Homeಕರ್ನಾಟಕಖಾತೆ ಬದಲಾವಣೆ: ಯಡಿಯೂರಪ್ಪಗೆ ಸೆಡ್ಡು ಹೊಡೆದು ಶೆಟ್ಟರ್ ಪಾಳಯಕ್ಕೆ ಜಿಗಿದರೆ ಮಾಧುಸ್ವಾಮಿ?

ಖಾತೆ ಬದಲಾವಣೆ: ಯಡಿಯೂರಪ್ಪಗೆ ಸೆಡ್ಡು ಹೊಡೆದು ಶೆಟ್ಟರ್ ಪಾಳಯಕ್ಕೆ ಜಿಗಿದರೆ ಮಾಧುಸ್ವಾಮಿ?

- Advertisement -
- Advertisement -

ಸಚಿವ ಜೆ.ಸಿ.ಮಾಧುಸ್ವಾಮಿ ಬಳಿಯಿದ್ದ ಬಲಿಷ್ಠ ಖಾತೆಗೆ ಕತ್ತರಿ ಬಿದ್ದಿದೆ. ರೈತರು ಮತ್ತು ಅಧಿಕಾರಿಗಳ ವಿರುದ್ಧ ಬೈಯ್ದು ವಿವಾದ ಮೇಲೆಳೆದುಕೊಂಡಿದ್ದ ಅವರ ಖಾತೆ ಬದಲಾವಣೆಯಾಗಿದೆ. “ರ್ಯಾಸ್ಕಲ್, ನಿನ್ನ ಹೆಂಡ್ತಿ ಸೀರೆ ಒಗೆಯೋಕೆ ಯಾವ್ ಸೋಪ್ ಬಳಸ್ತೀಯ, ಯಾವ ಬೋಸುಡಿಕೆ ಮಗ ನನ್ನ ಕೇಳಿದ್ದೀರಾ” ಎಂಬ ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಟೀಕೆಗೆ ಗುರಿಯಾಗಿ, ಸರ್ಕಾರಕ್ಕೆ ಮುಜುಗರ ತಂದೊಡ್ಡಿದ್ದ ಮಾಧುಸ್ವಾಮಿಯವರ ಈ ನಡವಳಿಕೆಗೆ, ಅಧಿಕಾರಿ ವರ್ಗ ಮತ್ತು ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದಕ್ಕೆ ಸ್ಪಂದಿಸಿದಂತಿರುವ ಮುಖ್ಯಮಂತ್ರಿ ಯಡಿಯೂರಪ್ಪ ಸಂಸದೀಯ ವ್ಯವಹಾರ ಸಚಿವರು ತಮ್ಮ ನಡವಳಿಕೆಯನ್ನು ತಿದ್ದಿಕೊಳ್ಳಬೇಕೆಂಬ ಸಂದೇಶವನ್ನು ರವಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಕೋಲಾರ ಮತ್ತು ತುಮಕೂರು ನಗರದಲ್ಲಿ ಮಾಧುಸ್ವಾಮಿ ಅವರು ರೈತ ಮಹಿಳೆ, ರೈತ ಮುಖಂಡರು ಹಾಗೂ ಅಧಿಕಾರಿಯೊಬ್ಬರನ್ನು ಬೈಯ್ಯುವ ಮೂಲಕ ಸಾರ್ವಜನಿಕರ ಟೀಕೆಗೆ ಗುರಿಯಾಗಿದ್ದರು. ಮಾಧ್ಯಮಗಳಲ್ಲಿ ಅವರ ಹೇಳಿಕೆಗಳು ಪ್ರಸಾರಗೊಂಡು ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರ ತೀವ್ರ ಮುಜುಗರ ಎದುರಿಸಬೇಕಾಗಿ ಬಂತು. ಆ ಮುಜುಗರದಿಂದ ಯಾರೂ ಸಮರ್ಥಿಸಿಕೊಳ್ಳಲಾರದಂತಹ ಪರಿಸ್ಥಿತಿಯೂ ನಿರ್ಮಾಣವಾಯಿತು. ಹಾಗಾಗಿ ಮಾಧುಸ್ವಾಮಿ ಅವರನ್ನು ಸಂಪುಟದಿಂದ ಕೈಬಿಡುವ ಮಾತುಗಳು ಹರಿದಾಡಿದವು. ಕೊನೆಗೂ ಸಂಪುಟ ವಿಸ್ತರಣೆ/ಪುನರ್ ರಚನೆಯೆಂಬ ಗಜಪ್ರಸವ ಆಗಿದೆ. ಮಾಧುಸ್ವಾಮಿ ಬಳಿ ಇದ್ದ ಕಾನೂನು ಸಚಿವ ಖಾತೆಯನ್ನು ಹಿಂಪಡೆಯಲಾಗಿದೆ. ಜೊತೆಗೆ ಮಾಧುಸ್ವಾಮಿಯವರನ್ನು ಯಡಿಯೂರಪ್ಪನವರ ಆಪ್ತ ವಲಯದಿಂದ ದೂರ ಇಟ್ಟು ಹಿಂಬಡ್ತಿ ನೀಡಲಾಗಿದೆ ಎನ್ನಲಾಗಿದೆ.

