Homeಕರೋನಾ ತಲ್ಲಣಸಚಿವ ಡಾ.ಕೆ.ಸುಧಾಕರ್‌ ತೆಕ್ಕೆಗೆ ಆರೋಗ್ಯ ಖಾತೆ: ಶ್ರೀರಾಮುಲು ಗರಂ

ಸಚಿವ ಡಾ.ಕೆ.ಸುಧಾಕರ್‌ ತೆಕ್ಕೆಗೆ ಆರೋಗ್ಯ ಖಾತೆ: ಶ್ರೀರಾಮುಲು ಗರಂ

ಕೋವಿಡ್‌ ಬಗ್ಗೆ ವೈಜ್ಞಾನಿಕ ಮಾಹಿತಿಯ ಜತೆಗೆ ವೈದ್ಯರು ಮತ್ತು ಅಧಿಕಾರಿಗಳ ಜತೆ ಸಮಾಲೋಚನೆ ನಡೆಸುವ ಸಾಮರ್ಥ್ಯ ಇರುವವರಿಗೆ ಆರೋಗ್ಯ ಖಾತೆ ವಹಿಸುವ ಬಗ್ಗೆ ಚರ್ಚೆಗಳು ನಡೆದಿದ್ದವು ಎನ್ನಲಾಗಿದೆ.

- Advertisement -
- Advertisement -

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಸಂಪುಟದಲ್ಲಿ ಮಹತ್ವದ ಬದಲಾವಣೆ ಮಾಡಿದ್ದಾರೆ. ಕೊರೊನಾ ನಿರ್ವಹಣೆಯಲ್ಲಿ ಗೊಂದಲ ಹೆಚ್ಚಾಗುತ್ತಿರುವುದರಿಂದ ಆರೋಗ್ಯ ಖಾತೆ ಬಿ.ಶ್ರೀರಾಮುಲು ಅವರಿಂದ ಹಿಂದಕ್ಕೆ ಪಡೆದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಅವರಿಗೆ ನೀಡಲಾಗಿದೆ.

ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರಿಗೆ ಸಮಾಜ ಕಲ್ಯಾಣ ಇಲಾಖೆ ನೀಡಲಾಗಿದೆ ಎಂದು ಎಎನ್‌ಐ ವರದಿ ಮಾಡಿದೆ.

ಕೊರೊನಾ ಸಾಂಕ್ರಾಮಿಕವನ್ನು ಈಗ ಇಬ್ಬರು ಸಚಿವರು ನಿರ್ವಹಿಸುತ್ತಿದ್ದು, ಪರಸ್ಪರ ವಿರೋಧಾಭಾಸದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕೋವಿಡ್‌ ನಿಯಂತ್ರಣ ಆಗದಿರುವುದು ಮುಖ್ಯಮಂತ್ರಿಯನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಈ ಹಿನ್ನೆಲೆ ಕೋವಿಡ್‌ ಬಗ್ಗೆ ವೈಜ್ಞಾನಿಕ ಮಾಹಿತಿಯ ಜತೆಗೆ ವೈದ್ಯರು ಮತ್ತು ಅಧಿಕಾರಿಗಳ ಜತೆ ಸಮಾಲೋಚನೆ ನಡೆಸುವ ಸಾಮರ್ಥ್ಯ ಇರುವವರಿಗೆ ಇಲಾಖೆಯನ್ನು ವಹಿಸುವ ಬಗ್ಗೆ ಚರ್ಚೆಗಳು ನಡೆದಿದ್ದವು ಎನ್ನಲಾಗಿದೆ.

ನಿನ್ನೆ ಬೆಳಗ್ಗೆ ಮುಖ್ಯಮಂತ್ರಿ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ನಡೆದ ಕೋವಿಡ್‌ ಕುರಿತ ಸಭೆಗೆ ಆರೋಗ್ಯ ಸಚಿವ ಶ್ರೀರಾಮುಲು ಬಿಟ್ಟು, ಡಾ.ಕೆ. ಸುಧಾಕರ್‌ ಅವರಿಗೆ ಮಾತ್ರ ಆಹ್ವಾನವಿತ್ತು.

ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಅಪರ ಮುಖ್ಯಕಾರ್ಯದರ್ಶಿ ಶ್ರೀ ಜಾವೇದ್ ಅಖ್ತರ್, ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್ ಕೂಡ ನಿನ್ನೆ ಉಪಸ್ಥಿತರಿದ್ದರು. ಈ ಸಭೆ ಕೂಡ ಆರೋಗ್ಯ ಖಾತೆ ಸುಧಾಕರ್‌ ಅವರಿಗೆ ಸಿಗುವ ಸೂಚನೆ ನೀಡಿತ್ತು.

“ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ಖಾತೆ ಬದಲಾವಣೆ ಮಾಡಬಾರದಿತ್ತು. ಈಗ ಜನರಲ್ಲಿ ನಾನು ಆ ಖಾತೆ ನಿರ್ವಹಿಸಲು ಅಸಮರ್ಥ ಎಂಬ ಭಾವನೆ ಬರುತ್ತದೆ. ಈ ಕುರಿತು ಮುಖ್ಯಮಂತ್ರಿಗಳ ಜೊತೆ ಮಾತನಾಡುತ್ತೇನೆ ಎಂದು ತಮ್ಮ ಆಪ್ತರ ಬಳಿ ಶ್ರೀರಾಮುಲು ಹೇಳಿಕೊಂಡಿದ್ದಾರೆ” ಎನ್ನಲಾಗಿದೆ.


ಇದನ್ನೂ ಓದಿ: ಶಿಕ್ಷಕರಿಗೆ ಮೂರು ವಾರಗಳ ರಜೆ ನೀಡಿದ ರಾಜ್ಯ ಸರ್ಕಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮೆರಿಕದ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಬಗ್ಗೆ ಸ್ಯಾಮ್ ಪಿತ್ರೋಡಾ ಕೊಟ್ಟಿದ್ದ ವಿವರಣೆಯನ್ನು ‘ರಾಜಕೀಯ ಅಸ್ತ್ರ’...

0
ಲೋಕಸಭೆ ಚುನಾವಣೆ ಹಿನ್ನೆಲೆ ಪ್ರಧಾನಿ ಮೋದಿ ಹಾದಿಯಾಗಿ ಬಿಜೆಪಿ ನಾಯಕರು ವಿವಾದಾತ್ಮಕ ಹೇಳಿಕೆ ಮೂಲಕ ಕಾಂಗ್ರೆಸ್‌ ಪಕ್ಷವನ್ನು ಮತ್ತು ಕಾಂಗ್ರೆಸ್‌ನ ಪ್ರಣಾಳಿಕೆ ವಿರುದ್ಧ ವಾಗ್ಧಾಳಿ ನಡೆಸುತ್ತಾ ಬಂದಿದ್ದಾರೆ. ಈ ಮಧ್ಯೆ ಭಾರತೀಯ ಸಾಗರೋತ್ತರ...