ಬಳ್ಳಾರಿ ಜಿಲ್ಲೆಯ ವಿಜಯನಗರ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್(ವಿಮ್ಸ್) ಆಸ್ಪತ್ರೆಯಲ್ಲಿ ವಿದ್ಯುತ್ ವ್ಯತ್ಯಯದಿಂದಾಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ರೋಗಿಗಳಿಗೆ ಆಮ್ಲಜನಕ ಸರಬರಾಜು ಆಗದೆ ಮೂವರು ಸಾವನ್ನಪ್ಪಿರುವ ಘಟನೆ ಗುರುವಾರ ವರದಿಯಾಗಿದೆ. ಮೃತಪಟ್ಟವರನ್ನು ಮೌಲಾ ಹುಸೇನ್(35), ಚಿಟ್ಟೆಮ್ಮ(30) ಮತ್ತು 18 ವರ್ಷದ ಮನೋಜ್ ಎಂದು ಗುರುತಿಸಲಾಗಿದೆ.
ಮೌಲಾ ಹುಸೇನ್ ಅವರು ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದು, ಸೆಪ್ಟೆಂಬರ್ 11 ರಂದು ದಾಖಲಾಗಿದ್ದರು. ಚೇತಮ್ಮ ಅವರು ಸೆಪ್ಟೆಂಬರ್ 13 ರಂದು ಹಾವು ಕಚ್ಚಿದ ಕಾರಣಕ್ಕೆ ಮತ್ತು ಅದೇ ದಿನ ಚೇಳು ಕಚ್ಚಿದ ಕಾರಣಕ್ಕೆ ಮನೋಜ್ ಅವರು ವಿಮ್ಸ್‌ಗೆ ದಾಖಲಾಗಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಸುದ್ದಿಗಾರರೊಂದಿಗೆ ಮಾತನಾಡಿದ ಮನೋಜ್ ಅವರ ಸಹೋದರ ನರೇಶ್, ತನ್ನ ಸಹೋದರ ಆಸ್ಪತ್ರೆಗೆ ದಾಖಲಾದ ದಿನವೇ ಆಸ್ಪತ್ರೆಯಲ್ಲಿ ವಿದ್ಯುತ್ ವ್ಯತ್ಯಯವಾಗಿತ್ತು ಎಂದು ಹೇಳಿದ್ದಾರೆ.
ಇದನ್ನೂ ಓದಿ: BBMP ಶಾಲೆ ನಿರ್ಮಾಣಕ್ಕೆ ಮಂಜೂರಾದ ಜಾಗ BJP ಶಾಸಕನ ಪಾಲು: ದಾಖಲೆ ಬಿಡುಗಡೆ
“ಆಸ್ಪತ್ರೆಯಲ್ಲಿ ಸುಮಾರು ಎರಡು ಗಂಟೆಗಳ ಕಾಲ ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ನಂತರ ನನ್ನ ಸಹೋದರನನ್ನು ಬೇರೆ ವಾರ್ಡ್‌ಗೆ ಸ್ಥಳಾಂತರಿಸಲಾಯಿತು. ಬುಧವಾರ ಬೆಳಿಗ್ಗೆ 6 ರಿಂದ 11.30 ರ ನಡುವೆ ಆಸ್ಪತ್ರೆಯಲ್ಲಿ ವಿದ್ಯುತ್ ಇರಲಿಲ್ಲ. ಈ ಸಮಯದಲ್ಲಿ, ಸಾವುಗಳು ಸಂಭವಿಸಿವೆ” ಎಂದು ಅವರು ಹೇಳಿದ್ದಾರೆ.
“ಈ ವೇಳೆ ನಾವು ನಾವು ಇರಲಿಲ್ಲ. ಅದೇ ದಿನ ನಮ್ಮ ಸಹೋದರನ ಸಾವಿನ ಬಗ್ಗೆ ತಿಳಿಸಲಾಯಿತು. ಅವರು ನನ್ನ ಸಹೋದರನನ್ನು ಐಸಿಯು ವಾರ್ಡ್‌ಗೆ ಸ್ಥಳಾಂತರಿಸಿದ್ದಾರೆ ಎಂದು ನಮಗೆ ಹೇಳಿದ್ದರು. ಅಲ್ಲಿ ನಮ್ಮನ್ನು ಒಳಗೆ ಬಿಡಲಿಲ್ಲ” ಎಂದು ನರೇಶ್ ಹೇಳಿದ್ದಾರೆ.
