Homeಕರ್ನಾಟಕಕನ್ನಡ ರಾಜ್ಯೋತ್ಸವದಂದು ‘ಪುನೀತ್ ರಾಜ್‌ಕುಮಾರ್‌‌’ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ

ಕನ್ನಡ ರಾಜ್ಯೋತ್ಸವದಂದು ‘ಪುನೀತ್ ರಾಜ್‌ಕುಮಾರ್‌‌’ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ

- Advertisement -
- Advertisement -

ಕನ್ನಡ ಚಿತ್ರರಂಗದ ಮೇರುನಟ ದಿವಂಗತ ಡಾ. ಪುನೀತ್ ರಾಜ್‍ಕುಮಾರ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ನವೆಂಬರ್ 1ರಂದು ಪ್ರದಾನ ಮಾಡಲು ರಾಜ್ಯ ಸರ್ಕಾರ ತಿರ್ಮಾನಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಕನ್ನಡ ರಾಜ್ಯೋತ್ಸವದಂದು ಪ್ರಶಸ್ತಿ ಪ್ರದಾನ ಮಾಡುವ ಕುರಿತು ತಿಳಿಸಿದ್ದಾರೆ.

ನಮ್ಮನ್ನಗಲಿದ ನಾಡಿನ ಪ್ರತಿಭಾನ್ವಿತ ನಟ ಪುನೀತ್ ರಾಜ್‌ಕುಮಾರ್‌ ಅವರಿಗೆ ಮರಣೋತ್ತರವಾಗಿ ಪ್ರತಿಷ್ಠಿತ ಕರ್ನಾಟಕ ರತ್ನ ಗೌರವ ನೀಡಬೇಕು ಎಂಬ ಅಭಿಮಾನಿಗಳ ಕೂಗಿಗೆ ರಾಜ್ಯ ಸರ್ಕಾರ ಸಕರಾತ್ಮಕವಾಗಿ ಸ್ಪಂದಿಸಿ, ಪ್ರಶಸ್ತಿ ಘೊಷಣೆ ಮಾಡಿತ್ತು.

’ಪುನೀತ್ ರಾಜ್‌ಕುಮಾರ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂಬ ಬೇಡಿಕೆ ಚಿತ್ರರಂಗ ಮತ್ತು ಅಭಿಮಾನಿಗಳಿಂದ ಕೇಳಿ ಬಂದಿದೆ. ತಕ್ಷಣಕ್ಕೆ ಈ ಬೇಡಿಕರ ಬಗ್ಗೆ ಏನು ಹೇಳಲಾಗದು. ಈ ಬಗ್ಗೆ ಪ್ರಮುಖರ ಜತೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳುತ್ತೇವೆ’ ಎಂದು ಈ ಹಿಂದೆ ಬೊಮ್ಮಾಯಿಯವರು ಹೇಳಿದ್ದರು.

ಅಭಿಮಾನಿಗಳಿಂದ ಪ್ರೀತಿಯಿಂದ ಅಪ್ಪು ಎಂದು ಕರೆಸಿಕೊಳ್ಳುವ ಪವರ್‌ ಸ್ಟಾರ್ ಪುನೀತ್ ರಾಜಕುಮಾರ್ ಕನ್ನಡ ಚಿತ್ರರಂಗದ ಪ್ರಮುಖ ನಾಯಕನಟ. ಪುನೀತ್ ರಾಜ್‌ಕುಮಾರ್‌ ನಟರಾಗಿಯಷ್ಟೇ ಅಲ್ಲದೆ ಹಿನ್ನೆಲೆ ಗಾಯಕರಾಗಿ, ನಿರ್ಮಾಪಕರಾಗಿಯೂ ಚಿತ್ರರಂಗಕ್ಕೆ ಕೊಡುಗೆ ನೀಡಿದ್ದಾರೆ.

1976 ರಲ್ಲಿ ತೆರೆಕಂಡ ಡಾ.ರಾಜ್‌ಕುಮಾರ್‌ ಅಭಿನಯದ ‘ಪ್ರೇಮದ ಕಾಣಿಕೆ’ ಚಿತ್ರದ ಮೂಲಕ ತೆರೆಯ ಮೇಲೆ ಕಾಣಿಸಿಕೊಂಡಿದ್ದರು. ಆಗ ಪುನೀತ್ ಆರು ತಿಂಗಳು ಮಗು. ನಂತರ ವಸಂತ ಗೀತ (1980)ಮೂಲಕ ಬಾಲ ನಟನಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಪುನೀತ್‌ ರಾಜ್‌ಕುಮಾರ್, ಸುಮಾರು ನಾಲ್ಕು ದಶಕಗಳ ತಮ್ಮ ಸಿನಿಜೀವನದಲ್ಲಿ ಬಾಲ ಕಲಾವಿದನಾಗಿ 14 ಚಿತ್ರಗಳು ಮತ್ತು ನಾಯಕ ನಟನಾಗಿ 28ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿರುವ ಅಣ್ಣಾವ್ರ ಕುಟುಂಬದ ಕುಡಿ ಪುನೀತ್ ರಾಜ್‌ಕುಮಾರ್. 1975 ರ ಮಾರ್ಚ್ 17 ರಂದು ವರನಟ ಡಾ.ರಾಜಕುಮಾರ್ ಮತ್ತು ಪಾರ್ವತಮ್ಮರವರ ಕಿರಿಯ ಪುತ್ರನಾಗಿ ಪುನೀತ್ ರಾಜ್‌ಕುಮಾರ್ ಜನಿಸಿದರು. ಇವರ ಹಿರಿಯ ಸಹೋದರರಾದ ಶಿವರಾಜ ಕುಮಾರ್ ಮತ್ತು ರಾಘವೇಂದ್ರ ರಾಜಕುಮಾರ್ ಕನ್ನಡ ಚಿತ್ರರಂಗದ ಯಶಸ್ವಿ ನಾಯಕನಟರು.

