Homeಮುಖಪುಟವಿವಾದಕ್ಕೆ ಎಡೆಮಾಡಿಕೊಟ್ಟ ವಿದೇಶಿ ಕಂಪನಿಗಳ ಸಾಮಾಜಿಕ ಜಾಲತಾಣಗಳ ಪೋಸ್ಟ್‌

ವಿವಾದಕ್ಕೆ ಎಡೆಮಾಡಿಕೊಟ್ಟ ವಿದೇಶಿ ಕಂಪನಿಗಳ ಸಾಮಾಜಿಕ ಜಾಲತಾಣಗಳ ಪೋಸ್ಟ್‌

- Advertisement -
- Advertisement -

ಜಮ್ಮು ಕಾಶ್ಮೀರ ವಿಚಾರದಲ್ಲಿ ಬಹು-ರಾಷ್ಟ್ರೀಯ ಸಂಸ್ಥೆಗಳ ಬ್ರಾಂಡ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೆ ಪ್ರಕಟಿಸುವುದು ಮತ್ತು ಕ್ಷಮೆಯಾಚಿಸುವುದು ಕಳೆದ ಕೆಲವು ದಿನಗಳಿಂದ ಸುದ್ದಿಯಲ್ಲಿದೆ. ಮಾರುತಿ ಸುಜುಕಿ, ಫಿಜ್ಜಾ, ಡೊಮಿನೋಸ್, ಕಿಯಾ, ಕೆಎಫ್‌ಸಿ, ಹೋಂಡಾ ಮತ್ತು ಹ್ಯೂಂಡೈ ಸೇರಿದಂತೆ ಬಹುತೇಕ ಸಂಸ್ಥೆಗಳು ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಗಳಲ್ಲಿ ಪ್ರಕಟವಾದ ವಿಚಾರಗಳಿಗೆ ಸಂಬಂಧಿಸಿ ಭಾರತದ ಬಳಿ ಕ್ಷಮೆಯಾಚಿಸಿವೆ.

ಸೋಮವಾರದಂದು ಕೆಎಫ್‌ಸಿ ಇಂಡಿಯಾ, “ದೇಶದ ಹೊರಗಿನ ಕೆಲವು ಕೆಎಫ್‌ಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟವಾದ ಪೋಸ್ಟ್‌ಗಳ ಬಗ್ಗೆ ತೀವ್ರವಾಗಿ ಕ್ಷಮೆಯಾಚಿಸುತ್ತೇವೆ” ಎಂದು ಟ್ವೀಟ್ ಮಾಡಿದೆ. ಕೆಎಫ್‌ಸಿ ತನ್ನ ಅಧಿಕೃತ ಫೇಸ್ಬುಕ್ ಖಾತೆಯಲ್ಲಿ ಕಾಶ್ಮೀರ ಒಗ್ಗಟ್ಟಿನ ದಿನವನ್ನು ಬೆಂಬಲಿಸಿ ಹಾಕಿದ ಸಂದೇಶವನ್ನು ಪೋಸ್ಟಿಗೆ ಸಾಮಾಜಿಕ ಮಾಧ್ಯಮದಲ್ಲಿ ಬಳಕೆದಾರರು ಖಂಡಿಸಿದ್ದರು.

ಇದನ್ನೂ ಓದಿ: ಹಿಜಾಬ್‌‌ಗಾಗಿ ದನಿಯೆತ್ತಿದ ವಿದ್ಯಾರ್ಥಿನಿಯರ ಫೋನ್‌‌ ನಂಬರ್‌, ವಿಳಾಸ ಲೀಕ್‌ ಮಾಡಿದ ಉಡುಪಿ ಕಾಲೇಜು!

