Homeಕರ್ನಾಟಕ‘ಕರ್ನಾಟಕದಲ್ಲೂ ಜನಸಂಖ್ಯಾ ನಿಯಂತ್ರಣ ಕಾಯ್ದೆ’ - ಸಿಟಿ ರವಿ ಹೇಳಿಕೆಗೆ ಪ್ರತಿಕ್ರಿಯೆ ಏನು?

‘ಕರ್ನಾಟಕದಲ್ಲೂ ಜನಸಂಖ್ಯಾ ನಿಯಂತ್ರಣ ಕಾಯ್ದೆ’ – ಸಿಟಿ ರವಿ ಹೇಳಿಕೆಗೆ ಪ್ರತಿಕ್ರಿಯೆ ಏನು?

- Advertisement -
- Advertisement -

ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಲು, ಕರ್ನಾಟಕದಲ್ಲೂ ಅಸ್ಸಾಂ ಮತ್ತು ಉತ್ತರ ಪ್ರದೇಶದ ಮಾದರಿಯಲ್ಲಿ ಹೊಸ ಜನಸಂಖ್ಯಾ ನೀತಿಯನ್ನು ತರಲು ಇದು ಸರಿಯಾದ ಸಮಯ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಗುರುವಾರ ಹೇಳಿದ್ದಾರೆ. ಆದರೆ ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳಲ್ಲಿ ಜನಸಂಖ್ಯಾ ಸ್ಪೋಟ ಇಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಉತ್ತರ ಪ್ರದೇಶ ಮತ್ತು ಅಸ್ಸಾಂ ರಾಜ್ಯಗಳು ಜನಸಂಖ್ಯಾ ನಿಯಂತ್ರಣ ಕಾನೂನಗಳನ್ನು ತರಲು ಹೊರಟಿದೆ. ಅದರಲ್ಲೂ ಉತ್ತರ ಪ್ರದೇಶ ಈಗಾಗಲೆ ಕರಡು ಮಸೂದೆಯನ್ನು ಪ್ರಕಟಿಸಿದೆ. ಈ ಕರಡು ಮಸೂದೆಯಲ್ಲಿ, ಕಾನೂನು ಉಲ್ಲಂಘಿಸಿದವರಿಗೆ ಶಿಕ್ಷೆಯನ್ನು ಮತ್ತು ಪಾಲಿಸಿದವರಿಗೆ ಕೊಡುಗೆಯನ್ನೂ ಘೋಷಿಸಲಾಗಿದೆ.

ಇದನ್ನೂ ಓದಿ: ಉತ್ತರ ಪ್ರದೇಶ ಜನಸಂಖ್ಯಾ ಮಸೂದೆ: ‘ಒನ್-ಚೈಲ್ಡ್‌‌’ ನೀತಿಯನ್ನು ತೆಗೆದು ಹಾಕುವಂತೆ ವಿಹೆಚ್‌‌ಪಿ ಒತ್ತಾಯ

ಉತ್ತರ ಪ್ರದೇಶ ತನ್ನ ಕರಡು ಮಸೂದೆಯಲ್ಲಿ, ಕಾನೂನನ್ನು ಪಾಲಿಸಿದವರಿಗೆ ನೀರು ಮತ್ತು ವಿದ್ಯುತ್ ಬಿಲ್‌ಗಳು, ಮನೆ ತೆರಿಗೆ, ಗೃಹ ಸಾಲಗಳ ಮೇಲೆ ರಿಯಾಯಿತಿ ನೀಡುವುದಾಗಿ ಹೇಳಿದೆ. ಕಾನೂನು ಉಲ್ಲಂಘಿಸಿದವರಿಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ಪರ್ಧಿಸುವ, ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವ ಅಥವಾ ಬಡ್ತಿ ಪಡೆಯುವ ಮತ್ತು ಯಾವುದೇ ರೀತಿಯ ಸರ್ಕಾರಿ ಸಬ್ಸಿಡಿ ಪಡೆಯುವುದನ್ನು ನಿರ್ಬಂಧಿಸುತ್ತದೆ.

