Homeಮುಖಪುಟಯುಪಿ ಚುನಾವಣೆ ಮೂಂದೂಡಿ, ರ್ಯಾಲಿಗಳನ್ನು ರದ್ದುಗೊಳಿಸಿ: ಚುನಾವಣಾ ಆಯೋಗ, ಪ್ರಧಾನಿಗೆ ಹೈಕೋರ್ಟ್ ಮನವಿ

ಯುಪಿ ಚುನಾವಣೆ ಮೂಂದೂಡಿ, ರ್ಯಾಲಿಗಳನ್ನು ರದ್ದುಗೊಳಿಸಿ: ಚುನಾವಣಾ ಆಯೋಗ, ಪ್ರಧಾನಿಗೆ ಹೈಕೋರ್ಟ್ ಮನವಿ

- Advertisement -
- Advertisement -

2022ರ ಫೆಬ್ರವರಿಯಲ್ಲಿ ನಡೆಯಬೇಕಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯನ್ನು ಒಂದು ಅಥವಾ ಎರಡು ತಿಂಗಳು ಮೂಂದೂಡಬೇಕೆಂದು ಚುನಾವಣಾ ಆಯೋಗಕ್ಕೆ ಅಲಹಾಬಾದ್ ಹೈಕೋರ್ಟ್ ಮನವಿ ಮಾಡಿದೆ. ಅಲ್ಲದೆ ರಾಜ್ಯದಲ್ಲಿ ಚುನಾವಣಾ ರ್ಯಾಲಿಗಳನ್ನು ಸಹ ರದ್ದುಗೊಳಿಸಬೇಕೆಂದು ಪ್ರಧಾನಿ ಮೋದಿಯವರಿಗೆ ಮನವಿ ಮಾಡಿದೆ. ಹೆಚ್ಚುತ್ತಿರುವ ಒಮೈಕ್ರಾನ್ ಪ್ರಕರಣಗಳು ತೀವ್ರಥರನಾದ ಮೂರನೇ ಅಲೆಗೆ ಕಾರಣವಾಗಬಹುದು ಎಂಬ ಕಾರಣದಿಂದ ಈ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ.

ಈಗಾಗಲೇ ಪ್ರಧಾನಿ ಮೋದಿ ಸೇರಿದಂತೆ ವಿವಿಧ ಪಕ್ಷದ ರಾಜಕಾರಣಿಗಳು ಉತ್ತರ ಪ್ರದೇಶದಲ್ಲಿ ಭರ್ಜರಿ ಚುನಾವಣಾ ರ್ಯಾಲಿಗಳನ್ನು ನಡೆಸುತ್ತಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಜನರು ಸೇರುತ್ತಿದ್ದು ಅಲ್ಲಿ ಕೋವಿಡ್ ಪ್ರೊಟೋಕಾಲ್‌ಗಳನ್ನು ಗಾಳಿಗೆ ತೂರಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ.

ಜಾಮೀನು ಅರ್ಜಿಯ ವಿಚಾರಣೆ ವೇಳೆ ಜಸ್ಟೀಸ್ ಶೇಖರ್ ಯಾದವ್‌ರವರು ರ್ಯಾಲಿಗಳನ್ನು ನಿಲ್ಲಿಸದಿದ್ದರೆ ಮೂರನೇ ಅಲೆಯು ಎರಡನೇ ಅಲೆಗಿಂತ ಕೆಟ್ಟದಾಗಿರುತ್ತದೆ. ಜನರಿದ್ದರೆ ಪ್ರಪಂಚ ಅಲ್ಲವೇ ಎಂದು ಅಭಿಪ್ರಾಯಪಟ್ಟಿದ್ದಾರೆ.

