Homeಮುಖಪುಟಆರ್ಥಿಕ ಕುಸಿತದಿಂದ ಬಡತನ ನಿವಾರಣೆಯ ಮೇಲೆ ಪ್ರತಿಕೂಲ ಪರಿಣಾಮ: ಅಭಿಜಿತ್‌ ಬ್ಯಾನರ್ಜಿ

ಆರ್ಥಿಕ ಕುಸಿತದಿಂದ ಬಡತನ ನಿವಾರಣೆಯ ಮೇಲೆ ಪ್ರತಿಕೂಲ ಪರಿಣಾಮ: ಅಭಿಜಿತ್‌ ಬ್ಯಾನರ್ಜಿ

- Advertisement -
- Advertisement -

ಆರ್ಥಿಕ ಕುಸಿತ ದೇಶಕ್ಕೆ ಹಲವಾರು ಗಂಭೀರ ಸವಾಲುಗಳನ್ನು ಒಡ್ಡಿದ್ದು, ಬಡತನ ನಿವಾರಣೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು ಎಂದು ನೊಬೆಲ್‌ ವಿಜೇತ ಅರ್ಥಶಾಸ್ತ್ರಜ್ಞ ಅಭಿಜಿತ್‌ ಬ್ಯಾನರ್ಜಿ ಹೇಳಿದ್ದಾರೆ.

ಜೈಪುರ ಸಾಹಿತ್ಯೋತ್ಸವದಲ್ಲಿ “ಕಳಪೆ ಅರ್ಥಶಾಸ್ತ್ರ: ಜಾಗತಿಕ ಬಡತನದ ವಿರುದ್ಧ ಹೋರಾಡುವುದು” ಎಂಬ ವಿಷಯದ ಕುರಿತು ಮಾತನಾಡಿದ ಅವರು, ನಗರ ಮತ್ತು ಗ್ರಾಮೀಣ ವಲಯಗಳು ಉದ್ಯೋಗ ಸೃಷ್ಟಿಗೆ ಮತ್ತು ಕಡಿಮೆ ನುರಿತ ಕಾರ್ಮಿಕರ ಲಭ್ಯತೆಗಾಗಿ ಪರಸ್ಪರ ಅವಲಂಬಿಸಿವೆ. “ಭಾರತದಲ್ಲಿ ಆವರಿಸಿರುವ ಆರ್ಥಿಕ ಕುಸಿತ ಸದ್ಯದಲ್ಲಿ ಅಂತ್ಯವಾಗುವ ಲಕ್ಷಣಗಳಿಲ್ಲ” ಎಂದು ಹೇಳಿದ್ದಾರೆ.

ಆರ್ಥಿಕತೆಯನ್ನು ಸುಧಾರಿಸಲು ಸಾಕಷ್ಟು ಹಣವಿಲ್ಲದ ಕಾರಣ, ಕಷ್ಟಕರ ಪರಿಸ್ಥಿತಿಯಿಂದ ಹೊರಬರಲು ಬಹಳ ಸಮಯ ತೆಗೆದುಕೊಳ್ಳಬಹುದು. “ಕ್ರಮೇಣ ಹಲವಾರು ವಿಷಯಗಳಲ್ಲಿ ಕೆಲಸ ಮಾಡುವ ಅವಶ್ಯಕತೆಯಿದೆ. ನಮಗೆ ಹೆಚ್ಚಿನ ಬೇಡಿಕೆಯ ಕೊರತೆಯಿದೆ … ಜನರು ವಿಶ್ವಾಸ ಹೊಂದಿಲ್ಲದ ಕಾರಣ ಖರ್ಚು ಮಾಡದಿರುವುದೇ ಸಮಸ್ಯೆಗೆ ಕಾರಣವಾಗಿದೆ ಎಂದು ಹೇಳಿದ್ದಾರೆ.

2019 ರಲ್ಲಿ ಇತರ ಇಬ್ಬರ ಜೊತೆಯಲ್ಲಿ ನೊಬೆಲ್ ಅರ್ಥಶಾಸ್ತ್ರ ಪ್ರಶಸ್ತಿಯನ್ನು ಗೆದ್ದ ಭಾರತೀಯ-ಅಮೆರಿಕನ್ ಅರ್ಥಶಾಸ್ತ್ರಜ್ಞ ಬ್ಯಾನರ್ಜಿ, ನಗರ ವಲಯದಲ್ಲಿನ ಮಂದಗತಿಯು ಇಡೀ ಆರ್ಥಿಕತೆಗೆ ಋಣಾತ್ಮಕ ಪರಿಣಾಮಗಳನ್ನು ಉಂಟುಮಾಡುತ್ತಿದೆ. ಅಲ್ಲದೆ, ಬ್ಯಾಂಕಿಂಗ್ ಕ್ಷೇತ್ರಕ್ಕೆ ಒತ್ತು ನೀಡಲಾಗಿದ್ದು, ಜಾಮೀನು ನೀಡುವ ಸ್ಥಿತಿಯಲ್ಲಿ ಸರ್ಕಾರ ಇಲ್ಲ ಎಂದು ಅವರು ಹೇಳಿದ್ದಾರೆ.

