Homeಕರ್ನಾಟಕಬಿಪಿನ್ ರಾವತ್‌ ಅವರನ್ನು ನಿಂದಿಸಿದರೆ ಕಾನೂನು ಕ್ರಮ: ಬೊಮ್ಮಾಯಿ ಎಚ್ಚರಿಕೆ

ಬಿಪಿನ್ ರಾವತ್‌ ಅವರನ್ನು ನಿಂದಿಸಿದರೆ ಕಾನೂನು ಕ್ರಮ: ಬೊಮ್ಮಾಯಿ ಎಚ್ಚರಿಕೆ

- Advertisement -
- Advertisement -

ಹಾವೇರಿ: ಸಿಡಿಎಸ್‌ (ಮೂರು ಸೇನೆಗಳ ಮುಖ್ಯಸ್ಥ) ಬಿಪಿನ್ ರಾವತ್ ಅವರ ನಿಧನಕ್ಕೆ ಸಂಬಂಧಿಸಿದಂತೆ ಕೆಲವು ವಿಕೃತ ಮನಸ್ಸುಗಳು ಬೇಕಾಬಿಟ್ಟಿ, ಸಂಭ್ರಮಾಚರಣೆಯ ಟ್ವೀಟ್‍ಗಳನ್ನು ಮಾಡಿದ್ದು, ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಪೊಲೀಸ್ ಮುಖ್ಯಸ್ಥರಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಸಿದ್ದಾರೆ.

ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಅವರು ಶಿಗ್ಗಾಂವ್ ತಾಲ್ಲೂಕು ಪಂಚಾಯತಿ ಕಾರ್ಯಾಲಯದ ಮತಗಟ್ಟೆಯಲ್ಲಿ ಮತ ಚಲಾಯಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ.

ಇದನ್ನು ಪ್ರತಿ ಭಾರತೀಯನೂ ಅತ್ಯಂತ ಕಠಿಣ ಶಬ್ಧಗಳಲ್ಲಿ ಖಂಡಿಸಬೇಕು. ದೇಶಕ್ಕಾಗಿ ದೊಡ್ಡ ಸೇನೆಯನ್ನು ಮುನ್ನಡೆಸಿ ರಕ್ಷಣೆ ಮಾಡುತ್ತಿದ್ದವರ ಬಗ್ಗೆ, ಆ ಹುದ್ದೆಯ ಘನತೆಯ ಕುರಿತು ಪರಿಕಲ್ಪನೆ ಇಲ್ಲದೆ ಅತ್ಯಂತ ಬೇಜವಾಬ್ದಾರಿಯಿಂದ ಟ್ವೀಟ್ ಮಾಡಿರುವವರ ಕೃತ್ಯಕ್ಕೆ ಸಂಬಂಧಿಸಿದಂತೆ ಫೇಸ್ ಬುಕ್, ಟ್ವೀಟ್ ಮಾಡಿರುವವರ ವಿಳಾಸವನ್ನು ಪತ್ತೆ ಮಾಡಿ ಕೂಡಲೇ ಪ್ರಕರಣ ದಾಖಲು ಮಾಡಿ ಕಾನೂನಾತ್ಮಕ ಕ್ರಮವನ್ನು ತೆಗೆದುಕೊಳ್ಳಲಾಗುವುದು. ಈ ವಿಕೃತಿಯನ್ನು ಕ್ಷಮಿಸುವ ಮಾತಿಲ್ಲ. ಖಂಡಿತವಾಗಿ ಶಿಕ್ಷೆ ಆಗಲೇಬೇಕು ಎಂದಿದ್ದಾರೆ.

ಹೆಲಿಕಾಪ್ಟರ್ ದುರಂತದಲ್ಲಿ ಮರಣವನ್ನಪ್ಪಿರುವ ಸಿಡಿಎಸ್‌ ಬಿಪಿನ್ ರಾವತ್ ಅವರಿಗೆ ಕನ್ನಡನಾಡಿನ ಪರವಾಗಿ ಗೌರವ ಮತ್ತು ಶ್ರದ್ಧಾಂಜಲಿಯನ್ನು ಅರ್ಪಿಸುವುದಾಗಿ ತಿಳಿಸಿದ್ದಾರೆ.

ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿರುವ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಬೆಂಗಳೂರಿನ ಕಮ್ಯಾಂಡ್ ಆಸ್ಪತ್ರೆಯಲ್ಲಿ ಭೇಟಿಯಾಗಿದ್ದು, ಅತ್ಯುತ್ತಮ ಚಿಕಿತ್ಸೆಯನ್ನು ಪರಿಣಿತ ವೈದ್ಯರ ತಂಡ ನೀಡುತ್ತಿದ್ದಾರೆ. ಅವರು ಶೀಘ್ರವಾಗಿ ಗುಣಮುಖರಾಗುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಬೆಳಗಾವಿ ಅಧಿವೇಶನ: ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದಿಂದ ಕಾನೂನು, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಪ್ರಶ್ನೋತ್ತರ ಇರುತ್ತದೆ. ಪ್ರತಿಪಕ್ಷದವರು ಎತ್ತುವ ವಿಚಾರಗಳಿಗೆ ಸೂಕ್ತ ಉತ್ತರ ನೀಡಲು ಸಿದ್ಧರಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಹಕ್ಕಿಜ್ವರ: ಕೇರಳದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿರುವ ಬಗ್ಗೆ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಪ್ರತಿಕ್ರಿಯಿಸಿ, ಈ ಬಗ್ಗೆ ಸಭೆ ನಡೆಸಲಾಗಿದ್ದು, ಸೂಕ್ತ ಲಸಿಕೆ, ಔಷಧಿಗಳ ಪೂರೈಕೆ ಸೇರಿದಂತೆ ಮಾರ್ಗಸೂಚಿಗಳನ್ನು ಪಾಲಿಸಲು ತಿಳಿಸಲಾಗಿದೆ. ಮಕ್ಕಳಿಗೆ ಲಸಿಕೆ ನೀಡುವ ಬಗ್ಗೆ ಕೇಂದ್ರದಿಂದ ಮಾರ್ಗದರ್ಶನವನ್ನು ನಿರೀಕ್ಷಿಸಲಾಗಿದೆ. ಕನ್ನಡ ಸಾಹಿತ್ಯ ಸಮ್ಮೇಳನ ದಿನಾಂಕ ನಿಗದಿಯಾಗಿಲ್ಲ ಎಂದು ಹೇಳಿದ್ದಾರೆ.

ಸಿಎಂ ಟ್ವೀಟ್‌

ಬಿಪಿನ್ ರಾವತ್‌ ಅವರನ್ನು ನಿಂದಿಸಿದರೆ ಕ್ರಮ ಜರುಗಿಸುವುದಾಗಿ ಸಿಎಂ ಹೇಳಿಕೆ ನೀಡಿದ ಬಳಿಕ ಈ ಕುರಿತು ಟ್ವೀಟ್ ಕೂಡ ಮಾಡಿದ್ದಾರೆ.


ಇದನ್ನೂ ಓದಿರಿ: ಕಾಲೇಜು ಆರಂಭವಾಗಿ 2 ತಿಂಗಳಾದರೂ ಹಾಸ್ಟೆಲ್‌ನಲ್ಲಿ ಊಟವಿಲ್ಲ: ಮಹಾರಾಣಿ ವಿದ್ಯಾರ್ಥಿನಿಯರ ಪ್ರತಿಭಟನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ: ಲೈಂಗಿಕ ದೌರ್ಜ್ಯನ್ಯದ ಆರೋಪದ ಬೆನ್ನಲ್ಲಿ ರಾಜಭವನಕ್ಕೆ ಪೊಲೀಸರಿಗೆ ಪ್ರವೇಶ ನಿಷೇಧಿಸಿದ ಗವರ್ನರ್‌

0
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ ಬೋಸ್ ವಿರುದ್ಧ ನಿನ್ನೆ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದರು. ಇದರ ಬೆನ್ನಲ್ಲಿ ರಾಜ್ಯಪಾಲರು ತನಿಖೆಯ ನೆಪದಲ್ಲಿ ಪೊಲೀಸರು ರಾಜಭವನಕ್ಕೆ ಪ್ರವೇಶಿಸದಂತೆ ನಿಷೇಧಿಸಿದ್ದಾರೆ, ಇದಲ್ಲದೆ...