ಆರ್.ಎಸ್.ಎಸ್ ಹಿನ್ನೆಲೆ ಇಲ್ಲದ ಜೆ.ಸಿ. ಮಾಧುಸ್ವಾಮಿ ಯಡಿಯೂರಪ್ಪನವರ ಜಾತಿ ಕಾರಣಕ್ಕಾಗಿ ಜೆಡಿಯು ತೊರೆದು ಕೆಜೆಪಿ ಸೇರಿದರು. ಕೆಜೆಪಿ ಬಿಜೆಪಿ ಜೊತೆ ವಿಲೀನಗೊಂಡ ಮೇಲೆ ಅವರೂ ಬಿಜೆಪಿ ಸೇರಿದರು. ಬಿ.ಎಸ್.ಯಡಿಯೂರಪ್ಪ ಆಪ್ತ ವಲಯದಲ್ಲಿ ಕಾಣಿಸಿಕೊಂಡರು. ಜೆಡಿಎಸ್-ಕಾಂಗ್ರೆಸ್ ಸರ್ಕಾರ ಪತನಗೊಂಡು ಬಿಜೆಪಿ ಸರ್ಕಾರ ರಚನೆಯಾದ ವೇಳೆ ಹಲವು ಬಿಜೆಪಿ ನಾಯಕರ ವಿರೋಧದ ನಡುವೆಯೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಸ್ಥಾನವೂ ದೊರೆಯಿತು. ಸದನದಲ್ಲಿ ಸರ್ಕಾರವನ್ನು ಬಲವಾಗಿ ಸಮರ್ಥಿಸಿ ಕೊಂಡರು. ಮೂಲ ಬಿಜೆಪಿ ಸಚಿವರು ಸರ್ಕಾರದ ಬೆಂಬಲಕ್ಕೆ ಬರಲೇ ಇಲ್ಲ. ನಂತರ ಸಚಿವ ಮಾಧುಸ್ವಾಮಿಯ ಸಾರ್ವಜನಿಕ ನಡವಳಿಕೆಗಳು ಟೀಕೆಗೆ ಗುರಿಯಾದವು. ಇದನ್ನೇ ಮೂಲ ಬಿಜೆಪಿಗರೂ ಕಾಯುತ್ತಿದ್ದರು. ಈಗ ಅವರ ಖಾತೆಯನ್ನು ಕಿತ್ತುಕೊಳ್ಳಲಾಗಿದೆ. ಇದು ಮೂಲ ಬಿಜೆಪಿಗರಿಗೆ ಖುಷಿಯನ್ನೇ ತಂದಿದೆ.

ಇದನ್ನೂ ಓದಿ: ಸಂಪುಟ ವಿಸ್ತರಣೆ: ಅಮಿತ್ ಶಾ ಬೆದರಿಕೆಗೂ ಬಗ್ಗದೆ ಆಕ್ರೋಶ ಹೊರಹಾಕಿದ ಅತೃಪ್ತರು!