ಪಾಕಿಸ್ತಾನದ ಹ್ಯೂಂಡೈ ಡೀಲರ್‌ನ ಟ್ವಿಟರ್ ಖಾತೆಯು, “ಸ್ವಾತಂತ್ರ್ಯಕ್ಕಾಗಿ ಹೋರಾಟ” ಎಂದು ಮಾಡಿದ ಪೋಸ್ಟ್ ವಿವಾದಕ್ಕೆ ಎಡೆಮಾಡಿದ ನಂತರ, ಹ್ಯೂಂಡೈ ಮೋಟಾರ್ಸ್ “ಕಾಶ್ಮೀರ ಸಂಬಂಧಿಸಿ ಸಂಸ್ಥೆಯ ಅಧಿಕೃತವಲ್ಲದ ಅಭಿಪ್ರಾಯ ಸಾಮಾಜಿಕ ಮಾಧ್ಯಮದ ಹೇಳಿಕೆಗಳಿಂದ ಭಾರತೀಯರ ಭಾವನೆಗಳಿಗೆ ಧಕ್ಕೆಯಾಗಿರುವುದಕ್ಕಾಗಿ ವಿಷಾದ ವ್ಯಕ್ತಪಡಿಸುತ್ತಿದ್ದೇವೆ ಮತ್ತು ಈ ಕ್ರಮವು ಸಂಸ್ಥೆಯ ಜಾಗತಿಕ ನೀತಿಗೆ ವಿರುದ್ಧವಾಗಿದೆ” ಎಂದು ಸ್ಪಷ್ಟನೆ ನೀಡಿದ್ದಾರೆ.

ಫೆಬ್ರವರಿ 6 ರಂದು ಹ್ಯೂಂಡೈ‌‌ ಕಂಪೆನಿಯ ಭಾರತದಲ್ಲಿನ ಅಂಗಸಂಸ್ಥೆ ಕೂಡ ಕ್ಷಮೆಯಾಚಿಸಿದೆ, “ಭಾರತವು ಹ್ಯೂಂಡೈ ಬ್ರಾಂಡ್‌ಗೆ ಎರಡನೇ ನೆಲೆಯಾಗಿದೆ. ಈ ವಿಚಾರಗಳ ಸಂವಹನದ ಬಗ್ಗೆ ನಾವು ಶೂನ್ಯ ಸಹಿಷ್ಣುತೆ ನೀತಿ ಹೊಂದಿದ್ದೇವೆ ಮತ್ತು ಅಂತಹ ಯಾವುದೇ ದೃಷ್ಟಿಕೋನವನ್ನು ಬಲವಾಗಿ ಖಂಡಿಸುತ್ತೇವೆ” ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

ಇದನ್ನು ಅನುಸರಿಸಿ ಕೆಎಫ್‌ಸಿ, ಡೊಮಿನೋಸ್ ಸಂಸ್ಥೆಯೂ ತನ್ನ ಪಾಕಿಸ್ತಾನಿ ಹ್ಯಾಂಡಲ್‌ನಿಂದ ಕಾಶ್ಮೀರ ಕುರಿತ ಸಂದೇಶಕ್ಕಾಗಿ ಕ್ಷಮೆಯಾಚವಿಸಿದೆ. ಟ್ವಿಟ್ಟರ್‌ನಲ್ಲಿ #boycottdominos ಟ್ರೆಂಡ್‌ ಆದ ನಂತರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಾಗಿ ಡೊಮಿನೋಸ್ ಕಂಪನಿ ಕ್ಷಮೆಯಾಚಿಸಿದೆ. “ಕಳೆದ 25 ವರ್ಷಗಳಿಂದ ಭಾರತ ನಮಗೆ ತವರು ದೇಶವೆನ್ನುವಷ್ಟು ಆಪ್ತವಾಗಿದೆ ಮತ್ತು ಅದರ ಪರಂಪರೆಯನ್ನು ಶಾಶ್ವತವಾಗಿ ರಕ್ಷಿಸಲು ನಾವು ಬದ್ಧರಾಗಿದ್ದೇವೆ” ಎಂದು ಅದು ಹೇಳಿದೆ.

