Homeಕರ್ನಾಟಕಅಪ್ಪು ಹೆಸರಲ್ಲಿ ಮುಸ್ಲಿಮರ ವಿರುದ್ಧ ದ್ವೇಶ ಬಿತ್ತಲು ಯತ್ನಿಸಿದ ಪೋಸ್ಟ್‌ಕಾರ್ಡ್; ಜನರಿಂದ ತರಾಟೆ

ಅಪ್ಪು ಹೆಸರಲ್ಲಿ ಮುಸ್ಲಿಮರ ವಿರುದ್ಧ ದ್ವೇಶ ಬಿತ್ತಲು ಯತ್ನಿಸಿದ ಪೋಸ್ಟ್‌ಕಾರ್ಡ್; ಜನರಿಂದ ತರಾಟೆ

- Advertisement -
- Advertisement -

ಬಿಜೆಪಿಯ ಪ್ರೊಪಗಾಂಡ ವೇದಿಕೆಯಾಗಿರುವ ಪೋಸ್ಟ್‌ಕಾರ್ಡ್ ಫೇಸ್‌ಬುಕ್‌ ಪೇಜ್‌ನಲ್ಲಿ ಇಂದು ಮಾಡಲಾಗಿರುವ ಪೋಸ್ಟ್‌ಗಳು ಜನರಿಂದ ಟೀಕೆಗೆ ಒಳಗಾಗಿವೆ. ಬಿಜೆಪಿ ಪರ ಪ್ರಚಾರ, ಕೋಮುದ್ವೇಷ, ಸುಳ್ಳು ಸುದ್ದಿಗಳ ಕಾರಣಕ್ಕೆ ಹೆಸರಾಗಿರುವ ಪೋಸ್ಟ್‌ ಕಾರ್ಡ್ ಹಾಗೂ ಅದರ ಸಂಪಾದಕ ಮಹೇಶ್‌ ವಿಕ್ರಂ ಹೆಗಡೆಯವರನ್ನು ಜನರು ತರಾಟೆಗೆ ತೆಗೆದುಕೊಂಡಿದ್ದಾರೆ.

ಹಠಾತ್ ನಿಧನರಾದ ಪವರ್‌ ಸ್ಟಾರ್‌ ಪುನೀತ್ ರಾಜ್‌ಕುಮಾರ್‌ ಅವರ ಅಗಲಿಕೆಯ ನೋವಿನ ನಡುವೆ ಇಂದು ಅವರು ಜನ್ಮದಿನ ಬಂದಿದೆ. ಪುನೀತ್‌ ಅವರ ಕೊನೆಯ ಸಿನಿಮಾ ‘ಜೇಮ್ಸ್‌’ ಕೂಡ ಬಿಡುಗಡೆಯಾಗಿದೆ. ಇದರ ನಡುವೆ ಮುಸ್ಲಿಂ ಸಮುದಾಯ ಹಿಜಾಬ್‌ ಹಕ್ಕಿಗಾಗಿ ಹೋರಾಟ ಮುಂದುವರಿಸಿದ್ದು, ತಮ್ಮ ವ್ಯಾಪಾರ ವಹಿವಾಟುಗಳನ್ನು ಬಂದ್‌ ಮಾಡಿ ಇಂದು ಪ್ರತಿಭಟಿಸಿದೆ.

ಆದರೆ ಪುನೀತ್‌ ಅವರ ಜನ್ಮದಿನಕ್ಕೂ ಮುಸ್ಲಿಂ ಸಮುದಾಯದ ಹೋರಾಟಕ್ಕೂ ಯಾವುದೇ ಸಂಬಂಧವಿಲ್ಲದಿದ್ದರೂ ಒಂದಕ್ಕೊಂದು ಸಂಬಂಧ ಕಲ್ಪಿಸಲು ಯತ್ನಿಸಿರುವ ಪೋಸ್ಟ್‌ ಕಾರ್ಡ್‌ಗೆ ಕನ್ನಡಿಗರು ಛೀಮಾರಿ ಹಾಕಿದ್ದಾರೆ. ಮುಸ್ಲಿಂ ಸಮುದಾಯದ ಬಂದ್‌ಗೆ ಸಂಬಂಧಿಸಿದಂತೆ ಇತರ ಪೋಸ್ಟರ್‌ಗಳನ್ನೂ ಪೋಸ್ಟ್‌ಕಾರ್ಡ್‌ನಲ್ಲಿ ಕಾಣಬಹುದು. ಪುನೀತ್ ರಾಜ್‌ಕುಮಾರ್‌ ಅವರ ಜನ್ಮದಿನವನ್ನು ಹಿಜಾಬ್‌ ಹೋರಾಟಕ್ಕೆ ತಳುಕು ಹಾಕಿರುವ ಎರಡು ಪೋಸ್ಟರ್‌ಗಳು ಈಗ ಚರ್ಚೆಗೆ ಗ್ರಾಸವಾಗಿವೆ. ಎಲ್ಲ ಜಾತಿ, ಧರ್ಮಗಳಾಚೆಗೆ ಆಲದ ಮರದಂತೆ ವಿಸ್ತರಿಸಿರುವ ಮೇರು ವ್ಯಕ್ತಿತ್ವ ಪುನೀತ್ ಅವರನ್ನು ತಮ್ಮ ಕೋಮು ಅಜೆಂಡಾಕ್ಕೆ ಪೋಸ್ಟ್‌ಕಾರ್ಡ್ ಬಳಸಲು ಯತ್ನಿಸಿರುವುದು ಎಷ್ಟು ಸರಿ ಎಂಬ ಪ್ರಶ್ನೆ ಎದ್ದಿದೆ.

