Homeಮುಖಪುಟ2009ರಲ್ಲಿ ಯುಪಿಎ ಅಧಿಕಾರಕ್ಕೆ ಶ್ಲಾಘನೆ, ಈಗ ಟೀಕೆ; ವೈರಲ್‌ ಆಯ್ತು ಇನ್ಫೋಸಿಸ್‌ ನಾರಾಯಣಮೂರ್ತಿ ಹಳೆಯ ಸಂದರ್ಶನ

2009ರಲ್ಲಿ ಯುಪಿಎ ಅಧಿಕಾರಕ್ಕೆ ಶ್ಲಾಘನೆ, ಈಗ ಟೀಕೆ; ವೈರಲ್‌ ಆಯ್ತು ಇನ್ಫೋಸಿಸ್‌ ನಾರಾಯಣಮೂರ್ತಿ ಹಳೆಯ ಸಂದರ್ಶನ

- Advertisement -
- Advertisement -

‘ಕಾಂಗ್ರೆಸ್‌ ನೇತೃತ್ವದ ಯುಪಿಎ ಕಾಲದಲ್ಲಿ ದೇಶದ ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಂಡಿದ್ದವು. ಅಂದಿನ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ಸರಿಯಾದ ಸಮಯಕ್ಕೆ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲಿಲ್ಲ’ ಎಂದು ಇನ್ಫೋಸಿಸ್‌ನ ಸಹ-ಸಂಸ್ಥಾಪಕ ಎನ್‌.ಆರ್.ನಾರಾಯಣಮೂರ್ತಿ ಇತ್ತೀಚೆಗೆ ಹೇಳಿದ್ದರು. ಆದರೆ ಇದೇ ಮೂರ್ತಿಯವರು 2009ರಲ್ಲಿ ಮನಮೋಹನ್ ಸಿಂಗ್ ಹಾಗೂ ದೇಶದ ಅಭಿವೃದ್ಧಿಯ ಕುರಿತು ಆಡಿರುವ ಮಾತುಗಳು ವೈರಲ್ ಆಗಿವೆ.

ಇತ್ತೀಚೆಗೆ ‘ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ – ಅಹಮದಾಬಾದ್ (ಐಐಎಂಎ)’ ನಲ್ಲಿ ನಡೆದ ಸಂವಾದದಲ್ಲಿ ಯುವ ಉದ್ಯಮಿಗಳು ಮತ್ತು ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದ ಮೂರ್ತಿ ಮಾತನಾಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆಯಾಗಿರುವ ಚೀನಾಕ್ಕೆ ಭಾರತವನ್ನು ಪ್ರಬಲ ಪ್ರತಿಸ್ಪರ್ಧಿಯನ್ನಾಗಿ ಮಾಡುವ ಶಕ್ತಿ ಯುವ ಮನಸ್ಸುಗಳಲ್ಲಿದೆ. ನಾನು ಲಂಡನ್‌ನಲ್ಲಿ (2008 ಮತ್ತು 2012ರ ನಡುವೆ) ಎಚ್‌ಎಸ್‌ಬಿಸಿಯ ಮಂಡಳಿಯಲ್ಲಿದ್ದೆ. ಮೊದಲ ಕೆಲವು ವರ್ಷಗಳಲ್ಲಿ, ಮಂಡಳಿಯ ಸಭೆಯಲ್ಲಿ ಚೀನಾವನ್ನು ಎರಡರಿಂದ ಮೂರು ಬಾರಿ ಉಲ್ಲೇಖಿಸಲಾಗುತ್ತಿತ್ತು. ಭಾರತದ ಹೆಸರನ್ನು ಒಮ್ಮೊಮ್ಮೆ ಮಾತ್ರ ಹೇಳಲಾಗುತ್ತಿತ್ತು. ದುರದೃಷ್ಟವಶಾತ್, ನಂತರ (ಭಾರತಕ್ಕೆ) ಏನಾಯಿತು ಎಂದು ನನಗೆ ಗೊತ್ತಿಲ್ಲ ಎಂದಿದ್ದರು.

“ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಅಸಾಧಾರಣ ವ್ಯಕ್ತಿ ಮತ್ತು ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ಆದರೆ, ಭಾರತವು (ಯುಪಿಎ ಅವಧಿಯಲ್ಲಿ) ಸ್ಥಗಿತಗೊಂಡಿತ್ತು. ಸೂಕ್ತ ನಿರ್ಧಾರಗಳನ್ನು ಸರಿಯಾದ ಸಮಯಕ್ಕೆ ತೆಗೆದುಕೊಳ್ಳಲೇ ಇಲ್ಲ. ಎಲ್ಲವೂ ತಡವಾಗಿಹೋಯಿತು‌” ಎಂದು ಟೀಕಿಸಿದ್ದಾರೆ.

2009ರಲ್ಲಿ ನಾರಾಯಣಮೂರ್ತಿಯವರು ಹೇಳಿದ್ದೇನು?

2009ರಲ್ಲಿ ಔಟ್‌ಲುಕ್ ಪತ್ರಿಕೆಗೆ ನಾರಾಯಣಮೂರ್ತಿಯವರು ಸಂದರ್ಶನ ನೀಡಿದ್ದರು. ಪತ್ರಕರ್ತ ಸುನಿತ್ ಅರೋರ ಅವರು ನಡೆಸಿದ್ದ ಸಂದರ್ಶನ ಅಂದಿನ ಸಾಮಾನ್ಯ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಕಟವಾಗಿತ್ತು. ಅಂದು ನಾರಾಯಣಮೂರ್ತಿಯವರು ಆಡಿರುವ ಮಾತುಗಳನ್ನು ಇಂದು ಟ್ವಿಟರ್‌ನಲ್ಲಿ ಸುನಿತ್ ಹಂಚಿಕೊಂಡಿದ್ದಾರೆ. ಜೊತೆಗೆ ಔಟ್‌ಲುಕ್‌ನಲ್ಲಿ ಅಪಲೋಡ್ ಮಾಡಲಾಗಿರುವ ಸುದ್ದಿಲಿಂಕ್‌ ಕೂಡ ಹಂಚಿಕೊಂಡಿದ್ದಾರೆ.

“2009ರಲ್ಲಿ ಸಮೀಪಿಸುತ್ತಿರುವ ಚುನಾವಣೆಯ ಮಹತ್ವದ ಬಗ್ಗೆ ನಾನು ಮೂರ್ತಿ ಅವರನ್ನು ಕೇಳಿದಾಗ ಅವರು, ಈ ಚುನಾವಣೆಯು ಬಹಳ ಮಹತ್ವದ್ದಾಗಿದೆ. ಏಕೆಂದರೆ ಇದು ದೇಶದಲ್ಲಿ ಹತ್ತು ವರ್ಷಗಳ ಅದ್ಭುತ ಆರ್ಥಿಕ ಬೆಳವಣಿಗೆಯ ನಂತರ ನಡೆಯುತ್ತಿದೆ” ಎಂದಿರುವುದಾಗಿ ಸುನಿತ್ ಟ್ವೀಟ್‌ ಮಾಡಿದ್ದಾರೆ.

ನಂತರ ಮೂರ್ತಿ ಅವರು ಮನಮೋಹನ್ ಸಿಂಗ್ ಅವರನ್ನು ಶ್ಲಾಘಿಸಿದ್ದಾರೆ. “ಮನಮೋಹನ್‌ಸಿಂಗ್ ಅವರು ಎಲ್ಲರನ್ನೂ ಒಳಗೊಂಡ ಅಭಿವೃದ್ಧಿಯ ಅಗತ್ಯವನ್ನು ಮುನ್ನೆಲೆಗೆ ತಂದಿದ್ದಾರೆ. ಆ ಅರ್ಥದಲ್ಲಿ ಇಂದು, ನಮ್ಮ ಅಸಾಮಾನ್ಯ ಆರ್ಥಿಕತೆಯ ಬೆಳವಣಿಗೆಯಿಂದ ದೇಶದ ಪ್ರತಿಯೊಬ್ಬರೂ ಪ್ರಯೋಜನ ಪಡೆದಿಲ್ಲ ಎಂಬ ಅಂಶದ ಬಗ್ಗೆ ಹೆಚ್ಚಿನ ಅರಿವು ಇದೆ” ಎಂದಿದ್ದಾರೆ.

