Homeಅಂತರಾಷ್ಟ್ರೀಯಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ: 500ಕ್ಕೂ ಹೆಚ್ಚು ಸಾವು; ವರದಿ

ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ: 500ಕ್ಕೂ ಹೆಚ್ಚು ಸಾವು; ವರದಿ

- Advertisement -
- Advertisement -

ಪೂರ್ವ ಅಫ್ಘಾನಿಸ್ತಾನದಲ್ಲಿ ಸೋಮವಾರ (ಸೆ.1) ಸಂಭವಿಸಿದ ಭೂಕಂಪದಲ್ಲಿ ಸುಮಾರು 500 ಜನರು ಸಾವನ್ನಪ್ಪಿದ್ದಾರೆ ಮತ್ತು 1000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಫ್ಘಾನಿಸ್ತಾನದ ಸರ್ಕಾರಿ ಪ್ರಸಾರಕ ರೇಡಿಯೋ ಟೆಲಿವಿಷನ್ ಅಫ್ಘಾನಿಸ್ತಾನ್ (ಆರ್‌ಟಿಎ) ಮೂಲಗಳನ್ನು ಉಲ್ಲೇಖಿಸಿ livemint.com ವರದಿ ಮಾಡಿದೆ.

ಕಾಬೂಲ್‌ನಲ್ಲಿರುವ ತಾಲಿಬಾನ್ ನೇತೃತ್ವದ ಆರೋಗ್ಯ ಅಧಿಕಾರಿಗಳು ದೇಶದ ದೂರದ ಪ್ರದೇಶಗಳನ್ನು ತಲುಪಲು ಕೆಲಸ ಮಾಡುತ್ತಿದ್ದಾರೆ. ಅಲ್ಲಿನ ಪರಿಸ್ಥಿತಿ ತಿಳಿದುಕೊಂಡು ಸಾವು-ನೋವು ಮತ್ತು ಆಸ್ತಿ-ಪಾಸ್ತಿ ಹಾನಿಯ ಕುರಿತು ಅಧಿಕೃತ ಮಾಹಿತಿಯನ್ನು ನೀಡುತ್ತೇವೆ ಎಂಬುವುದಾಗಿ ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

ಬಿಬಿಸಿ ಸುದ್ದಿ ಸಂಸ್ಥೆ 600 ಜನರು ಸಾವಿಗೀಡಾಗಿದ್ದಾರೆ ಎಂದು ವರದಿ ಮಾಡಿದೆ. ಇನ್ನೂ ಕೆಲ ಮಾಧ್ಯಮಗಳು 250ರಿಂದ 300 ಜನರು ಅಸುನೀಗಿದ್ದಾಗಿ ಹೇಳಿದೆ.

ಭೂಕಂಪದಿಂದ ಕುನಾರ್ ಪ್ರಾಂತ್ಯದಲ್ಲಿ ಮೂರು ಗ್ರಾಮಗಳು ನೆಲಸಮವಾಗಿವೆ. ಕುನಾರ್‌ನ ನುರ್ಗಲ್, ಚಾವ್ಕೇ ಮತ್ತು ವಾಟಪುರ್ ಜಿಲ್ಲೆಗಳು ಹೆಚ್ಚು ಹಾನಿಗೊಳಗಾಗಿವೆ ಎಂದು ಅಫ್ಘಾನಿಸ್ತಾನದ ಸುದ್ದಿ ಸಂಸ್ಥೆ ಬಖ್ತರ್ ವರದಿ ಮಾಡಿದೆ.

ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಪ್ರದೇಶದ ಗಡಿಗೆ ರಕ್ಷಣಾ ತಂಡಗಳು ಧಾವಿಸಿವೆ. ಅಲ್ಲಿ ಭೂಮಿಯ 10 ಕಿಮೀ (6 ಮೈಲಿ) ಆಳದಲ್ಲಿ ಸಂಭವಿಸಿದ ಮಧ್ಯರಾತ್ರಿಯ ಭೂಕಂಪದಿಂದ ಮಣ್ಣು ಮತ್ತು ಕಲ್ಲಿನ ಮನೆಗಳು ನೆಲಸಮಗೊಂಡಿವೆ ಎಂದು ವರದಿ ಹೇಳಿದೆ.

