Homeಕರ್ನಾಟಕಭಾರತಕ್ಕೆ ಬರುವ ಮೊದಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಪ್ರಜ್ವಲ್‌ ರೇವಣ್ಣ

ಭಾರತಕ್ಕೆ ಬರುವ ಮೊದಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಪ್ರಜ್ವಲ್‌ ರೇವಣ್ಣ

- Advertisement -
- Advertisement -

ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಇತ್ತೀಚೆಗೆ ಬಿಡುಗಡೆ ಮಾಡಿದ್ದ ವಿಡಿಯೋ ಹೇಳಿಕೆಯಲ್ಲಿ ಮೇ.31ರಂದು ಭಾರತಕ್ಕೆ ಬರುವುದಾಗಿ ಹೇಳಿದ್ದರು. ಇದರ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ   ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.

ಹಾಸನದಲ್ಲಿ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನದ ವೇಳೆ ಲೈಂಗಿಕ ದೌರ್ಜನ್ಯದ ವಿಡಿಯೋ ವೈರಲ್‌ ಆಗಿತ್ತು. ಎಪ್ರಿಲ್ 26ರಂದು ನಡೆದ ಎರಡನೇ ಹಂತದ ಚುನಾವಣೆಯ ನಂತರ ಪ್ರಜ್ವಲ್ ಅವರು ದೇಶವನ್ನು ತೊರೆದಿದ್ದರು. ಈ ಕುರಿತ ಆರೋಪಗಳ ತನಿಖೆಗಾಗಿ ಕರ್ನಾಟಕ ಸರ್ಕಾರವು ಎಸ್‌ಐಟಿಯನ್ನು ರಚಿಸಿತ್ತು. ಬಳಿಕ ಪ್ರಜ್ವಲ್‌ ಪತ್ತೆಗೆ ಲುಕ್‌ ಔಟ್‌ ನೊಟೀಸ್‌ ಮತ್ತು ರೆಡ್‌ ಕಾರ್ನರ್‌ ನೊಟೀಸ್‌ ಜಾರಿ ಮಾಡಲಾಗಿತ್ತು. ಪ್ರಜ್ವಲ್ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್‌ನ್ನು ಹಿಂಪಡೆಯಲು ವಿನಂತಿಯೊಂದಿಗೆ ಕೇಂದ್ರ ಸರಕಾರವನ್ನು ಕೂಡ ಸಂಪರ್ಕಿಸಲಾಗಿತ್ತು.

ನಾಪತ್ತೆಯಾದ ಒಂದು ತಿಂಗಳ ನಂತರ, ಪ್ರಜ್ವಲ್ ಸೋಮವಾರದಂದು ವೀಡಿಯೊವೊಂದನ್ನು ಬಿಡುಗಡೆ ಮಾಡಿದ್ದು, ತಾನು ತನಿಖೆಗೆ ಸಹಕರಿಸುತ್ತೇನೆ ಮತ್ತು ಮೇ 31ರಂದು ಬೆಳಿಗ್ಗೆ 10 ಗಂಟೆಗೆ ಎಸ್‌ಐಟಿ ಮುಂದೆ ಹಾಜರಾಗುತ್ತೇನೆ. ನನಗೆ ನ್ಯಾಯಾಂಗದ ಮೇಲೆ ನಂಬಿಕೆಯಿದ್ದು, ನ್ಯಾಯಾಲಯದ ಮೂಲಕ ಸುಳ್ಳು ಪ್ರಕರಣಗಳಿಂದ ಮುಕ್ತಿ ಹೊಂದುವ ವಿಶ್ವಾಸವಿದೆ ಎಂದು ಹೇಳಿದ್ದರು.

ಇದರ ಬೆನ್ನಲ್ಲಿ ಮೇ 30ರಂದು ಮ್ಯೂನಿಚ್‌ನಿಂದ ಬೆಂಗಳೂರಿಗೆ ಹಿಂತಿರುಗಲು ಪ್ರಜ್ವಲ್‌ ಹೆಸರಿನಲ್ಲಿ ವಿಮಾನ ಟಿಕೆಟ್ ಬುಕ್‌ ಆಗಿದೆ. ಪ್ರಜ್ವಲ್ ವಿರುದ್ಧ ಈಗಾಗಲೇ ಅರೆಸ್ಟ್ ವಾರೆಂಟ್ ಜಾರಿ ಮಾಡಲಾಗಿದ್ದು,  ವಿಮಾನ ನಿಲ್ದಾಣದಲ್ಲಿಯೇ ಅವರನ್ನು ಬಂಧಿಸಬಹುದಾಗಿದೆ.

ಪ್ರಜ್ವಲ್ ರೇವಣ್ಣ ವಾಪಸ್ ಆಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ.ಜಿ ಪರಮೇಶ್ವರ್, ಪ್ರಜ್ವಲ್ ವಿರುದ್ಧ ವಾರಂಟ್ ಜಾರಿಯಾಗಿರುವುದರಿಂದ ಬಂಧಿಸಬೇಕಾಗುತ್ತದೆ. ಇದಕ್ಕೆ ಎಸ್ಐಟಿಯವರು ಬೇಕಿದ್ದ ಪ್ರಕ್ರಿಯೆ ಆರಂಭಿಸಿದ್ದಾರೆ ಎಂದು ತಿಳಿಸಿದ್ದಾರೆ. ತಪ್ಪಿತಸ್ಥರ ಬಂಧನದ ವಿಚಾರ ಬಂದಾಗ ಪಕ್ಷ ಎಂಬುದು ಗಣನೆಗೆ ಬರುವುದಿಲ್ಲ.‌ ಪ್ರಕರಣದಲ್ಲಿ ಭಾಗಿಯಾಗಿರುವುದು ಕಂಡು ಬಂದರೆ ಅಂತಹವರನ್ನು ಬಂಧಿಸಲಾಗುತ್ತದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ವಿಡಿಯೋ ವೈರಲ್‌ ಬೆನ್ನಲ್ಲಿ ಸಂತ್ರಸ್ತೆಯೊಬ್ಬರು ಹೊಳೆನರಸೀಪುರ ಪೊಲೀಸ್‌ ಠಾಣೆಗೆ ಎಚ್‌ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದರು. ಅಪ್ಪ-ಮಗನ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 354 (ಎ), 354 (ಡಿ) ಮತ್ತು 506, 509 ಅಡಿಯಲ್ಲಿ ದೂರು ದಾಖಲಿಸಲಾಗಿತ್ತು.

ಇದನ್ನು ಓದಿ: ಲೈಂಗಿಕ ದೌರ್ಜನ್ಯ: ಅಂತರಾಷ್ಟ್ರೀಯ ಮಾಧ್ಯಮಗಳಲ್ಲೂ ಸುದ್ದಿಯಾದ ಪ್ರಜ್ವಲ್‌ ರೇವಣ್ಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...