Homeಮುಖಪುಟ'ಬಡವರೂ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ, ಮುಸ್ಲಿಮರ ಬಗ್ಗೆ ಮಾತ್ರ ಏಕೆ ಮಾತನಾಡುತ್ತಾರೆ..'; ಪ್ರಧಾನಿ ಮೋದಿ ವಿರುದ್ಧ...

‘ಬಡವರೂ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ, ಮುಸ್ಲಿಮರ ಬಗ್ಗೆ ಮಾತ್ರ ಏಕೆ ಮಾತನಾಡುತ್ತಾರೆ..’; ಪ್ರಧಾನಿ ಮೋದಿ ವಿರುದ್ಧ ಖರ್ಗೆ ವಾಗ್ದಾಳಿ

- Advertisement -
- Advertisement -

‘ದೇಶದ ಬಡವರು ಅವರ ಆರ್ಥಿಕ ಪರಿಸ್ಥಿತಿಯಿಂದಾಗಿ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ, ಪ್ರಧಾನಿ ನರೇಂದ್ರ ಮೋದಿ ಅವರು ಕೇವಲ ಮುಸ್ಲಿಮರ ಬಗ್ಗೆ ಮಾತನಾಡುತ್ತಿದ್ದಾರೆ’ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಟೀಕಿಸಿದ್ದಾರೆ.

‘ಪ್ರತಿಪಕ್ಷಗಳ ಇಂಡಿಯಾ ಬಣ ಬಹುಮತದತ್ತ ಸಾಗುತ್ತಿರುವುದನ್ನು ಮನಗಂಡ ಪ್ರಧಾನಿ ಮೋದಿ ಹತಾಶರಾಗಿದ್ದಾರೆ. ಈಗ ಅವರು ಮಂಗಳಸೂತ್ರ ಮತ್ತು ಮುಸ್ಲಿಮರ ಬಗ್ಗೆ ಮಾತನಾಡುತ್ತಿದ್ದಾರೆ’ ಎಂದು ಛತ್ತೀಸ್‌ಗಢದ ಜಾಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಖರ್ಗೆ ಹೇಳಿದ್ದಾರೆ.

ಜಂಜಗೀರ್-ಚಂಪಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಿವಕುಮಾರ್ ದಹರಿಯಾ ಪರ ಪ್ರಚಾರ ನಡೆಸಿದ ಅವರು, “ಬಿಜೆಪಿ 400 ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳನ್ನು ಗೆಲ್ಲಲು ಪ್ರಯತ್ನಿಸುತ್ತಿದೆ; ಬಡವರ ಕಲ್ಯಾಣಕ್ಕಾಗಿ ಅಲ್ಲ. ಆದರೆ, ಅವರ ಹಕ್ಕುಗಳನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದೆ” ಎಂದು ಆರೋಪ ಮಾಡಿದರು.

“ನಾವು ಬಹುಮತದತ್ತ ಸಾಗುತ್ತಿದ್ದೇವೆ, ಅದಕ್ಕಾಗಿಯೇ ಅವರು (ಮೋದಿ) ಈಗ ‘ಮಂಗಲಸೂತ್ರ’ ಮತ್ತು ಮುಸ್ಲಿಮರ ಬಗ್ಗೆ ಮಾತನಾಡುತ್ತಾರೆ. ಅವರು ನಿಮ್ಮ ಸಂಪತ್ತನ್ನು ಕದ್ದು ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಕೊಡುತ್ತೇವೆ ಎಂದು ಹೇಳುತ್ತಾರೆ. ಬಡವರಿಗೆ ಯಾವಾಗಲೂ ಹೆಚ್ಚು ಮಕ್ಕಳಿರುತ್ತಾರೆ. ಮುಸ್ಲಿಮರು ಮಾತ್ರ ಅವುಗಳನ್ನು ಹೊಂದಿದ್ದಾರೆಯೇ” ಎಂದು ಅವರು ಪ್ರಶ್ನಿಸಿದರು.

