Homeಮುಖಪುಟಅಶ್ಲೀಲ ಚಿತ್ರ ಪ್ರಕರಣ: ಉದ್ಯಮಿ ರಾಜ್ ಕುಂದ್ರಾಗೆ ಮಧ್ಯಂತರ ಜಾಮೀನು

ಅಶ್ಲೀಲ ಚಿತ್ರ ಪ್ರಕರಣ: ಉದ್ಯಮಿ ರಾಜ್ ಕುಂದ್ರಾಗೆ ಮಧ್ಯಂತರ ಜಾಮೀನು

- Advertisement -
- Advertisement -

ಅಶ್ಲೀಲ ಚಲನಚಿತ್ರಗಳ ತಯಾರಿಕೆ ಮತ್ತು ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ರಾಜ್ ಕುಂದ್ರಾ ಅವರನ್ನು ಬಂಧಿಸದಂತೆ ಬಾಂಬೆ ಹೈಕೋರ್ಟ್ ಬುಧವಾರ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದೆ.

ಉದ್ಯಮಿ ರಾಜ್ ಕುಂದ್ರಾ ಸಲ್ಲಿಸಿದ್ದ ಬಂಧನ ಪೂರ್ವ ಜಾಮೀನು ಅರ್ಜಿಗೆ ಆಗಸ್ಟ್ 25 ರಂದು ಪ್ರತಿಕ್ರಿಯೆ ನೀಡುವಂತೆ ನ್ಯಾಯಮೂರ್ತಿ ಎಸ್.ಕೆ ಶಿಂಧೆ ಅವರ ಏಕ ಪೀಠವು ಪೊಲೀಸರಿಗೆ ನಿರ್ದೇಶನ ನೀಡಿದೆ. “ಆಗಸ್ಟ್ 25ರ ವರೆಗೆ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಲಾಗಿದೆ” ಎಂದು ನ್ಯಾಯಮೂರ್ತಿ ಶಿಂಧೆ ಹೇಳಿದ್ದಾರೆ.

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಯವರ ಪತಿ ರಾಜ್ ಕುಂದ್ರಾ, ಅಶ್ಲೀಲ ಚಿತ್ರಗಳನ್ನು ತಯಾರಿಸಿ ಅವುಗಳನ್ನು ಆ್ಯಪ್‌ಗಳ ಮೂಲಕ ಪ್ರಸಾರ ಮಾಡಿದ್ದಾರೆ ಎಂದು ಆರೋಪಿಸಿ ಮುಂಬೈ ಪೊಲೀಸರು ಜುಲೈನಲ್ಲಿ ಬಂಧಿಸಿದ್ದಾರೆ. ರಾಜ್‌ ಕುಂದ್ರಾ ಪ್ರಸ್ತುತ ಜೈಲಿನಲ್ಲಿದ್ದಾರೆ.

2020 ರ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಷನ್ಸ್ ನ್ಯಾಯಾಲಯವು ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನಂತರ, ಕಳೆದ ವಾರ ರಾಜ್‌ ಕುಂದ್ರಾ ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಲ್ಲಿಸಿದರು.

ಇದನ್ನೂ ಓದಿ: ರಾಜ್ ಕುಂದ್ರಾ ಬಂಧನ: ಶೃಂಗಾರ ಅಶ್ಲೀಲವಲ್ಲ, ನನ್ನ ಪತಿ ನಿರಪರಾಧಿ ಎಂದ ನಟಿ ಶಿಲ್ಪಾ ಶೆಟ್ಟಿ

ಅರ್ಜಿಯಲ್ಲಿ, ಪ್ರಕರಣದ ಇನ್ನೊಬ್ಬ ಆರೋಪಿಗೆ ಜಾಮೀನು ನೀಡಲಾಗಿದೆ. ಆದ್ದರಿಂದ, ಅವರಿಗೂ ಸಮಾನವಾಗಿ ಜಾಮೀನು ನೀಡಬೇಕು ಎಂದು ಕುಂದ್ರಾ ಹೇಳಿಕೊಂಡಿದ್ದಾರೆ.

ಬುಧವಾರ ಹೈಕೋರ್ಟ್‌ನಲ್ಲಿ ರಾಜ್ ಕುಂದ್ರಾ ಅರ್ಜಿಯನ್ನು ವಿರೋಧಿಸಿ, ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಜಕ್ತಾ ಶಿಂಧೆ ಪ್ರಕರಣದಲ್ಲಿ ಕುಂದ್ರಾ ಪಾತ್ರವು ಇತರ ಆರೋಪಿಗಳಿಗಿಂತ ಭಿನ್ನವಾಗಿದೆ ಎಂದು ವಾದಿಸಿದ್ದರು.

ರಾಜ್ ಕುಂದ್ರಾ ಬಂಧನದ ಬಳಿಕ ವಿಚಾರಣೆಗೆ ಹಾಜರಾಗಿದ್ದ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ,  ‘ಹಾಟ್‌ಶಾಟ್‌’ ಆಪ್‌ಗಳಲ್ಲಿನ ವಿಷಯದ ಬಗ್ಗೆ ತಿಳಿದಿಲ್ಲ. ಶೃಂಗಾರವು ಅಶ್ಲೀಲತೆಗಿಂತ ವಿಭಿನ್ನವಾದದ್ದು, ನನ್ನ ಪತಿ ನಿರಪರಾಧಿ ಎಂದಿದ್ದರು.

ಫೆಬ್ರವರಿ 4 ರಂದು ಮುಂಬೈನ ಉಪನಗರ ಮಾಲ್ವಾನಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ. ಮಹಿಳೆಯೊಬ್ಬರು ಪೊಲೀಸರಿಗೆ ರಾಜ್ ಕುಂದ್ರಾ ವಿರುದ್ದ, ಉದ್ಯೋಗದ ಭರವಸೆ ನೀಡಿದ ನಂತರ ಅಶ್ಲೀಲ ಚಿತ್ರವೊಂದರಲ್ಲಿ ಭಾಗವಹಿಸಲು ಒತ್ತಾಯಿಸಲಾಯಿತು ಎಂದು ಆರೋಪ ಮಾಡಿದ ನಂತರ ರಾಜ್‌ ಕುಂದ್ರಾ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.


ಇದನ್ನೂ ಓದಿ: ಅಶ್ಲೀಲ ಚಿತ್ರ ತಯಾರಿಸಿ ಪ್ರಸಾರ: ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್‌ ಕುಂದ್ರಾ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ಯಾಲೆಸ್ತೀನ್‌ಗೆ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ನೀಡುವ ಪ್ರಯತ್ನ ಬೆಂಬಲಿಸಿದ ಭಾರತ

0
ವಿಶ್ವಸಂಸ್ಥೆಯ ಸಂಪೂರ್ಣ ಸದಸ್ಯತ್ವ ಪಡೆಯುವ ಪ್ಯಾಲೆಸ್ತೀನ್‌ನ ಮನವಿಯನ್ನು ಮರು ಪರಿಶೀಲಿಸಿ ಅನುಮೋದಿಸುವ ವಿಶ್ವಾಸವಿದೆ ಎಂದು ಭಾರತ ಬುಧವಾರ ಹೇಳಿದೆ. ಈ ಮೂಲಕ ಪ್ಯಾಲೆಸ್ತೀನ್‌ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ಪಡೆಯುವುದಕ್ಕೆ ಬೆಂಬಲ ವ್ಯಕ್ತಪಡಿಸಿದೆ. ಇಸ್ರೇಲ್ ಮತ್ತು...