Homeಮುಖಪುಟದುರಸ್ಥಿ ಮಾಡಲಾಗದ ಸ್ಥಿತಿಗೆ ತಲುಪಿದ ದೆಹಲಿಯ ಪ್ರಗತಿ ಮೈದಾನ ಸುರಂಗ ಮಾರ್ಗ: ವರ್ಷದ ಹಿಂದೆ ಪ್ರಧಾನಿ...

ದುರಸ್ಥಿ ಮಾಡಲಾಗದ ಸ್ಥಿತಿಗೆ ತಲುಪಿದ ದೆಹಲಿಯ ಪ್ರಗತಿ ಮೈದಾನ ಸುರಂಗ ಮಾರ್ಗ: ವರ್ಷದ ಹಿಂದೆ ಪ್ರಧಾನಿ ಮೋದಿ ಉದ್ಘಾಟಿಸಿದ್ದ ಯೋಜನೆ

- Advertisement -
- Advertisement -

ಕಾಮಗಾರಿಯ ವಿಳಂಬ ಮತ್ತು ನಿರ್ವಹಣೆಯಲ್ಲಿನ ನಿರ್ಲಕ್ಷ್ಯದಿಂದ ದೆಹಲಿಯ ಪ್ರಗತಿ ಮೈದಾನದ ಸುರಂಗ ಮಾರ್ಗದಲ್ಲಿ ದೊಡ್ಡ ಮಟ್ಟದ ಬಿರುಕು ಕಾಣಿಸಿಕೊಂಡಿದ್ದು, ಸುರಂಗದ ಕೂಲಂಕುಷ ಪರೀಕ್ಷೆಯ ಅಗತ್ಯವಿದೆ ಎಂದು ದೆಹಲಿಯ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಯ ಹಿರಿಯ ಅಧಿಕಾರಿಯೊಬ್ಬರು ಫೆಬ್ರವರಿ 6,2024 ಮಂಗಳವಾರ ಹೇಳಿರುವುದಾಗಿ ದಿ ಹಿಂದೂ ವರದಿ ಮಾಡಿದೆ.

ಪ್ರಸ್ತುತ ಸುರಂಗ ಮಾರ್ಗವು ಪ್ರಯಾಣಿಕರಿಗೆ ಸುರಕ್ಷಿತವಾಗಿಲ್ಲ. ಅದು ದುರಸ್ತಿ ಮಾಡಲಾಗದ ಸ್ಥಿತಿಯಲ್ಲಿದೆ ಎಂದು ಅಧಿಕಾರಿ ತಿಳಿಸಿದ್ದಾಗಿ ಹಿಂದೂ ವರದಿ ಹೇಳಿದೆ. ಈ ವರದಿ ಕಳೆದ ಎರಡು ದಿನಗಳಿಂದ ದೇಶದಲ್ಲಿ ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟು ಹಾಕಿದೆ.

ಅತ್ಯಂತ ಮಹತ್ವಾಕಾಂಕ್ಷೆಯ ಪ್ರಗತಿ ಮೈದಾನ ಸುರಂಗ ಮಾರ್ಗ ಯೋಜನೆಯನ್ನು ₹777ಕೋಟಿ ವೆಚ್ಚದಲ್ಲಿ ಪೂರ್ಣಗೊಳಿಸಲಾಗಿತ್ತು. ಜೂನ್ 2022ರಲ್ಲಿ ಪ್ರಧಾನಿ ನರೇಂದ್ರ ಮೋದಿ ಇದನ್ನು ಉದ್ಘಾಟಿಸಿದ್ದರು. ಉದ್ಘಾಟನಾ ಕಾರ್ಯಕ್ರಮವನ್ನು ದೇಶದ ಮಾಧ್ಯಮಗಳು ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡಿತ್ತು.

