Homeಕರ್ನಾಟಕಪ್ರಜ್ವಲ್ ರೇವಣ್ಣಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

ಪ್ರಜ್ವಲ್ ರೇವಣ್ಣಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

- Advertisement -
- Advertisement -

ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶಿಸಿದೆ.

ಪ್ರಜ್ವಲ್ ರೇವಣ್ಣ ಕಸ್ಟಡಿ ಅವಧಿ ಮುಕ್ತಾಯಗೊಂಡ ಹಿನ್ನೆಲೆ ಇಂದು 42ನೇ ಎಸಿಎಂಎಂ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಸ್‌ಐಟಿ ಅಧಿಕಾರಿಗಳು ಹಾಜರುಪಡಿಸಿದ್ದರು.

ನ್ಯಾಯಾಲಯದಲ್ಲಿ ಎಸ್‌ಐಟಿ ಪೊಲೀಸರು, “ಪ್ರಜ್ವಲ್‌ ರೇವಣ್ಣ ವಿಚಾರಣೆ ಮುಗಿದಿದ್ದು, ಸದ್ಯಕ್ಕೆ ತಮ್ಮ ಕಸ್ಟಡಿಗೆ ಅವಶ್ಯಕತೆ ಇರುವುದಿಲ್ಲ” ಎಂದು ತಿಳಿಸಿದ್ದಾರೆ. ಪ್ರಜ್ವಲ್‌ ಪರ ವಕೀಲರು ನ್ಯಾಯಾಂಗ ಬಂಧನಕ್ಕೆ ನೀಡುವಂತೆ ಮನವಿ ಮಾಡಿದ್ದಾರೆ.

ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ, ಜೂ. 24ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಈ ಮೂಲಕ ಪ್ರಜ್ವಲ್‌ ರೇವಣ್ಣ ಪರಪ್ಪನ ಕೇಂದ್ರ ಕಾರಾಗೃಹ ಸೇರಲಿದ್ದಾರೆ.

ಮೇ 31ರಂದು ತಡರಾತ್ರಿ ವಿದೇಶದಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ ಪ್ರಜ್ವಲ್‌ರನ್ನು ಬಂಧಿಸಿದ್ದ ಎಸ್‌ಐಟಿ ಅಧಿಕಾರಿಗಳು, ಅಂದು ಮ್ಯಾಜಿಸ್ಟ್ರೇಟ್‌ ಮುಂದೆ ಹಾಜರುಪಡಿಸಿ ಜೂನ್‌ 6ವರೆಗೆ ವಿಚಾರಣೆಗಾಗಿ ತಮ್ಮ ಕಸ್ಟಡಿಗೆ ಪಡೆದಿದ್ದರು.

ಜೂನ್‌ 6ರಂದು ಕಸ್ಟಡಿ ಅವಧಿ ಪೂರ್ಣಗೊಂಡ ಹಿನ್ನೆಲೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಕಸ್ಟಡಿ ಅವಧಿಯನ್ನು ಜೂನ್‌ 10ರವರೆಗೆ ವಿಸ್ತರಿಸಿ ಆದೇಶಿಸಿತ್ತು.

ಇದನ್ನೂ ಓದಿ : ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ: ಕ್ರಮಕ್ಕೆ ಕಾಂಗ್ರೆಸ್ ಆಗ್ರಹ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನೀಟ್ ಕೃಪಾಂಕ ರದ್ದು ಹಗರಣ ಮುಚ್ಚಿ ಹಾಕುವ ಪ್ರಯತ್ನ : ಎಂ.ಕೆ ಸ್ಟಾಲಿನ್

0
ನೀಟ್ ವಿದ್ಯಾರ್ಥಿಗಳ ಕೃಪಾಂಕ ರದ್ದುಗೊಳಿಸಿ ಮರು ಪರೀಕ್ಷೆಗೆ ಮುಂದಾಗಿರುವುದು ಹಗರಣವನ್ನು ಮುಚ್ಚಿ ಹಾಕುವ ಪ್ರಯತ್ನ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಹೇಳಿದ್ದಾರೆ. ನೀಟ್ ಪರೀಕ್ಷೆಯಲ್ಲಿ ಹಗರಣದ ಆರೋಪ ಕೇಳಿ ಬಂದ ಬೆನ್ನಲ್ಲೇ 1,563...