ಆಸ್ಪತ್ರೆ ಆವರಣದಲ್ಲಿ ಟ್ರಾನ್ಸ್‌ಫಾರ್ಮರ್ ಬ್ಲಾಸ್ಟ್ ಆಗಿದ್ದರಿಂದ ವಿದ್ಯುತ್ ವ್ಯತ್ಯಯವಾಗಿದ್ದು, ಬ್ಯಾಕಪ್‌ಗೆ ಇದ್ದ ಜನರೇಟರ್ ವಿಫಲವಾಗಿತ್ತು ಎಂದು ಹೆಸರು ಹೇಳಲು ಇಚ್ಛಿಸದ ಆಸ್ಪತ್ರೆಯ ಗುತ್ತಿಗೆ ನೌಕರರು ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ವಿದ್ಯುತ್ ವ್ಯತ್ಯಯವಾದೊಡನೆ ರೋಗಿಗಳನ್ನು ತಕ್ಷಣವೇ ಐಸಿಯುಗೆ ಸ್ಥಳಾಂತರಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ವೇದಗಣಿತ ತರಬೇತಿಗೆ ತಲಾ ಒಂದು ಲಕ್ಷ ನೀಡುತ್ತಿರುವ ಗ್ರಾಮ ಪಂಚಾಯ್ತಿಗಳು: ದಲಿತರಿಗಾಗಿ ಮೀಸಲಾದ SCSP TSP ಹಣ ದುರ್ಬಳಕೆ
ಈ ಬಗ್ಗೆ ಸರ್ಕಾರ ತನಿಖೆಗೆ ಆದೇಶಿಸಿದ್ದರೂ, ಆಮ್ಲಜನಕದ ಕೊರತೆಯಿಂದ ರೋಗಿಗಳು ಸಾವನ್ನಪ್ಪಿದ್ದಾರೆ ಎಂಬ ಆರೋಪವನ್ನು ಆಸ್ಪತ್ರೆ ಅಧಿಕಾರಿಗಳು ತಳ್ಳಿಹಾಕಿದ್ದಾರೆ.
“ವಿದ್ಯುತ್ ಇಲ್ಲದೆ ಇರುವ ಕಾರಣಕ್ಕೆ ಚೆಟ್ಟೆಮ್ಮ ಮತ್ತು ಹುಸೇನ್ ಮೃತಪಟ್ಟಿರುವುದು ಕಾಕತಾಳೀಯ. ಇಬ್ಬರು ರೋಗಿಗಳ ಆರೋಗ್ಯ ಹದಗೆಟ್ಟಿತ್ತು. ಅವರ ಸಾವು ವಿದ್ಯುತ್ ಇದ್ದಾಗ ಸಂಭವಿಸಿದ್ದು, ಈ ಬಗ್ಗೆ ತನಿಖೆಗೆ ಆದೇಶಿಸಿದ್ದೇವೆ” ಎಂದು ವಿಮ್ಸ್ ನಿರ್ದೇಶಕ ಟಿ.ಗಂಗಾಧರ ಗೌಡ ತಿಳಿಸಿದ್ದಾರೆ.
ಆಸ್ಪತ್ರೆಯ ಸಿಬ್ಬಂದಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಈ ವಿಷಯ ಪ್ರಸ್ತಾಪಿಸಿ, ಇಂತಹ ಘಟನೆಗಳು ನಡೆಯದಂತೆ ಸರ್ಕಾರ ಏನು ಮಾಡಿದೆ ಎಂದು ಪ್ರಶ್ನಿಸಿದ್ದಾರೆ.
ಆದರೆ ಸಮಾಜ ಕಲ್ಯಾಣ ಮತ್ತು ಸಾರಿಗೆ ಸಚಿವ ಬಿ.ಶ್ರೀರಾಮುಲು ವಿದ್ಯುತ್ ಕೈಕೊಟ್ಟಿದ್ದರಿಂದ ಅವಘಡ ಸಂಭವಿಸಿದೆ ಎಂಬ ಆರೋಪವನ್ನು ತಳ್ಳಿಹಾಕಿದ್ದಾರೆ.
ಇದನ್ನೂ ಓದಿ: ಬಿಎಸ್‌ವೈ ಕುಟುಂಬದ ವಿರುದ್ಧ ಭ್ರಷ್ಟಾಚಾರ ಪ್ರಕರಣ| ತನಿಖೆ ನಡೆಸಿ ವರದಿ ಸಲ್ಲಿಸಲು ಲೋಕಾಯುಕ್ತಕ್ಕೆ ಕೋರ್ಟ್ ಸೂಚನೆ
“ವಿದ್ಯುತ್ ಕಡಿತವು ಆಗಾಗ್ಗೆ ಆಗುತ್ತಿತ್ತು. ಆಸ್ಪತ್ರೆಯಲ್ಲಿ 1.5 ಗಂಟೆಗಳ ಬ್ಯಾಕಪ್ ಅನ್ನು ಒದಗಿಸುವ ಜನರೇಟರ್ ಮತ್ತು ಇನ್ನೊಂದು 1.5 ಗಂಟೆಗಳ ಬ್ಯಾಕಪ್ ಅನ್ನು ಒದಗಿಸುವ ಯುಪಿಎಸ್ ಇತ್ತು. ಸಾವುಗೆ ಆಸ್ಪತ್ರೆಯ ಅಧಿಕಾರಿಗಳ ನಿರ್ಲಕ್ಷ್ಯ ಕಾರಣವಲ್ಲ” ಎಂದು ಅವರು ಹೇಳಿದ್ದಾರೆ.
ಆಸ್ಪತ್ರೆಯಲ್ಲಿ ಸಂಭವಿಸಿದ ಸಾವುಗಳ ಕುರಿತು ಪರಿಶೀಲಿಸಲು ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಪ್ರಾಧ್ಯಾಪಕಿ ಡಾ.ಸ್ಮಿತಾ ನೇತೃತ್ವದ ಸಮಿತಿಯನ್ನು ರಚಿಸಲಾಗಿದೆ.