ನಮ್ಮ ಪೋಷಕರಿಗೆ ಐದು ಜನ ಮಕ್ಕಳಿದ್ದರು; ಮನೆಗೆ ಬೆಂಕಿ ಹಚ್ಚಿದಾಗ ತಾಯಿ, ಸಹೋದರಿ ಮತ್ತು ಚಿಕ್ಕಪ್ಪ ಸತ್ತರು. ನಂತರ, ಹೆತ್ತವರಿಗೆ ನಾನು ಒಬ್ಬನೇ ಮಗ ಉಳಿದೆ ಎಂದು ಕಾಂಗ್ರೆಸ್ ಅಧ್ಯಕ್ಷರು ಹೇಳಿದರು.

ಬೆಂಕಿ ಅವಘಡದಲ್ಲಿ ತಂದೆ ಮತ್ತು ನಾನು ಮಾತ್ರ ಉಳಿದೆವು ಎಂದು ಹೇಳಿದ ಅವರು, “ನನ್ನ ತಂದೆಗೆ ನಾನು ಅವರ ಏಕೈಕ ಮಗ; ಅವರು ನನ್ನ ಮಕ್ಕಳನ್ನು ನೋಡಲು ಬಯಸಿದ್ದರು” ಎಂದು ಹೇಳಿದರು.

“ಬಡವರು ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ; ಏಕೆಂದರೆ, ಅವರ ಬಳಿ ಸಂಪತ್ತು ಇಲ್ಲ. ಆದರೆ ನೀವು (ಮೋದಿ) ಮುಸ್ಲಿಮರ ಬಗ್ಗೆ ಏಕೆ ಮಾತನಾಡುತ್ತಿದ್ದೀರಿ? ಮುಸ್ಲಿಮರು ಈ ದೇಶಕ್ಕೆ ಸೇರಿದವರು ಎಂದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಮತ್ತು ನುಸುಳುಕೋರರಿಗೆ ಜನರ ಸಂಪತ್ತನ್ನು ಮರುಹಂಚಿಕೆ ಮಾಡುವುದಾಗಿ ರಾಜಸ್ಥಾನದಲ್ಲಿ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಹೇಳಿದ್ದರು. ದೇಶದ ಸಂಪನ್ಮೂಲಗಳ ಮೇಲೆ ಮುಸ್ಲಿಮರು ಮೊದಲ ಹಕ್ಕು ಹೊಂದಿದ್ದಾರೆ ಎಂಬ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹೇಳಿದ್ದಾರೆ ಎಂದು ಆರೋಪ ಮಾಡಿದ್ದರು.

ಮಹಿಳೆಯರ ಮಂಗಳಸೂತ್ರ ಸೇರಿದಂತೆ ಜನರ ಸಂಪತ್ತನ್ನು ವಶಪಡಿಸಿಕೊಳ್ಳಲು ಕಾಂಗ್ರೆಸ್ ಮುಂದಾಗಿದೆ ಎಂಬ ಪ್ರಧಾನಿ ಮೋದಿಯವರ ಹೇಳಿಕೆಗೆ ತಿರುಗೇಟು ಕೊಟ್ಟಿರುವ ಖರ್ಗೆ, “ನಾವು 55 ವರ್ಷಗಳ ಕಾಲ ದೇಶವನ್ನು ಆಳಿದ್ದೇವೆ. ಆದರೆ, ನಾವು ಯಾರೊಬ್ಬರ ಮಂಗಳಸೂತ್ರವನ್ನು ಕಸಿದುಕೊಂಡಿದ್ದೇವೆಯೇ ಅಥವಾ ಇಡಿ (ಜಾರಿ ನಿರ್ದೇಶನಾಲಯ), ಐಟಿ (ಆದಾಯ) ದುರುಪಯೋಗಪಡಿಸಿಕೊಂಡಿದ್ದೇವೆಯೇ” ಎಂದು ಪ್ರಶ್ನಿಸಿದರು.

“ಪ್ರಧಾನಿಯವರು ಸುಳ್ಳುಗಳನ್ನು ಮಾತನಾಡುತ್ತಿದ್ದಾರೆ ಮತ್ತು ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಮುಸ್ಲಿಮರು ಶೂನ್ಯ ಇರುವಲ್ಲಿಯೂ ಪ್ರಧಾನಿ ಮೋದಿ “ಹಿಂದೂ-ಮುಸ್ಲಿಂ” (ಸಮಸ್ಯೆಗಳು) ಬಗ್ಗೆ ಮಾತನಾಡುತ್ತಾರೆ” ಎಂದು ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ; ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...