ಇದನ್ನೂ ಓದಿ: ಯುಪಿ ಕೇರಳವಾದರೆ ಅತ್ಯುತ್ತಮ ಶಿಕ್ಷಣ, ಆರೋಗ್ಯ, ಜೀವನಮಟ್ಟ ಸಿಗಲಿದೆ: ಆದಿತ್ಯನಾಥ್‌ಗೆ ಪಿಣರಾಯಿ ತಿರುಗೇಟು

ಮತ್ತೊಂದು ಅಂತರಾಷ್ಟ್ರೀಯ ಕಂಪೆನಿ ಪಿಜ್ಜಾ, ಪಿಜ್ಜಾ ಹಟ್‌ನ ಪಾಕಿಸ್ತಾನಿ ಹ್ಯಾಂಡಲ್ ಇನ್‌ಸ್ಟಾಗ್ರಾಂನಲ್ಲಿ ಬುಧವಾರ ಇದೇ ರೀತಿಯ ಕಾಶ್ಮಿರ ಪರ ಸಂದೇಶವನ್ನು ಪೋಸ್ಟ್ ಮಾಡಿದೆ. ನಂತರ ಕಂಪನಿಯ ಅಧಿಕೃತ ಖಾತೆಯಲ್ಲಿ, “ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುವ ಇಂತಹ ಪೋಸ್ಟ್‌ಗಳನ್ನು ಕ್ಷಮಿಸಲಾಗುವುದಿಲ್ಲ, ಬೆಂಬಲಿಸುವುದಿಲ್ಲ ಅಥವಾ ಒಪ್ಪುವುದಿಲ್ಲ” ಎಂದು ಹೇಳಿದೆ.

ಮಾರುತಿ ಸುಜುಕಿ ಸಂಸ್ಥೆಯೂ ಸಾಮಾಜಿಕ ಜಾಲತಾಣದಲ್ಲಾದ ತಪ್ಪಿಗೆ ಇಂತಹುದೇ ಸ್ಪಷ್ಟನೆ ನೀಡಿದೆ. “ಕಾರ್ಪೊರೇಟ್ ನೀತಿಯಂತೆ, ನಾವು ಪ್ರಪಂಚದ ಯಾವುದೇ ಭಾಗದಲ್ಲಿ ಯಾವುದೇ ರಾಜಕೀಯ ಅಥವಾ ಧಾರ್ಮಿಕ ಒಲವುಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಈ ವಿಷಯಗಳ ಕುರಿತು ನಮ್ಮ ವಿತರಕರು ಅಥವಾ ವ್ಯಾಪಾರ ಸಹವರ್ತಿಗಳಿಂದ ಅಂತಹ ಸಂವಹನವು ನಮ್ಮ ಕಂಪನಿಯ ಸ್ಥಾನವನ್ನು ಪ್ರತಿನಿಧಿಸುವುದಿಲ್ಲ ಅಥವಾ ನಮ್ಮಿಂದ ಅಧಿಕೃತವಾಗಿಲ್ಲ” ಎಂದು ಟ್ವೀಟ್ ಮಾಡಿದೆ.

ಇದನ್ನೂ ಓದಿ: ಸನಾತನಾ ಸಂಸ್ಥೆಯ ವಿರೇಂದ್ರಸಿನ್ಹ ತಾವ್ಡೆ ಸಮಾಜಕ್ಕೆ ಅಪಾಯಕಾರಿ: ಜಾಮೀನು ನೀಡದಂತೆ ಸಿಬಿಐ ಒತ್ತಾಯ

ದಕ್ಷಿಣ ಕೊರಿಯಾ ಮೂಲದ ಮತ್ತೊಂದು ಆಟೋಮೊಬೈಲ್ ತಯಾರಕ, ಕಿಯಾ ಬುಧವಾರದಂದು ಟ್ವೀಟ್ ಮಾಡಿದ್ದು “ಭಾರತದ ಹೊರಗಿರುವ ಕಿಯಾ ಸಂಸ್ಥೆಯ ಹ್ಯಾಂಡಲ್‌ಗಳು ಸ್ವತಂತ್ರ ಅಭಿವ್ಯಕ್ತಿಯಲ್ಲಿ ಸಂಸ್ಥೆಯ ಖಾತೆಗಳನ್ನು ಬಳಸಿಕೊಂಡು ಮಾಡಿರುವ ಹೇಳಿಕೆಯಾಗಿದೆ. ಅದು ಸಂಸ್ಥೆಯ ಅಭಿಪ್ರಾಯವಲ್ಲ. ಕಿಯಾ ಬ್ರ್ಯಾಂಡ್ ಗುರುತಿನ ಇಂತಹ ದುರುಪಯೋಗವನ್ನು ತಪ್ಪಿಸಲು ಕಠಿಣ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಇಂತಹ ಸಮಸ್ಯೆ ಮರುಕಳಿಸದಿರುವಂತೆ ತಡೆಯಲು ಪ್ರಕ್ರಿಯೆಗಳನ್ನು ಜಾರಿಗೆ ತಂದಿದ್ದೇವೆ” ಎಂದು ಹೇಳಿದೆ.