1.3 ಕಿಮೀ ಉದ್ದದ ಸುರಂಗ ಮತ್ತು ಅದನ್ನು ಸಂಪರ್ಕಿಸುವ ಐದು ಅಂಡರ್‌ಪಾಸ್‌ಗಳು ಪ್ರಗತಿ ಮೈದಾನ್ ಇಂಟಿಗ್ರೇಟೆಡ್ ಟ್ರಾನ್ಸಿಟ್ ಕಾರಿಡಾರ್ ಪ್ರಾಜೆಕ್ಟ್‌ನ ಭಾಗವಾಗಿದೆ. ಇದು ನಗರದ ಪೂರ್ವ ಭಾಗಗಳು, ನೋಯ್ಡಾ ಮತ್ತು ಗಾಜಿಯಾಬಾದ್‌ನ ಸ್ಯಾಟ್‌ಲೈಟ್‌ ಪಟ್ಟಣಗಳೊಂದಿಗೆ ಮಧ್ಯ ದೆಹಲಿಯ ನಡುವಿನ ಸಂಪರ್ಕವನ್ನು ಸುಲಭಗೊಳಿಸುವ ಗುರಿಯನ್ನು ಹೊಂದಿದೆ.

ಸುರಂಗ ಮಾರ್ಗ ಉದ್ಘಾಟನೆಗೊಂಡ ಕೆಲವೇ ತಿಂಗಳ ಬಳಿಕ, ಕಳೆದ ವರ್ಷ ದೆಹಲಿಯಲ್ಲಿ ಮಳೆಯಾಗಿತ್ತು. ಆಗ ಸುರಂಗದಲ್ಲಿ ನೀರು ತುಂಬಿದ್ದರಿಂದ ಮಾರ್ಗವನ್ನು ಮುಚ್ಚಲಾಗಿತ್ತು.

“ನಗರದಲ್ಲಿ ಸಾಧಾರಣದಿಂದ ಹೆಚ್ಚಿನ ಮಳೆಯಾದಾಗಲೆಲ್ಲ ಸುರಂಗವು ಜಲಾವೃತವಾಗಿತ್ತು. ಸುರಂಗದೊಳಗೆ ಆಗಾಗ ಸಣ್ಣ ಮಟ್ಟದ ಸೋರಿಕೆಗಳನ್ನು ನಾವು ದುರಸ್ಥಿ ಮಾಡಿದ್ದೇವೆ. ಆದರೆ, ಈಗ ಸಮಸ್ಯೆ ದೊಡ್ಡದಾಗಿದೆ. ಕಳೆದ ಎರಡು ತಿಂಗಳಿನಿಂದ ಸುರಂಗದ ನಿರ್ವಹಣೆಯ ಹೊಣೆ ಹೊತ್ತ ಎಲ್‌&ಟಿ ಕಂಪನಿಯನ್ನು ನಾವು ಎಷ್ಟೇ ಬಾರಿ ಸಂಪರ್ಕಿಸಿದರೂ ಅವರು ಅದನ್ನು ದುರಸ್ಥಿ ಮಾಡಿಲ್ಲ” ಎಂದು ಮತ್ತೊಬ್ಬ ಪಿಡಬ್ಲ್ಯುಡಿ ಇಲಾಖೆ ಅಧಿಕಾರಿ ಹೇಳಿದ್ದಾಗಿ ದಿ ಹಿಂದೂ ತಿಳಿಸಿದೆ.

ಫೆಬ್ರವರಿ 3ರಂದು ಪಿಡಬ್ಲ್ಯುಡಿ ಎಲ್‌&ಟಿ ಕಂಪನಿಗೆ ಶೋಕಾಸ್ ನೋಟಿಸ್ ನೀಡಿದ್ದು,-ಕನಿಷ್ಠ ₹500 ಕೋಟಿ ಟೋಕನ್ ಮೊತ್ತವನ್ನು ಠೇವಣಿ ಇಡಲು ಮತ್ತು ಸುರಂಗದ ದೋಷಯುಕ್ತ ವಿನ್ಯಾಸವನ್ನು ಸರಿಪಡಿಸುವುದರ ಜೊತೆಗೆ ದುರಸ್ತಿ ಕಾರ್ಯವನ್ನು ಪ್ರಾರಂಭಿಸಲು ಕೇಳಿದೆ.

