Homeಮುಖಪುಟಚುನಾವಣಾ ನಂತರ ಹಿಂಸಾಚಾರ ಪ್ರಕರಣ: ಸಿಬಿಐಗೆ ವಹಿಸುವಂತೆ ಕೋಲ್ಕತ್ತಾ ಹೈಕೋರ್ಟ್ ಆದೇಶ

ಚುನಾವಣಾ ನಂತರ ಹಿಂಸಾಚಾರ ಪ್ರಕರಣ: ಸಿಬಿಐಗೆ ವಹಿಸುವಂತೆ ಕೋಲ್ಕತ್ತಾ ಹೈಕೋರ್ಟ್ ಆದೇಶ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಮತದಾನದ ನಂತರ ನಡೆದಿದೆ ಎನ್ನಲಾಗಿರುವ ಹಿಂಸಾಚಾರದ ತನಿಖೆಯನ್ನು ಸಿಬಿಐ ನಡೆಸಬೇಕು ಎಂದು ಕೋಲ್ಕತ್ತಾ ಹೈಕೋರ್ಟ್ ಆದೇಶ ಹೊರಡಿಸಿದೆ. ಇದರಿಂದ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರಕ್ಕೆ ಹಿನ್ನಡೆಯಾಗಿದೆ.

ಆಪಾದಿತ ಹಿಂಸಾಚಾರದ ಬಗ್ಗೆ ತನಿಖೆ ನಡೆಸುವಂತೆ ಕೊಲ್ಕತ್ತಾ ಹೈಕೋರ್ಟ್‌ನ ಐದು ನ್ಯಾಯಾಧೀಶರ ಪೀಠವು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಿಗೆ ಈ ಹಿಂದೆ ನಿರ್ದೇಶಿಸಿತ್ತು.

ಹೈಕೋರ್ಟ್‌ನ ನಿರ್ದೇಶನದ ಮೇರೆಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ರಚಿಸಿದ ಸಮಿತಿಯು ಈ ಪ್ರಕರಣಗಳನ್ನು ರಾಜ್ಯದ ಹೊರಗೆ ವಿಚಾರಣೆ ನಡೆಸಬೇಕು ಎಂದು ಹೇಳಿತ್ತು.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶ ಘೋಷಣೆಯಾದ ನಂತರ ವಿಜಯಿಯಾದ ಟಿಎಂಸಿ ಪಕ್ಷದ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರ ಮೇಲೆ ಹಿಂಸಾಚಾರ ನಡೆಸಿದ್ದಾರೆ. ಕೊಲೆ ಅತ್ಯಾಚಾರಗಳು ನಡೆದಿವೆ ಎಂದು ಆರೋಪಿಸಲಾಗಿದೆ.

ಸಿಬಿಐ ತನಿಖೆಯೊಂದಿಗೆ ಪಶ್ಚಿಮ ಬಂಗಾಳ ಕೇಡರ್‌ ನ ಹಿರಿಯ ಅಧಿಕಾರಿಯ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಕೂಡ ಈ ವಿಚಾರದಲ್ಲಿ ತನಿಖೆ ನಡೆಸಬೇಕೆಂದು ಸಹ ಕೋರ್ಟ್ ಹೇಳಿದೆ.

ಈ ಎಸ್‌ಐಟಿಯು ಮೂವರು ಐಪಿಎಸ್ ಅಧಿಕಾರಿಗಳನ್ನು ಒಳಗೊಂಡಿರುತ್ತದೆ. ಸೌಮೆತ್ ಮಿತ್ರ, ಸುಮನ್ ಬಾಲ ಸಾಹೂ ಮತ್ತು ರಣಬೀರ್ ಕುಮಾರ್ರ ನೇತೃತ್ವದಲ್ಲಿ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರು ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯುತ್ತದೆ ಎನ್ನಲಾಗಿದೆ.

ಸದ್ಯಕ್ಕೆ ತನಿಖೆ ನಡೆಸುತ್ತಿರುವ ಬಂಗಾಳ ರಾಜ್ಯ ಸರ್ಕಾರವು ತನಿಖೆಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಸಿಬಿಐಗೆ ಹಸ್ತಾಂತರಿಸಬೇಕು ಎಂದು ಸಹ ಕೋರ್ಟ್ ಹೇಳಿದೆ.


ಇದನ್ನೂ ಓದಿ: ಮತದಾನ ನಂತರದ ಹಿಂಸಾಚಾರ: ಚುನಾವಣಾ ಆಯೋಗ, ಬಂಗಾಳ ಮತ್ತು ಒಕ್ಕೂಟ ಸರ್ಕಾರಕ್ಕೆ ಸುಪ್ರೀಂನಿಂದ ನೋಟಿಸ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...