ದಕ್ಷಿಣ ಕೊರಿಯಾ ಮೂಲದ ಹ್ಯೂಂಡೈ ಮತ್ತು ಕಿಯಾ ಮೋಟಾರ್ಸ್ ಸಂಸ್ಥೆಗಳ ಪೋಸ್ಟ್‌ಗಳಿಗಾಗಿ ಆ ದೇಶದ ವಿದೇಶಾಂಗ ಸಚಿವ ಚುಂಗ್ ಇಯು ಯೋಂಗ್ ಅವರು ಭಾರತೀಯ ವಿದೇಶಾಂಗ ಸಚಿವ ಎಸ್ ಜೈಶಂಕರ್‌ರಿಗೆ ಕರೆ ಮಾಡಿ ಸ್ಪಷ್ಟನೆ ನೀಡಿದ್ದಾರೆ. ಸಾಮಾಜಿಕ ಮಾಧ್ಯಮಗಳ ಪೋಸ್ಟ್‌ಗಳಿಂದ ಭಾರತದ ಭಾವನೆಗಳಿಗೆ ಧಕ್ಕೆ ತಂದಿರುವುದಕ್ಕೆ ವಿಷಾದಿಸಿದ್ದಾರೆ ಮತ್ತು ಅಂತಹ ಪೋಸ್ಟ್‌ಗಳನ್ನು ಖಂಡಿಸುತ್ತೇವೆ ಎಂದು ದಕ್ಷಿಣ ಕೊರಿಯಾದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಭಾರತೀಯ ವಿದೇಶಾಂಗ ಸಚಿವಾಲಯದ ಅಧಿಕೃತ ವಕ್ತಾರ ಅರಿಂದಮ್ ಬಾಗ್ಚಿ, “ಕಾಶ್ಮೀರ ಒಗ್ಗಟ್ಟಿನ ದಿನ ಎಂದು ಕರೆಯಲ್ಪಡುವ ಸಾಮಾಜಿಕ ಮಾಧ್ಯಮ ಪೋಸ್ಟ್ ಅನ್ನು ಹ್ಯೂಂಡೈ ಸಂಸ್ಥೆಯ ಪಾಕಿಸ್ತಾನ ಘಟಕ ಮಾಡಿರುವುದನ್ನು ಗಮನಿಸಿದ್ದೇವೆ. 2022 ಫೆಬ್ರವರಿ 6ರ ಭಾನುವಾರದಂದು ಈ ಸಾಮಾಜಿಕ ಮಾಧ್ಯಮ ಪೋಸ್ಟ್ ಕಂಡ ತಕ್ಷಣ, ದಕ್ಷಿಣ ಕೊರಿಯಾ ರಾಜಧಾನಿ ಸಿಯೋಲ್‌ನಿಂದ ನಮ್ಮ ರಾಯಭಾರಿ ಹ್ಯೂಂಡೈ ಪ್ರಧಾನ ಕಚೇರಿಯನ್ನು ಸಂಪರ್ಕಿಸಿ ವಿವರಣೆ ಕೇಳಿದ್ದರು. ನಂತರ ಆಕ್ಷೇಪಾರ್ಹ ಪೋಸ್ಟ್ ತೆಗೆದುಹಾಕಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Hijab Live | ಹಿಜಾಬ್‌ ಲೈವ್‌ | ವಿಚಾರಣೆ ಸೋಮವಾರಕ್ಕೆ ಮುಂದೂಡಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...