Homeಕರ್ನಾಟಕಪ್ರಜ್ವಲ್ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಕೇಂದ್ರ ಸರಕಾರಕ್ಕೆ ಪತ್ರ ಬರೆದ ಎಸ್‌ಐಟಿ

ಪ್ರಜ್ವಲ್ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಕೇಂದ್ರ ಸರಕಾರಕ್ಕೆ ಪತ್ರ ಬರೆದ ಎಸ್‌ಐಟಿ

- Advertisement -
- Advertisement -

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ) ಇದೀಗ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ವಿದೇಶಾಂಗ ಸಚಿವಾಲಯಕ್ಕೆ ಪತ್ರ ಬರೆದಿದೆ.

ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಾಗುತ್ತಿದ್ದಂತೆ ಪ್ರಜ್ವಲ್‌ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿಕೊಂಡು ವಿದೇಶಕ್ಕೆ ಪರಾರಿಯಾಗಿದ್ದು, ಈ ಪಾಸ್‌ಪೋರ್ಟ್ ರದ್ದುಪಡಿಸುವಂತೆ ಕೋರಿ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಮೂಲಕ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ತಿಳಿದು ಬಂದಿದೆ.

ಕರ್ನಾಟಕದಲ್ಲಿ ಲೋಕಸಭೆಯ ಚುನಾವಣೆಯ ಹೊಸ್ತಿಲಲ್ಲಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಅಶ್ಲೀಲ ವಿಡಿಯೋಗಳು ಹರಿದಾಡಿದ್ದವು. ಆ ಬಳಿಕ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಪರಾರಿಯಾಗಿದ್ದರು. ಪ್ರಜ್ವಲ್ ರೇವಣ್ಣ  ವಿರುದ್ಧ ಹೊಳೆನರಸೀಪುರ ಹಾಗೂ ಸಿಐಡಿ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಈ ಕುರಿತು ವಿಶೇಷ ತನಿಖಾ ತಂಡ(ಎಸ್‌ಐಟಿ) ತನಿಖೆ ನಡೆಸುತ್ತಿದೆ.

ಪ್ರಜ್ವಲ್ ವಿರುದ್ಧ ಈಗಾಗಲೇ ಲುಕ್‌ಔಟ್‌, ಬ್ಲೂ ಕಾರ್ನರ್‌ ನೋಟಿಸ್‌ ಜಾರಿಯಾಗಿದ್ದರೂ ಅವರು ವಿಚಾರಣೆಗೆ ಹಾಜರಾಗಿಲ್ಲ. ಪ್ರಜ್ವಲ್ ಬಂಧನಕ್ಕೆ ನ್ಯಾಯಾಲಯದಿಂದ ಬಂಧನದ ವಾರಂಟ್ ಕೂಡ ಜಾರಿ ಆಗಿದೆ. ಪ್ರಜ್ವಲ್ ಎಲ್ಲಿದ್ದಾರೆ ಎಂಬ ಸುಳಿವು ಇದುವರೆಗೂ ಸಿಕ್ಕಿಲ್ಲ ಎಂದು ಎಸ್ಐಟಿ ಮೂಲಗಳು ತಿಳಿಸಿದೆ.
ರೇವಣ್ಣಗೆ ಷರತ್ತು ಬದ್ದ ಜಾಮೀನು:

ಮನೆ ಕೆಲಸದಾಕೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ನಿನ್ನೆ ಷರತ್ತುಬದ್ಧ ಜಾಮೀನು ನೀಡಲಾಗಿದೆ.

“ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆ”ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಜೆ.ಪ್ರೀತ್ ಅವರ ಪೀಠವು ಈ ಕುರಿತು ಅರ್ಜಿಯನ್ನು ವಿಚಾರಣೆ ನಡೆಸಿ ತೀರ್ಪನ್ನು ಕಾಯ್ದಿರಿಸಿತ್ತು. ಹಾಸನದ ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಲಕ್ಷ ರೂ. ಬಾಂಡ್, ತನಿಖೆಗೆ ಸಹಕರಿಸಬೇಕೆಂಬ ಷರತ್ತು ವಿಧಿಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಮನೆ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ಕಿಡ್ನಾಪ್ ಮಾಡಿದ್ದ ಕೇಸ್‍ನಲ್ಲಿ ಕಳೆದ ವಾರವಷ್ಟೇ ಮಧ್ಯಂತರ ಜಾಮೀನಿನಲ್ಲಿ ರೇವಣ್ಣ ಜೈಲಿನಿಂದ ಬಿಡುಗಡೆಯಾಗಿದ್ದರು.

ಇದನ್ನು ಓದಿ: ಟಿಕೆಟ್‌ ಕೈತಪ್ಪಿದಕ್ಕೆ ‘ಮತದಾನ’ ಮಾಡದ ಬಿಜೆಪಿ ಸಂಸದ: ಶೋಕಾಸ್ ನೋಟಿಸ್ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...