Homeಮುಖಪುಟಪ್ರಜ್ವಲ್‌ ರೇವಣ್ಣಗೆ ಬಿಗ್‌ ರಿಲೀಫ್‌: ಸಂಸದ ಸ್ಥಾನದಿಂದ ಅನರ್ಹತೆಗೆ ಸುಪ್ರೀಂಕೋರ್ಟ್‌ ತಡೆ

ಪ್ರಜ್ವಲ್‌ ರೇವಣ್ಣಗೆ ಬಿಗ್‌ ರಿಲೀಫ್‌: ಸಂಸದ ಸ್ಥಾನದಿಂದ ಅನರ್ಹತೆಗೆ ಸುಪ್ರೀಂಕೋರ್ಟ್‌ ತಡೆ

- Advertisement -
- Advertisement -

ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿ ಅನರ್ಹರಾಗಿದ್ದ ಪ್ರಜ್ವಲ್‌ ರೇವಣ್ಣಗೆ ಸುಪ್ರೀಂಕೋರ್ಟ್‌ನಲ್ಲಿ ಬಿಗ್‌ ರಿಲೀಫ್‌ ಸಿಕ್ಕಿದ್ದು, ಹೈಕೋರ್ಟ್‌ ನೀಡಿದ್ದ ಅನರ್ಹತೆ ಆದೇಶಕ್ಕೆ ಸುಪ್ರೀಂಕೋರ್ಟ್‌ ತಡೆ ನೀಡಿದೆ.

ಸುಪ್ರೀಂ ಕೋರ್ಟ್‌ ಸಿಜೆಐ ಚಂದ್ರಚೂಡ ಅವರ ನೇತೃತ್ವದ  ಪೀಠ ಪ್ರಜ್ವಲ್‌ ರೇವಣ್ಣ ಅನರ್ಹತೆಗೆ ತಡೆ ನೀಡಿ ಆದೇಶ ನೀಡಿದೆ.

ಪ್ರಜ್ವಲ್‌ ರೇವಣ್ಣ ಅವರು ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಶಾಸಕ ಎ. ಮಂಜು, ದೇವರಾಜೇಗೌಡ ಅವರು ಪ್ರಜ್ವಲ್‌ ಆಯ್ಕೆ ಪ್ರಶ್ನಿಸಿ ಹೈಕೋರ್ಟ್‌ ಗೆ ಮೊರೆ ಹೋಗಿದ್ದರು. ಈ ಕುರಿತು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸೆ.1ರಂದು ಪ್ರಜ್ವಲ್‌ ರೇವಣ್ಣಗೆ ಸಂಸದ ಸ್ಥಾನದಿಂದ ಅನರ್ಹರನ್ನಾಗಿ ಮಾಡಿ ಆದೇಶಿಸಿತ್ತು.

ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಪ್ರಜ್ವಲ್‌ ರೇವಣ್ಣ ಅವರು ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದರು.

2019ರ ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿದ್ದ ಪ್ರಜ್ವಲ್‌ ರೇವಣ್ಣ ಅವರು ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಎ.ಮಂಜು ಅವರನ್ನು 1.4 ಲಕ್ಷ ಮತಗಳಿಂದ ಸೋಲಿಸಿದ್ದರು. ಹಾಸನ ಕ್ಷೇತ್ರದ ಮತದಾರರೂ ಆಗಿರುವ ವಕೀಲ ಜಿ.ದೇವರಾಜೇಗೌಡ ಮತ್ತು ಪರಾಜಿತ ಅಭ್ಯರ್ಥಿ ಎ.ಮಂಜು ಅವರು ಪ್ರಜ್ವಲ್‌ ಆಯ್ಕೆ ಪ್ರಶ್ನಿಸಿ ಹೈಕೋರ್ಟ್‌ಗೆ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ನಾಮಪತ್ರ ಸಲ್ಲಿಕೆ ವೇಳೆ ಪ್ರಮಾಣಪತ್ರದಲ್ಲಿ ಆಸ್ತಿ ವಿವರಗಳ ಬಗ್ಗೆ  ಪ್ರಜ್ವಲ್‌ ರೇವಣ್ಣ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು  ಅವರು ಆರೋಪಿಸಿದ್ದರು.

ಇದನ್ನು ಓದಿ: ಹೊಸ ಸಂಸತ್‌ಗೆ ಹೋದರೆ ಹೊಸದೇನೂ ಆಗುವುದಿಲ್ಲ: ಮಲ್ಲಿಕಾರ್ಜುನ್ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...