Homeಮುಖಪುಟನೀಟ್-ಸ್ನಾತಕೋತ್ತರ (ಪಿಜಿ) ವೈದ್ಯಕೀಯ ಪ್ರವೇಶ ಪರೀಕ್ಷೆ ಮುಂದೂಡಿಕೆ

ನೀಟ್-ಸ್ನಾತಕೋತ್ತರ (ಪಿಜಿ) ವೈದ್ಯಕೀಯ ಪ್ರವೇಶ ಪರೀಕ್ಷೆ ಮುಂದೂಡಿಕೆ

- Advertisement -
- Advertisement -

ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ನೀಟ್-ಸ್ನಾತಕೋತ್ತರ (ಪಿಜಿ) ವೈದ್ಯಕೀಯ ಪ್ರವೇಶ ಪರೀಕ್ಷೆ ಮುಂದೂಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್‌ ತಿಳಿಸಿದ್ದಾರೆ.

ಅಂದಾಜು 1.7 ಲಕ್ಷ ಎಂಬಿಬಿಎಸ್ ವಿದ್ಯಾರ್ಥಿಗಳು ಮತ್ತು ವೈದ್ಯರು ಈ ಪ್ರಕ್ರಿಯೆಗೆ ನೋಂದಾಯಿಸಿಕೊಖಡಿದ್ದು, ಏಪ್ರಿಲ್ 18 ರಂದು ಪರೀಕ್ಷೆ ನಿಗದಿಪಡಿಸಲಾಗಿತ್ತು. ಆದರೆ ಕೊರೊನಾ ಎರಡನೇ ಅಲೆಯ ಕಾರಣಕ್ಕೆ ಮುಂದೂಡಲಾಗಿದೆ.

“ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಈ ಹಿಂದೆ ನಿರ್ಧರಿಸಿದಂತೆ ಏಪ್ರಿಲ್ 18 ರಂದು ನಡೆಯಬೇಕಿದ್ದ ನೀಟ್-ಪಿಜಿ 2021 ಪರೀಕ್ಷೆಯನ್ನು ಮುಂದೂಡಲು ಭಾರತ ಸರ್ಕಾರ ನಿರ್ಧರಿಸಿದೆ. ಮುಂದಿನ ದಿನಾಂಕವನ್ನು ನಂತರ ನಿರ್ಧರಿಸಲಾಗುವುದು. ನಮ್ಮ ಯುವ ವೈದ್ಯಕೀಯ ವಿದ್ಯಾರ್ಥಿಗಳ ಯೋಗಕ್ಷೇಮವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ” ಎಂದು ಆರೋಗ್ಯ ಸಚಿವರು ಟ್ವೀಟ್ ಮಾಡಿದ್ದಾರೆ.

ಇದಕ್ಕೂ ಮುನ್ನವೇ ದೇಶಾದ್ಯಂತ ಹೊಸ ಕೋವಿಡ್ ಪ್ರಕರಣಗಳ ಹಿನ್ನೆಲೆಯಲ್ಲಿ ನೀಟ್-ಸ್ನಾತಕೋತ್ತರ (ಪಿಜಿ) ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು ಮುಂದೂಡಬೇಕೆಂದು ಕೋರಿ ವಿದ್ಯಾರ್ಥಿ- ವೈದ್ಯರ ಗುಂಪೊಂದು ಗುರುವಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.

ಮೇ 4 ರಿಂದ ಪ್ರಾರಂಭವಾಗಬೇಕಿದ್ದ ಸಿಬಿಎಸ್‌ಇ 10 ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸುವ ಮತ್ತು 12 ನೇ ತರಗತಿ ಪರೀಕ್ಷೆಗಳನ್ನು ಮುಂದೂಡುವ ಕೇಂದ್ರದ ನಿರ್ಧಾರವನ್ನೂ ಅವರು ಉಲ್ಲೇಖಿಸಿದ್ದಾರೆ.

ಇಂದು ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ನೀಟ್ ಪರೀಕ್ಷೆ ಈಗ ನಡೆಸುವುದನ್ನು ತೀವ್ರವಾಗಿ ಟೀಕಿಸಿದ್ದಾರೆ. “ಕೊರೊನಾ ಎರಡನೇ ಅಲೆಯಿಂದಾಗಿ ಸಿಬಿಎಸ್‌ಇ ಪರೀಕ್ಷೆಗಳು ಈಗ ರದ್ದಾಗಿವೆ. ಹೆಚ್ಚುತ್ತಿರುವ ಪ್ರಕರಣಗಳು ಮತ್ತು ಸಾವು ನೋವುಗಳೊಂದಿಗೆ, ನಮ್ಮ ವೈದ್ಯರು ರೋಗದ ವಿರುದ್ಧ ತೀವ್ರವಾಗಿ ಹೋರಾಡುತ್ತಿರುವಾಗ, ಪಿಜಿ ಕೋರ್ಸ್‌ಗಳಿಗೆ ನೀಟ್ ಪರೀಕ್ಷೆ‌ ನಡೆಸಲು ಇದು ಸರಿಯಾದ ಸಮಯವೆ?” ಎಂದು ಅವರು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ನ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಸೇರಿದಂತೆ ಪ್ರತಿಪಕ್ಷ ನಾಯಕರು ನೀಟ್ ಪರೀಕ್ಷೆಗಳನ್ನು ಮುಂದೂಡಬೇಕೆಂದು ಅಥವಾ ಆನ್‌ಲೈನ್‌ನಲ್ಲಿ ನಡೆಸಬೇಕೆಂದು ಕರೆ ನೀಡಿದ್ದರು.

ಆತಂಕಕ್ಕೊಳಗಾದ ವಿದ್ಯಾರ್ಥಿಗಳು ಮತ್ತು ಪೋಷಕರು ಸಹ ಇದೇ ರೀತಿಯ ಕರೆಗಳನ್ನು ನೀಡಿದ್ದರು, ಅವರು 18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಲು ಸಹ ಅವಕಾಶವಿಲ್ಲ ಎಂಬುದನ್ನು ಒತ್ತಿ ಹೇಳಿದ್ದರು.


ಇದನ್ನೂ ಓದಿ: ಇದು ನೀಟ್ ಪರೀಕ್ಷೆ ನಡೆಸಲು ಸರಿಯಾದ ಸಮಯವೆ?: ಕೇಂದ್ರಕ್ಕೆ ಎಂ. ಕೆ. ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...