Homeಕರ್ನಾಟಕವಿದ್ಯುತ್ ಕಳ್ಳತನ: ಕುಮಾರಸ್ವಾಮಿ ವಿರುದ್ಧ FIR ದಾಖಲು

ವಿದ್ಯುತ್ ಕಳ್ಳತನ: ಕುಮಾರಸ್ವಾಮಿ ವಿರುದ್ಧ FIR ದಾಖಲು

- Advertisement -
- Advertisement -

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಜೆ.ಪಿ. ನಗರದ ಮೂರನೇ ಹಂತದಲ್ಲಿರುವ ತಮ್ಮ ಮನೆಗೆ ದೀಪಾಲಂಕಾರ ಮಾಡಲು ವಿದ್ಯುತ್ ಕಳವು ಮಾಡಿದ ಆರೋಪದ ಮೇಲೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಕುಮಾರಸ್ವಾಮಿ ಅವರ ಮನೆಗೆ ದೀಪಾಲಂಕಾರ ಮಾಡಲು ನೇರವಾಗಿ ವಿದ್ಯುತ್ ಕಂಬದಿಂದ ಸಂಪರ್ಕ ಕಲ್ಪಿಸಿರುವುದನ್ನು ಪತ್ತೆ ಹಚ್ಚಿದ್ದ ಕೆಲವರು, ಸಾಮಾಜಿಕ ಮಾಧ್ಯಮಗಳ ಮೂಲಕ ಈ ವಿಷಯ ಬಹಿರಂಗ ಪಡಿಸಿದ್ದರು.

ಬೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವಿ. ಪ್ರಶಾಂತ್ ಕುಮಾರ್ ಈ ಕುರಿತು ಬೆಸ್ಕಾಂ ಜಾಗೃತ ದಳದ ಬೆಂಗಳೂರು ವೃತ್ತದ ವ್ಯಾಪ್ತಿಯ ಜಯನಗರ ಠಾಣೆಗೆ ದೂರು ಸಲ್ಲಿಸಿದ್ದರು.

ಇದನ್ನೂ ಓದಿ: ವಿದ್ಯುತ್ ಕಳ್ಳತನ ಒಪ್ಪಿಕೊಂಡ ಕುಮಾರಸ್ವಾಮಿಗೆ ಅಭಿನಂದನೆ: ಡಿಕೆ ಶಿವಕುಮಾರ್

”ವಿದ್ಯುಚ್ಛಕ್ತಿ ಕಾಯ್ದೆ 2003ರ ಸೆಕ್ಷನ್ 135ರ ಅಡಿಯಲ್ಲಿ ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ” ಎಂದು ಮೂಲಗಳು ತಿಳಿಸಿವೆ.

ಬೆಸ್ಕಾಂ ಜಾಗೃತ ದಳದ ಡಿವೈಎಸ್‌ಪಿ ಅನುಷಾ ಭೇಟಿ ಪರಿಶೀಲಿಸಿದ್ದರು. ಇನ್‌ಸ್ಪೆಕ್ಟರ್ ಎಸ್. ಪ್ರದೀಪ್‌ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

”ವಿದ್ಯುತ್ ಕಳವು ಮಾಡಿರುವುದು ಸಾಬೀತಾದರೆ ಮೂರು ವರ್ಷ ಜೈಲು ಅಥವಾ ದಂಡ ವಿಧಿಸಬಹುದಾಗಿದೆ” ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಕುಮಾರಸ್ವಾಮಿ ವಿರುದ್ಧ ವಿದ್ಯುತ್‌ ಕಳ್ಳತನದ ಆರೋಪದ ಬೆನ್ನಲ್ಲೇ ”ವಿದ್ಯುತ್ ಕಳ್ಳ ಎಚ್.ಡಿ.ಕುಮಾರಸ್ವಾಮಿ” ಎಂದು ಬರೆದು ಅಂಟಿಸಿರುವ ಪೋಸ್ಟರ್‌ ವ್ಯಾಪಕವಾಗಿ ವೈರಲ್‌ ಆಗಿದೆ.

ಎಚ್‌ಡಿಕೆ ನಿವಾಸದ ಬಳಿ ‘ಕರೆಂಟ್ ಕದ್ದರು ಎಚ್‌ಡಿಕೆ ಪ್ರಾಮಾಣಿಕತೆಯನ್ನು ಮೆಚ್ಚಲೇಬೇಕು’, ‘ವಿದ್ಯುತ್ ಕಳ್ಳ ಎಚ್.ಡಿ.ಕುಮಾರಸ್ವಾಮಿ’ ಎಂದು ಪೋಸ್ಟರ್‌ ಅಂಟಿಸಲಾಗಿದೆ.

ಈ ಘಟನೆ ಬೆನ್ನಲ್ಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಪೋಸ್ಟರ್‌ಗಳನ್ನು ತೆರವುಗೊಳಿಸಿದ್ದಾರೆ. ಈ ಪೋಸ್ಟರ್‌ಗಳು ಸಾಮಾಜಿಕ ಮಾದ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರೋಹಿತ್ ವೇಮುಲಾ ಪ್ರಕರಣ: ಪೊಲೀಸರ ವರದಿ ಸಂಪೂರ್ಣವಾಗಿ ಸುಳ್ಳಿನಿಂದ ಕೂಡಿದೆ; ಪ್ರತಿಕ್ರಿಯಿಸಿದ ಕುಟುಂಬ

0
ಹೈದರಾಬಾದ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ರೋಹಿತ್ ವೇಮುಲಾ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ತೆಲಂಗಾಣ ಪೊಲೀಸರು ಮುಕ್ತಾಯದ ವರದಿಯನ್ನು ಸಲ್ಲಿಸಿದ್ದಾರೆ. ಇದಲ್ಲದೆ ವರದಿಯಲ್ಲಿ ರೋಹಿತ್‌ ವೇಮುಲಾ 'ದಲಿತ ಅಲ್ಲ', ತನ್ನ “ನಿಜವಾದ ಜಾತಿಯ ಗುರುತು”...