ನೋಟಿಸ್‌ನಲ್ಲಿ, ಸುರಂಗ ನಿರ್ಮಾಣವನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಕಂಪನಿ ವಿಫಲವಾಗಿದೆ ಎಂದು ಪಿಡಬ್ಲ್ಯೂಡಿ ತಿಳಿಸಿದೆ. ಯೋಜನೆಯ ಟೆಂಡರ್ ಅನ್ನು 2017ರಲ್ಲಿ ಕರೆಯಲಾಗಿತ್ತು. 2019 ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿತ್ತು. ಆದರೆ, 2022ರಲ್ಲಿ ಯೋಜನೆ ಉದ್ಘಾಟನೆಗೊಂಡಿದೆ ಎಂದು ಪಿಡಬ್ಲ್ಯುಡಿ ಹೇಳಿದೆ.

ನಿರ್ಮಾಣ ಕಾರ್ಯದ ಗುಣಮಟ್ಟದಲ್ಲಿ ರಾಜಿಯಾಗುವುದಿಲ್ಲ ಎಂಬ ತಿಳುವಳಿಕೆಗೆ ಒಳಪಟ್ಟು ಕಂಪನಿಗೆ ಕಾಲಮಿತಿಯಲ್ಲಿ ರಿಯಾಯಿತಿ ಒದಗಿಸಲಾಗಿತ್ತು. ಆದರೆ, ಭೈರೋನ್ ಮಾರ್ಗ್ ಬಳಿಯ ಅಂಡರ್ ಪಾಸ್ ನಂ.5ರ ವಿನ್ಯಾಸದಲ್ಲಿನ ದೋಷಗಳಿಂದಾಗಿ ಸುರಂಗಕ್ಕೆ ಗರಿಷ್ಠ ಹಾನಿಯಾಗಿದೆ ಎಂದು ಪಿಡಬ್ಲ್ಯುಡಿ ತಿಳಿಸಿದೆ.

ಆರ್ಥಿಕ ಮತ್ತು ಪ್ರತಿಷ್ಠೆ ನಷ್ಟಕ್ಕೆ ಸಂಬಂಧಿಸಿದಂತೆ ಕಂಪನಿಯ ವಿರುದ್ಧ ಏಕೆ ಕ್ರಮ ಕೈಗೊಳ್ಳಬಾರದು ಎಂಬ ಬಗ್ಗೆ ಫೆಬ್ರವರಿ 18 ರೊಳಗೆ ಪ್ರತಿಕ್ರಿಯಿಸುವಂತೆ ಎಲ್‌&ಟಿಗೆ ಪಿಡಬ್ಲ್ಯುಡಿ ಕೇಳಿದೆ. 100 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಸಮಯ ಬಾಳಿಕೆ ಬರುವ ಖಾತ್ರಿ ನೀಡಿದ್ದ ಕಾಮಗಾರಿಯ ದುರಸ್ತಿ ಮತ್ತು ನಿರ್ವಹಣೆಯ ಜವಾಬ್ದಾರಿಯಿಂದ ತಪ್ಪಿಸಿಕೊಂಡರೆ ಕಂಪನಿಯು ಸಿವಿಲ್ ಮತ್ತು ಕ್ರಿಮಿನಲ್ ಕಾನೂನುಗಳ ಅಡಿಯಲ್ಲಿ ಹೊಣೆಗಾರನಾಗಿರುತ್ತಾನೆ ಎಂದು ಪಿಡಬ್ಲ್ಯುಡಿ ತನ್ನ ನೋಟಿಸ್‌ನಲ್ಲಿ ಎಚ್ಚರಿಸಿದೆ.