ಮೂರ್ತಿಯವರು ಈ ವಿಷಯವನ್ನು ಪುನರುಚ್ಚರಿಸಿದ್ದಾರೆ. “ನನಗೆ ಅಪಾರವಾದ ಗೌರವವಿರುವ ನಮ್ಮ ದೇಶದ ಪ್ರಧಾನಿ ಮೊದಲ ಬಾರಿಗೆ ಸಮಗ್ರ ಬೆಳವಣಿಗೆಯನ್ನು ಸಾಧಿಸುವ ಅಗತ್ಯತೆಯ ಮೇಲೆ ದೇಶದ ಗಮನವನ್ನು ಕೇಂದ್ರೀಕರಿಸಲು ಪ್ರಯತ್ನಿಸುತ್ತಿದ್ದಾರೆ. ಇದು ನನಗೆ ತಾಜಾ ವಿಷಯವಾಗಿದೆ” ಎಂದು ಬಣ್ಣಿಸಿದ್ದಾರೆ.

“ನಾವು ಇತ್ತೀಚಿನ ವರ್ಷಗಳಲ್ಲಿ ಇಬ್ಬರು ಅಸಾಧಾರಣ ಮಹನೀಯರನ್ನು ನಮ್ಮ ಪ್ರಧಾನ ಮಂತ್ರಿಗಳಾಗಿ ಆಯ್ಕೆ ಮಾಡಿದ್ದೇವೆ. ವಾಜಪೇಯಿ ಮತ್ತು ಮನಮೋಹನಸಿಂಗ್‌ ಆ ಮಹನೀಯರಾಗಿದ್ದಾರೆ. ಈ ಇಬ್ಬರನ್ನೂ ಪ್ರಾಮಾಣಿಕರು, ಬುದ್ಧಿವಂತರು, ಸಭ್ಯ ವ್ಯಕ್ತಿಗಳು ಎಂದು ಒಪ್ಪಿಕೊಳ್ಳಲಾಗಿದೆ” ಎಂದು ಶ್ಲಾಘಿಸಿದ್ದಾರೆ.

ಇದನ್ನೂ ಓದಿರಿ: ವಿಶ್ಲೇಷಣೆ: ರಾಜ್ಯ ಕಾಂಗ್ರೆಸ್ ರಾಜಕೀಯ ತಂತ್ರಗಾರಿಕೆ ಬದಲಾಗಿದೆಯೇ?

“…ದೇಶದ ಒಳಿತನ್ನು ಮನಸ್ಸಿನಲ್ಲಿಟ್ಟುಕೊಂಡಿರುವ ಜನರು, ಪಾರದರ್ಶಕತೆ, ನ್ಯಾಯಸಮ್ಮತತೆ ಮತ್ತು ಉತ್ತರದಾಯಿತ್ವದಲ್ಲಿ ನಂಬಿಕೆಯುಳ್ಳ ಜನರು… ಇಂತಹ ಇನ್ನೂ ಅನೇಕ ನಾಯಕರು ನಮ್ಮಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳುವುದು ಇಂದಿನ ಅಗತ್ಯವಾಗಿದೆ” ಎಂದು ನಾರಾಯಣಮೂರ್ತಿ ತಿಳಿಸಿದ್ದಾರೆ.

“ನಮಗೆ ಸುಧಾರಣೆಗಳು ಬೇಕು, ಆದರೆ ನಮಗೆ ಉತ್ತಮ ನಿಯಂತ್ರಣವೂ ಬೇಕು. ಸರ್ಕಾರದ ಕಾರಿಡಾರ್‌ಗಳಲ್ಲಿ ಕಾಯುವ ಬದಲು ನಮ್ಮ ಬೋರ್ಡ್‌ರೂಮ್‌ಗಳಿಂದ ನಮ್ಮ ವ್ಯವಹಾರಗಳನ್ನು ನಡೆಸಲು ನಾವು ಮುಕ್ತರಾಗಿರಬೇಕು. ಆದಾಗ್ಯೂ, ನಮಗೆ ಉತ್ತಮ ನಿಯಂತ್ರಣದ ಅಗತ್ಯವಿದೆ” ಎಂದು ಸಂದರ್ಶನದಲ್ಲಿ ಹೇಳಿದ್ದಾರೆ.

ಪೂರ್ಣ ಸಂದರ್ಶನವನ್ನು ‘ಇಲ್ಲಿ’ ಓದಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...