ತನ್ನ ಬಳಿಯಿದ್ದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆಯನ್ನು ಕಿತ್ತುಕೊಂಡು ವೈದ್ಯಕೀಯ, ಕನ್ನಡ ಮತ್ತು ಸಂಸ್ಕೃತಿ ಖಾತೆಯನ್ನು ನೀಡಿರುವುದಕ್ಕೆ ಸಚಿವ ಜೆ.ಸಿ.ಮಾಧುಸ್ವಾಮಿ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಖಾತೆ ಬದಲಾವಣೆ ಸುಳಿವು ದೊರೆಯುತ್ತಿದ್ದಂತೆಯೇ ತುಮಕೂರು ಜಿಲ್ಲೆಗೆ ಆಗಮಿಸಿ ಮುಖ್ಯಮಂತ್ರಿಗಳಿಂದ ಅಂತರವನ್ನು ಕಾಯ್ದುಕೊಂಡಿದ್ದಾರೆ. ಜನವರಿ 21ರಂದು ಸಿದ್ದಗಂಗಾ ಮಠದಲ್ಲಿ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಯವರ ಎರಡನೇ ಪುಣ್ಯಸ್ಮರಣೆ ಕಾರ್ಯಕ್ರಮವಿತ್ತು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೂಡ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಆದರೆ ಸಚಿವ ಜೆ.ಸಿ.ಮಾಧುಸ್ವಾಮಿ ಸಿದ್ದಗಂಗಾ ಮಠಕ್ಕೆ ಬರಲೇ ಇಲ್ಲ. ಈ ಮೂಲಕ ಯಡಿಯೂರಪ್ಪ ಅವರಿಂದ ಅಂತರ ಕಾಯ್ದುಕೊಂಡರು. ಸಿಎಂಗೆ ಎಚ್ಚರಿಕೆ ಸಂದೇಶ ರವಾನಿಸುವ ಕೆಲಸ ಮಾಡಿದರು.

ಅಷ್ಟೇ ಅಲ್ಲ, ತುಮಕೂರಿನ ವಸಂತನರಸಾಪುರದಲ್ಲಿ ನಡೆದ ಉದ್ಯೋಗ ಭವನ ಶಂಕುಸ್ಥಾಪನೆ ಸಮಾರಂಭದಲ್ಲಿ ಪಾಲ್ಗೊಂಡರು. ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್‌ ಉದ್ಘಾಟಿಸಿದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ತಾನು ನಿಮ್ಮೊಂದಿಗೆ ಇಲ್ಲ ಎಂಬ ಸಂದೇಶವನ್ನು ಯಡಿಯೂರಪ್ಪನವರಿಗೆ ರವಾನಿಸಿದರು. ಜಗದೀಶ್ ಶೆಟ್ಟರ್ ಜೊತೆಯಲ್ಲಿ ಕಾಣಿಸಿಕೊಂಡ ಮಾಧುಸ್ವಾಮಿ ಭಿನ್ನಮತಕ್ಕೆ ಮತ್ತಷ್ಟು ಬಲ ತುಂಬುವಂತಹ ಕೆಲಸ ಮಾಡಿದರು. ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಸಿದ್ದಗಂಗಾ ಮಠದಲ್ಲಿ ನಡೆದ ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಇದ್ದು ಅವರನ್ನು ಉಪಚರಿಸುವಂತಹ ಕೆಲಸ ಮಾಡಬೇಕಿತ್ತು. ಅದು ಆಗಲಿಲ್ಲ.