ಗುರುವಾರ ಟ್ವೀಟ್ ಮಾಡಿದ್ದ ಸಿಟಿ ರವಿ, “ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಲು ಕರ್ನಾಟಕವು ಅಸ್ಸಾಂ ಮತ್ತು ಉತ್ತರ ಪ್ರದೇಶದ ಮಾದರಿಯಲ್ಲಿ ಹೊಸ ಜನಸಂಖ್ಯಾ ನೀತಿಯನ್ನು ತರಲು ಇದು ಸರಿಯಾದ ಸಮಯ. ಸೀಮಿತ ನೈಸರ್ಗಿಕ ಸಂಪನ್ಮೂಲಗಳು ಲಭ್ಯವಿರುವುದರಿಂದ, ಜನಸಂಖ್ಯೆಯ ಸ್ಫೋಟ ಸಂಭವಿಸಿದಲ್ಲಿ ಪ್ರತಿಯೊಬ್ಬ ನಾಗರಿಕನ ಅಗತ್ಯಗಳನ್ನು ಪೂರೈಸುವುದು ಕಷ್ಟವಾಗುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಜನಸಂಖ್ಯಾ ನಿಯಂತ್ರಣ ಮಸೂದೆ ಕರಡು ಪ್ರಕಟ

ಜನಸಂಖ್ಯಾ ನಿತಂತ್ರಣ ಕಾನೂನಿನ ಚರ್ಚೆಗಳ ಬಗ್ಗೆ ಪತ್ರಕರ್ತ ಅಲ್ಮೈಡಾ ಗ್ಲಾಡ್‌ಸನ್ ಅವರು, “ಜನಸಂಖ್ಯೆ ನಿಯಂತ್ರಣೆಯಲ್ಲಿ ಸಾಕಷ್ಟು ಪ್ರಗತಿ ಸಾಧಿಸಿರುವ ದಕ್ಷಿಣದ ರಾಜ್ಯಗಳಾದ ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಗೋವಾ ಮುಂತಾದೆಡೆ ಜನಸಂಖ್ಯೆ ನಿಯಂತ್ರಣಕ್ಕೆ ಬಂದಿದ್ದು ಶಿಕ್ಷೆಯಿಂದಲ್ಲ ಬದಲಾಗಿ ಶಿಕ್ಷಣದಿಂದ. ಈ ರಾಜ್ಯಗಳಲ್ಲಿ ಒಟ್ಟು ಫಲವಂತೆಕೆಯ ದರ (TFR) ದೇಶದ ರಿಪ್ಲೇಸ್‍ಮೆಂಟ್ ಲೆವೆಲ್ 2.1 ಕ್ಕಿಂತಾ ಕಡಿಮೆಯಿದೆ” ಎಂದು ಹೇಳಿದ್ದಾರೆ.

“ಕರ್ನಾಟಕ, ಅವಿಭಜಿತ ಆಂಧ್ರಪ್ರದೇಶದಲ್ಲಿ TFR 1.7 ಇದ್ದರೆ ಕೇರಳದಲ್ಲಿ 1.8 ಹಾಗೂ ಗೋವಾದಲ್ಲಿ 1.3 ಇದೆ. ಅದೇ ಈ TFR ಉತ್ತರ ಪ್ರದೇಶ, ಬಿಹಾರ, ಛತ್ತೀಸ್‍ಗಢ, ರಾಜಸ್ಥಾನ, ಮಧ್ಯಪ್ರದೇಶ, ಝಾರ್ಖಂಡ್‍ಗಳಲ್ಲಿ 2.1 ಕ್ಕಿಂತ ಜಾಸ್ತಿಯಿದೆ. ಭಾರತದ ಒಟ್ಟು ಜನಸಂಖ್ಯೆಯ 40% ಜನಸಂಖ್ಯೆ ಇರುವುದೇ ಈ ಆರು ರಾಜ್ಯಗಳಲ್ಲಿ.
ಹಾಗಾಗಿ ಯಾಕಾಗಿ ಈ ರಾಜ್ಯಗಳು ಜನಸಂಖ್ಯೆ ನಿಯಂತ್ರಣೆಯಲ್ಲಿ ದಕ್ಷಿಣದ ರಾಜ್ಯಗಳನ್ನು ಮಾದರಿಯಾಗಿ ಸ್ವೀಕರಿಸಬಾರದು?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಜನಸಂಖ್ಯಾ ನೀತಿಯಲ್ಲಿ ಮತ್ತೆ ಬದಲಾವಣೆ ತಂದ ಚೀನಾ ಕಮ್ಯುನಿಸ್ಟ್‌‌ ಪಕ್ಷ!

