Homeಮುಖಪುಟ'ಪಿಆರ್ ನಾಟಕ ಮಿತಿಯಲ್ಲಿರಲಿ' | ಕೋಳಿಗಳನ್ನು ರಕ್ಷಿಸಿದ ಅನಂತ್ ಅಂಬಾನಿಗೆ ನೆಟ್ಟಿಗರಿಂದ ಪಾಠ!

‘ಪಿಆರ್ ನಾಟಕ ಮಿತಿಯಲ್ಲಿರಲಿ’ | ಕೋಳಿಗಳನ್ನು ರಕ್ಷಿಸಿದ ಅನಂತ್ ಅಂಬಾನಿಗೆ ನೆಟ್ಟಿಗರಿಂದ ಪಾಠ!

- Advertisement -
- Advertisement -

ಜಾಮ್‌ನಗರದಿಂದ ದ್ವಾರಕಾಗೆ ಪಾದಯಾತ್ರೆ ನಡೆಸುತ್ತಿರು ಪ್ರಧಾನಿ ಮೋದಿ ಅವರ ಆಪ್ತ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಅವರು ”ಕೋಳಿಗಳ ಜೀವ ರಕ್ಷಣೆ” ಮಾಡಿದ್ದು ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ವ್ಯಂಗಕ್ಕೀಡಾಗಿದ್ದು, ”ಪಿಆರ್ ನಾಟಕ ಮಿತಿಯಲ್ಲಿರಲಿ” ಎಂದು ನೆಟ್ಟಿಗರು ಸಲಹೆ ನೀಡಿದ್ದಾರೆ. ಪಿಆರ್ ನಾಟಕ ಮಿತಿಯಲ್ಲಿರಲಿ

ಅನಂತ್ ಅಂಬಾನಿ ಅವರು ಪಾದಯಾತ್ರೆ ಮಾಡುತ್ತಿರುವಾಗ ಅವರ ಬಳಿಯಿಂದ ಕೋಳಿ ಸಾಕಣೆ ವ್ಯಾನ್ ಸಾಗಿದ್ದು, ಈ ವೇಳೆ ಅವರು ತಮ್ಮೊಂದಿಗೆ ನಡೆಯುತ್ತಿದ್ದ ತಮ್ಮ ಸಹಚರರೊಂದಿಗೆ ಕೋಳಿಗಳನ್ನು ಖರೀದಿಸಿ ಅವುಗಳನ್ನು ವಧೆಯಿಂದ ರಕ್ಷಿಸುವಂತೆ ಕೇಳಿಕೊಂಡಿದ್ದಾರೆ. ಇದರ ನಾಟಕೀಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ ಅವರು ಗುಜರಾತಿ ಭಾಷೆಯಲ್ಲಿ, “ಈ ಕೋಳಿಯನ್ನು ಉಳಿಸಿ. ಅದನ್ನು ಖರೀದಿಸಿ. ಅದರ ಮಾಲೀಕರಿಗೆ ಹಣ ನೀಡಿ” ಎಂದು ಹೇಳಿದ್ದಾರೆ. ಅನಂತ್ ಅಂಬಾನಿ ಕೋಳಿ ರಕ್ಷಣೆ ಮಾಡಿರುವ ನಿಖರವಾದ ಸ್ಥಳ ವರದಿಯಾಗಿಲ್ಲದಿದ್ದರೂ, ಗುಜರಾತ್‌ನ ರಸ್ತೆಗಳಲ್ಲಿ ಅವರು ಇತ್ತೀಚೆಗೆ ನಡೆಯುತ್ತಿದ್ದಾಗ ಘಟನೆ ನಡೆದಿದೆ ಎಂದು ದ ಫ್ರೀ ಪ್ರೆಸ್ ಜರ್ನಲ್ ವರದಿ ಮಾಡಿದೆ.

