Homeಕರ್ನಾಟಕPoSH ಸಮಿತಿ ರಚನೆ ಬಗ್ಗೆ 15 ದಿನಗಳ ಕಾಲಾವಕಾಶ ಕೋರಿದ ಕರ್ನಾಟಕ ಫಿಲ್ಮ್ ಚೇಂಬರ್

PoSH ಸಮಿತಿ ರಚನೆ ಬಗ್ಗೆ 15 ದಿನಗಳ ಕಾಲಾವಕಾಶ ಕೋರಿದ ಕರ್ನಾಟಕ ಫಿಲ್ಮ್ ಚೇಂಬರ್

- Advertisement -
- Advertisement -

ಲೈಂಗಿಕ ಕಿರುಕುಳ ತಡೆ ಕಾಯ್ದೆ(PoSH)ಗೆ ಅನುಗುಣವಾಗಿ ಕನ್ನಡ ಚಲನಚಿತ್ರೋದ್ಯಮದಲ್ಲಿ ಆಂತರಿಕ ಸಮಿತಿ(IC)ಯನ್ನು ಸ್ಥಾಪಿಸಬೇಕೆಂಬ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಬೇಡಿಕೆಗೆ ಪ್ರತಿಕ್ರಿಯಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (KFCC) ಹೆಚ್ಚುವರಿ 15 ದಿನಗಳ ಕಾಲಾವಕಾಶವನ್ನು ಕೋರಿದೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಲೈಂಗಿಕ ಕಿರುಕುಳ ತಡೆಗಟ್ಟುವ ಸಮಿತಿಯನ್ನು ರಚಿಸುವ ಕ್ರಿಯಾ ಯೋಜನೆಯನ್ನು ರೂಪಿಸಲು ಅಥವಾ ಅದನ್ನು ರಚಿಸಲು ಯಾಕೆ ಸಾಧ್ಯವಾವುದಿಲ್ಲ ಎಂಬ ಕಾರಣಗಳನ್ನು ನೀಡಲು ಕೆಎಫ್‌ಸಿಸಿಗೆ ಸೆಪ್ಟೆಂಬರ್ 16 ರಂದು 15 ದಿನಗಳ ಗಡುವನ್ನು ನೀಡಿದ್ದರು.

ಇದನ್ನೂ ಓದಿ: ಗಾಜಾ | ಮಸೀದಿ ಮೇಲೆ ಇಸ್ರೇಲ್‌ ವೈಮಾನಿಕ ದಾಳಿ; ಕನಿಷ್ಠ 21 ಜನರು ಸಾವು

ಚಿತ್ರೋದ್ಯಮದ ಪ್ರತಿನಿಧಿಗಳೊಂದಿಗೆ ಚರ್ಚಿಸಿದ ನಂತರ, ಮಹಿಳಾ ಆಯೋಗವು ಸೆಪ್ಟೆಂಬರ್ 18 ರಂದು ಕೆಎಫ್‌ಸಿಸಿಗೆ ಪತ್ರವನ್ನು ಕಳುಹಿಸಿದ್ದು, ಕನ್ನಡ ಚಲನಚಿತ್ರೋದ್ಯಮದಲ್ಲಿ ಕೆಲಸ ಮಾಡುವ ಮಹಿಳೆಯರ ಸುರಕ್ಷತೆ, ಹಕ್ಕುಗಳು ಮತ್ತು ಕಲ್ಯಾಣದ ಬಗ್ಗೆ ವಿವರವಾದ ಮಾಹಿತಿಯನ್ನು ಕೋರಿದೆ.

ಕೇರಳದಲ್ಲಿ ಹೇಮಾ ಸಮಿತಿಯ ವರದಿಯು ಮಲಯಾಳಂ ಚಲನಚಿತ್ರೋದ್ಯಮದಲ್ಲಿ ಪ್ರಚಲಿತದಲ್ಲಿರುವ ಅಸಹನೀಯ ಪರಿಸ್ಥಿತಿಗಳು ಮತ್ತು ಲೈಂಗಿಕ ಕಿರುಕುಳವನ್ನು ಬಹಿರಂಗಪಡಿಸಿದ ಹಿನ್ನೆಲೆಯಲ್ಲಿ ಕನ್ನಡ ಚಲನಚಿತ್ರೋದ್ಯಮದಲ್ಲಿ ಐಸಿ ಸ್ಥಾಪನೆಗೆ ಆಯೋಗವು ಪ್ರಸ್ತಾಪಿಸಿತ್ತು. ಕೆಲಸದ ಸ್ಥಳಗಳಲ್ಲಿ IC ಗಳ ರಚನೆ ಮಾಡುವುದು PoSH ಕಾಯಿದೆಯ ಪ್ರಕಾರ ಕಡ್ಡಾಯವಾಗಿದೆ.

