Homeಮುಖಪುಟಚರ್ಚ್‌ಗಳ ಮೇಲೆ ಗೂಢಾಚಾರಿಕೆಗೆ ಪಾಪ್ಯುಲರ್ ಫ್ರಂಟ್ ಖಂಡನೆ

ಚರ್ಚ್‌ಗಳ ಮೇಲೆ ಗೂಢಾಚಾರಿಕೆಗೆ ಪಾಪ್ಯುಲರ್ ಫ್ರಂಟ್ ಖಂಡನೆ

- Advertisement -
- Advertisement -

ರಾಜ್ಯದಲ್ಲಿರುವ ಚರ್ಚ್‌ಗಳ ಮೇಲೆ ಗೂಢಾಚಾರಿಕೆ ನಡೆಸಿ ಮಾಹಿತಿ ಸಂಗ್ರಹಿಸಿರುವ ಸರ್ಕಾರದ ಕ್ರಮವನ್ನು ಖಂಡಿಸಿರುವ ಪಾಪ್ಯುಲರ್ ಫ್ರಂಟ್ ಅಫ್ ಇಂಡಿಯಾದ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ಇದು ಅಲ್ಪಸಂಖ್ಯಾತರ ಧಾರ್ಮಿಕ ಸ್ವಾತಂತ್ರ್ಯದ ಹರಣವಾಗಿದೆ ಎಂದು ಕಿಡಿಕಾರಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಕರ್ನಾಟಕ ಅಲ್ಪಸಂಖ್ಯಾತರ ಆಯೋಗ ಕಾಯಿದೆ 1994ರ ಪ್ರಕಾರ, ಯಾವುದೇ ನಿಬಂಧನೆಯಲ್ಲದೇ ರಾಜ್ಯ ಸರಕಾರಕ್ಕೆ ಚರ್ಚ್‌ಗಳ ಮಾಹಿತಿ ಸಂಗ್ರಹ ಮತ್ತು ನಿರ್ವಹಣೆ ಮಾಡುವ ಅಧಿಕಾರವಿಲ್ಲ. ಮಾತ್ರವಲ್ಲ, ಇದು ಸಂವಿಧಾನದ 14 ಮತ್ತು 21ನೇ ವಿಧಿಯಡಿ ದೊರೆತಿರುವ ಸಮಾನತೆ ಮತ್ತು ಖಾಸಗಿ ಹಕ್ಕಿನ ಉಲ್ಲಂಘನೆಯಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಸರಕಾರವು ಸಂವಿಧಾನ ವಿರೋಧಿಯಾಗಿರುವ ಮತಾಂತರ ನಿಷೇಧ ಕಾಯ್ದೆ ಜಾರಿ ತರಲು ಉತ್ಸುಕವಾಗಿದೆ. ಚರ್ಚ್‌ಗಳ ಸಮೀಕ್ಷೆ ಈ ದುಷ್ಟ ಯೋಜನೆಯ ಒಂದು ಭಾಗವಾಗಿದೆ. ಬಿಜೆಪಿ ಸರಕಾರವು ಕ್ರೈಸ್ತ ಸಮುದಾಯದ ಮೇಲೆ ದ್ವೇಷ ಸಾಧಿಸುತ್ತಿರುವುದು ಇದು ಮೊದಲೇನಲ್ಲ. 2008ರಲ್ಲಿ ನಡೆದ ರಾಜ್ಯಾದ್ಯಂತ ನಡೆದ ಸರಣಿ ಚರ್ಚ್ ದಾಳಿಯ ಮೂಲಕ ಕ್ರೈಸ್ತರಲ್ಲಿ ಅಭದ್ರತೆಯ ಭಾವನೆಯನ್ನು ಸೃಷ್ಟಿಸಲಾಗಿತ್ತು‌. ಬಜರಂಗದಳದವು ಈ ದುಷ್ಕೃತ್ಯಕ್ಕೆ ನೇರ ಹೊಣೆಯಾಗಿದ್ದರೂ, ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪಿಗಳಿಗೆ ಸೂಕ್ತ ಶಿಕ್ಷೆಗೊಳಪಡಿಸದೇ ಸಂತ್ರಸ್ತ ಸಮುದಾಯಕ್ಕೆ ಅನ್ಯಾಯ ಎಸಲಾಗಿತ್ತು. ಇದೀಗ ಮತ್ತೇ ಮತಾಂತರದ ಹೆಸರಿನಲ್ಲಿ ಕ್ರೈಸ್ತರ ಪ್ರಾರ್ಥನಾಲಯಗಳ ಮೇಲೆ ವಿವಿಧ ಕಡೆಗಳಲ್ಲಿ ಸಂಘಪರಿವಾರದ ಸಂಘಟನೆಗಳು ದಾಳಿ ನಡೆಸುತ್ತಿರುವುದು ವರದಿಯಾಗುತ್ತಿದೆ‌ ಎಂದು ಯಾಸಿರ್ ಹಸನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರಕಾರವು ಕ್ರೈಸ್ತ ಸಮುದಾಯದ ವಿರುದ್ಧ ನಡೆಸುತ್ತಿರುವ ಅನ್ಯಾಯ, ತಾರತಮ್ಯ ಮತ್ತು ದ್ವೇಷದ ಕ್ರಮವನ್ನು ತಕ್ಷಣ ನಿಲ್ಲಿಸಬೇಕು. ಅಲ್ಪಸಂಖ್ಯಾತರ ಧಾರ್ಮಿಕ ಸ್ವಾತಂತ್ರ್ಯವನ್ನು ರಕ್ಷಿಸಲು ನ್ಯಾಯಾಂಗವು ಕೂಡಲೇ ಮಧ್ಯಪ್ರವೇಶಿಸಬೇಕು. ಚರ್ಚ್ ಗಳ ಸಮೀಕ್ಷೆಗೆ ಸೂಚನೆ ನೀಡಿರುವ ಬಿಜೆಪಿ ಸರಕಾರದ ಸಂವಿಧಾನ ವಿರೋಧಿ ನಡೆಯ ವಿರುದ್ಧ ಧ್ವನಿ ಎತ್ತಲು ಎಲ್ಲಾ ಸಮುದಾಯಗಳು ಮುಂದೆ ಬರಬೇಕೆಂದು ಅವರು ಒತ್ತಾಯಿಸಿದ್ದಾರೆ.

ಸರಕಾರದ ಅಧೀನದ ಅಲ್ಪಸಂಖ್ಯಾತರ ನಿರ್ದೇಶನಾಲಯವು ರಾಜ್ಯದಲ್ಲಿರುವ ಚರ್ಚ್ ಗಳ ಬಗ್ಗೆ ಸಮೀಕ್ಷೆ ನಡೆಸಲು ಆದೇಶಿಸಿತ್ತು. ಅದರಂತೆ ಪೊಲೀಸ್ ಇಲಾಖೆ, ಗುಪ್ತಚರ ಇಲಾಖೆಯ ಮೂಲಕ ಮಾಹಿತಿ ಸಂಗ್ರಹಿಸುವ ಕಾರ್ಯ ನಡೆಸುತ್ತಿರುವ ವಿಚಾರ ಬಹಿರಂಗವಾಗಿದೆ. ಇದಕ್ಕೆ ಹಲವಾರು ಜನ ವಿರೋಧ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ದ್ವೇಷ ಸಾಕು, ಪ್ರೀತಿ ಬೇಕು: ಮುಖ್ಯಮಂತ್ರಿಗಳೇ, ತಮ್ಮ ಬದ್ಧತೆ ಸಂವಿಧಾನದ ಮೌಲ್ಯಗಳಿಗಿರಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...