ಬಡತನ ನಿವಾರಣೆಗೆ ಬಹುಮುಖಿ ವಿಧಾನಕ್ಕೆ ಒತ್ತು ನೀಡಿದ ಡಾ. ಬ್ಯಾನರ್ಜಿ, ಈ ಸಮಸ್ಯೆಯನ್ನು ಎದುರಿಸಲು “ಒಂದೇ ಬೆಳ್ಳಿಯ ಗುಂಡಿಗೆ ಬದಲಾಗಿ ಅನೇಕ ಬೆಳ್ಳಿ ಹಲಗೆಗಳ” ಅಗತ್ಯವಿದೆ. ಬಡವರಿಗೆ ಸಹಾಯಧನ ಮುಖ್ಯವಾಗಿದೆ ಮತ್ತು ಅದನ್ನು ನಿಲ್ಲಿಸಬಾರದು. ಅಸಹ್ಯ ಬಡತನದಲ್ಲಿ ವಾಸಿಸುವ ಜನರಿಗೆ ಕೆಲವು ಸವಲತ್ತುಗಳನ್ನು ನೀಡಬೇಕು. ಇದು ಪ್ರಯತ್ನವನ್ನು ಮುಂದುವರಿಸಲು ಮತ್ತು ಹೆಚ್ಚು ಶ್ರಮಿಸಲು ಪ್ರೋತ್ಸಾಹಿಸುತ್ತದೆ. ಆದರೆ ಅಗತ್ಯವಿಲ್ಲದವರಿಗೆ ಸಬ್ಸಿಡಿ ನೀಡಿದಾಗ ಗೊಂದಲ ಉಂಟಾಗುತ್ತದೆ ಎಂದು ಅವರು ಹೇಳಿದ್ದಾರೆ.

ಪರಿಣಾಮಕಾರಿ ಆಡಳಿತಕ್ಕಾಗಿ ದೇಶಕ್ಕೆ “ಉತ್ತಮ ವಿರೋಧ” ಬೇಕು ಎಂದ ಅವರು “ಪ್ರತಿಪಕ್ಷಗಳು ದುರ್ಬಲವಾಗಿದ್ದಾಗ, ಏನು ಬೇಕಾದರೂ ಮಾಡಬಹುದು ಎಂದು ಸರ್ಕಾರ ಭಾವಿಸುವಂತಹ ಪರಿಸ್ಥಿತಿಗೆ ಕಾರಣವಾಗುತ್ತದೆ ಎಂದಿದ್ದಾರೆ.

ಆಡಳಿತ ಪಕ್ಷ ತಮ್ಮ ಆಡಳಿತವನ್ನು ದಕ್ಷವಾಗಿ ನಿರ್ವಹಿಸಬೇಕಾದರೆ ಉತ್ತಮ ವಿರೋಧ ಪಕ್ಷವಿರಬೇಕು. ಆಗ ಆಡಳಿತ ಪಕ್ಷ ತನ್ನ ಸರಿತಪ್ಪಗಳನ್ನು ಅರ್ಥ ಮಾಡಿಕೊಳ್ಳಲು ಸಹಾಯವಾಗುತ್ತದೆ.  ಸರ್ವಾಧಿಕಾರ ಮತ್ತು ಆರ್ಥಿಕ ಯಶಸ್ಸಿನ ನಡುವಿನ ಸಂಪರ್ಕವು ಅನೇಕವೇಳೆ ಭ್ರಮೆ ಎಂದ ಅವರು, ಸರ್ಕಾರವು ವಿಶ್ವಾಸಾರ್ಹ ಡೇಟಾವನ್ನು ಒದಗಿಸಲು ವಿಫಲವಾದರೆ ವಿದೇಶಿ ಹೂಡಿಕೆದಾರರು ಆತಂಕಕ್ಕೊಳಗಾಗುತ್ತಾರೆ. ವಿಶ್ವಾಸಾರ್ಹ ಡೇಟಾ ಕೊಟ್ಟಿದ್ದೇ ಆದರಲ್ಲಿ ಇದು ಹೆಚ್ಚಿನ ಹೂಡಿಕೆಗಳಿಗೆ ಸಹಾಯ ಮಾಡುತ್ತದೆ ಮತ್ತು ಜಾಗತಿಕ ಭಾಗವಹಿಸುವಿಕೆಯನ್ನು ಖಚಿತಪಡಿಸುತ್ತದೆ ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...