Homeರಾಷ್ಟ್ರೀಯಆರ್ಯನ್ ಖಾನ್‌ ಪ್ರಕರಣದಲ್ಲಿ ‘ಕಳಪೆ’ ತನಿಖೆ: ಸಮೀರ್‌‌ ವಾಂಖೆಡೆ ವಿರುದ್ಧ ಕ್ರಮಕ್ಕೆ ಆದೇಶ

ಆರ್ಯನ್ ಖಾನ್‌ ಪ್ರಕರಣದಲ್ಲಿ ‘ಕಳಪೆ’ ತನಿಖೆ: ಸಮೀರ್‌‌ ವಾಂಖೆಡೆ ವಿರುದ್ಧ ಕ್ರಮಕ್ಕೆ ಆದೇಶ

- Advertisement -
- Advertisement -

ಮುಂಬೈ ಡ್ರಗ್ಸ್ ಆನ್ ಕ್ರೂಸ್‌‌ ಪ್ರಕರಣದ ಆರಂಭದಲ್ಲಿ ತನಿಖೆ ನಡೆಸಿದ್ದ ಮಾದಕ ದ್ರವ್ಯ ನಿಗ್ರಹ ಅಧಿಕಾರಿ ಸಮೀರ್ ವಾಂಖೆಡೆ ಅವರು ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಸಿದ ಬಗ್ಗೆ ಮತ್ತು ಡ್ರಗ್ಸ್ ಪ್ರಕರಣದಲ್ಲಿ ‘ಕಳಪೆ ತನಿಖೆ’ ಆರೋಪದಲ್ಲಿ ಕ್ರಮ ಎದುರಿಸುತ್ತಿದ್ದಾರೆ ಎಂದು ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ.

“ಸಮೀರ್ ವಾಂಖೆಡೆ ಅವರ ವಿರುದ್ಧ ‘ಅಸಮರ್ಪಕ ತನಿಖೆ’ಗಾಗಿ ಕ್ರಮ ಕೈಗೊಳ್ಳುವಂತೆ ಸರ್ಕಾರದಿಂದ ಸಕ್ಷಮ ಪ್ರಾಧಿಕಾರವನ್ನು ಕೇಳಲಾಗಿದೆ. ಅವರ ನಕಲಿ ಜಾತಿ ಪ್ರಮಾಣಪತ್ರಕ್ಕಾಗಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಒಕ್ಕೂಟ ಸರ್ಕಾರದ ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸರ್ಕಾರಿ ಉದ್ಯೋಗ ಗಿಟ್ಟಿಸಲು ಸಮೀರ್‌‌ ವಾಂಖೆಡೆ ನಕಲಿ ದಾಖಲೆಗಳನ್ನು ಬಳಸಿದ್ದಾರೆ ಎಂದು ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಆರೋಪಿಸಿದ್ದರು. ಇದರ ನಂತರ ಅವರು ಕಳೆದ ನವೆಂಬರ್‌ನಲ್ಲಿ ತಾನು ದಲಿತ ಎಂದು ಸಾಬೀತುಪಡಿಸಲು ತನ್ನ ಮೂಲ ಜಾತಿಯ ದಾಖಲೆಗಳನ್ನು ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗಕ್ಕೆ ನೀಡಿದ್ದರು.

ಇದನ್ನೂ ಓದಿ: ಆರ್ಯನ್ ಖಾನ್‌ರಂತೆ ಕ್ರೂಸ್ ಶಿಪ್ ಪಾರ್ಟಿಗೆ ನನ್ನನ್ನು ಆಹ್ವಾನಿಸಲಾಗಿತ್ತು: ಮಹಾರಾಷ್ಟ್ರ ಸಚಿವ ಅಸ್ಲಾಮ್ ಶೇಖ್

ಸಮೀರ್‌‌ ವಾಂಖೆಡೆ ಅವರು ಎನ್‌ಸಿಬಿ ಮುಂಬೈ ವಲಯದ ಮುಖ್ಯಸ್ಥರಾಗಿದ್ದರು. ಮುಂಬೈ ಕರಾವಳಿಯ ಹಡಗಿನಲ್ಲಿ ಡ್ರಗ್ಸ್‌ ವಿರೋಧಿ ದಾಳಿಯ ನಂತರ ಅವರು ಆರಂಭಿಕ ತನಿಖೆಯನ್ನು ನಿರ್ವಹಿಸಿದ್ದರು. ಈ ಪ್ರಕರಣದಲ್ಲಿ ನಟ ಶಾರುಖ್ ಖಾನ್ ಅವರ ಮಗ ಆರ್ಯನ್ ಖಾನ್ ಅವರನ್ನು ಬಂಧಿಸಲಾಗಿತ್ತು.

ಬಳಿಕ ಆರ್ಯನ್‌ ಖಾನ್‌ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಪ್ರಕರಣದಲ್ಲಿ ಎನ್‌‌ಸಿಬಿ ಸಲ್ಲಿಸಿರುವ 6,000 ಪುಟಗಳ ಚಾರ್ಜ್‌ಶೀಟ್‌ನಲ್ಲಿ 14 ಆರೋಪಿಗಳನ್ನು ಹೆಸರಿಸಿದೆ. ಆದರೆ ಅದರಲ್ಲಿ ಆರ್ಯನ್‌ ಖಾನ್‌ ಹೆಸರನ್ನು ಉಲ್ಲೇಖಿಸಲಾಗಿಲ್ಲ. ಹೀಗಾಗಿ ಡ್ರಗ್ಸ್-ಆನ್-ಕ್ರೂಸ್ ಪ್ರಕರಣದಲ್ಲಿ ಅವರಿಗೆ ಕ್ಲೀನ್ ಚಿಟ್‌ ನೀಡಲಾಗಿದೆ.

