65 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಅಂಚೆ ಮತದಾನ: ಸಿಪಿಐ ವಿರೋಧ

ಭಾರತ ಕಮ್ಯೂನಿಷ್ಟ್ ಪಕ್ಷವೂ ಕಾಂಗ್ರೆಸ್, ಸಿಪಿಐ(ಎಂ) ಮತ್ತು ಟಿಎಂಸಿಯ ಬೆಂಬಲದೊಂದಿಗೆ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದಿದೆ.

0
65 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಅಂಚೆ ಮತದಾನ : ಸಿಪಿಐ ವಿರೋಧ

65 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಅಂಚೆ ಮತದಾನಕ್ಕೆ ಅವಕಾಶ ನೀಡುವ ಚುನಾವಣಾ ಆಯೋಗದ ನಿರ್ಧಾರವನ್ನು ಭಾರತ ಕಮ್ಯೂನಿಷ್ಟ್ ಪಕ್ಷವೂ ಕಾಂಗ್ರೆಸ್, ಸಿಪಿಐ(ಎಂ) ಮತ್ತು ಟಿಎಂಸಿಯ ಬೆಂಬಲದೊಂದಿಗೆ ಮುಖ್ಯ ಚುನಾವಣಾಧಿಕಾರಿ ಸುನಿಲ್ ಅರೋರಾ ಅವರಿಗೆ ಪತ್ರ ಬರೆದು ತಮ್ಮ ಪ್ರತಿಭಟನೆಯನ್ನು ದಾಖಲಿಸಿದೆ.

ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ ರಾಜಾ ಬಿಹಾರದಲ್ಲಿ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಚುನಾವಣಾ ಆಯೋಗ ಮಾಡಿದ ಈ ನಿರ್ಧಾರವು ಮುಕ್ತ ಮತ್ತು ನ್ಯಾಯಯುತ ಚುನಾವಣೆಯ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಅಪಾಯಕ್ಕೆ ತಳ್ಳುತ್ತದೆ ಎಂದು ಆರೋಪಿಸಿದರು.

ಮುಖ್ಯ ಚುನಾವಣಾ ಆಯುಕ್ತರಿಗೆ ಬರೆದ ಪತ್ರದಲ್ಲಿ, ಚುನಾವಣಾ ಪ್ರಚಾರದ ಸಮಯದಲ್ಲಿ ಡಿಜಿಟಲ್ ಪ್ರಚಾರ ಮತ್ತು 65 ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಅಂಚೆ ಮತಪತ್ರದ ಅವಕಾಶದ ಬಗ್ಗೆ ವ್ಯಾಪಕ ಮತ್ತು ಪಾರದರ್ಶಕ ಸಮಾಲೋಚನೆ ನಡೆಸಬೇಕೆಂದು ರಾಜಾ ಒತ್ತಾಯಿಸಿದರು.

ಈ ಎರಡು ಪ್ರಸ್ತಾಪಗಳನ್ನು ಒಪ್ಪಿಕೊಂಡರೆ ಖಂಡಿತವಾಗಿಯೂ ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳ ಪ್ರಕ್ರಿಯೆಯನ್ನು ಹಾಗೂ ಪ್ರಜಾಪ್ರಭುತ್ವವನ್ನು ಅಪಾಯಕ್ಕೆ ತಳ್ಳುತ್ತದೆ. ನಮ್ಮ ವ್ಯವಸ್ಥೆಯ ಮೇಲೆ ಹಾನಿಕಾರಕ ಪರಿಣಾಮ ಬೀರುವ ಈ ಪ್ರಸ್ತಾಪಗಳನ್ನು ಕಾರ್ಯಗತಗೊಳಿಸಲು ಏಕಪಕ್ಷೀಯವಾಗಿ ಮುಂದುವರಿಯದಂತೆ ನಮ್ಮ ಪಕ್ಷ ಭಾರತೀಯ ಚುನಾವಣಾ ಆಯೋಗಕ್ಕೆ ಒತ್ತಾಯಿಸುತ್ತದೆ ಎಂದು ರಾಜಾ ಹೇಳಿದರು.

ಆದ್ದರಿಂದ, ಎಲ್ಲಾ ರಾಜಕೀಯ ಪಕ್ಷಗಳೊಂದಿಗೆ ವ್ಯಾಪಕ ಮತ್ತು ಪಾರದರ್ಶಕ ಸಮಾಲೋಚನೆಗಳನ್ನು ಪ್ರಾರಂಭಿಸಲು ನಮ್ಮ ಪಕ್ಷದ ಪರವಾಗಿ ನಾನು ನಿಮ್ಮನ್ನು ವಿನಂತಿಸುತ್ತೇನೆ. ರಾಷ್ಟ್ರದ ಹಿತಾಸಕ್ತಿಗಳು ಮತ್ತು ಅದರ ಭವಿಷ್ಯದ ಬಗ್ಗೆ ನಮ್ಮ ಅಭಿಪ್ರಾಯಗಳಿಗೆ ನೀವು ಸಕಾರಾತ್ಮಕ ಗಮನ ನೀಡುತ್ತೀರಿ ಎಂದು ನಾನು ಪ್ರಾಮಾಣಿಕವಾಗಿ ಭಾವಿಸುತ್ತೇನೆ ಎಂದು ಅವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಚುನಾವಣಾ ಪ್ರಚಾರದ ಸಮಯದಲ್ಲಿ ಡಿಜಿಟಲ್ ಪ್ರಚಾರವು ಅತ್ಯಂತ ದುಬಾರಿಯಾಗಲಿದೆ ಅವರು ಹೇಳಿದರು.