“ಶಾಂತಿಧೂತರು ಎನಿಸಿಕೊಂಡವರಿಂದ ಪವರ್ ಸ್ಟಾರ್‌ ಪುನೀತ್ ರಾಜ್‌ಕುಮಾರ್‌ ಅವರಿಗೆ ಅವಮಾನ… ಅಪ್ಪು ಹುಟ್ಟಿದ ದಿನ ಇಂದು, ಇದೇ ದಿನ ಕರ್ನಾಟಕ ಬಂದ್ ಎಂಬುದಾಗಿ ಕರೆ ನೀಡಿ ಕನ್ನಡದ ಮಣ್ಣಿನ ಹೆಮ್ಮೆಯ ಮಗನಿಗೆ ಅವಮಾನ ಮಾಡಿದ ಮುಸಲ್ಮಾನರು” ಎಂದು  ಪೋಸ್ಟರ್‌ಗಳನ್ನು ಮಾಡಿ ಪೋಸ್ಟ್‌ ಮಾಡಿರುವ  ಪೋಸ್ಟ್‌ಕಾರ್ಡ್, ಜನರ ನಡುವೆ ದ್ವೇಷ ಬಿತ್ತಲು ಯತ್ನಿಸಿದೆ.

“ಊರಿಗೆ ಬೆಂಕಿ ಹಚ್ಚಿ ಚಳಿ ಕಾಯುವುದರಲ್ಲಿ ನಿಮಗಿಂತ ಜಾಣರು ಯಾರು ಇಲ್ಲ ಅಂತ ಎಲ್ಲರಿಗೂ ಗೊತ್ತು. ಅವರು ಅಪ್ಪು ಬಾಸ್‌ಗೆ ಅವಮಾನ ಮಾಡಿಲ್ಲ. ಇಷ್ಟ ಇರೋರು ತಮ್ಮ ಅಂಗಡಿಗಳನ್ನು ಬಂದ್ ಮಾಡಬಹುದು ಎಂದು ಕರೆ ಕೊಟ್ಟಿದ್ದಾರೆ‌. ಆದ್ರೆ ನೀವು ಮಾತ್ರ ಈ ವಿಷಯದಲ್ಲಿ ಅಪ್ಪು ಬಾಸ್‌ಗೆ ಅವಮಾನ ಮಾಡುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ” ಎಂದು ಅಮರ್‌ ಎಂಬವರು ಕಮೆಂಟ್ ಮಾಡಿದ್ದಾರೆ.

ಬಿಜೆಪಿ ಪ್ರೊಪಗಾಂಡಕ್ಕೆ ಬಳಕೆಯಾಗುತ್ತಿರುವ ‘ಕಾಶ್ಮೀರ್‌ ಫೈಲ್ಸ್‌’ ಸಿನಿಮಾಕ್ಕೆ ಅಪಾರ ಪ್ರಚಾರ ನೀಡುವುದರ ಜೊತೆಗೆ ರಾಜ್ಯ ಸರ್ಕಾರ ತೆರಿಗೆ ವಿನಾಯಿತಿಯನ್ನೂ ನೀಡಿರುವುದನ್ನು ಪ್ರಸ್ತಾಪಿಸಿರುವ ಜನರು, ಪುನೀತ್‌ ರಾಜ್‌ಕುಮಾರ್‌ ಅವರು ಕೊನೆಯ ಸಿನಿಮಾಕ್ಕೆ ಸರ್ಕಾರ ತೆರಿಗೆ ವಿನಾಯಿತಿ ಏಕೆ ನೀಡಿಲ್ಲ ಎಂದು ಪ್ರಶ್ನಿಸಿದ್ದಾರೆ.

