Homeಕರ್ನಾಟಕ7ನೇ ವೇತನ ಆಯೋಗದ ವರದಿ ಬಂದ ನಂತರ ಸಕಾರಾತ್ಮಕ ತೀರ್ಮಾನ: ಸಿಎಂ ಸಿದ್ದರಾಮಯ್ಯ

7ನೇ ವೇತನ ಆಯೋಗದ ವರದಿ ಬಂದ ನಂತರ ಸಕಾರಾತ್ಮಕ ತೀರ್ಮಾನ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಪಂಚ ಗ್ಯಾರಂಟಿಗಳನ್ನು ಜಾರಿ ಮಾಡುವ ಆರ್ಥಿಕ ಹೊರೆಯ ನಡುವೆಯೂ 7ನೇ ವೇತನ ಆಯೋಗದ ಅಂತಿಮ ವರದಿ ಬಂದ ನಂತರ ಸರ್ಕಾರಿ ನೌಕರರ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿ ತೀರ್ಮಾನವನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಸರ್ಕಾರಿ ನೌಕರರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ನಿರ್ಧರಿಸಿದಂತೆ ತುಟ್ಟಿ ಭತ್ಯೆಯನ್ನು ಯಾವುದೇ ವಿಳಂಬವಿಲ್ಲದೇ ರಾಜ್ಯದಲ್ಲಿ ನೀಡಲಾಗುತ್ತಿದೆ. ಎನ್‌ಪಿಎಸ್ ತೆಗೆದು ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿ ಮಾಡುವ ಬಗ್ಗೆಯೂ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಸರ್ಕಾರಿ ನೌಕರರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿ ಮಾಡುವ ಬಗ್ಗೆಯೂ ಶೀಘ್ರದಲ್ಲಿ ತೀರ್ಮಾನಿಸಲಾಗುವುದು ಎಂದರು. ಮುಖ್ಯಮಂತ್ರಿಗಳು ಸರ್ಕಾರ ಮತ್ತು ಜನರ ನಡುವೆ ಸೇತುವೆಯಾಗಿ ಜವಾಬ್ದಾರಿಯುತ ಕೆಲಸವನ್ನು ಪರಿಣಾಮಕಾರಿಯಾಗಿ ಮಾಡುತ್ತಿರುವ ಸರ್ಕಾರಿ ನೌಕರರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ರಾಜ್ಯದ ಅಭಿವೃದ್ಧಿಯಲ್ಲಿ ಭಾಗಿಯಾಗಬೇಕು

ಕರ್ನಾಟಕದಲ್ಲಿ 7.50 ಲಕ್ಷ ಸರ್ಕಾರಿ ನೌಕರರಿದ್ದಾರೆ. ಅದರಲ್ಲಿ 5.90 ಲಕ್ಷ ಜನ ಹಾಲಿ ಕೆಲಸ ಮಾಡುತ್ತಿದ್ದಾರೆ. 2.50 ಲಕ್ಷ ಜನರನ್ನು ಭರ್ತಿ ಮಾಡಲು ಸಾಧ್ಯವಾಗಿಲ್ಲ. ಕರ್ನಾಟಕದ ಜನಸಂಖ್ಯೆ 7 ಕೋಟಿ ಇದೆ. 7.50 ಲಕ್ಷ ಮಂಜೂರಾಗಿರುವ ಹುದ್ದೆಗಳಿವೆ. 7 ಲಕ್ಷ ಜನ 7 ಕೋಟಿ ಜನರ ಕಷ್ಟ ಸುಖಗಳಲ್ಲಿ ಭಾಗಿಯಾಗುವ, ರಾಜ್ಯದ ಅಭಿವೃದ್ಧಿಯಲ್ಲಿ ಭಾಗಿಯಾಗುವ ಪ್ರಾಮಾಣಿಕ ಪ್ರಯತ್ನವನ್ನು ಮಾಡಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ನಮ್ಮನ್ನು 5 ವರ್ಷಕ್ಕೊಮ್ಮೆ ಆಯ್ಕೆ ಮಾಡಿದರೆ, ಸರ್ಕಾರಿ ಸೇವೆಗೆ ಸೇರಿದ ಮೇಲೆ ನಿವೃತ್ತಿಯಾಗುವವರೆಗೆ ನವೀಕರಣ ಮಾಡಿಸಿಕೊಳ್ಳುವ ಪ್ರಮೇಯವಿಲ್ಲ. ರಾಜಕಾರಣಿಗಳು 5 ವರ್ಷಕ್ಕೊಮ್ಮೆ ಕರ್ನಾಟಕದ ಜನರ ಆಶೀರ್ವಾದವನ್ನು ನವೀಕರಿಸಿಕೊಳ್ಳಬೇಕು ಎಂದರು.

ಪ್ರಜಾಪ್ರಭುತ್ವದ ಮಾಲೀಕರ ಪರವಾಗಿ ಕೆಲಸ ಮಾಡಬೇಕು

ರಾಜ್ಯದ ಜನ ನನಗೆ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗುವ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ. ಅದರಲ್ಲಿ ನೀವೂ, ನಿಮ್ಮ ಕುಟುಂಬದವರೂ ಇದ್ದಾರೆ. 7 ಕೋಟಿ ಕನ್ನಡಿಗರ ಭಾಗವಾದ ಸರ್ಕಾರಿ ನೌಕರರು, ಸಾಮಾಜಿಕ ವ್ಯವಸ್ಥೆಯನ್ನು ಅರ್ಥ ಮಾಡಿಕೊಂಡಿದ್ದೀರಿ ಎಂದು ಭಾವಿಸಿದ್ದೇನೆ. ನಮ್ಮ ಸಮಾಜದಲ್ಲಿ ಸಾಮಾಜಿಕ, ಆರ್ಥಿಕ ಸಮಾನತೆ ತರಬೇಕು. ನಾವೆಲ್ಲರೂ ಪ್ರಜಾಪ್ರಭುತ್ವದ ಮಾಲೀಕರ ಪರವಾಗಿ ಕೆಲಸ ಮಾಡಲು ಇರಬೇಕು ಎಂದರು.