“ಈಗ ಆರ್ಯನ್ ಖಾನ್ ಮತ್ತು ಇತರ 5 ಜನರಿಗೆ ಕ್ಲೀನ್ ಚಿಟ್ ಸಿಕ್ಕಿದೆ. ಎನ್‌ಸಿಬಿ ಸಮೀರ್ ವಾಂಖೆಡೆ ಅವರ ತಂಡ ಮತ್ತು ಖಾಸಗಿ ಸೇನೆಯ ವಿರುದ್ಧ ಕ್ರಮ ಕೈಗೊಳ್ಳುತ್ತದೆಯೇ? ಅಥವಾ ಅಪರಾಧಿಗಳನ್ನು ರಕ್ಷಿಸುತ್ತದೆಯೇ?” ಎಂದು ಸಚಿವ ನವಾಬ್ ಮಲಿಕ್ ಕಚೇರಿ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಡ್ರಗ್ಸ್‌ ಪ್ರಕರಣ: ಆರ್ಯನ್ ಖಾನ್‌ ಪಿತೂರಿಯ ಭಾಗವಾಗಿದ್ದಾರೆ ಎಂಬುವುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದ ಎಸ್‌ಐಟಿ ಅಧಿಕಾರಿಗಳು 

ಡ್ರಗ್ಸ್ ದಾಳಿಯ ನಂತರ ಸಮೀರ್‌‌ ವಾಂಖೆಡೆ ನಡೆಸಿದ ತನಿಖೆಯಲ್ಲಿ ಐದು ಅಕ್ರಮಗಳು ನಡೆಸಿದೆ ಎಂದು ಇಂದು ಗೃಹ ಸಚಿವಾಲಯದ ಮೂಲಗಳು ವಿವರಿಸಿವೆ ಎಂದು ಎನ್‌ಡಿಟಿವಿ ಹೇಳಿದೆ.

ಶೋಧ ಕಾರ್ಯಾಚರಣೆಯಲ್ಲಿ ಯಾವುದೇ ವಿಡಿಯೋಗ್ರಫಿ ಮಾಡಲಾಗಿಲ್ಲ ಮತ್ತು ಆರ್ಯನ್ ಖಾನ್ ಅವರ ಫೋನ್‌ನ ವಿಷಯಗಳನ್ನು ವಿಶ್ಲೇಷಿಸುವಲ್ಲಿ ಲೋಪವಾಗಿದೆ. ಯಾಕೆಂದರೆ ಅವರ ಫೋನ್‌ ಚಾಟ್‌ಗಳು ಪ್ರಕರಣಕ್ಕೆ ಸಂಬಂಧಿಸಿಲ್ಲ ಎಂದು ಮೂಲಗಳು ತಿಳಿಸಿವೆ.

ಆರ್ಯನ್‌ ಖಾನ್‌ ಡ್ರಗ್ಸ್ ಸೇವನೆ ಮಾಡಿದ್ದಾರೆ ಎಂದು ಸಾಬೀತುಪಡಿಸಲು ಯಾವುದೇ ವೈದ್ಯಕೀಯ ಪರೀಕ್ಷೆಯನ್ನು ಮಾಡಲಾಗಿಲ್ಲ. ಅಲ್ಲದೆ ಪ್ರಕರಣದಲ್ಲಿ ಒಬ್ಬ ಸಾಕ್ಷಿಯು ಪ್ರತಿಕೂಲವಾಗಿ ತಿರುಗಿ, ಖಾಲಿ ಪೇಪರ್‌ಗಳ ಮೇಲೆ ಸಹಿ ಹಾಕಲಾಗಿತ್ತು ಎಂದು ವಿಶೇಷ ತನಿಖಾ ತಂಡಕ್ಕೆ ತಿಳಿಸಿದ್ದಾನೆ ಎಂದು ಮೂಲಗಳು ತಿಳಿಸಿವೆ. ಇನ್ನೂ ಇಬ್ಬರು ಸಾಕ್ಷಿಗಳು NCB ದಾಳಿಯ ಸಮಯ ಸ್ಥಳದಲ್ಲಿ ತಾವು ಇರಲಿಲ್ಲ ಎಂದು ತನಿಖಾ ತಂಡಕ್ಕೆ ಅವರು ಹೇಳಿದ್ದಾರೆ.

ಇದನ್ನೂ ಓದಿ: ಡ್ರಗ್ಸ್ ಆರೋಪದಿಂದ ಆರ್ಯನ್ ಖಾನ್‌ ದೋಷಮುಕ್ತ: NCB ನ್ಯಾಯಾಲಯ ಘೋಷಣೆ

ಆರ್ಯನ್ ಖಾನ್ ಡ್ರಗ್ಸ್ ಇಲ್ಲದೆ ಪತ್ತೆಯಾದಾಗಲೂ ಎಲ್ಲಾ ಆರೋಪಿಗಳನ್ನು ಬಂಧಿಸಿ ಪ್ರತಿಯೊಬ್ಬರ ವಿರುದ್ಧ ಒಂದೇ ರೀತಿಯ ಆರೋಪಗಳನ್ನು ಮಾಡಿರುವುದು ಮತ್ತೊಂದು ಗಂಭೀರವಾದ ಲೋಪವಾಗಿದೆ ಎಂದು ಮೂಲಗಳು ತಿಳಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...