Homeಮುಖಪುಟಪಹಲ್ಗಾಮ್ ದಾಳಿಯ ಕುರಿತು ಪೋಸ್ಟ್‌: ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧ 'ದೇಶದ್ರೋಹ' ಪ್ರಕರಣ ದಾಖಲು

ಪಹಲ್ಗಾಮ್ ದಾಳಿಯ ಕುರಿತು ಪೋಸ್ಟ್‌: ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧ ‘ದೇಶದ್ರೋಹ’ ಪ್ರಕರಣ ದಾಖಲು

- Advertisement -
- Advertisement -

ಪಹಲ್ಗಾಮ್ ದುರಂತದ ನಂತರ ನಿರ್ದಿಷ್ಟ ಧಾರ್ಮಿಕ ಸಮುದಾಯವನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಪ್ರಚೋದನಕಾರಿ ಪೋಸ್ಟ್‌ಗಳನ್ನು ಹಾಕಿರುವುದರಿಂದ ದೇಶದ ಏಕತೆಗೆ ಹಾನಿಯಾಗಬಹುದು ಎಂಬ ದೂರಿನ ಮೇರೆಗೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧ ಪೊಲೀಸರು ದೇಶದ್ರೋಹದ ಪ್ರಕರಣ ದಾಖಲಿಸಿದ್ದಾರೆ.

“ಎಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ವೇಳೆ ಬಹುತೇಕ ಪ್ರವಾಸಿಗರೇ ಆಗಿದ್ದ ಸಂತ್ರಸ್ತರ ಧರ್ಮವನ್ನು ಕೇಳಿ, ಅವರ ಮೇಲೆ ಗುಂಡು ಹಾರಿಸಿದ ಭಯೋತ್ಪಾದಕರ ಕೃತ್ಯದಿಂದ ಇಡೀ ದೇಶ ಶೋಕತಪ್ತವಾಗಿದ್ದು, ಈ ದುಷ್ಕರ್ಮಿಗಳ ರಕ್ತಕ್ಕಾಗಿ ಕಾತರಿಸುತ್ತಿದೆ‌. ಇಂತಹ ಪರಿಸ್ಥಿತಿಯಲ್ಲಿ ಗಾಯಕಿ ಹಾಗೂ ಕವಿಯತ್ರಿ ನೇಹಾ ಸಿಂಗ್ ರಾಥೋಡ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ರಾಷ್ಟ್ರೀಯ ಸಮಗ್ರತೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುವಂತಹ ಕೆಲವು ಆಕ್ಷೇಪಾರ್ಹ ಪೋಸ್ಟ್ ಗಳನ್ನು ಮಾಡಿದ್ದಾರೆ. ಅಲ್ಲದೆ, ಧರ್ಮವನ್ನಾಧರಿಸಿ, ಒಂದು ಸಮುದಾಯದ ವಿರುದ್ಧ ಮತ್ತೊಂದು ಸಮುದಾಯವನ್ನು ಪ್ರಚೋದಿಸುವ ಪ್ರಯತ್ನವನ್ನು ಪದೇ ಪದೇ ಮಾಡಿದ್ದಾರೆ” ಎಂದು ದೂರುದಾರ ಅಭಯ್ ಪ್ರತಾಪ್ ಸಿಂಗ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ವರದಿಯಾಗಿದೆ.

ಉತ್ತರ ಪ್ರದೇಶದ ಲಕ್ನೋದ ಹಜರತ್‌ಗಂಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರಿನ ಆಧಾರದ ಮೇಲೆ, ಪೊಲೀಸರು ಜಾನಪದ ಗಾಯಕಿ ನೇಹಾ ಸಿಂಗ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಹಲವು ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿದ್ದಾರೆ.ಇದರಲ್ಲಿ ಧರ್ಮಗಳ ನಡುವೆ ದ್ವೇಷವನ್ನು ಉತ್ತೇಜಿಸಲು ಪ್ರಯತ್ನಿಸುವುದು, ಸಾರ್ವಜನಿಕ ಶಾಂತಿಯನ್ನು ಕದಡುವುದು ಮತ್ತು ಭಾರತದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡುವುದು ಸೇರಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿಯೂ ನೇಹಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ವಸಾಹತುಶಾಹಿ ಯುಗದ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124Aನಲ್ಲಿ ನಿರ್ದಿಷ್ಟಪಡಿಸಿದಂತೆ ಬಿಎನ್‌ಎಸ್ ದೇಶದ್ರೋಹವನ್ನು ಸ್ಪಷ್ಟವಾಗಿ ಉಲ್ಲೇಖಿಸದಿದ್ದರೂ, ಹೊಸ ಕ್ರಿಮಿನಲ್ ಕೋಡ್ ಸೆಕ್ಷನ್ 152ರ ಅಡಿಯಲ್ಲಿ ದೇಶದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡುವ ಆರೋಪಗಳನ್ನು ದಾಖಲಿಸಲಾಗುತ್ತದೆ.

ಉತ್ತರ ಪ್ರದೇಶ| ತೀವ್ರ ಗಾಯಗಳಿಂದ ದಲಿತ ಅತ್ಯಾಚಾರ ಸಂತ್ರಸ್ತೆ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...