ಅಶ್ಲೀಲ ಚಿತ್ರ ತಯಾರಿಕೆ, ಪ್ರಸಾರ ಪ್ರಕರಣ: ಉದ್ಯಮಿ ರಾಜ್ ಕುಂದ್ರಾಗೆ ಜಾಮೀನು

ಅಶ್ಲೀಲ ಚಿತ್ರಗಳನ್ನು ತಯಾರಿಸುವುದು ಮತ್ತು ಮೊಬೈಲ್ ಆ್ಯಪ್‌ಗಳ ಮೂಲಕ ಅದನ್ನು ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿದ್ದ ಬಾಲಿವುಡ್‌‌‌‌ ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರಾ ಅವರಿಗೆ ಮುಂಬೈ ನ್ಯಾಯಾಲಯ ಜಾಮೀನು ನೀಡಿದೆ.

ಮುಂಬೈ ಪೊಲೀಸರಿಂದ ಬಂಧನಕ್ಕೆ ಒಳಗಾಗಿ ಎರಡು ತಿಂಗಳ ನಂತರ ಉದ್ಯಮಿ ರಾಜ್ ಕುಂದ್ರಾ ಅವರಿಗೆ ಮುಂಬೈ ನ್ಯಾಯಾಲಯ ಜಾಮೀನು ನೀಡಿದೆ. ಜೊತೆಗೆ 50,000 ರೂಪಾಯಿ ಶ್ಯೂರಿಟಿ ನೀಡುವಂತೆ ಷರತ್ತು ವಿಧಿಸಿದೆ.

ಕಳೆದ ಗುರುವಾರ, ಮುಂಬೈ ಪೊಲೀಸರು 1,400 ಪುಟಗಳ ಚಾರ್ಜ್ ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಇದನ್ನೂ ಓದಿ: ಭೂಗತ ಜಗತ್ತಿನೊಂದಿಗೆ ವ್ಯವಹಾರ ನಂಟು: ಶಿಲ್ಪಾಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರಾಗೆ ಇಡಿ ಉರುಳು

ತನ್ನನ್ನು ಪ್ರಕರಣದಲ್ಲಿ “ಬಲಿಪಶು” ಮಾಡಲಾಗುತ್ತಿದೆ ಮತ್ತು ಚಾರ್ಜ್ ಶೀಟ್‌ನಲ್ಲಿ ತಾನು ಅಶ್ಲೀಲ ಚಿತ್ರಗಳನ್ನು ರಚಿಸುವಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ರಾಜ್ ಕುಂದ್ರಾ  ಜಾಮೀನು ಅರ್ಜಿಯಲ್ಲಿ ತಿಳಿಸಿದ್ದರು.

ಅಶ್ಲೀಲ ಚಿತ್ರಗಳ ತಯಾರಿಕೆ ಮತ್ತು ಅವುಗಳನ್ನು ಹಾಟ್‌ಶಾಟ್‌ ಸೇರಿದಂತೆ ಕೆಲವು ಅಪ್ಲಿಕೇಶನ್‌ಗಳ ಮೂಲಕ ಪ್ರಸಾರ ಮಾಡುವ ಬಗ್ಗೆ, ಫೆಬ್ರವರಿಯಲ್ಲಿ ಮುಂಬಯಿಯ ಅಪರಾಧ ವಿಭಾಗದಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ರಾಜ್ ಕುಂದ್ರಾ ಅವರನ್ನು ಜುಲೈ 19 ರಂದು ಬಂಧಿಸಿದ್ದೇವೆ. ಈ ಬಗ್ಗೆ ನಮಲ್ಲಿ ಸಾಕಷ್ಟು ಪುರಾವೆಗಳಿವೆ” ಎಂದು ಮುಂಬೈ ಪೊಲೀಸ್ ಆಯುಕ್ತರು ಹೇಳಿಕೆಯಲ್ಲಿ ತಿಳಿಸಿದ್ದರು.

ನಟಿ ಶಿಲ್ಪಾಶೆಟ್ಟಿ ಕೂಡ, “ಹಾಟ್‌ಶಾಟ್‌ ಆಪ್‌ಗಳಲ್ಲಿನ ವಿಷಯದ ಬಗ್ಗೆ ತಿಳಿದಿಲ್ಲ. ಶೃಂಗಾರವು ಅಶ್ಲೀಲತೆಗಿಂತ ವಿಭಿನ್ನವಾದದ್ದು, ನನ್ನ ಪತಿ ನಿರಪರಾಧಿ. ಪತಿ ರಾಜ್ ಕುಂದ್ರಾ ಯಾವುದೇ ರೀತಿಯ ಅಶ್ಲೀಲ ಚಿತ್ರ ನಿರ್ಮಾಣದಲ್ಲಿ ಭಾಗಿಯಾಗಿರಲಿಲ್ಲ” ಎಂದು ವಿಚಾರಣೆಗೆ ಹಾಜರಾಗಿ ತಿಳಿಸಿದ್ದರು.


ಇದನ್ನೂ ಓದಿ: ರಾಜ್ ಕುಂದ್ರಾ ಬಂಧನ: ಶೃಂಗಾರ ಅಶ್ಲೀಲವಲ್ಲ, ನನ್ನ ಪತಿ ನಿರಪರಾಧಿ ಎಂದ ನಟಿ ಶಿಲ್ಪಾ ಶೆಟ್ಟಿ

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
Avatar
ನಾನು ಗೌರಿ ಡೆಸ್ಕ್
+ posts

LEAVE A REPLY

Please enter your comment!
Please enter your name here