Homeಅಂತರಾಷ್ಟ್ರೀಯಇರಾನ್-ಅಮೆರಿಕ ಸಂಘರ್ಷದ ನಡುವೆ ಗಾಝಾದಲ್ಲಿನ ನೋವು ಮರೆಯದಿರಿ: ಜಗತ್ತಿಗೆ ಪೋಪ್ ಲಿಯೋ ಕರೆ

ಇರಾನ್-ಅಮೆರಿಕ ಸಂಘರ್ಷದ ನಡುವೆ ಗಾಝಾದಲ್ಲಿನ ನೋವು ಮರೆಯದಿರಿ: ಜಗತ್ತಿಗೆ ಪೋಪ್ ಲಿಯೋ ಕರೆ

- Advertisement -
- Advertisement -

ಇರಾನ್‌ನ ಪರಮಾಣು ಕೇಂದ್ರಗಳ ಮೇಲೆ ಅಮೆರಿಕ ನಡೆಸಿದ ದಾಳಿಯ ನಂತರ ಇರಾನ್‌ನೊಂದಿಗಿನ ಇಸ್ರೇಲ್‌ನ ಸಂಘರ್ಷ ಉಲ್ಬಣಗೊಳ್ಳುತ್ತಿದ್ದರೂ, ಗಾಝಾದಲ್ಲಿ ಪ್ರತಿದಿನ ಇಸ್ರೇಲಿ ದಾಳಿಗಳಿಂದ ನೂರಾರು ಜನರು ಹತ್ಯೆಯಾಗುತ್ತಿದ್ದು ಮತ್ತು ಗಾಯಗೊಳ್ಳುತ್ತಿದ್ದಾರೆ. ಈ ನಡುವೆ ರೋಮನ್ ಕ್ಯಾಥೋಲಿಕ್ ಚರ್ಚ್‌ನ ಪರಮೋಚ್ಚ ನಾಯಕ ಪೋಪ್ ಲಿಯೋ, “ಗಾಜಾದಲ್ಲಿನ ನೋವನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕು” ಎಂದು ಜನತೆಗೆ ಕರೆ ನೀಡಿದ್ದಾರೆ. ಇರಾನ್-ಅಮೆರಿಕ ಸಂಘರ್ಷದ

“ಇಸ್ರೇಲ್ ಮತ್ತು ಪ್ಯಾಲೆಸ್ತೀನ್‌ ಅನ್ನು ಒಳಗೊಂಡಿರುವ ಈ ನಾಟಕೀಯ ಸನ್ನಿವೇಶದಲ್ಲಿ, ವಿಶೇಷವಾಗಿ ಗಾಝಾ ಮತ್ತು ಇತರ ಪ್ರದೇಶಗಳಲ್ಲಿ ಜನರ ದೈನಂದಿನ ನೋವನ್ನು ಮರೆತುಬಿಡುವ ಅಪಾಯವಿದೆ. ಅಲ್ಲಿ ಸಾಕಷ್ಟು ಮಾನವೀಯ ಬೆಂಬಲದ ಅಗತ್ಯದ ತುರ್ತಿದೆ” ಎಂದು ಪೋಪ್ ಲಿಯೋ ಪವಿತ್ರ ಯಾತ್ರೆಗೆ ಬಂದವರೊಂದಿಗೆ ವಾರದ ಪ್ರಾರ್ಥನೆಯಲ್ಲಿ ಹೇಳಿದ್ದಾರೆ.

ರಾಜತಾಂತ್ರಿಕತೆಯು ಶಸ್ತ್ರಾಸ್ತ್ರಗಳನ್ನು ಮೌನಗೊಳಿಸಲಿ, ರಾಷ್ಟ್ರಗಳು ತಮ್ಮ ಭವಿಷ್ಯವನ್ನು ಹಿಂಸೆ ಮತ್ತು ರಕ್ತಸಿಕ್ತ ಸಂಘರ್ಷಗಳೊಂದಿಗೆ ರೂಪಿಸುವುದರ ಬದಲಾಗಿ, ಶಾಂತಿ ಪ್ರಯತ್ನಗಳೊಂದಿಗೆ ರೂಪಿಸಲಿ ಎಂದು ಲಿಯೋ ಹೇಳಿದ್ದಾರೆ. “ಯುದ್ಧದ ದುರಂತವು ಸರಿಪಡಿಸಲಾಗದ ಪ್ರಪಾತವಾಗುವ ಮೊದಲು ಅದನ್ನು ನಿಲ್ಲಿಸುವುದು ಅಂತರರಾಷ್ಟ್ರೀಯ ಸಮುದಾಯದ ಪ್ರತಿಯೊಬ್ಬ ಸದಸ್ಯರಿಗೂ ನೈತಿಕ ಜವಾಬ್ದಾರಿ ಇದೆ” ಎಂದು ಅವರು ಹೇಳಿದ್ದಾರೆ.