ರಾಜ್ಯದ ಜನರ ಪರವಾಗಿ ಕೆಲಸ ಮಾಡಬೇಕಾಗಿರುವುದು ಮೊದಲನೇ ಆದ್ಯತೆ

ಸರ್ಕಾರ ನಿಮಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು ಎನ್ನುವುದರಲ್ಲಿ ಎರಡು ಮಾತಿಲ್ಲ. ಸರ್ಕಾರ ನಿಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು. ಆದರೆ ಅದೇ ಮೊದಲ ಆದ್ಯತೆ ಅಲ್ಲ. ಅನ್ಯಾಯಗಳನ್ನು ಸರಿಪಡಿಸುವುದು ಸರ್ಕಾರದ ಕರ್ತವ್ಯ. ರಾಜ್ಯದ ಜನರ ಪರವಾಗಿ ಕೆಲಸ ಮಾಡಬೇಕಾಗಿರುವುದು ಮೊದಲನೇ ಆದ್ಯತೆ. ಬೇಡಿಕೆಗಳು ನಂತರದ ಆದ್ಯತೆ. ಇದನ್ನು ಸ್ಪಷ್ಟವಾಗಿ ನೀವು ಅರ್ಥಮಾಡಿಕೊಂಡಿದ್ದೀರಿ ಎನ್ನುವುದು ನನ್ನ ಅನಿಸಿಕೆ ಎಂದು ಹೇಳಿದರು.

ನಾನು ಸರ್ಕಾರಿ ನೌಕರರ ಪರ

ಸರ್ಕಾರಿ ನೌಕರರ ಸಮಸ್ಯೆಗಳನ್ನು ಅರಿತು 7ನೇ ವೇತನ ಆಯೋಗ ರಚಿಸಲಾಗಿದ್ದು, 6ನೇ ವೇತನ ಆಯೋಗವನ್ನು ನಮ್ಮ ಸರ್ಕಾರ ಜಾರಿಗೆ ತಂದಿತ್ತು. ಆ ಸಂದರ್ಭದಲ್ಲಿ ಸರ್ಕಾರಿ ನೌಕರರ ವಿರುದ್ಧವಿರುವುದಾಗಿ ನನ್ನ ಮೇಲೆ ಅರೋಪ ಮಾಡಿದ್ದರು. ಆದರೆ ನಾವೇ 6ನೇ ವೇತನ ಆಯೋಗವನ್ನು ರಚಿಸಿದ್ದೆವು. ಸರ್ಕಾರಿ ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ಕೆಲಸವಾಗಬೇಕು. 6ನೇ ವೇತನ ಆಯೋಗದಲ್ಲಿ ಶೇ. 30ರಷ್ಟು ಫಿಟ್ಮೆಂಟ್ ಸೌಲಭ್ಯ ನೀಡಲು 10,500 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ಬಿಡುಗಡೆ ಮಾಡಿದೆ. ಈಗ 7 ನೇ ವೇತನ ಆಯೋಗದ ಮಧ್ಯಂತರ ವರದಿಯಂತೆ 17% ಹೆಚ್ಚಳ ಮಾಡಲಾಗಿತ್ತು. ಆಯೋಗದ ಅಂತಿಮ ವರದಿ ನೀಡಲು ಇನ್ನಷ್ಟು ಕಾಲಾವಕಾಶ ಬೇಕೆಂದು ಆಯೋಗದ ಆಧ್ಯಕ್ಷರು ಕೋರಿದ್ದು, ಮಾರ್ಚ್ 15 ರವರೆಗೆ ವರದಿ ನೀಡಲು ಸಮಯಾವಕಾಶ ನೀಡಲಾಗಿದೆ. ಲೋಕಸಭಾ ಚುನಾವಣೆಯ ಹಿನ್ನಲೆ , ಆಯೋಗದ ಅಂತಿಮ ವರದಿಯನ್ನು ಆದಷ್ಟು ಶೀಘ್ರ ಸಲ್ಲಿಸುವುದಾಗಿ ತಿಳಿಸಿದ್ದಾರೆ. ನಾನು ಸರ್ಕಾರಿ ನೌಕರರ ಪರವಾಗಿದ್ದೇನೆ ಎಂದು ತಿಳಿಸಿದರು.

ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ, ಸಚಿವ ಈಶ್ವರ್ ಖಂಡ್ರೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಕೃಷ್ಣಪ್ಪ, ಶೇಷಯ್ಯ, ಭೈರಪ್ಪ, ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಶ್ರೀನಿವಾಸ ತಿಮ್ಮೇಗೌಡ, ಖಜಾಂಚಿ ಡಾ. ಸಿದ್ದರಾಮಣ್ಣ, ರಾಜ್ಯ ಮಟ್ಟದ ನೌಕರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಕಾಂಗ್ರೆಸ್ ಶಾಸಕರಿಗೆ ‘ಬೆದರಿಕೆ’: ಜೆಡಿಎಸ್ ರಾಜ್ಯಸಭಾ ಅಭ್ಯರ್ಥಿ ಕುಪೇಂದ್ರ ರೆಡ್ಡಿ ವಿರುದ್ಧ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...