ಅದಾಗ್ಯೂ, ಹಲವು ಎಕ್ಸ್‌ ಬಳಕೆದಾರರು ಇದನ್ನು ಪಿಆರ್‌ (ಪ್ರಚಾರ) ಸ್ಟಂಟ್ ಎಂದು ಬಣ್ಣಿಸಿದ್ದು, ಅವರಿಗೆ ಅದನ್ನು ಮಿತಿಯಲ್ಲಿ ಮಾಡಲು ಸಲಹೆ ನೀಡಿದ್ದಾರೆ. ಜೊತೆಗೆ ಅನಂತ್‌ ಅಂಬಾನಿ ನಡೆಸುತ್ತಿರುವ ‘ವನತಾರಾ’ ಮೃಗಾಲಯದಲ್ಲಿರುವ ಸಿಂಹ ಮತ್ತು ಹುಲಿಗಳಿಗೆ ದನಗಳ ಮಾಂಸವನ್ನು ನೀಡುವುದನ್ನು ನೆನಪಿಸಿಕೊಂಡಿದ್ದಾರೆ.

ಎಕ್ಸ್‌ ಬಳಕೆದಾರರಾದ ರೋಶನ್ ರೈ ಅವರು, “ಇವರು ಮುಖೇಶ್ ಅಂಬಾನಿಯವರ ಮಗ ಅನಂತ್ ಅಂಬಾನಿ. ಜಾಮ್‌ನಗರದಿಂದ ದ್ವಾರಕೆಗೆ ಪಾದಯಾತ್ರೆ ಮಾಡುವಾಗ, ಕೋಳಿ ತುಂಬಿದ ಟ್ರಕ್ ಸಾಗಿಸುವುದನ್ನು ಅವರು ನೋಡಿದರು. ಅವರ ಹೃದಯ ಕರಗಿತು. ಅವರು ತಕ್ಷಣವೆ ಟ್ರಕ್ ಅನ್ನು ನಿಲ್ಲಿಸಿ ಕೋಳಿಗಳನ್ನು ವಧೆಯಿಂದ ರಕ್ಷಿಸಲು ಎರಡು ಪಟ್ಟು ಬೆಲೆಗೆ ಇಡೀ ಟ್ರಕ್ ಲೋಡ್ ಅನ್ನು ಖರೀದಿಸಿದ್ದಾರೆ.

ವನತಾರಾವನ್ನು ನಡೆಸುವ ಮತ್ತು ಅದರಲ್ಲಿ ಹುಲಿಗಳು ಮತ್ತು ಸಿಂಹಗಳನ್ನು ಹೊಂದಿರುವ ಅದೇ ವ್ಯಕ್ತಿ ಇವರಾಗಿದ್ದಾರೆ. ಅಲ್ಲಿನ ಸಿಂಹಗಳು ಮತ್ತು ಹುಲಿಗಳಿಗೆ ಆಹಾರಕ್ಕಾಗಿ ಪ್ರತಿದಿನ ಗೋಮಾಂಸ ಸೇರಿದಂತೆ ಟನ್‌ಗಳಷ್ಟು ಮಾಂಸವನ್ನು ವನತಾರಾಕ್ಕೆ ಸಾಗಿಸಲಾಗುತ್ತದೆ. ಪಿಆರ್ ನಾಟಕ ಮಿತಿಯಲ್ಲಿರಲಿ.” ಎಂದು ಅವರು ವ್ಯಂಗ್ಯವಾಡಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬೆಂಗಳೂರು ಮೆಟ್ರೋ ಪ್ರಯಾಣ ದರ ಏರಿಕೆ ವಿರುದ್ಧದ ಅರ್ಜಿ ತಿರಸ್ಕರಿಸಿದ ಹೈಕೋರ್ಟ್‌!

ಬೆಂಗಳೂರು ಮೆಟ್ರೋ ಪ್ರಯಾಣ ದರ ಏರಿಕೆ ವಿರುದ್ಧದ ಅರ್ಜಿ ತಿರಸ್ಕರಿಸಿದ ಹೈಕೋರ್ಟ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...