“ದಕ್ಷಿಣದ ರಾಜ್ಯಗಳಲ್ಲಿ ಶಿಕ್ಷಣದ ಪ್ರಮಾಣ ಹೆಚ್ಚಿರುವುದು, ಜನಸಂಖ್ಯೆ ನಿಯಂತ್ರಣದಲ್ಲಿ ಬಲುದೊಡ್ಡ ಪಾತ್ರ ವಹಿಸಿದೆ. ಯಾವುದೇ ಕಠಿಣ ಕಾನೂನುಗಳಿಲ್ಲದೇ, ಶಿಕ್ಷೆಯಿಲ್ಲದೇ ಕೇವಲ ಉತ್ತಮ ಶಿಕ್ಷಣದಿಂದ ದಕ್ಷಿಣ ಭಾರತದಲ್ಲಿ ಜನಸಂಖ್ಯೆ ನಿಯಂತ್ರಣಕ್ಕೆ ಬಂದಿರುವಾಗ, ಅದು ಉತ್ತರ ಭಾರತದಲ್ಲಿ ಯಾಕಾಗಬಾರದು? ಶಿಕ್ಷಣದಿಂದಾಗುವ ಕೆಲಸವನ್ನು ಶಿಕ್ಷೆಯಿಂದ ಯಾಕೆ ಮಾಡಬೇಕು?” ಎಂದು ಅವರು ಹೇಳಿದ್ದಾರೆ.

“ಉತ್ತರ ಪ್ರದೇಶದಲ್ಲೇ 1993 ರಲ್ಲಿ 4.82 ಇದ್ದ TFR 2016 ರಲ್ಲಿ 2.7 ಕ್ಕೆ ಬಂದಿಳಿದಿದೆ. ಅಲ್ಲಿನ ಸರಕಾರದ ವರದಿಗಳ ಪ್ರಕಾರ 2025 ರ ಹೊತ್ತಿಗೆ ಇದು ಇನ್ನೂ ಇಳಿದು 2.1 ಕ್ಕೆ ಬರಲಿದೆ. ಅಂದರೆ ಜನಸಂಖ್ಯೆ ಸ್ಪೋಟವಾಗುತ್ತಿಲ್ಲ ಬದಲಾಗಿ ಅದು ಇಳಿಯುತ್ತಿದೆ. ಅದನ್ನು ಇನ್ನೂ ಸರಿಯಾದ ಹಾಗೂ ವ್ಯವಸ್ಥಿತ ರೀತಿಯಲ್ಲಿ ಜಾರಿಗೆ ತರಲು ಯುವ ಸಮುದಾಯವನ್ನು ಶಿಕ್ಷಿತರನ್ನಾಗಿಸಿಬೇಕು. ಅವರಲ್ಲಿ ಜಾಗೃತಿ ಹೆಚ್ಚಾಗಬೇಕೇ ಹೊರತು ಭೀತಿಯಲ್ಲ” ಎಂದು ಅಲ್ಮೈಡಾ ಗ್ಲಾಡ್‌ಸನ್‌ ಅವರು ಹೇಳಿದ್ದಾರೆ.

ಚಿಂತಕ ಶ್ರೀನಿವಾಸ್ ಕಾರ್ಕಾಳ ಅವರು, “ಕರ್ನಾಟಕದಲ್ಲಿ ಒಟ್ಟು ಫಲವಂತಿಕೆ ದರ (TFR) 1.67 ಇದ್ದು ರಿಪ್ಲೇಸ್ಮೆಂಟ್ ದರವಾದ 2.1 ಕ್ಕಿಂತ ಕಡಿಮೆ ಇದೆ (ತಂದೆತಾಯಿಗೆ ಎರಡು ಮಕ್ಕಳಿದ್ದಾಗ ಅದು ರಿಪ್ಲೇಸ್ಮೆಂಟ್ ಆಗಿರುತ್ತದೆ). ಮಾಜಿ ಮಂತ್ರಿಗಳು ಚಿಂತಿತರಾಗಬೇಕಿರುವುದು ಇಲ್ಲಿ ಜನಸಂಖ್ಯಾ ದರ ಕಡಿಮೆಯಾಗುತ್ತಿರುವ ಬಗ್ಗೆ ಹೊರತು ಜನಸಂಖ್ಯಾ ಸ್ಫೋಟದ ಬಗ್ಗೆ ಅಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜನಸಂಖ್ಯಾವಾರು ಮೀಸಲಾತಿ ಈ ಕ್ಷಣದ ತುರ್ತು: ಸದಾನಂದ ಗಂಗನಬೀಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...