ತಂದೆ ರಾಜ್‌ಕುಮಾರ್ ಅವರ ಚಿತ್ರಗಳನ್ನು ನೋಡುತ್ತಾ, ಅವರ ಶೂಟಿಂಗ್‌ ಸೆಟ್‌ಗಳಿಗೆ ಭೇಟಿ ಕೊಡುತ್ತಿದ್ದ ಅಪ್ಪುಗೆ ಬಾಲ್ಯದಿಂದಲೇ ನಟನೆಯಲ್ಲಿ ಆಸಕ್ತಿಯಿತ್ತು. ಈ ಕಾರಣದಿಂದಲೇ ಬಾಲ ನಟನಾಗಿ ಚಿತ್ರರಂಗದಲ್ಲಿ ಅಳಿಸದ ಹೆಜ್ಜೆಗುರುತು ಮೂಡಿಸಿದ್ದಾರೆ.

ಬಾಲ್ಯದಲ್ಲಿ ತನ್ನ ತಂದೆ ರಾಜಕುಮಾರ್ ಅಭಿನಯದ ಚಿತ್ರಗಳಲ್ಲಿ ಬಾಲ್ಯ ನಟನಾಗಿ, ಭಾಗ್ಯವಂತ, ಚಲಿಸುವ ಮೋಡಗಳು, ಎರಡು ನಕ್ಷತ್ರಗಳು, ಪ್ರೇಮದ ಕಾಣಿಕೆ, ಬೆಟ್ಟದ ಹೂವು, ಶಿವ ಮೆಚ್ಚಿದ ಕಣ್ಣಪ್ಪ, ಪರಶುರಾಮ್, ಯಾರಿವನು, ಭಕ್ತ ಪ್ರಹ್ಲಾದ, ವಸಂತ ಗೀತ, ಭೂಮಿಗೆ ಬಂದ ಭಗವಂತ, ಸನಾದಿ ಅಪ್ಪಣ್ಣ, ತಾಯಿಗೆ ತಕ್ಕ ಮಗ ಸೇರಿದಂತೆ ಹಲವು ಚಿತ್ರಗಳ ಮೂಲಕ ಜನರ ಮನಗೆದ್ದಿದ್ದಾರೆ. ಪುನೀತ್ ಅವರ ಮೊದಲು ಹೆಸರು ಮಾ.ಲೋಹಿತ್.

ಪುನೀತ್‌ ನಟನೆಯ 1985ರಲ್ಲಿ ತೆರೆಕಂಡ ಬೆಟ್ಟದ ಹೂವು ಚಿತ್ರದ ರಾಮು ಪಾತ್ರಕ್ಕೆ ರಾಷ್ಟ್ರ ಪ್ರಶಸ್ತಿಯನ್ನು ಪಡೆದಿದ್ದಾರೆ. ‘ಚಲಿಸುವ ಮೋಡಗಳು’ ಹಾಗೂ ‘ಎರಡು ಕನಸು’ ಚಿತ್ರಗಳಿಗಾಗಿ ಅತ್ಯುತ್ತಮ ಬಾಲ ನಟ ವಿಭಾಗದಲ್ಲಿ ರಾಜ್ಯ ಪ್ರಶಸ್ತಿ ಪಡೆದಿದ್ದಾರೆ.

ನಂತರ ಪುನೀತ್ 2002ರ ಅಪ್ಪು ಚಿತ್ರದ ಮೂಲಕ ನಾಯಕ ನಟನಾಗಿ ಬೆಳ್ಳಿತೆರೆಗೆ ಕಾಲಿಟ್ಟರು. ಅವರ ಅಭಿ, ಆಕಾಶ್, ಅರಸು, ಮಿಲನ, ಜಾಕಿ, ಹುಡುಗರು, ಅಣ್ಣಾ ಬಾಂಡ್, ಪವರ್, ಮೌರ್ಯ, ನಮ್ಮ ಬಸವ, ಪೃಥ್ವಿ, ವಂಶಿ, ರಾಜ್‌, ಪರಮಾತ್ಮ, ಯಾರೇ ಕೂಗಾಡಲಿ, ನಟ ಸಾರ್ವಭೌಮ, ರಾಜಕುಮಾರ, ಅಂಜನಿಪುತ್ರ, ರಣವಿಕ್ರಮ, ದೊಡ್ಮನೆ ಹುಡುಗ, ರಾಮ್, ನಿನ್ನಿಂದಲೇ, ಮೈತ್ರಿ, ಚಕ್ರವ್ಯೂಹ, ಯುವರತ್ನ ಸೇರಿದಂತೆ ಹಲವು ಯಶಸ್ವಿ ಚಲನಚಿತ್ರಗಳಲ್ಲಿ ನಟಿಸಿದರು.

