಾಗಲಿಲ್ಲ. ಹಾಗಾಗಿ ಶಾಶ್ವತ ಕಾಳಿ ದೇವಸ್ಥಾನ ನಿರ್ಮಿಸಲು ನಾನು ಜಮೀನು ನೀಡಿದ್ದೇನೆ. ಅಲ್ಲಿ ಪ್ರತಿ ವರ್ಷ ಕಾಳಿ ಪೂಜೆಯನ್ನು ಆಯೋಜಿಸಲಾಗುತ್ತದೆ” ಎಂದು ಬಡ ರೈತ ಹನ್ನಾನ್ ಹೇಳಿದ್ದಾರೆ.


ಇದನ್ನೂ ಓದಿ: ಯುಪಿಯನ್ನು ಬಣ್ಣಿಸಲು ಇಟಲಿ ಯುದ್ದ ವಿಮಾನ ಮತ್ತು ಆ ದೇಶದ ಧ್ವಜದ ಬಣ್ಣ ಬಳಸಿದ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...