ನ್ಯಾಯಾಲಯದ ಸಭಾಂಗಣದಲ್ಲಿ ನೂರಾರು ಅರ್ಜಿಗಳು ಬರುತ್ತಿದ್ದು, ನೂರಾರು ಜನ ಯಾವುದೇ ದೈಹಿಕ ಅಂತರಗಳನ್ನು ಕಾಯ್ದುಕೊಳ್ಳದೆ ಗಿಜಿಗುಡುವುದನ್ನು ಗಮನಿಸಿದ ನ್ಯಾಯಮೂರ್ತಿಗಳು ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ಮೇಲಿನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಗ್ರಾಮ ಪಂಚಾಯ್ತಿ ಚುನಾವಣೆಗಳು ಮತ್ತು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯು ಕೋವಿಡ್ ವೇಗವಾಗಿ ಹರಡಲು ಕಾರಣವಾಗಿತ್ತು. ಈಗ ಉತ್ತರ ಪ್ರದೇಶ ರಾಜ್ಯದಲ್ಲಿ ಕೋವಿಡ್ ಪ್ರೊಟೋಕಾಲ್‌ಗಳನ್ನು ಅನುಸರಿಸಿ ಚುನಾವಣಾ ರ್ಯಾಲಿಗಳನ್ನು ನಡೆಸುವುದು ಅಸಾಧ್ಯ. ಹಾಗಾಗಿ ರ್ಯಾಲಿಗಳನ್ನೇ ರದ್ದುಗೊಳಿಸಿ ಒಂದೆರೆಡು ತಿಂಗಳು ಚುನಾವಣೆ ಮುಂದೂಡಬೇಕೆಂದು ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ.

ಚುನಾವಣಾ ಆಯೋಗವು ಇದನ್ನು ಗಂಭೀರವಾಗಿ ಪರಿಗಣಿಸಿ ದೈಹಿಕ ರ್ಯಾಲಿಗಳನ್ನು ರದ್ದುಗೊಳಿಸಬೇಕು. ರಾಜಕೀಯ ಪಕ್ಷಗಳು ಟಿವಿ ಮತ್ತು ಪತ್ರಿಕೆಗಳ ಮೂಲಕ ಚುನಾವಣಾ ಪ್ರಚಾರ ನಡೆಸಲಿ. ಸಂವಿಧಾನದ ಆರ್ಟಿಕಲ್ 21ನ್ನು ಉಲ್ಲೇಖಿಸಿದ ಅವರು ಭಾರತದ ಎಲ್ಲರಿಗೂ ಬದುಕುವ ಹಕ್ಕಿದೆ ಎಂದು ತಿಳಿಸಿದ್ದಾರೆ.


‌ಇದನ್ನೂ ಓದಿ; ಅಯೋಧ್ಯೆಯಲ್ಲಿ ಭೂಮಿ ಕಬಳಿಕೆ ಆರೋಪ; ಬಿಜೆಪಿ ನಾಯಕರ ವಿರುದ್ಧ ಪ್ರಿಯಾಂಕಾ ವಾಗ್ದಾಳಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೋವಿಶೀಲ್ಡ್ ಲಸಿಕೆಯ ಅಡ್ಡ ಪರಿಣಾಮಗಳ ಪರೀಕ್ಷೆ, ಸಂತ್ರಸ್ತರಿಗೆ ಪರಿಹಾರ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

0
ಔಷಧೀಯ ಕಂಪನಿ ಅಸ್ಟ್ರಾಜೆನೆಕಾ ತನ್ನ ಕೋವಿಶೀಲ್ಡ್ ಲಸಿಕೆ ಅಪರೂಪದ ಅಡ್ಡ ಪರಿಣಾಮಗಳನ್ನು ಉಂಟು ಮಾಡಬಹುದು ಎಂದು ಒಪ್ಪಿಕೊಂಡ ಹಿನ್ನೆಲೆ, ವಕೀಲರೊಬ್ಬರು ಈ ಲಸಿಕೆಯ ಅಡ್ಡ ಪರಿಣಾಮಗಳು ಮತ್ತು ಅಪಾಯದ ಅಂಶಗಳನ್ನು ಪರೀಕ್ಷಿಸಲು ವೈದ್ಯಕೀಯ...