ಇದನ್ನೂ ಓದಿ: ಪುನೀತ್ ರಾಜಕುಮಾರ್ ನುಡಿನಮನ; ಮುಗ್ಧ ನಗುವೊಂದರ ಕಣ್ಮರೆ

ಪುನೀತ್‌ ರಾಜ್‌ಕುಮಾರ್ ಚಿತ್ರ ನಿರ್ಮಾಪಕರಾಗಿ`ಕವಲುದಾರಿ’, `ಮಾಯಾಬಜಾರ್’, ಫ್ರೆಂಚ್ ಬಿರಿಯಾನಿ, ಲಾ, ಫ್ಯಾಮಿಲಿ ಪ್ಯಾಕ್ ಎಂಬ ಚಿತ್ರಗಳನ್ನು ಪಿಆರ್‌ಕೆ ಪ್ರೊಡಕ್ಷನ್‌ ಎಂಬ ತಮ್ಮ ಹೋಮ್ ಬ್ಯಾನರ್ನಲ್ಲಿ ನಿರ್ಮಿಸಿದ್ದಾರೆ. ಜೊತೆಗೆ ಪ್ರೊಡಕ್ಷನ್‌ ಹೌಸ್ ಮೂಲಕ ಕಿರುತೆರೆ ಧಾರಾವಾಹಿಗಳನ್ನು ಕೂಡ ನಿರ್ಮಿಸಿದ್ದಾರೆ. ತಾಯಿಯ ನೆನಪಿನಲ್ಲಿ `ಪಿ.ಆರ್.ಕೆ ‘ ಆಡಿಯೋ ಕಂಪನಿಯೊಂದನ್ನು ಸ್ಥಾಪಿಸಿದ್ದಾರೆ.

ಇದರ ಜೊತೆಗೆ ಪ್ರಸಿದ್ಧ ಟಿವಿ ಕಾರ್ಯಕ್ರಮ ಕನ್ನಡದ ಕೋಟ್ಯಧಿಪತಿ, ಫ್ಯಾಮಿಲಿ ಪವರ್ ಶೋ ಗಳನ್ನು ನಿರೂಪಣೆ ಮಾಡಿದ್ದಾರೆ. ಚಿತ್ರನಟ ,ಹಿನ್ನೆಲೆ ಗಾಯಕ ಮತ್ತು ದೂರದರ್ಶನ ನಿರೂಪಕರೂ ಆಗಿದ್ದ ಪುನೀತ್‌ ರಾಜ್‌ಕುಮಾರ್, ನಾಯಕ ನಟರಾಗಿ ನಟಿಸಿದ್ದ ಮಿಲನ ಮತ್ತು ಜಾಕಿ ಚಿತ್ರಗಳಿಗೆ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಯ ಉತ್ತಮ ನಟ ಪ್ರಶಸ್ತಿ ತನ್ನದಾಗಿಸಿಕೊಂಡಿದ್ದರು. ಅಲ್ಲದೆ, ಹುಡುಗರು, ಯಾರೇ ಕೂಗಾಡಲಿ, ರಣ ವಿಕ್ರಮ, ರಾಜಕುಮಾರ ಸಿನಿಮಾಗಳಿಗೆ ದಕ್ಷಿಣ ಭಾರತ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮ್ಯಾನೇಜ್‌ಮೆಂಟ್‌ ಸರ್ಕಾರ| ಆಡಿಯೊ ನನ್ನದೇ, ರಾಜೀನಾಮೆ ಕೇಳಿದರೆ ಕೊಡುವೆ- ಮಾಧುಸ್ವಾಮಿ

0
ರಾಜ್ಯದ ಕಾನೂನು ಸಚಿವ ಮಾಧುಸ್ವಾಮಿ ಅವರ ಆಡಿಯೊವೊಂದು ಸೋರಿಕೆಯಾಗಿರುವ ಪರಿಣಾಮ ಬಿಜೆಪಿ ಸರ್ಕಾರ ತೀವ್ರ ಮುಜುಗರಕ್ಕೊಳಗಾಗಿದ್ದು ಸರ್ಕಾರದೊಳಗೆ ಆಕ್ರೋಶ ಭುಗಿಲೆದ್ದಿದೆ. ಬಿಜೆಪಿ ನಾಯಕರು ಮಾಧುಸ್ವಾಮಿ ಹೇಳಿಕೆಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸುತ್ತಿದ್ದು, ಮಾಧುಸ್ವಾಮಿಯವರೂ ಪ್ರಕರಣಕ್ಕೆ ಸಂಬಂಧಿಸಿದಂತೆ...