ಸುರಂಗದೊಳಗೆ ನಿರಂತರ ಸೋರಿಕೆ, ಕಾಂಕ್ರೀಟ್‌ನಲ್ಲಿ ಬಿರುಕುಗಳು, ಅತಿಯಾದ ನೀರು ಹರಿಯುವುದು ಮತ್ತು ಒಳಚರಂಡಿ ವ್ಯವಸ್ಥೆಯಲ್ಲಿ ಅಸಮರ್ಪಕ ಕಾರ್ಯ ಸೇರಿದಂತೆ 12 ಸಮಸ್ಯೆಗಳನ್ನು ಪಿಡಬ್ಲ್ಯುಡಿ ಇಲಾಖೆ ಗುರುತಿಸಿದೆ. ನಾವು ಎಲ್‌&ಟಿ ಸಂಸ್ಥೆಯನ್ನು ಸಂಪರ್ಕಿಸಿದಾಗ ಅದರ ವಕ್ತಾರರು ದೆಹಲಿ ಪಿಡಬ್ಲ್ಯುಡಿ ನಮ್ಮ ‘ಗೌರವಾನ್ವಿತ ಗ್ರಾಹಕ’. ಅದರೊಂದಿಗೆ ದೀರ್ಘ ವರ್ಷಗಳ ಒಡನಾಟವನ್ನು ಹೊಂದಿರುವುದಾಗಿ ತಿಳಿಸಿದ್ದಾರೆ ಎಂದು ದಿ ಹಿಂದೂ ವರದಿಯಲ್ಲಿ ಹೇಳಿದೆ.

ಜೂನ್ 19,2022ರಂದು ಪ್ರಧಾನಿ ನರೇಂದ್ರ ಮೋದಿ ಪ್ರಗತಿ ಮೈದಾನ್‌ ಇಂಟಿಗ್ರೇಟೆಡ್ ಟ್ರಾನ್ಸಿಟ್ ಕಾರಿಡಾರ್ ಯೋಜನೆಯ ಮುಖ್ಯ ಸುರಂಗ ಮತ್ತು ಅಂಡರ್‌ಪಾಸ್‌ಗಳನ್ನು ಉದ್ಘಾಟಿಸಿದ್ದರು. ಬಳಿಕ ಸುರಂಗದಲ್ಲಿ ನಡೆದಾಡಿದ್ದ ಪ್ರಧಾನಿ, ಅಲ್ಲೇ ಬಿದ್ದಿದ್ದ ಪ್ಲಾಸ್ಟಿಕ್ ಬಾಟಲಿಯೊಂದನ್ನು ಎತ್ತಿ ಕಸದ ಬುಟ್ಟಿಗೆ ಹಾಕಿದ್ದರು. ಈ ಕುರಿತು ವಿಡಿಯೋ ವೈರಲ್ ಆಗಿತ್ತು. ಪ್ರಧಾನಿ ಮೋದಿ ಕಸ ಹೆಕ್ಕಿ ಸ್ವಚ್ಚತೆಯ ಅರಿವು ಮೂಡಿಸಿದ್ದಾರೆ ಎಂದು ಮಾಧ್ಯಮಗಳು ಕೊಂಡಾಡಿತ್ತು. ಆದರೆ, ಪ್ರಧಾನಿ ಬರುವ ಮಾರ್ಗದಲ್ಲಿ ಸಾಮಾನ್ಯವಾಗಿ ಸ್ವಚ್ಚತೆ ಕಾಪಾಡಲಾಗುತ್ತದೆ. ಒಂದು ಕಸವೂ ಅಲ್ಲಿ ಇರದಂತೆ ನೋಡಿಕೊಳ್ಳಲಾಗುತ್ತದೆ. ಹಾಗಿದ್ದರೂ, ಹೊಸ ಮಾರ್ಗದಲ್ಲಿ ಹೇಗಪ್ಪ ಒಂದೇ ಒಂದು ಪ್ಲಾಸ್ಟಿಕ್ ಬಾಟಲಿ ಸಿಕ್ಕಿತು. ಇದೆಲ್ಲ ಪ್ರಚಾರದ ಸ್ಟಂಟ್ ಎಂದು ಸಾರ್ವಜನಿಕರು ಮಾತನಾಡಿಕೊಂಡಿದ್ದರು.

After G20 Fanfare, Pragati Maidan Tunnel Now Seen as 'Potential Threat to  Passengers': Report

ಇದನ್ನೂ ಓದಿ : ಮೋದಿ ಸರ್ಕಾರಕ್ಕೆ ಸೆಡ್ಡು ಹೊಡೆಯಲು ಮುಂದಾದ ಕಾಂಗ್ರೆಸ್‌: ‘ಶ್ವೇತಪತ್ರ’ ಕ್ಕೆ ಪ್ರತಿಯಾಗಿ ‘ಕಪ್ಪು ಪತ್ರ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...