ಇದನ್ನೂ ಓದಿ: ನಾನೂ ಬಿಜೆಪಿಗೆ ಹೋಗಿದ್ದರೆ ಮೈಸೂರಿನ ಉಸ್ತುವಾರಿ ಸಚಿವನಾಗಿರುತ್ತಿದ್ದೆ: ಜಿ.ಟಿ ದೇವೇಗೌಡ

ಜಗದೀಶ್ ಶೆಟ್ಟರ್ ಭಾಗವಹಿಸಿದ್ದ ಸಮಾರಂಭದಲ್ಲಿ ಸಂಸದ ಜಿ.ಎಸ್.ಬಸವರಾಜು, ನಿವೃತ್ತ ಐಎಎಸ್ ಅಧಿಕಾರಿ ಡಾ.ಸೋಮಶೇಖರ್ ಪಾಲ್ಗೊಂಡಿದ್ದರು. ಸೋಮಶೇಖರ್ ಅವರನ್ನು ಮುಖ್ಯಮಂತ್ರಿಗಳು ಸಂಧಾನಕ್ಕೆ ಕಳಿಸಿದ್ದರೇ ಎಂಬುದು ಖಚಿತವಾಗಿಲ್ಲ. ಡಾ.ಸೋಮಶೇಖರ್ ಮುಖ್ಯಮಂತ್ರಿಗಳ ಆಪ್ತವಲಯದಲ್ಲಿ ಇರುವವರು. ಹಾಗಾಗಿ ಜೆ.ಸಿ.ಮಾಧುಸ್ವಾಮಿ ಜೊತೆ ಮಾತುಕತೆ ನಡೆಸಿದರೆ ಅಥವಾ ಮುಖ್ಯಮಂತ್ರಿ ನೀಡಿರುವ ಮಾಹಿತಿಯನ್ನು ಮಾಧುಸ್ವಾಮಿ ಅವರಿಗೆ ತಲುಪಿಸಿದರೇ ಎಂಬುದು ತಿಳಿದುಬಂದಿಲ್ಲ. ಆದರೆ ರಾಯಭಾರಿ ಕೆಲಸ ಮಾಡಿರುವುದಂತೂ ಗುಟ್ಟಾಗಿ ಉಳಿದಿಲ್ಲ.

ಮೂಲ ಬಿಜೆಪಿಗರಲ್ಲಿ ಸಂತಸದ ವಾತಾವರಣ ಸೃಷ್ಟಿಯಾಗಿದ್ದರೆ, ವಲಸೆ ಬಿಜೆಪಿಗರು/ಬೇರೆ ಪಕ್ಷಗಳಿಂದ ಕೇಸರಿ ಪಾಳಯ ಸೇರಿದವರು ಸಂಕಟದ ದಿನಗಳನ್ನು ಎದುರಿಸಬೇಕಾಗಿ ಬಂದಿದೆ. ಯಾವುದೇ ವಿವಾದಕ್ಕೆ ಈಡಾಗದೇ ಮುಖ್ಯಮಂತ್ರಿಗಳ ಜೊತೆ ಗುರುತಿಸಿಕೊಂಡಿರುವ ಬಸವರಾಜ ಬೊಮ್ಮಾಯಿ, ಉಮೇಶ್ ಕತ್ತಿ, ಮುರುಗೇಶ್ ನಿರಾಣಿ ಅವರಿಗೆ ಪ್ರಬಲ ಖಾತೆ ನೀಡಿ ಆಪ್ತ ವಲಯಕ್ಕೆ ಫೆವಿಕಲ್ ಹಾಕಿದ್ದಾರೆ. ಮಾಧುಸ್ವಾಮಿ ಅವರನ್ನು ಆಪ್ತ ವಲಯದಿಂದ ದೂರ ತಳ್ಳುವ ಕೆಲಸ ಮಾಡಿದ್ದಾರೆ ಎಂಬ ಮಾತುಗಳು ತುಮಕೂರು ಜಿಲ್ಲೆಯಲ್ಲಿ ಕೇಳಿಬರುತ್ತಿವೆ.


ಇದನ್ನೂ ಓದಿ: ಮಾನಸಿಕ ದೌರ್ಬಲ್ಯವಿರುವ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ: ನಾಲಗೆ ಹರಿಬಿಟ್ಟ ಬಿ.ಸಿ ಪಾಟೀಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...