ಭೂಕಂಪದಿಂದ ದೇಶದ ಪೂರ್ವ ಪ್ರಾಂತ್ಯಗಳಲ್ಲಿ ಜೀವ ಮತ್ತು ಆಸ್ತಿಪಾಸ್ತಿ ಹಾನಿಯಾಗಿದ್ದು, ರಕ್ಷಣಾ ಕಾರ್ಯಗಳು ನಡೆಯುತ್ತಿವೆ ಎಂದು ತಾಲಿಬಾನ್ ಸರ್ಕಾರದ ವಕ್ತಾರ ಜಬಿಹುಲ್ಲಾ ಮುಜಾಹಿದ್ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಅಫ್ಘಾನಿಸ್ತಾನದ ಜಲಾಲಾಬಾದ್‌ನ ಪೂರ್ವ ಈಶಾನ್ಯಕ್ಕೆ ಸುಮಾರು 27 ಕಿಲೋಮೀಟರ್ (17 ಮೈಲು) ದೂರದಲ್ಲಿ ಮಧ್ಯರಾತ್ರಿ 6.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ವರದಿ ಮಾಡಿದೆ.

ಕಾಬೂಲ್ ಮತ್ತು ನೆರೆಯ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಸುಮಾರು 370 ಕಿಲೋಮೀಟರ್ (230 ಮೈಲು) ದೂರದಲ್ಲಿ ಹಲವಾರು ಸೆಕೆಂಡುಗಳ ಕಾಲ ಕಂಪನದ ಅನುಭವವಾಗಿದೆ ಎಂದು ಎಎಫ್‌ಪಿ ವರದಿ ತಿಳಿಸಿದೆ.

ಮೊದಲ ಭೂಕಂಪದ ನಂತರ, ಆ ಪ್ರದೇಶದಲ್ಲಿ 30 ನಿಮಿಷಗಳ ಅವಧಿಯಲ್ಲಿ ಮೂರು ಅಥವಾ ನಾಲ್ಕು  ಕಂಪನಗಳು ಸಂಭವಿಸಿವೆ. ಅವುಗಳ ತೀವ್ರತೆ 4 ರಿಂದ 5 ರವರೆಗೆ ಇತ್ತು ಎಂದು ವರದಿ ಹೇಳಿದೆ.

ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆಯ ಪ್ರಕಾರ, ಭೂಮಿಯ ಎಂಟು ಕಿಲೋಮೀಟರ್ ಆಳದಲ್ಲಿ ಸಂಭವಿಸಿದ ಭೂಕಂಪದ ಕೇಂದ್ರಬಿಂದು ನಂಗರ್ಹಾರ್ ಪ್ರಾಂತ್ಯದ ಜಲಾಲಾಬಾದ್ ನಗರದಿಂದ 27 ಕಿಲೋಮೀಟರ್ ದೂರದಲ್ಲಿ ಪತ್ತೆಯಾಗಿದೆ.

ಅಫ್ಘಾನಿಸ್ತಾನವು ಆಗಾಗ್ಗೆ ಭೂಕಂಪಗಳಿಗೆ ತುತ್ತಾಗುತ್ತಿದೆ, ವಿಶೇಷವಾಗಿ ಹಿಂದೂ ಕುಶ್ ಪರ್ವತ ಶ್ರೇಣಿಯಲ್ಲಿ, ಯುರೇಷಿಯನ್ ಮತ್ತು ಇಂಡಿಯನ್ ಟೆಕ್ಟೋನಿಕ್ ಪ್ಲೇಟ್‌ಗಳ ಜಂಕ್ಷನ್ ಬಳಿ ಭೂಮಿ ಕಂಪಿಸುತ್ತಿವೆ.

ನಂಗರ್‌ಹಾರ್ ಪ್ರಾಂತ್ಯವು ಶುಕ್ರವಾರದಿಂದ ಶನಿವಾರದವರೆಗೆ ರಾತ್ರಿಯಿಡೀ ಪ್ರವಾಹಕ್ಕೆ ತುತ್ತಾಗಿದ್ದು, ಐದು ಜನರು ಸಾವನ್ನಪ್ಪಿದ್ದಾರೆ. ಕೃಷಿ ಮತ್ತು ಆಸ್ತಿಪಾಸ್ತಿ ನಾಶವಾಗಿದೆ ಎಂದು ಪ್ರಾಂತೀಯ ಅಧಿಕಾರಿಗಳು ತಿಳಿಸಿದ್ದಾರೆ.

‘ಭಾರತೀಯರ ವೆಚ್ಚದಲ್ಲಿ ‘ಬ್ರಾಹ್ಮಣರು’ ಲಾಭ ಗಳಿಸುತ್ತಿದ್ದಾರೆ’: ಶ್ವೇತಭವನ ಸಲಹೆಗಾರ ನವರೊ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...