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕೂಡ ಈ ಕ್ರಮವು ಅನಿಯಂತ್ರಿತ, ಅಸಂವಿಧಾನಿಕ, ಮತದಾನದ ಗೌಪ್ಯತೆಯ ಉಲ್ಲಂಘನೆ ಎಂದು ಹೇಳಿದೆ.

ರಾಜಕೀಯ ಪಕ್ಷಗಳೊಂದಿಗೆ ಸಮರ್ಪಕ ಸಮಾಲೋಚನೆ ಇಲ್ಲದೆ ಹೊರಡಿಸಲಾದ ಈ ತಿದ್ದುಪಡಿಯು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ ಎಂದು ನಮ್ಮ ಪಕ್ಷ ಅಭಿಪ್ರಾಯಪಟ್ಟಿದೆ ಎಂದು ಪಕ್ಷವು ತನ್ನ ಪತ್ರದಲ್ಲಿ ತಿಳಿಸಿದೆ.

ರಾಜಕೀಯ ಪಕ್ಷಗಳನ್ನು ಸಂಪರ್ಕಿಸದೆ ಈ ಕ್ರಮ ಕೈಗೊಳ್ಳಲಾಗಿದೆ ಎಂಬ ಸಿಪಿಐ (ಎಂ) ಟೀಕೆಗೆ ಪ್ರತಿಕ್ರಿಯೆಯಾಗಿ, ಇದು ಸಾಂಕ್ರಾಮಿಕ ರೋಗದಿಂದ ಉಂಟಾದ ಅಸಾಧಾರಣ ಪರಿಸ್ಥಿತಿ ಮತ್ತು ಜನರು ವೈರಸ್‌ಗೆ ಒಡ್ಡಿಕೊಳ್ಳುವುದನ್ನು ಕಡಿಮೆ ಮಾಡುವುದು ಕಡ್ಡಾಯವಾಗಿದೆ ಎಂದು ಆಯೋಗ ಹೇಳಿದೆ. ಇದು ಅವರ ಮತದಾನದ ಹಕ್ಕನ್ನು ಕಸಿದುಕೊಳ್ಳುವುದಿಲ್ಲ ಎಂದು ತಿಳಿಸಿದೆ.

ಮತದಾನದ ನಿರ್ಧಾರ ತೆಗೆದುಕೊಳ್ಳುವ ಮೊದಲು ಬಿಹಾರದಲ್ಲಿ ರಾಜಕೀಯ ಪಕ್ಷಗಳೊಂದಿಗೆ ಸಭೆ ನಡೆಸಲಾಗಿದೆ ಎಂದು ಅದು ಸ್ಪಷ್ಟಪಡಿಸಿದೆ.

ಅಂಚೆ ಮತದಾನದ ಸೌಲಭ್ಯವನ್ನು 65 ವರ್ಷಕ್ಕಿಂತ ಮೇಲ್ಪಟ್ಟ ಮತದಾರರಿಗೆ ಮತ್ತು ವೈರಲ್ ಸೋಂಕಿನಿಂದ ಬಳಲುತ್ತಿರುವವರಿಗೆ ವಿಸ್ತರಿಸಲು ಕೇಂದ್ರವು ಇತ್ತೀಚೆಗೆ ಚುನಾವಣಾ ನಿಯಮಗಳಲ್ಲಿ ತಿದ್ದುಪಡಿಗಳನ್ನು ತಿಳಿಸಿತ್ತು.

ಕಾನೂನು ಮತ್ತು ನ್ಯಾಯ ಸಚಿವಾಲಯವು ಚುನಾವಣಾ ನಿಯಮಗಳ ನಡವಳಿಕೆಗೆ ತಿದ್ದುಪಡಿ ಸೂಚಿಸಿದ್ದು, ಇದು ಬಿಹಾರದಲ್ಲಿ ಮುಂಬರುವ 2020 ರ ವಿಧಾನಸಭಾ ಚುನಾವಣೆಯಲ್ಲಿ ಅಂಚೆ ಮತದಾನ ಸೌಲಭ್ಯವನ್ನು ವಿಸ್ತರಿಸುವಂತೆ ಮಾಡುತ್ತದೆ.


ಇದನ್ನೂ ಓದಿ: ಚುನಾವಣಾ ಆಯೋಗವೆಂಬ ಬಿಜೆಪಿ ಕಚೇರಿ…


 

Donate

ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ನಿಮ್ಮ ನಿರಂತರ ಆರ್ಥಿಕ ನೆರವು ಅಗತ್ಯ. ನಿಮ್ಮಿಂದ ಸಾಧ್ಯವಿರುವಷ್ಟು ಹೆಚ್ಚಿನ ವಂತಿಗೆಯನ್ನು ನೀಡಲು ಕೆಳಗಿನ ಲಿಂಕುಗಳನ್ನು ಕ್ಲಿಕ್ಕಿಸಿ.
ಒಂದು ವೇಳೆ ಈ ಲಿಂಕಿನ ಮೂಲಕ ಹಣ ಪಾವತಿ ಮಾಡುವುದಕ್ಕೆ ಅಡಚಣೆ ಇದ್ದರೆ, ಈ ಪುಟದ ಮೇಲೆ ಅಥವಾ ಕೆಳಗೆ ಇರುವ ವಂತಿಗೆ – Donate ಬಟನ್.ಅನ್ನು ಕ್ಲಿಕ್ಕಿಸಿ.
ಧನ್ಯವಾದಗಳು
Independent journalism can’t be independent without your support, contribute by clicking below.

LEAVE A REPLY

Please enter your comment!
Please enter your name here