ಕೆಎಫ್‌ಸಿಸಿ 15 ದಿನಗಳ ವಿಸ್ತರಣೆಯನ್ನು ಕೇಳಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ದಿ ನ್ಯೂಸ್‌ ಮಿನಿಟ್‌ ವರದಿ ಮಾಡಿದ್ದು, ಇದರ ನಂತರ ಆಯೋಗವು ತನ್ನ ಮುಂದಿನ ಕ್ರಮಗಳನ್ನು ನಿರ್ಧರಿಸುತ್ತದೆ. ಈ ನಡುವೆ ಕೆಎಫ್‌ಸಿಸಿ ಅಧ್ಯಕ್ಷ ಎನ್‌ಎಂ ಸುರೇಶ್ ಅವರು ಸಂದರ್ಶನವೊಂದರಲ್ಲಿ ಕನ್ನಡ ಚಿತ್ರರಂಗದಲ್ಲಿ ಹೇಮಾ ಸಮಿತಿಯಂತಹ ಸಮಿತಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಮಾಜಿ ಶಾಸಕ ಮೊಹಿಯುದ್ದೀನ್ ಬಾವಾರ ಸಹೋದರ, ಉದ್ಯಮಿ ಮುಮ್ತಾಜ್ ಅಲಿ ನಾಪತ್ತೆ!

ಕರ್ನಾಟಕ ಸರ್ಕಾರ ಹೇಮಾ ಮಾದರಿ ಸಮಿತಿ  ಸ್ಥಾಪಿಸಲು ನಿರ್ಧರಿಸಿದರೆ ಕೆಎಫ್‌ಸಿಸಿ ಅದನ್ನು ಸ್ವಾಗತಿಸುತ್ತದೆ ಎಂದು ಅವರು ಹೇಳಿದ್ದಾರೆ. ಆದಾಗ್ಯೂ, ಅದೇ ದಿನ ಅವರು ನೀಡಿದ್ದ ಮತ್ತೊಂದು ಸಂದರ್ಶನದಲ್ಲಿ, ಅಂತಹ ಸಮಿತಿಯ ರಚನೆಯ ಬಗ್ಗೆ ಸಂದೇಹ ವ್ಯಕ್ತಪಡಿಸಿದ್ದು, ಕೆಎಫ್‌ಸಿಸಿ ಈಗಾಗಲೇ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅದರನ್ನು ಪರಿಹರಿಸುತ್ತಿರುವಾಗಲೆ ಹೆಚ್ಚುವರಿ ಸಮಿತಿಯ ಅಗತ್ಯವನ್ನು ಪ್ರಶ್ನಿಸಿದ್ದಾರೆ.

ಕೆಎಸ್‌ಸಿಸಿ ಕಾಲಾವಕಾಶ ಕೇಳಿರುವ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ, ಅವರು ಸಮಯಾವಕಾಶ ಕೇಳಿದ್ದು, ನಾವು ಅದಕ್ಕೆ ‘ಓಕೆ’ ಎಂದು ಹೇಳಿದ್ದೇವೆ. ನಾವು ಕೇಳಿರುವ ಪ್ರತಿಯೊಂದು ಅಂಶಗಳನ್ನು ಉಲ್ಲೇಖಿಸಿ ಅವರು ಉತ್ತರಿಸಬೇಕಾಗಿದೆ ಎಂದು ಹೇಳಿದರು.

“ಮೊದಲನೆಯದಾಗ ಕನ್ನಡ ಚಿತ್ರರಂಗದಲ್ಲಿ PoSH ಸಮಿತಿಯೆ ಇಲ್ಲ. ಅಂತಹ ಯಾವುದೆ ನಿಯಮಗಳನ್ನ ಮಾಡಿಕೊಂಡೆ ಇಲ್ಲ. ಅವರಲ್ಲೆ ಬಹಳ ವಿರೋಧಗಳು ಇವೆ. ಇಂತಹ ಸಮಯದಲ್ಲಿ ನಾವು ಸ್ವಲ್ಪ ಕಾಲಾವಕಾಶ ನೀಡಬೇಕಾಗುತ್ತದೆ. ಅದರಲ್ಲಿ ತಪ್ಪೇನಿಲ್ಲ. ನಾವು ಕೇವಲ PoSH ಸಮಿತಿ ರಚನೆ ಬಗ್ಗೆ ಮಾತ್ರ ಕೇಳಿಲ್ಲ. ಇನ್ನಿತರ ಮುಖ್ಯ ವಿಚಾರಗಳನ್ನು ಕೂಡಾ ನಾವು ಉಲ್ಲೇಖಿಸಿದ್ದೇವೆ. ಅದಕ್ಕೆಲ್ಲಾ ಅವರು ಉತ್ತರಿಸಬೇಕಾಗುತ್ತದೆ” ಎಂದು ನಾಗಲಕ್ಷ್ಮಿ ಅವರು ನಾನುಗೌರಿ.ಕಾಂ ಜೊತೆಗೆ ಹೇಳಿದರು.

ವಿಡಿಯೊ ನೋಡಿ:  ‘ಗಾಂಧೀಜಿ ಹಂತಕ ಗೋಡ್ಸೆ ಎಂಬ ವ್ಯಕ್ತಿ ಮತ್ತು ಆತನ ದೃಷ್ಟಿಯ ಭಾರತ’ ಪುಸ್ತಕ ಬಿಡುಗಡೆ: ದಿನೇಶ್ ಗುಂಡೂರಾವ್ ಅವರ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...