ಇರಾನ್ ಜೊತೆ ಇಸ್ರೇಲ್ ಸಂಘರ್ಷ ತೀವ್ರಗೊಳ್ಳುತ್ತಿದ್ದರೂ, ಇಸ್ರೇಲ್ ಸೇನೆಯು ಗಾಝಾ ಮೇಲೆ ಮಾರಕ ದಾಳಿಗಳನ್ನು ಮುಂದುವರೆಸಿದೆ. ಕಳೆದ 24 ಗಂಟೆಗಳ ವರದಿ ಅವಧಿಯಲ್ಲಿ ಗಾಝಾದಲ್ಲಿ ಕನಿಷ್ಠ 51 ಜನರು ಸಾವನ್ನಪ್ಪಿದ್ದಾರೆ ಮತ್ತು ಇನ್ನೂ 104 ಜನರು ಗಾಯಗೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಗಾಝಾದ ದಕ್ಷಿಣ ಖಾನ್ ಯೂನಿಸ್, ಮಧ್ಯ ಗಾಝಾ ಮತ್ತು ಉತ್ತರ ಗಾಝಾ ನಗರದಲ್ಲಿ ಕೇಂದ್ರೀಕರಿಸಿ ಇಸ್ರೇಲ್ ದಾಳಿ ನಡೆಸುತ್ತಿದೆ ಎಂದು ಅಲ್‌ ಜಝೀರಾ ಹೇಳಿದೆ. “ಇರಾನ್ ಜೊತೆಗಿನ ಹೆಚ್ಚುತ್ತಿರುವ ಘರ್ಷಣೆಯಿಂದ ಸೃಷ್ಟಿಯಾದ ಗೊಂದಲದ ಲಾಭವನ್ನು ಪಡೆದುಕೊಂಡು ಇಸ್ರೇಲ್ ಸೇನೆಯು [ಗಾಜಾದಲ್ಲಿ] ಹೆಚ್ಚು ಮಾರಕ ದಾಳಿಗಳನ್ನು ಮುಂದುವರಿಸುತ್ತಿದೆ” ಎಂದು ವರದಿ ಹೇಳಿದೆ.

ಗಾಝಾದಲ್ಲಿ ಇಸ್ರೇಲಿ ದಾಳಿಗಳು ತೀವ್ರಗೊಂಡಿದ್ದು, ದಕ್ಷಿಣ ಗಾಝಾದ ರಫಾ ಬಳಿ ಇಸ್ರೇಲಿ ಸೇನೆಯು ವೈಮಾನಿಕ ದಾಳಿಗಳನ್ನು ನಡೆಸಿದ್ದು, ಕನಿಷ್ಠ 11 ಫೆಲಸ್ತೀನಿಯರು ಕೊಲ್ಲಲ್ಪಟ್ಟಿದ್ದಾರೆ ಎಂದು ವರದಿಯಾಗಿದೆ. ಉತ್ತರ ಗಾಝಾದ ಜಬಲಿಯಾ ನಿರಾಶ್ರಿತರ ಶಿಬಿರದಲ್ಲಿ ಸಹ ದಾಳಿಗಳು ನಡೆದಿದ್ದು, ಆದರೆ ನಿರ್ದಿಷ್ಟ ಸಾವು-ನೋವಿನ ವಿವರಗಳು ಸ್ಪಷ್ಟವಾಗಿ ದಾಖಲಾಗಿಲ್ಲ.

ಇಸ್ರೇಲಿ ಸೇನೆಯು ಗಾಝಾದ ವಿವಿಧ ಭಾಗಗಳಲ್ಲಿ “ಹಮಾಸ್‌ನ ಗುರಿಗಳನ್ನು” ಗುರಿಯಾಗಿರಿಸಿಕೊಂಡು ದಾಳಿ ನಡೆಸುತ್ತಿದೆ ಎಂದು ಹೇಳಿದೆ, ಆದರೆ ಈ ದಾಳಿಗಳಿಂದ ಸಾಮಾನ್ಯ ನಾಗರಿಕರಿಗೆ ತೀವ್ರ ಹಾನಿಯಾಗುತ್ತಿದೆ ಎಂದು ಫೆಲಸ್ತೀನಿಯ ಮೂಲಗಳು ಆರೋಪಿಸಿವೆ. ಇಂಟರ್ನೆಟ್ ಮತ್ತು ಸಂವಹನ ಸಂಪರ್ಕ ಕಡಿತಗೊಂಡಿರುವುದರಿಂದ ಗಾಝಾದಿಂದ ನಿಖರ ಮಾಹಿತಿ ಬರುವುದು ಕಷ್ಟವಾಗಿದೆ ಎಂದು ವರದಿ ಉಲ್ಲೇಖಿಸಿವೆ.

ಅಕ್ಟೋಬರ್ 2023 ರಲ್ಲಿ ಯುದ್ಧ ಪ್ರಾರಂಭವಾದಾಗಿನಿಂದ ಇಸ್ರೇಲ್ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆಯನ್ನು ಕನಿಷ್ಠ 55,959 ಕ್ಕೆ ಏರಿಕೆಯಾಗಿದ್ದು, 131,242 ಜನರು ಗಾಯಗೊಂಡಿದ್ದಾರೆ. ಇರಾನ್-ಅಮೆರಿಕ ಸಂಘರ್ಷದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಮೆರಿಕದಿಂದ ಬಾಂಬ್ ದಾಳಿ | ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಹೊರಟ ಇರಾನ್ ಸಚಿವ

ಅಮೆರಿಕದಿಂದ ಬಾಂಬ್ ದಾಳಿ | ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಹೊರಟ ಇರಾನ್ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮಹತ್ವದ ಕೆಲಸವಿದೆ: ಕರ್ನಾಟಕ ಹೈಕೋರ್ಟ್ 

ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮುಖ್ಯಮಂತ್ರಿಗಳು ನಿರ್ವಹಿಸಬೇಕಾದ ಕೆಲಸ ಉತ್ತಮ ಮತ್ತು ಹೆಚ್ಚು ಮುಖ್ಯವಾದುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪೊಂದರಲ್ಲಿ ಹೇಳಿದೆ.  ಬೆಸ್ಕಾಂ ಎಂಜಿನಿಯರ್ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...