“ಕಾಶ್ಮೀರ್ ಫೈಲ್ಸ್ ಸಿನೆಮಾ ತೆರಿಗೆ ವಿನಾಯಿತಿ ಕೊಟ್ಟು ಜೇಮ್ಸ್‌‌ಗೆ ವಿನಾಯಿತಿ ಕೊಡದೇ ಇರೋ ಸರ್ಕಾರ ಅಪ್ಪು ಸರ್‌ಗೆ ಅವಮಾನ ಮಾಡಿದೆ. ಇದರ ಬಗ್ಗೆ ಮಾತನಾಡಿ” ಎಂದು  ಮುಸ್ತಫಾ ಮೊಹಮದ್‌ ಹಾಗೂ ಐಜಿ ಚಿನ್ನಪ್ಪ ಎಂಬವರು ಆಗ್ರಹಿಸಿದ್ದಾರೆ.

“ಕೇವಲ ಮುಸಲ್ಮಾನರ ವಹಿವಾಟು ಸ್ವಯಂ ಪ್ರೇರಿತ ಬಂದ್ ಅಷ್ಟೇ. ರಾಜ್ ಫ್ಯಾಮಿಲಿ ನೆಪ ಮಾಡಿ ಬೆಂಕಿ ಹಚ್ಚಬೇಡಿ ಮಹೇಶ್ ವಿಕ್ರಂ ಹೆಗ್ಡೆ” ಎಂದು  ಸಫಾನ್ ಮೊಹಮ್ಮದ್ ವಿನಂತಿಸಿದ್ದಾರೆ.

ಹಿಜಾಬ್‌ ಧಾರ್ಮಿಕ ಹಕ್ಕಿನ ಭಾಗವಾಗಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಪ್ರಕರಣ ಸುಪ್ರೀಂ ಕೋರ್ಟ್ ಕದ ತಟ್ಟಿದೆ. ಇದರ ನಡುವೆ, ತಮ್ಮ ಧಾರ್ಮಿಕ ಹಕ್ಕಿಗಾಗಿ ಮುಸ್ಲಿಂ ಸಮುದಾಯಗಳು ಆಗ್ರಹಿಸುತ್ತಿವೆ. ತೀರ್ಪು ಬಂದ ಒಂದು ದಿನದ ಬಳಿಕ  ಬಂದ್ ಆಚರಿಸುವುದಾಗಿ ಮುಸ್ಲಿಂ ಮುಖಂಡರು ಹೇಳಿದ್ದರು.

ಕೋಮುದ್ವೇಷ: ರಿಪೋರ್ಟ್ ಮಾಡುವುದು ಹೇಗೆ?

ಕೋಮುದ್ವೇಷ ಹರಡುವುದು ಫೇಸ್‌ಬುಕ್‌ ಕಮ್ಯುನಿಟಿ ನಿಯಮಗಳ ಉಲ್ಲಂಘನೆಯಾಗಿರುತ್ತದೆ. ಹೀಗಾಗಿ ಸಂಬಂಧಪಟ್ಟ ಪೋಸ್ಟ್‌ನಲ್ಲಿ ಬಲಭಾಗದಲ್ಲಿನ ಮೂರು ಚುಕ್ಕೆಗಳನ್ನು ಕ್ಲಿಕ್ ಮಾಡಿ, ‘ರೀಪೋರ್ಟ್ ಪೋಸ್ಟ್‌’ ಆಯ್ಕೆ ಮಾಡಿದರೆ, ಯಾವ ಆಯಾಮದ ಪೋಸ್ಟ್‌ ಎಂದು ಫೇಸ್‌ಬುಕ್ ಕೇಳುತ್ತದೆ. ಪೋಸ್ಟ್‌ಗೆ ಸಂಬಂಧಿಸಿದ ಆಯಾಮಗಳನ್ನು (ಉದಾಹರಣೆಗೆ ‘hate speech’, violence) ಆಯ್ಕೆ ಮಾಡಿ ರಿಪೋರ್ಟ್ ಮಾಡಬಹುದು.


ಇದನ್ನೂ ಓದಿರಿ: ಕನ್ನಡ ಚಿತ್ರರಂಗಕ್ಕೆ ಹೊಸ ಕ್ರಿಯಾಶೀಲತೆ ತಂದುಕೊಟ್ಟ ’ಅಪ್ಪು ಡ್ಯಾನ್ಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. The judgement of the Karanataka High Court on Hijab shows how the facist BJP has hijacked the judiciary of the country. May God have mercy upon our land, sweet homeland, free Her from the clutches of the destructive forces. Jai Hind!

LEAVE A REPLY

Please enter your comment!
Please enter your name here

- Advertisment -

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...